Homeಮುಖಪುಟ'ಮೈಕ್‌ ಮ್ಯೂಟ್ ಮಾಡುವುದು ಪ್ರಜಾಪ್ರಭುತ್ವದ ಮಾನದಂಡಗಳಿಗೆ ಸರಿಹೊಂದುವುದಿಲ್ಲ..'; ಮಮತಾ ಬ್ಯಾನರ್ಜಿ ಬೆಂಬಲಕ್ಕೆ ನಿಂತ ರಾವತ್

‘ಮೈಕ್‌ ಮ್ಯೂಟ್ ಮಾಡುವುದು ಪ್ರಜಾಪ್ರಭುತ್ವದ ಮಾನದಂಡಗಳಿಗೆ ಸರಿಹೊಂದುವುದಿಲ್ಲ..’; ಮಮತಾ ಬ್ಯಾನರ್ಜಿ ಬೆಂಬಲಕ್ಕೆ ನಿಂತ ರಾವತ್

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಇಂದು ವಾಗ್ದಾಳಿ ನಡೆಸಿದ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್, “ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ನೀತಿ (NITI) ಆಯೋಗ್ ಸಭೆಯಲ್ಲಿ ಅವರ ಮೈಕ್ ಅನ್ನು ಮ್ಯೂಟ್ ಮಾಡಿರುವುದು ಅವಮಾನ” ಎಂದು ಹೇಳಿದ್ದಾರೆ.

“ಮುಖ್ಯಮಂತ್ರಿಯ ಮೈಕ್‌ಗಳನ್ನು ಮ್ಯೂಟ್ ಮಾಡುವ ಈ ಅಭ್ಯಾಸವು ಪ್ರಜಾಪ್ರಭುತ್ವದ ಮಾನದಂಡಗಳಿಗೆ ಹೊಂದಿಕೆಯಾಗುವುದಿಲ್ಲ” ಎಂದು ರಾವತ್ ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ನವದೆಹಲಿಯಲ್ಲಿ ಶನಿವಾರ ನಡೆದ ನೀತಿ ಆಯೋಗದ ಸಭೆಯಿಂದ ಹೊರಬಂದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪಶ್ಚಿಮ ಬಂಗಾಳ ಸಿಎಂ, “ಇದು ಅವಮಾನಕರವಾಗಿದೆ; ನಾನು ಮುಂದಿನ ಯಾವುದೇ ಸಭೆಗಳಿಗೆ ಹಾಜರಾಗುವುದಿಲ್ಲ” ಎಂದು ಹೇಳಿದರು.

“ನಾನು ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಿ ಹೊರಬಂದಿದ್ದೇನೆ. ಚಂದ್ರಬಾಬು ನಾಯ್ಡು ಅವರಿಗೆ ಮಾತನಾಡಲು 20 ನಿಮಿಷ ನೀಡಲಾಯಿತು, ಅಸ್ಸಾಂ, ಗೋವಾ ಮತ್ತು ಛತ್ತೀಸ್‌ಗಢ ಮುಖ್ಯಮಂತ್ರಿಗಳು 10-12 ನಿಮಿಷಗಳ ಕಾಲ ಮಾತನಾಡಿದರು. ಕೇವಲ 5 ನಿಮಿಷಗಳ ನಂತರ ನನ್ನನ್ನು ತಡೆದರು; ಇದು ಅನ್ಯಾಯ” ಎಂದು ಮಮತಾ ಸುದ್ದಿಗಾರರಿಗೆ ತಿಳಿಸಿದರು.

ಶಿಂಧೆ ವಿರುದ್ಧ ವಾಗ್ದಾಳಿ

ಕೇಂದ್ರ ಬಜೆಟ್‌ನಲ್ಲಿ ಮಹಾರಾಷ್ಟ್ರಕ್ಕೆ ನೀಡಿರುವ ತೆರಿಗೆ ಹಂಚಿಕೆ ಮತ್ತು ಹಣದ ಬಗ್ಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ವಿರುದ್ಧ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ವಾಗ್ದಾಳಿ ನಡೆಸಿದರು. ಕೇಂದ್ರವು ವಿತರಿಸುವ ಹಣ ಭಾರತದ ಜನತೆಗೆ ಸೇರಿದ್ದು ಎಂದು ಹೇಳಿದರು. ಇದನ್ನು ವಿವಿಧ ತೆರಿಗೆಗಳಾಗಿ ಸಂಗ್ರಹಿಸಲಾಗುತ್ತದೆ. ಮಹಾರಾಷ್ಟ್ರಕ್ಕೆ ಏನು ಸಿಕ್ಕಿತು.. ನಮ್ಮ ಮುಖ್ಯಮಂತ್ರಿ ಬರಿಗೈಯಲ್ಲಿ ಹಿಂತಿರುಗಿದರು ಎಂದರು.

ಬ್ಯಾನರ್ಜಿ ಅವರು ಸಭೆಯಲ್ಲಿ ಭಾಗವಹಿಸಿದ ಏಕೈಕ ವಿರೋಧ ಪಕ್ಷದ ನಾಯಕರಾಗಿದ್ದರು. ಅವರು ತಮ್ಮ ಭಾಷಣದ ಐದು ನಿಮಿಷಗಳಲ್ಲಿ ತಮ್ಮ ಮೈಕ್ ಅನ್ನು ಸ್ವಿಚ್ ಆಫ್ ಮಾಡಲಾಗಿದೆ ಎಂದು ಅವರು ಆರೋಪಿಸಿದರು. ಆದರೆ, ಆಂಧ್ರ ಪ್ರದೇಶ, ಗೋವಾ, ಅಸ್ಸಾಂ ಮತ್ತು ಛತ್ತೀಸ್‌ಗಢದ ಇತರ ಮುಖ್ಯಮಂತ್ರಿಗಳಿಗೆ ಹೆಚ್ಚಿನ ಅವಧಿಯವರೆಗೆ ಮಾತನಾಡಲು ಅವಕಾಶ ನೀಡಲಾಯಿತು. ಕೇಂದ್ರ ಸರ್ಕಾರವು “ಸಹಕಾರಿ ಫೆಡರಲಿಸಂ” ಅನ್ನು ಬೆಂಬಲಿಸುವುದಿಲ್ಲ ಎಂದು ಅವರು ಹೇಳಿದರು.

“ಕಳೆದ ಮೂರು ವರ್ಷಗಳಿಂದ ಮನರೇಗಾ ಹಣವನ್ನು ಕೇಂದ್ರವು ವಂಚಿತಗೊಳಿಸುತ್ತಿದೆ” ಎಂದು ಸಂಜಯ್ ಆರೋಪಿಸಿದರು.

ಇದನ್ನೂ ಓದಿ; “ನನಗೆ ಮಾತನಾಡಲು ಬಿಟ್ಟಿಲ್ಲ”: ನೀತಿ ಆಯೋಗದ ಸಭೆಯಿಂದ ಹೊರ ನಡೆದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...