Homeಕರೋನಾ ತಲ್ಲಣಹೊಸ ಕೊರೊನಾ ಆತಂಕ: ಮಾರ್ಗಸೂಚಿ ಹೊರಡಿಸಿದ ಕೇಂದ್ರ ಸರ್ಕಾರ

ಹೊಸ ಕೊರೊನಾ ಆತಂಕ: ಮಾರ್ಗಸೂಚಿ ಹೊರಡಿಸಿದ ಕೇಂದ್ರ ಸರ್ಕಾರ

ಸೋಂಕಿತರು ಹೊಸ ಸ್ವರೂಪದ ಸೋಂಕಿಗೆ ಒಳಗಾಗಿದ್ದರೆ ಅವರನ್ನು ಐಸೋಲೇಷನ್​ ಕೇಂದ್ರದಲ್ಲಿ ಉಳಿಸಿಕೊಳ್ಳಬೇಕು. ಕೊರೊನಾ ನಿಯಮದಂತೆ ಚಿಕಿತ್ಸೆ ನೀಡಿ 14 ದಿನಗಳ ನಂತರ ಮತ್ತೆ ಪರೀಕ್ಷೆ ಮಾಡಬೇಕು.

- Advertisement -
- Advertisement -

ಬ್ರಿಟನ್‌ನಲ್ಲಿ ಹೊಸ ಕೊರೊನಾ ಅಲೆ ಉಂಟಾಗಿದ್ದು, ಹೊಸ ಸ್ಪರೂಪದಲ್ಲಿ ಅತೀ ವೇಗವಾಗಿ ಹಬ್ಬುತ್ತಿರುವ ಕಾರಣ ಅಲ್ಲಿ ಲಾಕ್‌ಡೌನ್ ವಿಧಿಸಲಾಗಿದೆ. ದೇಶದಲ್ಲೂ ಬ್ರಿಟನ್‌ನಿಂದ ಬಂದಿದ್ದ 6 ಜನರಲ್ಲಿ ಕೊರೊನಾ ಸೋಂಕು ಕಂಡು ಬಂದ ಹಿನ್ನಲೆ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಯುಕೆಯಿಂದ ಬಂದ ಪ್ರಯಾಣಿಕರಿಗಾಗಿಯೇ ಈ ಹೊಸ ಎಸ್‌ಒಪಿ (standard operating procedure) ಸಿದ್ಧಪಡಿಸಿದ್ದು, ರಾಜ್ಯ ಸಕಾರಗಳಿಗೆ ನಿಗಾ ವಹಿಸುವಂತೆ ಸೂಚನೆ ನೀಡಿದೆ.

ಆರೋಗ್ಯ ಸಚಿವಾಲಯವು ತನ್ನ ಎಸ್‌ಒಪಿಗಳಲ್ಲಿ 2020ರ ನವೆಂಬರ್ 25 ರಿಂದ ಡಿಸೆಂಬರ್ 8 ರ ನಡುವೆ ಬ್ರಿಟನ್‌ನಿಂದ ಭಾರತಕ್ಕೆ ಆಗಮಿಸಿದ ಪ್ರಯಾಣಿಕರ ಮೇಲೆ ರಾಜ್ಯ ಸರ್ಕಾರ ನಿಗಾ ಇಟ್ಟು ಟೆಸ್ಟ್ ಮಾಡಿಸಲು ತಿಳಿಸಲಾಗಿದೆ.

ಇದನ್ನೂ ಓದಿ: ಹೊಸ ಕೊರೊನಾ ಆತಂಕ: ಕಳೆದ 14 ದಿನದಲ್ಲಿ ಹೊರ ದೇಶಗಳಿಂದ ರಾಜ್ಯಕ್ಕೆ ಬಂದವರಿಗೆ ಟೆಸ್ಟ್

ಯುಕೆಯಿಂದ ಬಂದಿಳಿದಿರುವ ಪ್ರಯಾಣಿಕರನ್ನ ಆರ್​ಟಿಪಿಸಿಆರ್ ಟೆಸ್ಟ್​ಗೆ ಒಳಪಡಿಸುವುದು. ಪಾಸಿಟಿವ್ ಬಂದವರನ್ನು ಆರ್​​ಟಿ-ಪಿಸಿಆರ್​ ಟೆಸ್ಟ್​ಗೆ ಒಳಪಡಿಸುವುದು ರಾಜ್ಯ ಸರ್ಕಾರಗಳ ಕೆಲಸ ಎಂದಿದೆ. ನೆಗೆಟಿವ್ ಬಂದವರನ್ನು ಸಹ ಹೋಂ ಐಸೋಲೇಷನ್‌ನಲ್ಲಿ ಇರಿಸಬೇಕು.

ಕೊರೊನಾ ಪಾಸಿಟಿವ್ ಬಂದವರನ್ನು ಹೋಂ ಐಸೋಲೇಷನ್ ಅಥವಾ ರಾಜ್ಯ ಸರ್ಕಾರ ಆರೋಗ್ಯ ಇಲಾಖೆ ಸ್ಥಾಪಿಸಿದ ನಿಗದಿತ ಸ್ಥಳದಲ್ಲಿ ಚಿಕಿತ್ಸೆ ನೀಡಬೇಕು.

ಸೋಂಕಿತರು ಹೊಸ ಸ್ವರೂಪದ ಸೋಂಕಿಗೆ ಒಳಗಾಗಿದ್ದರೆ ಅವರನ್ನು ಐಸೋಲೇಷನ್​ ಕೇಂದ್ರದಲ್ಲಿ ಉಳಿಸಿಕೊಳ್ಳುವುದು. ಕೊರೊನಾ ನಿಯಮದಂತೆ ಚಿಕಿತ್ಸೆ ನೀಡಿ 14 ದಿನಗಳ ನಂತರ ಮತ್ತೆ ಪರೀಕ್ಷೆಗೆ ಒಳಪಡಿಸಬೇಕು.

ವಿಮಾನಯಾನ ಸಿಬ್ಬಂದಿ ಪ್ರಯಾಣಿಕರಿಗೆ ಎಸ್‌ಒಪಿಗಳ ಬಗ್ಗೆ ವಿವರಿಸಿದ್ದಾರೆಯೇ ಎಂಬುದನ್ನು ವಿಮಾನಯಾನ ಸಂಸ್ಥೆಗಳು ಖಚಿತ ಪಡಿಸಿಕೊಂಡಿರಬೇಕು. ಎಲ್ಲಾ ನಿಯಮಗಳನ್ನು, ಕೊರೊನಾ ಮಾಹಿತಿಯನ್ನು ವಿವರಿಸುವ ಪ್ರಕಟಣೆಯನ್ನು ಸಂಸ್ಥೆಗಳು ಹೊರಡಿಸಬೇಕು ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿ ನೀಡಿದೆ.

ಡಿ.21 ರ ಸೋಮವಾರ ರಾತ್ರಿ ಲಂಡನ್‌ನಿಂದ ಭಾರತಕ್ಕೆ ಆಗಮಿಸಿದ್ದ ಏರ್ ಇಂಡಿಯಾ ವಿಮಾನದಲ್ಲಿ 266 ಜನ ಪ್ರಯಾಣಿಕರಿದ್ದರು. ಅವರಲ್ಲಿ  6 ಪ್ರಯಾಣಿಕರಲ್ಲಿ ಕೊರೊನಾ ಸೋಂಕು ಕಂಡುಬಂದಿದೆ.


ಇದನ್ನೂ ಓದಿ: ಹೊಸ ಕೊರೊನಾ ಆತಂಕ: ಲಂಡನ್‌ನಿಂದ ಬಂದಿದ್ದ 6 ಮಂದಿಗೆ ಕೊರೊನಾ ಸೋಂಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...