Homeಮುಖಪುಟಸೌಹಾರ್ದ ಕಥನ: ಹಿಂದೂ ಯುವಕರಿಗೆ ಕೇಸರಿ ಶಾಲು ತೊಡಿಸಿದ ಮುಸ್ಲಿಮರು - ಹಣ್ಣು ತಿನ್ನಿಸಿ ಇಫ್ತಾರ್...

ಸೌಹಾರ್ದ ಕಥನ: ಹಿಂದೂ ಯುವಕರಿಗೆ ಕೇಸರಿ ಶಾಲು ತೊಡಿಸಿದ ಮುಸ್ಲಿಮರು – ಹಣ್ಣು ತಿನ್ನಿಸಿ ಇಫ್ತಾರ್ ಆಚರಿಸಿದ ರಾಮ ಮಾಲ ಭಕ್ತರು

ನಮ್ಮ ಗ್ರಾಮದಲ್ಲಿ ಹಿಂದಿನಿಂದಲೂ ಎಲ್ಲಾ ಧರ್ಮದವರು ಪರಸ್ಪರ ಸೌಹಾರ್ದತೆಯಿಂದ ಬದುಕಿದ್ದೇವೆ. ಹಾಗಾಗಿ ನಮ್ಮ ಊರಿನ ಜನರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ.

- Advertisement -
- Advertisement -

ರಾಜ್ಯದ ಕೆಲವೆಡೆ ಒಂದು ಕೋಮಿನ ಜನರಿಗೆ ವ್ಯಾಪಾರ ಮಾಡಲು ಅವಕಾಶ ನೀಡುವುದಿಲ್ಲ ಎಂಬ ಬ್ಯಾನರ್ ಹಾಕಿ ಸೌಹಾರ್ದತೆ ಹಾಳು ಮಾಡುವ ಪ್ರಯತ್ನ ನಡೆದಿತ್ತು. ಅದರ ಬೆನ್ನಿಗೆ ಧಾರವಾಡದ ನುಗ್ಗಿಕೇರಿಯಲ್ಲಿನ ಹನುಮಂತ ದೇವಸ್ಥಾನದ ಬಳಿ ಕಳೆದ ಹದಿನೈದು ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ನಬಿಸಾಬ್‌‌ ಅವರ ವ್ಯಾಪಾರಕ್ಕೆ ಅಡ್ಡಿಪಡಿಸಿ, ಶ್ರೀರಾಮಸೇನೆಯ ದುಷ್ಕರ್ಮಿಗಳು ಕಲ್ಲಂಗಡಿಗಳನ್ನು ರಸ್ತೆಗೆ ಎಸೆದು ವಿಕೃತಿ ಮೆರೆದಿದ್ದರು. ಈ ಘಟನೆಗಳನ್ನು ನಾಡಿನ ಪ್ರಜ್ಞಾವಂತರು, ಜೀವಪರರೆಲ್ಲರೂ ಖಂಡಿಸಿದ್ದರು. ಈ ಘಟನೆಗಳಿಂದ ನೊಂದ ಬಳ್ಳಾರಿಯ ಗ್ರಾಮವೊಂದರ ಹಿಂದೂ-ಮುಸಲ್ಮಾನ ಗ್ರಾಮಸ್ಥರು ನಾವು ಮತ್ತಷ್ಟು ಒಗ್ಗಟ್ಟಾಗಿದ್ದೇವೆ ಎಂಬ ಸೌಹಾರ್ದ ಸಂದೇಶ ಸಾರಿದ್ದಾರೆ. ಆ ಮೂಲಕ ಒಡೆದು ಆಳುವವರಿಗೆ ಬಂಧುತ್ವದ ಪಾಠ ಹೇಳಲು ಹೊರಟಿದ್ದಾರೆ.

ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ರಾಮಸಾಗರ ಗ್ರಾಮದಲ್ಲಿ ಪ್ರತಿವರ್ಷ ರಾಮನವಮಿಯ ಅಂಗವಾಗಿ ಹಿಂದೂ ಯುವಕರು ರಾಮ ಮಾಲೆ ಹಾಕಿಕೊಂಡು ವ್ರತ ಆಚರಿಸುತ್ತಾರೆ. ಅದೇ ಊರಿನಲ್ಲಿನ ಮುಸ್ಲಿಮರು ರಂಜಾನ್ ಮಾಸದಲ್ಲಿ ಉಪವಾಸವಿದ್ದು ಸಂಜೆ ಪ್ರಾರ್ಥನೆ ಬಳಿಕ ಇಫ್ತಾರ್ ಆಚರಿಸುತ್ತಾರೆ. ಇದನ್ನು ಹಲವು ವರ್ಷಗಳಿಂದ ತಮ್ಮ ಪಾಡಿಗೆ ತಾವು ಮಾಡಿಕೊಂಡು ಬರುತ್ತಿದ್ದರು. ಆದರೆ ಈ ಬಾರಿ ಕರ್ನಾಟಕದಲ್ಲಿನ ಅಶಾಂತ ವಾತವರಣ ಗಮನಿಸಿದ ಊರಿನ ಗ್ರಾಮಸ್ಥರು ಒಟ್ಟಾಗಿ ಸೇರಿ ರಾಮನವಮಿ ಮತ್ತು ಇಫ್ತಾರ್ ಆಚರಿಸುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ.

ಏಪ್ರಿಲ್ 09ರ ಕಳೆದ ಶನಿವಾರದಂದು ರಾಮನವಮಿ ಹಬ್ಬದ ಪ್ರಯುಕ್ತ ಮೆರವಣಿಗೆ ಹೊರಟಿದ್ದ ರಾಮ ಭಕ್ತರನ್ನು ಮುಸ್ಲಿಂ ಬಾಂಧವರು ಅಪ್ಪಿಕೊಂಡು, ಅವರಿಗೆ ಕೇಸರಿ ಶಾಲನ್ನು ಹಾಕುವುದರ ಮೂಲಕ ರಾಮನವಮಿಯ ಶುಭಾಶಯಗಳನ್ನು ತಿಳಿಸಿದ್ದರು. ಜೈ ಶ್ರೀರಾಮ್ ಘೋಷಣೆ ಕೂಗಿ ತಾವು ಹಬ್ಬದಲ್ಲಿ ಭಾಗಿಯಾಗಿದ್ದರು.

ಅದಕ್ಕೆ ಪ್ರತಿಯಾಗಿ ಏಪ್ರಿಲ್ 12ರ ಮಂಗಳವಾರದಂದು ಮುಸ್ಲಿಮರು ಸಂಜೆ ಪ್ರಾರ್ಥನೆ ಮುಗಿಸಿದ ಸಮಯದಲ್ಲಿ ರಾಮ ಮಾಲೆ ಹಾಕಿಕೊಂಡಿರುವ ಹಲವು ಭಕ್ತರು ಮಸೀದಿಗೆ ಭೇಟಿ ಕೊಟ್ಟು ಸಿಹಿ, ಹಣ್ಣು ಹಂಪಲುಗಳನ್ನು ಹಂಚಿ ಇಫ್ತಾರ್‌ ಆಚರಿಸುವ ಮೂಲಕ ಕೃತಜ್ಞತೆ ತಿಳಿಸಿದ್ದಾರೆ. ಪರಸ್ಪರ ಹಣ್ಣು ತಿನಿಸುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸೌಹಾರ್ದತೆಯನ್ನು ಸಾರುತ್ತಿವೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ರಾಮಸಾಗರ ಗ್ರಾಮದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸದಸ್ಯ ಭುವನ್ ಕುಮಾರ್, “ನಮ್ಮ ಗ್ರಾಮದಲ್ಲಿ ಹಿಂದಿನಿಂದಲೂ ಎಲ್ಲಾ ಧರ್ಮದವರು ಪರಸ್ಪರ ಸೌಹಾರ್ದತೆಯಿಂದ ಬದುಕಿದ್ದೇವೆ. ಈ ಹಿಂದೆ ರಾಮಭಕ್ತರು ತಮ್ಮ ಪಾಡಿಗೆ ತಾವು ರಾಮನವಮಿ ಆಚರಿಸುತ್ತಿದ್ದಾಗ ಮುಸ್ಲಿಮರು ಶುಭ ಹಾರೈಸುತ್ತಿದ್ದರು. ಆದರೆ ಈ ಬಾರಿ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಅವರನ್ನು ಆಲಂಗಿಸಿ ಕೇಸರಿ ಶಾಲು ಹಾಕಿದ್ದಾರೆ. ಅದೇ ರೀತಿ ಹಿಂದೂ ಯುವಕರು ಸಹ ಮಸೀದಿಗೆ ತೆರಳಿ ಹಣ್ಣು-ಸಿಹಿ ತಿನಿಸಿ ಇಫ್ತಾರ್ ಆಚರಿಸಿದ್ದಾರೆ. ಹಾಗಾಗಿ ನಮ್ಮ ಊರಿನ ಜನರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ. ಇಡೀ ಭಾರತ ಇರಬೇಕಾದ್ದು ಹೀಗೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ; Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...