Homeಮುಖಪುಟನಾಳೆ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತು ಪಡಿಸಿ: ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ತಾಕೀತು

ನಾಳೆ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತು ಪಡಿಸಿ: ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ತಾಕೀತು

- Advertisement -
- Advertisement -

ಮಧ್ಯಪ್ರದೇಶದ ಕಮಲ್ ನಾಥ್ ಸರ್ಕಾರ ನಾಳೆ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತು ಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಷ್ಟೆ ಅಲ್ಲದೆ ಬಹುಮತ ಸಾಬಿತು ಪಡಿಸುವುದನ್ನು ವಿಡಿಯೋ ಮಾಡಿ, ಅದನ್ನು ನೇರ ಪ್ರಸಾರ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಸರ್ಕಾರದ ಬಹುಮತ ಸಾಬೀತನ್ನು ನಾಳೆ ಸಂಜೆ 5 ಗಂಟೆಯೊಳಗೆ ನಡೆಸಬೇಕು ಎಂದು ಬಿಜೆಪಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿತ್ತು. ಇದಕ್ಕೆ ಉತ್ತರಿಸಿದ ಸುಪ್ರೀಂ ಕೋರ್ಟ್ ಈ ಸಮಸ್ಯೆಯನ್ನು ತಕ್ಷಣವೇ ಪರಿಹರಿಸಬೇಕೆಂದು ಕೋರಿದೆ. ಕೈ ಪ್ರದರ್ಶನದ ಮೂಲಕ ಮತದಾನವನ್ನು ಶಾಂತಿಯುತವಾಗಿ ಮಾಡಬೇಕಾಗಿದೆ. ಅದನ್ನು ವಿಡಿಯೋಗ್ರಾಫ್ ಮಾಡಿ ನೇರ ಪ್ರಸಾರ ಮಾಡಬೇಕು ಎಂದು ಕೋರ್ಟ್ ತಿಳಿಸಿದೆ.

ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಬೆಂಬಲಿಸುವ ಕಾಂಗ್ರೆಸಿನ 22 ಶಾಸಕರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿ ತಮ್ಮ ರಾಜೀನಾಮೆ ಕಳುಹಿಸಿದ ನಂತರ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಕುಸಿಯುವ ಹಂತದಲ್ಲಿದೆ. ಕೊರೊನ ವೈರಸ್ ಹೆಸರಿನಲ್ಲಿ ಬಹುಮತ ಸಾಬೀತಿಗೆ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

“16 ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಅಪಹರಿಸಿ ಸೆರೆಯಲ್ಲಿಟ್ಟಿದೆ” ಎಂದು ಕಾಂಗ್ರೆಸ್ ಆರೋಪಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...