Homeಮುಖಪುಟಮುಸ್ಲಿಮರು, ಕ್ರಿಶ್ಚಿಯನ್ನರಿಗೆ ಮತಾಂತರದ ಗೀಳಿದೆ: ಯೋಗೋದ್ಯಮಿ ರಾಮ್‌ದೇವ್ ಹೇಳಿಕೆ

ಮುಸ್ಲಿಮರು, ಕ್ರಿಶ್ಚಿಯನ್ನರಿಗೆ ಮತಾಂತರದ ಗೀಳಿದೆ: ಯೋಗೋದ್ಯಮಿ ರಾಮ್‌ದೇವ್ ಹೇಳಿಕೆ

- Advertisement -
- Advertisement -

ಯೋಗೋದ್ಯಮಿ ಬಾಬಾ ರಾಮ್‌ದೇವ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ, ಈ ಬಾರಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಬಗ್ಗೆ ಅವರು ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೊ ವೈರಲ್ ಆಗಿದೆ.

ರಾಜಸ್ಥಾನದ ಬಾರ್ಮರ್‌ನಲ್ಲಿ ನಡೆದ ಸಭೆಯೊಂದರಲ್ಲಿ ರಾಮ್‌ದೇವ್ ಅವರು ಮಾತನಾಡುತ್ತಾ, “ಮುಸ್ಲಿಮ್ ಮತ್ತು ಕ್ರಿಶ್ಚಿಯನ್‌ ಸಮುದಾಯಗಳು ಮತಾಂತರದ ಗೀಳನ್ನು ಹೊಂದಿವೆ” ಎಂದು ಹೇಳಿದ್ದಾರೆ.

ಫೆಬ್ರವರಿ 2ರಂದು ಬಾರ್ಮರ್‌ನಲ್ಲಿ ನಡೆದ ಹಿಂದೂ ಮುಖಂಡರ ಸಭೆಯಲ್ಲಿ ರಾಮ್‌ದೇವ್ ಪಾಲ್ಗೊಂಡಿದ್ದರು. “ಹಿಂದೂ ಹುಡುಗಿಯರನ್ನು ಅಪಹರಿಸುತ್ತಾರೆ, ಭಯೋತ್ಪಾದನೆ ಮಾಡುತ್ತಾರೆ. ಈ ಎಲ್ಲಾ ಪಾಪಗಳನ್ನು ನಮಾಜ್ ತೊಳೆಯುತ್ತದೆ ಎಂದು ಮುಸ್ಲಿಮರು ನಂಬುತ್ತಾರೆ” ಎಂದು ಅವರು ಹೇಳಿಕೆ ನೀಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ರಾಮದೇವ್‌, “ನಿಮ್ಮ ಧರ್ಮ ಏನು ಹೇಳುತ್ತದೆ ಎಂದು ಮುಸ್ಲಿಂನನ್ನು ಕೇಳಿ- ಐದು ಬಾರಿ ನಮಾಜ್ ಓದಿ ನಂತರ ಮನಸ್ಸಿಗೆ ಬಂದದ್ದನ್ನು ಮಾಡಿ- ಎನ್ನುತ್ತಾರೆ. ನೀವು ಹಿಂದೂ ಹುಡುಗಿಯರನ್ನು ಅಪಹರಿಸುತ್ತೀರಾ, ನಿಮಗೆ ಅನಿಸಿದ ಪಾಪವನ್ನು ಮಾಡಿರಿ. ಇಸ್ಲಾಮಿನ ಅರ್ಥ ಕೇವಲ ನಮಾಜ್ ಎಂದು ಅವರು ಭಾವಿಸುತ್ತಾರೆ” ಎಂದು ತಿಳಿಸಿದ್ದಾರೆ.

ಮುಂದುವರಿದು, “ನಮ್ಮ ಮುಸ್ಲಿಂ ಸಹೋದರರು ಬಹಳಷ್ಟು ಪಾಪಗಳನ್ನು ಮಾಡುತ್ತಾರೆ, ಆದರೆ ಅವರು ಖಂಡಿತವಾಗಿಯೂ ಪ್ರಾರ್ಥನೆ ಮಾಡುತ್ತಾರೆಂಬುದನ್ನು ನೋಡಿದ್ದೇನೆ. ಏಕೆಂದರೆ ಅವರಿಗೆ ಕಲಿಸಿರುವುದು ಅದನ್ನೇ, ಕೇವಲ ಪ್ರಾರ್ಥನೆ ಮಾಡಿ ಎಂಬುದಾಗಿದೆ. ಅವರು ಭಯೋತ್ಪಾದಕರಾಗುತ್ತಾರೆ, ಹೆಚ್ಚಿನವರು ಅಪರಾಧಿಗಳಾಗುತ್ತಾರೆ” ಎಂದು ಆರೋಪಿಸಿದ್ದಾರೆ.

“ಇದನ್ನು ಇಸ್ಲಾಂ ಅಥವಾ ಕುರಾನ್ ಬೋಧಿಸುತ್ತದೆ ಎಂದು ನಾನು ಹೇಳುತ್ತಿಲ್ಲ. ಆದರೆ ಹೀಗೆಯೇ ಅನುಸರಿಸಲಾಗುತ್ತಿದೆ” ಎಂದು ಅವರು ಹೇಳಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಕ್ರಿಶ್ಚಿಯನ್ ಧರ್ಮದ ಬಗ್ಗೆ ಮಾತನಾಡುತ್ತಾ, “ಕ್ರಿಶ್ಚಿಯಾನಿಟಿ ಏನು ಹೇಳುತ್ತದೆ? ಚರ್ಚ್‌ಗೆ ಹೋಗಿ, ಮೇಣದಬತ್ತಿಯನ್ನು ಬೆಳಗಿಸಿ, ತದನಂತರ ಕರ್ತನಾದ ಯೇಸುವಿನ ಮುಂದೆ ನಿಂತುಕೊಳ್ಳಿ. ನಿಮ್ಮ ಎಲ್ಲಾ ಪಾಪಗಳು ತೊಳೆಯಲ್ಪಡುತ್ತವೆ. ಕ್ರಿಶ್ಚಿಯನ್ನರು ತಮ್ಮ ಎದೆಯ ಮೇಲೆ ಶಿಲುಬೆಯನ್ನು ಧರಿಸುತ್ತಾರೆ ಮತ್ತು ಧರ್ಮವನ್ನು ಪ್ರಚಾರ ಮಾಡುತ್ತಾರೆ” ಎಂದು ಆರೋಪಿಸಿದ್ದಾರೆ.

“ನಾನು ಯಾರನ್ನೂ ಟೀಕಿಸುವುದಿಲ್ಲ. ಈ ಜನರು ಕೇವಲ ಗೀಳನ್ನು ಹೊಂದಿದ್ದಾರೆ. ಕೆಲವರು ಇಡೀ ಜಗತ್ತನ್ನು ಇಸ್ಲಾಂ ಆಗಿ ಪರಿವರ್ತಿಸಿ ಎಂದು ಹೇಳುತ್ತಾರೆ, ಇನ್ನು ಕೆಲವರು ಇಡೀ ಪ್ರಪಂಚವನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸಬೇಕು ಎಂದು ಹೇಳುತ್ತಾರೆ. ಆದರೆ ಮತಾಂತರದ ಮೂಲಕ ನೀವು ಏನು ಮಾಡುತ್ತೀರಿ ಎಂದರೆ, ಯಾವುದೇ ಅಜೆಂಡಾ ಇರುವುದಿಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

ಹಿಂದೂ ಧರ್ಮಕ್ಕೆ ಹೋಲಿಸುತ್ತಾ, ಎರಡು ಧರ್ಮಗಳನ್ನು (ಇಸ್ಲಾಂ, ಕ್ರಿಶ್ಚಿಯನ್‌) ಅವಹೇಳನ ಮಾಡಿರುವ ಅವರು, “ಅಹಿಂಸೆ ಮತ್ತು ಪ್ರಾಮಾಣಿಕತೆಯನ್ನು ಕಲಿಸುತ್ತದೆ” ಎಂದು ಹಿಂದೂ ಧರ್ಮವನ್ನು ಹೊಗಳಿದ್ದಾರೆ. ವಿಪರ್ಯಾಸವೆಂದರೆ, ಕೇವಲ ಒಂದು ವಾರದ ಹಿಂದೆ, ಮುಂಬೈನಲ್ಲಿ ಮತ್ತೊಬ್ಬ ಹಿಂದುತ್ವ ಮುಖಂಡ ಮಾತನಾಡುತ್ತಾ, “ಹಿಂದೂಗಳು ಶಸ್ತ್ರಾಸ್ತ್ರಗಳನ್ನು ಎತ್ತಿಕೊಳ್ಳಬೇಕು, ಮುಸ್ಲಿಮರಿಗೆ ಪಾಠ ಕಲಿಸಬೇಕು” ಎಂದು ಪ್ರಚೋದಿಸಿದ್ದರು.

ರಾಜಸ್ಥಾನ ಪೊಲೀಸರು ರಾಮದೇವ್‌ ಹೇಳಿಕೆಗಳ ಬಗ್ಗೆ ಸ್ವಯಂಪ್ರೇರಿತ ವಿಚಾರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ವರದಿಗಳಾಗಿವೆ.

ರಾಮದೇವ್‌ ಹೇಳಿಕೆಯನ್ನು ಟೀಕಿಸಿರುವ ಎನ್‌ಜಿಒ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್, “ಈ ಭಾಷಣದ ಮೂಲಕ ರಾಮ್‌ದೇವ್ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಮೇಲೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಹಿಂದೂ ಧರ್ಮವನ್ನು ಎಲ್ಲಕ್ಕಿಂತ ಉತ್ತಮ ಧರ್ಮವೆಂದು ಬಿಂಬಿಸುವ ಸಲುವಾಗಿ, ರಾಮ್‌ದೇವ್ ಪೂರ್ವಾಗ್ರಹ ಪೀಡಿತರಾಗಿದ್ದಾರೆ” ಎಂದಿದೆ.

ರಾಮದೇವ್ ಸಮಸ್ಯಾತ್ಮಕ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ ನವೆಂಬರ್‌ನಲ್ಲಿ, ಈ ಯೋಗೋದ್ಯಮಿಯು ಮಹಿಳೆಯರ ಸೀರೆಯ ಬಗ್ಗೆ ಮಾತನಾಡುತ್ತಾ, “ಏನನ್ನೂ ಧರಿಸದಿದ್ದರೂ ಮಹಿಳೆಯರು ಚೆನ್ನಾಗಿ ಕಾಣುತ್ತಾರೆ” ಎಂದಿದ್ದರು. ಈ ಹೇಳಿಕೆಯ ಬಳಿಕ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗ (ಎಂಎಸ್‌ಸಿಡಬ್ಲ್ಯು) ಅವರಿಗೆ ನೋಟಿಸ್ ಜಾರಿ ಮಾಡಿತ್ತು. ನಂತರ ಅವರು ಕ್ಷಮೆಯಾಚಿಸಿದ್ದರು.

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಆ ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...