Homeಮುಖಪುಟರಾಜೀವ್ ಗಾಂಧಿ ಭಯ ಸೃಷ್ಟಿಸಲು ತಮಗೆ ದೊರಕಿದ್ದ ದೊಡ್ಡ ಬಹುಮತವನ್ನು ಬಳಸಿರಲಿಲ್ಲ: ಸೋನಿಯಾ ಗಾಂಧಿ

ರಾಜೀವ್ ಗಾಂಧಿ ಭಯ ಸೃಷ್ಟಿಸಲು ತಮಗೆ ದೊರಕಿದ್ದ ದೊಡ್ಡ ಬಹುಮತವನ್ನು ಬಳಸಿರಲಿಲ್ಲ: ಸೋನಿಯಾ ಗಾಂಧಿ

ಈಗಿನ ಪ್ರಧಾನಿ ನರೇಂದ್ರ ಮೋದಿಯವರು ತಮಗೆ ದೊರಕಿರುವ ಬಹುಮತವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸೋನಿಯಾ ಗಾಂಧಿ ಪರೋಕ್ಷವಾಗಿ ಆರೋಪಿಸಿದ್ದಾರೆ.

- Advertisement -
- Advertisement -

ರಾಜೀವ್ ಗಾಂಧಿ ಭಯವನ್ನು ಸೃಷ್ಟಿಸಲು ತಮಗೆ ದೊರಕಿದ್ದ ಬೃಹತ್ ಬಹುಮತದ ಆದೇಶವನ್ನು ಬಳಸಲಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಆ ಮೂಲಕ ಪರೋಕ್ಷವಾಗಿ ಈಗಿನ ಪ್ರಧಾನಿ ನರೇಂದ್ರ ಮೋದಿಯವರು ತಮಗೆ ದೊರಕಿರುವ ಬಹುಮತವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜೀವ್ ಗಾಂಧಿಯವರ 75 ನೇ ಜನ್ಮ ದಿನಾಚರಣೆಯ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಎದುರಿಸುತ್ತಿರುವ ಸವಾಲುಗಳು ಅಸಾಧಾರಣವಾದುದಾಗಿವೆ, ಆದರೂ ಅದು ವಿಭಜಕ ಶಕ್ತಿಗಳ ವಿರುದ್ಧದ ಸೈದ್ಧಾಂತಿಕ ಹೋರಾಟವನ್ನು ಮುಂದುವರಿಸುತ್ತೇವೆ ಎಂದಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು 1984 ರಲ್ಲಿ ಭಾರಿ ಬಹುಮತವನ್ನು ಪಡೆದಿದ್ದರು. ಆದರೆ ಭಯದ ವಾತಾವರಣವನ್ನು ಸೃಷ್ಟಿಸಲು, ಜನರನ್ನು ಬೆದರಿಸಲು ಮತ್ತು ಹೆದರಿಸಲು ಅಥವಾ ಸಂಸ್ಥೆಗಳನ್ನು ನಾಶಮಾಡಲು ಇದನ್ನು ಬಳಸಲಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನರೇಂದ್ರ ಮೋದಿ ಸರ್ಕಾರದ ಆಡಳಿತವನ್ನು ಟೀಕಿಸಿದ್ದಾರೆ.

ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಅವರು ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿನ ಅವರ ಈ ಮಾತುಗಳು ಐಎನ್‌ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಹಣಕಾಸು ಮಂತ್ರಿ ಪಿ ಚಿದಂಬರಂ ಅವರನ್ನು ಸಿಬಿಐ ಬಂಧಿಸಿದ ನಂತರ ಮಹತ್ವ ಪಡೆದುಕೊಂಡಿವೆ. ಸಿಬಿಐ ಮತ್ತು ಇಡಿಯಂತಹ ಕೇಂದ್ರ ತನಿಖಾ ಏಜೆನ್ಸಿಗಳನ್ನು “ವೈಯಕ್ತಿಕ ಸೇಡು ತೀರಿಸಿಕೊಳ್ಳುಲು ಸರ್ಕಾರ ಬಳಸುತ್ತಿದೆ” ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

ನಂತರ “1989 ರಲ್ಲಿ, ಕಾಂಗ್ರೆಸ್ ಆದ ಬಹುಮತವನ್ನು ಪಡೆಯಲಿಲ್ಲ, ಆದ್ದರಿಂದ ರಾಜೀವ್ ಗಾಂಧಿ ಜನರ ಆದೇಶವನ್ನು ನಯವಾಗಿ ಸ್ವೀಕರಿಸಿದರು. ಪ್ರಸ್ತುತ ಪೀಳಿಗೆಗೆ ನಾನು ಹೇಳಲು ಬಯಸುತ್ತೇನೆ, ಆ ಸಮಯದಲ್ಲಿ ಕಾಂಗ್ರೆಸ್ ಅತಿದೊಡ್ಡ ರಾಜಕೀಯ ಪಕ್ಷವಾಗಿದ್ದರೂ, ಅವರು ಅಧಿಕಾರಕ್ಕೆ ಹಕ್ಕು ಸಾಧಿಸಲಿಲ್ಲ. ಇದಕ್ಕೆ ಕಾರಣ ಅವರ ಆಂತರಿಕ ನೈತಿಕ ಶಕ್ತಿ ಮತ್ತು ಪ್ರಾಮಾಣಿಕತೆ ಅವರಿಗೆ ಹಾಗೆ ಮಾಡಲು ಅವಕಾಶ ನೀಡಲಿಲ್ಲ” ಎಂದು ಸೋನಿಯಾ ಗಾಂಧಿ ಹೇಳಿದರು.

ತನ್ನ ಗಂಡನ 75 ನೇ ಜನ್ಮದಿನಾಚರಣೆಯು ಕೇವಲ ಕಾಂಗ್ರೆಸ್ ಪಕ್ಷದ ಒಂದು ಆಚರಣೆಯಲ್ಲ. ಆದರೆ ಅವನನ್ನು ನೆನಪಿಟ್ಟುಕೊಳ್ಳುವ, ಅವರ ನಿಲುವುಗಳನ್ನು ಅರ್ಥಮಾಡಿಕೊಳ್ಳುವ ಸಂದರ್ಭ, ಅವರು ಏನು ಸಾಧಿಸಿದರು ಮತ್ತು ಏನನ್ನು ಸಾಧಿಸಲು ಬಯಸಿದ್ದರು ಎಂಬುದರ ಕುರಿತು ಚರ್ಚಿಸಬೇಕಾದ ದಿನ ಇದು. ರಾಜೀವ್ ಗಾಂಧಿಯವರಿಗೆ ಪ್ರಿಯವಾದ ಮೌಲ್ಯಗಳ ಪರ ನಿಲ್ಲುವುದು ಅವರ 75 ನೇ ಜನ್ಮ ದಿನಾಚರಣೆಯಂದು ಅವರಿಗೆ ನಾವು ಸಲ್ಲಿಸುವ ಅತ್ಯುತ್ತಮ ಗೌರವವಾಗಿದೆ ಎಂದು ಅವರು ಹೇಳಿದ್ದಾರೆ.

“ಅವರಿಗೆ ಪ್ರೇರಣೆ ನೀಡಿದ ಮೌಲ್ಯಗಳನ್ನು ಎತ್ತಿಹಿಡಿಯಲು, ಆ ಮೌಲ್ಯಗಳನ್ನು ನಾಶಮಾಡಲು ಮುಂದಾಗಿರುವ ಶಕ್ತಿಗಳನ್ನು ಎದುರಿಸಲು ನಮ್ಮ ಸಂಕಲ್ಪವನ್ನು ವೈಯಕ್ತಿಕವಾಗಿ ಮತ್ತು ಸಾಮೂಹಿಕವಾಗಿ ಪುನರುಚ್ಚರಿಸಲು ಇದು ಒಂದು ಸಂದರ್ಭವಾಗಿದೆ” ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ.

“ಚುನಾವಣೆಯಲ್ಲಿ ಗೆಲುವು ಸೋಲು ಅನಿವಾರ್ಯ. ಇಂದು ನಮ್ಮ ಪಕ್ಷ ಎದುರಿಸುತ್ತಿರುವ ಸವಾಲುಗಳು ಅಸಾಧಾರಣವಾಗಿವೆ. ಆದರೆ ವಿಭಜಕ ಶಕ್ತಿಗಳ ವಿರುದ್ಧ ನಮ್ಮ ಸೈದ್ಧಾಂತಿಕ ಹೋರಾಟ ಮುಂದುವರಿಯಬೇಕಿದೆ. ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಲಾಗಿರುವ ಭಾರತದ ಕಲ್ಪನೆ ಮತ್ತು ನಮ್ಮ ಸಮಾಜದ ಸ್ವರೂಪವನ್ನು ಬದಲಿಸಲು ಹೊರಟಿರುವ ಶಕ್ತಿಗಳ ವಿರುದ್ಧ ಹೋರಾಡಬೇಕಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...