Homeಮುಖಪುಟಬಿಜೆಪಿ 'ಸಂವಿಧಾನ ಮತ್ತು ಮೀಸಲಾತಿ'ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

- Advertisement -
- Advertisement -

ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.

ಬಿಜೆಪಿ ಚುನಾವಣಾ ಪ್ರಚಾರದ ಸಮಯದಲ್ಲಿ ಮಾಡಿದ ದ್ವೇಷದ ಭಾಷಣಗಳ ಬಗ್ಗೆ ಪ್ರತಿಕ್ರಿಯಿಸಿದ ಲಾಲು ಪ್ರಸಾದ್ ಯಾದವ್, ಪ್ರತಿಪಕ್ಷ ಇಂಡಿಯಾ ಮೈತ್ರಿಕೂಟಕ್ಕೆ ಜನರು ನೀಡುತ್ತಿರುವ ಬೆಂಬಲದಿಂದ ಬಿಜೆಪಿ ನಾಯಕರು ಭಯಭೀತರಾಗಿದ್ದಾರೆ, ಅದಕ್ಕಾಗಿಯೇ ಅವರು ಜನರನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತದೆ, ಅವರ ಉದ್ದೇಶದ ಬಗ್ಗೆ ಜನರಿಗೆ ತಿಳಿದಿದೆ. ಮುಸ್ಲಿಮರಿಗೆ ಸಂಪೂರ್ಣ ಮೀಸಲಾತಿ ಸಿಗಬೇಕು ಎಂದು ಹೇಳಿದ್ದಾರೆ.

ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಮುಸ್ಲಿಮರಿಗೆ ಆಯಾ ರಾಜ್ಯ ಸರ್ಕಾರಗಳು ನೀಡುತ್ತಿರುವ ಧರ್ಮಾಧಾರಿತ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಚುನಾವಣಾ ರ್ಯಾಲಿಯಲ್ಲಿ ಹೇಳಿದ ಒಂದು ದಿನದ ನಂತರ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಈ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.

ಬಿಜೆಪಿಯು ಚುನಾವಣಾ ಸಮಾವೇಶಗಳಲ್ಲಿ ಬೆದರಿಕೆ ಹುಟ್ಟಿಸುವ ಹಾಗೂ ಜಂಗಲ್ ರಾಜ್ ಪುಕಾರನ್ನು ಹಬ್ಬಿಸುವ ಕೆಲಸದಲ್ಲಿ ನಿರತವಾಗಿದೆ ಎಂದು ಹೇಳಿದ ಲಾಲು ಪ್ರಸಾದ್ ಯಾದವ್, “ಈ ಬಾರಿ ನಾನೂರರಾಚೆ” ಎಂಬ ಪ್ರಧಾನಿ ನರೇಂದ್ರ ಮೋದಿಯ ಘೋಷಣೆಯನ್ನು ವ್ಯಂಗ್ಯವಾಡಿದ್ದಾರೆ, ಅವರೇ ಸ್ವತಃ ಆಚೆ ಹೋಗಲಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಮತಗಟ್ಟೆಗಳ ಹೊರಗೆ ಮತದಾರರ ಉದ್ದನೆಯ ಸರತಿ ಸಾಲುಗಳು ಕಂಡುಬರುತ್ತಿದ್ದು, ಜನರು ಮೂರನೇ ಹಂತದಲ್ಲಿ ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ ಎಂದು ಇದೇ ವೇಳೆ ಹೇಳಿದ್ದಾರೆ. ಧರ್ಮದ ಆಧಾರದ ಮೇಲೆ ಮುಸ್ಲಿಮರಿಗೆ ಮೀಸಲಾತಿ ನೀಡಲು ಕಾಂಗ್ರೆಸ್ ಮತ್ತು ಆರ್‌ಜೆಡಿ ಬಯಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಚುನಾವಣಾ ರ್ಯಾಲಿಗಳಲ್ಲಿ ಆರೋಪಿಸಿದ ಹಿನ್ನೆಲೆಯಲ್ಲಿ ಆರ್‌ಜೆಡಿ ಮುಖ್ಯಸ್ಥರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಎಲ್‌ಜೆಪಿ(ರಾಮ್ ವಿಲಾಸ್) ಮುಖ್ಯಸ್ಥ ಮತ್ತು ಸಂಸದ ಚಿರಾಗ್ ಪಾಸ್ವಾನ್ ಅವರು ಕಾಂಗ್ರೆಸ್‌ ನಾಯಕರು ಮೂಲಭೂತ ಸಮಸ್ಯೆಗಳನ್ನು ಎತ್ತುವ ಬದಲು ಎನ್‌ಡಿಎ ಅಧಿಕಾರಕ್ಕೆ ಬಂದರೆ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸುತ್ತಾರೆ, ಪ್ರಜಾಪ್ರಭುತ್ವ ಅಪಾಯಕ್ಕೆ ಸಿಲುಕುತ್ತದೆ ಎಂದು ಜನರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೇಜ್ರಿವಾಲ್‌ ನ್ಯಾಯಾಂಗ ಬಂಧನದ ಅವಧಿ ಮೇ.20ರವರೆಗೆ ವಿಸ್ತರಣೆ: ಮಧ್ಯಂತರ ಜಾಮೀನು ನೀಡುತ್ತಾ ಸುಪ್ರೀಂಕೋರ್ಟ್‌?

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪೂಂಚ್‌ನ ನ್ಯಾಷನಲ್ ಕಾನ್ಫರೆನ್ಸ್‌ ರ‍್ಯಾಲಿಯಲ್ಲಿ ಚಾಕುವಿನಿಂದ ದಾಳಿ; 3 ಮಂದಿಗೆ ಗಾಯ

0
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾನುವಾರ ನ್ಯಾಚನಲ್ ಕಾನ್ಫರೆನ್ಸ್‌ ಪಕ್ಷದ ರೋಡ್ ಶೋ ವೇಳೆ ಅಪರಿಚಿತ ದುಷ್ಕರ್ಮಿಗಳ ಚಾಕು ದಾಳಿಯಲ್ಲಿ ಮೂವರು ಗಾಯಗೊಂಡಿದ್ದಾರೆ. ಮೆಂಧರ್ ಪ್ರದೇಶದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ...