Homeಮುಖಪುಟಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಕೆಲ ಕ್ಷೇತ್ರಗಳ ಬೂತ್‌ಗಳಲ್ಲಿ ಮತದಾನದ ದಿನ ಮತಗಟ್ಟೆಗೆ ತೆರಳಿದ್ದ ನಾಗರಿಕರಿಗೆ ತಮ್ಮ ಹೆಸರು ಪಟ್ಟಿಯಿಂದ ನಾಪತ್ತೆಯಾಗಿರುವುದು, ತಪ್ಪಾಗಿ ನಮೂದಿಸಿರುವುದು ಕಂಡುಬಂದಿದೆ. ಮಥುರಾ ಲೋಕಸಭೆ ಕ್ಷೇತ್ರದಲ್ಲಿ ಕೂಡ ಇಂತದ್ದೆ ಬೆಳವಣಿಗೆ ನಡೆದಿದೆ. ಅಲ್ಲಿನ ಮುಸ್ಲಿಂ ಮತದಾರರು ಹೆಚ್ಚಾಗಿ ನಮಗೆ ಮತದಾನಕ್ಕೆ ನಿರಾಕರಿಸಲಾಗಿದೆ ಎಂದು ಆರೋಪಿಸಿದ್ದಾರೆ, ಆದರೆ ಹಿಂದೂ ಸಮುದಾಯದ ಜನರಿಂದ ಇಂತಹ ಯಾವುದೇ ಆರೋಪಗಳು ಕೇಳಿ ಬಂದಿಲ್ಲ.

ದೇಶದ ಹಲವು ರಾಜ್ಯಗಳಲ್ಲಿ ಏಪ್ರಿಲ್ 26ರಂದು ಎರಡನೇ ಹಂತದ ಮತದಾನ ನಡೆದಿದೆ. ಮಥುರಾದ ಗಾಲಿ ಅಹಿರಾನ್‌ನಲ್ಲಿ 74 ವರ್ಷದ ಜಮರುಲ್ ನಿಶಾ ಅವರ ಕುಟುಂಬದ ಒಂಬತ್ತು ಮತದಾರರಲ್ಲಿ ಒಬ್ಬರಿಗೂ ವೋಟರ್ ಸ್ಲಿಪ್  ಸಿಕ್ಕಿಲ್ಲ. ಈ ರೀತಿಯಾಗಿರುವುದು ಇದೇ ಮೊದಲು ಎಂದು ಅವರ ಪತಿ ಮೊಹಮ್ಮದ್ ಸಬೀರ್ ಹೇಳಿದ್ದಾರೆ.

ವೋಟರ್ ಸ್ಲಿಪ್ ಎನ್ನುವುದು ಭಾರತದ ಚುನಾವಣಾ ಆಯೋಗದಿಂದ ಚುನಾವಣೆಯ ಮೊದಲು ನೋಂದಾಯಿತ ಮತದಾರರಿಗೆ ನೀಡುವ ದಾಖಲೆಯಾಗಿದೆ. ಇದು ಮತದಾರರ ನೋಂದಣಿಯ ದೃಢೀಕರಣವಾಗಿದೆ ಮತ್ತು ಎಲ್ಲಿ ಮತ್ತು ಯಾವಾಗ ಮತ ಚಲಾಯಿಸಬೇಕು ಎಂಬ ಮಾಹಿತಿಯನ್ನು ಒದಗಿಸುತ್ತದೆ.

ವೋಟರ್ ಸ್ಲಿಪ್ ಇಲ್ಲ ಎಂದು ಮಥುರಾ ಸಂಸದೀಯ ಕ್ಷೇತ್ರದ ಮತದಾರರಾದ ಜಮರುಲ್ ನಿಶಾ ಅವರು ಮನೆಯಲ್ಲಿ ಕುಳಿತುಕೊಳ್ಳಲಿಲ್ಲ. ಅವರು ಮತಗಟ್ಟೆಗೆ ಹೋಗಿದ್ದಾರೆ, ಪಟ್ಟಿಯಲ್ಲಿ ತನ್ನ ಹೆಸರನ್ನು ಪತ್ತೆ ಹಚ್ಚಿ ವೋಟರ್ ಸ್ಲಿಪ್ ಪಡೆದುಕೊಂಡಿದ್ದಾರೆ, ಆದರೆ ಅವರಿಗೆ ಮತ ಚಲಾಯಿಸುವ ಅವಕಾಶ ಸಿಕ್ಕಿಲ್ಲ. ಯಾಕೆಂದರೆ ಬೂತ್‌ನಲ್ಲಿದ್ದ ಪಟ್ಟಿಯಲ್ಲಿ ‘ಜಮರುಲ್’ ಎಂದು ಮಾತ್ರ ನಮೂದಿಸಲಾಗಿತ್ತು, ‘ಜಮರುಲ್ ನಿಶಾ’  ಎಂದು ಹೆಸರು ಇರಲಿಲ್ಲ. ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿನ ಮತದಾರರ ಪಟ್ಟಿಯಲ್ಲಿ ಜಮರುಲ್ ನಿಶಾ ಅವರ ಪೂರ್ಣ ಹೆಸರನ್ನು ಉಲ್ಲೇಖಿಸಲಾಗಿದೆ. ನಾನು ಅವರೊಂದಿಗೆ ಈ ಬಗ್ಗೆ ತರ್ಕಿಸಲು ಪ್ರಯತ್ನಿಸಿದೆ, ಆದರೆ ಅಲ್ಲಿದ್ದ ಪೋಲೀಸ್ ಅಧಿಕಾರಿಗಳು ನನ್ನನ್ನು ಗೇಲಿ ಮಾಡಿದರು, ಇಲ್ಲಿ ನಿಂತು ದಿನವಿಡೀ ಜಗಳವಾಡಲು ನಿಮಗೆ ತುಂಬಾ ವಯಸ್ಸಾಗಿಲ್ಲವೇ? ಎಂದು ಪ್ರಶ್ನಿಸಿದರು, ಆದ್ದರಿಂದ ನಾನು ವಾಪಾಸ್ಸು ಬಂದೆ ಎಂದು 74ರ ಹರೆಯದ ‘ಜಮರುಲ್ ನಿಶಾ’ ಹೇಳಿದ್ದಾರೆ.

ಮಥುರಾ ಸಂಸದೀಯ ಕ್ಷೇತ್ರವು ಎರಡು ದಶಕಗಳಲ್ಲಿ ಅತ್ಯಂತ ಕಡಿಮೆ 49.4% ಮತದಾನವನ್ನು ದಾಖಲಿಸಿದೆ    2019ರ ಲೋಕಸಭೆ ಚುನಾವಣೆಯಲ್ಲಿ 60.7% ಮತದಾನವಾಗಿತ್ತು. ಇದು ಉತ್ತರ ಪ್ರದೇಶದಲ್ಲಿ ಈವರೆಗೆ ನಡೆದ 16 ಕ್ಷೇತ್ರಗಳ ನಡೆದ ಮತದಾನಗಳಲ್ಲಿ ಅತ್ಯಂತ ಕಡಿಮೆ ಮತದಾನವಾಗಿರುವ ಕ್ಷೇತ್ರವಾಗಿದೆ. ಮತದಾರರ ಚೀಟಿಗಳ ವಿತರಣೆ ಮಾಡದಿರುವುದು, ಮತಗಟ್ಟೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನಾಪತ್ತೆ ಅಥವಾ ಮತದಾರರ ಪಟ್ಟಿಯಲ್ಲಿ ತಪ್ಪಾಗಿ ಹೆಸರು ಬರೆದಿರುವುದು ಮತ್ತು ಮತದಾರರ ಗುರುತಿನ ಚೀಟಿಗಳ ಪಡೆಯುವಲ್ಲಿ ಅಡಚಣೆ, ಈ ಎಲ್ಲಾ ಕಾರಣಗಳಿಂದಾಗಿ ಮುಸ್ಲಿಂ ಮತದಾರರು ಮತದಾನದಿಂದ ವಂಚಿತರಾಗಿದ್ದಾರೆ ಎಂಬ ಹೇಳಿಕೆಗಳ ಮಧ್ಯೆ ಕ್ಷೇತ್ರದಲ್ಲಿ ಕಡಿಮೆ ಮತದಾನವಾಗಿದೆ ಎನ್ನುವುದನ್ನು ಗಮನಿಸಬಹುದಾಗಿದೆ.

ಆದರೆ ಅಲ್ಲಿನ ಹಿಂದೂ ನಿವಾಸಿಗಳು ಅಂತಹ ಯಾವುದೇ ಸಮಸ್ಯೆಯ ಬಗ್ಗೆ ಹೇಳಿಲ್ಲ. ಗಾಲಿ ಅಹಿರಾನ್‌ನಲ್ಲಿರುವ ಸಬೀರ್ ಮತ್ತು ಜಮ್ರುಲ್ ಅವರ ಮನೆಯ ಪಕ್ಕದಲ್ಲೇ ವಾಸಿಸುವ 47 ವರ್ಷದ ಮೂಲಚಂದ್ ಅವರು ಚುನಾವಣೆಗೆ ಮುನ್ನ ಕುಟುಂಬದ ಎಲ್ಲಾ 6 ಸದಸ್ಯರಿಗೆ ವೋಟರ್ ಸ್ಲಿಪ್‌ಗಳನ್ನು ಸ್ವೀಕರಿಸಿದ್ದಾರೆ. ಆದರೆ ಪಕ್ಕದಲ್ಲೇ ವಾಸಿಸುತ್ತಿದ್ದ ಸಬೀರ್ ಮತ್ತು ಜಮ್ರುಲ್ ಕುಟುಂಬಕ್ಕೆ ಸ್ಲಿಪ್‌ ವಿತರಿಸಲಾಗಿಲ್ಲ.

ದೆಹಲಿಯಿಂದ 170ಕಿಮೀ ದೂರದಲ್ಲಿರುವ ‘ಮಥುರಾ’ ಭಾರತೀಯ ಜನತಾ ಪಕ್ಷದ ಭದ್ರಕೋಟೆಯಾಗಿದೆ. ಮಥುರಾ ಸಂಸದೀಯ ಕ್ಷೇತ್ರದಲ್ಲಿ 2014 ಮತ್ತು 2019ರಲ್ಲಿ ನಟಿ ಹೇಮಾ ಮಾಲಿನಿ ಸಂಸದರಾಗಿ ಆಯ್ಕೆಯಾಗಿದ್ದರು. ಈ ವರ್ಷ ಕಾಂಗ್ರೆಸ್ ಅಭ್ಯರ್ಥಿ ಮುಖೇಶ್ ಧಂಗರ್ ಮತ್ತು ಬಹುಜನ ಸಮಾಜ ಪಕ್ಷದ ಸುರೇಶ್ ಸಿಂಗ್ ವಿರುದ್ಧ ಮಾಲಿನಿ ಈ ಕ್ಷೇತ್ರದಿಂದ ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ.

2011ರ ಜನಗಣತಿಯ ಪ್ರಕಾರ ಮಥುರಾ ಜಿಲ್ಲೆಯ ಜನಸಂಖ್ಯೆಯಲ್ಲಿ ಮುಸ್ಲಿಮರು 8.5% ರಷ್ಟಿದ್ದಾರೆ. ಶಾಹಿ ಈದ್ಗಾ ಮಸೀದಿಯ ಎದುರುಗಡೆ ದೀಗ್ ಗೇಟ್ ಇದೆ, ಅಲ್ಲಿ ಮೊಹಮ್ಮದ್ ಸಾಬು(62) ಹಿತ್ತಾಳೆ ವಸ್ತುಗಳನ್ನು ಸಂಗ್ರಹಿಸಿ ಸ್ಥಳೀಯ ಉತ್ಪಾದನಾ ಸಂಸ್ಥೆಗಳಿಗೆ ಮಾರಾಟ ಮಾಡುವ ಅಂಗಡಿಯನ್ನು ನಡೆಸುತ್ತಿದ್ದಾರೆ. ಮಥುರಾದಲ್ಲಿ ನಡೆದ ಮತದಾನದ ಮರುದಿನ ಈ ಬಾರಿ ನನಗೆ ಮತ ಚಲಾಯಿಸಲು ಸಾಧ್ಯವಾಗಲಿಲ್ಲ ಎಂದು ಸಾಬು ಹೇಳಿದ್ದಾರೆ. ಮತಗಟ್ಟೆಯಲ್ಲಿನ ಮ್ಯಾನೇಜರ್ ನನ್ನ ಹೆಸರು ಪಟ್ಟಿಯಲ್ಲಿಲ್ಲ ಎಂದು ಹೇಳಿದರು. 30 ನಿಮಿಷಗಳ ಕಾಲ ಅವರು ಫೈಲ್‌ಗಳನ್ನು ಪರಿಶೀಲಿಸಿದರು ಆದರೆ ನನ್ನ ಹೆಸರನ್ನು ಕಂಡು ಹಿಡಿಯಲಾಗಲಿಲ್ಲ. ನಾನು ನನ್ನ ಜೀವನದಲ್ಲಿ ಬಹುಪಾಲು ಚುನಾವಣೆಗಳಲ್ಲಿ ಸ್ಥಳೀಯ ಜೈನ್ ಐಡಿಯಲ್ ಜೂನಿಯರ್ ಪ್ರೌಢಶಾಲೆಯಲ್ಲಿ ಮತ ಚಲಾಯಿಸಿದ್ದೇನೆ. ಈ ಹಿಂದೆ ಲೋಕಸಭೆ ಅಥವಾ ವಿಧಾನಸಭಾ ಚುನಾವಣೆಯಲ್ಲಿ ಈ ರೀತಿ ಆಗಿಲ್ಲ. ನನ್ನ ಕುಟುಂಬದಲ್ಲಿ ಐವರು ಮತದಾರರಿದ್ದಾರೆ. ಆದರೆ ನಮ್ಮಲ್ಲಿ ಮೂವರು ಮಾತ್ರ ಮತ ಚಲಾಯಿಸಿದ್ದಾರೆ ಎಂದು ಹೇಳಿದ್ದಾರೆ.

ಶಬ್ಬೀರ್ ಅಲಿ(65) ಸಾಬು ಅವರ ಅಂಗಡಿಯಿಂದ ಹಿತ್ತಾಳೆಯನ್ನು ತನ್ನ ಗ್ರಾಹಕರಿಗೆ ಸಾಗಿಸುತ್ತಾರೆ, ಮಥುರಾದ ಗೋವಿಂದಪುರದಲ್ಲಿರುವ ತಮ್ಮ ಮತದಾನ ಕೇಂದ್ರದಲ್ಲಿ ಇದೇ ರೀತಿಯ ಸಮಸ್ಯೆಗಳನ್ನು ಅವರು ಎದುರಿಸಿದ್ದಾರೆ. ನಮ್ಮ ಕುಟುಂಬದಲ್ಲಿ 8 ಮತದಾರರಿದ್ದಾರೆ, ಆದರೆ ನನ್ನ ಇಬ್ಬರು ಹೆಣ್ಣುಮಕ್ಕಳು ಮತ್ತು ಇಬ್ಬರು ಗಂಡು ಮಕ್ಕಳ ಹೆಸರು ಪಟ್ಟಿಯಲ್ಲಿರಲಿಲ್ಲ ಎಂದು ಹೇಳಿದ್ದಾರೆ.

ಮಥುರಾದ ಶಾಹಿ ಈದ್ಗಾ ಮಸೀದಿಯ ಸುತ್ತಮುತ್ತಲಿನ ನೆರೆಹೊರೆಗಳಲ್ಲಿ ಮುಸ್ಲಿಮರು ಹೆಚ್ಚಾಗಿ ವಾಸಿಸುತ್ತಿದ್ದಾರೆ. ಅವರ ಮತಗಳು ಹೆಚ್ಚಾಗಿ ಜಯಂತ್ ಚೌಧರಿ ನೇತೃತ್ವದ ರಾಷ್ಟ್ರೀಯ ಲೋಕದಳ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಡುವೆ ಹಂಚಿಹೋಗಿವೆ. ಈ ವರ್ಷದ ಆರಂಭದಲ್ಲಿ ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್‌ಗೆ ಸೇರ್ಪಡೆಗೊಂಡ ಆರ್‌ಎಲ್‌ಡಿ ಈ ಬಾರಿ ಮಥುರಾದಲ್ಲಿ ಸ್ಪರ್ಧಿಸುತ್ತಿಲ್ಲ. ಹೀಗಾಗಿ ಇಲ್ಲಿನ ಮತದಾರರು ಕಾಂಗ್ರೆಸ್‌ಗೆ ಹೆಚ್ಚಿನ ಬೆಂಬಲ ನೀಡಿದ್ದಾರೆ. ಹಿಂದೂ ಮತ್ತು ಮುಸ್ಲಿಂ ನಿವಾಸಿಗಳನ್ನು ಹೊಂದಿರುವ ಗಾಲಿ ಅಹಿರಾನ್‌ನಲ್ಲಿ ಈ ಬಾರಿ ಹಿಂದೂಗಳಿಗಿಂತ ಹೆಚ್ಚಾಗಿ ಮುಸ್ಲಿಂ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲ ಎಂದು ಆರೋಪವನ್ನು ಮಾಡಿದ್ದಾರೆ, ನಮಗೆ ನಮ್ಮ ಹಕ್ಕನ್ನು ನಿರಾಕರಿಸಲಾಗಿದೆ ಎಂದು ಹೇಳಿದ್ದಾರೆ. ಇದಕ್ಕೆ ಕಾರಣವಾದ ಅಂಶಗಳ ಬಗ್ಗೆ ಚುನಾವಣಾ ಆಯೋಗ ಉತ್ತರಿಸಬೇಕಿದೆ.

ಇದನ್ನು ಓದಿ: ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು ಉಲ್ಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...