Homeಮುಖಪುಟಮುತ್ತಯ್ಯ ಮುರುಳೀಧರನ್ ಬಯೋಪಿಕ್: 800 ಚಿತ್ರದ ನಿರ್ದೇಶಕರಿಗೆ ಜೀವ ಬೆದರಿಕೆ!

ಮುತ್ತಯ್ಯ ಮುರುಳೀಧರನ್ ಬಯೋಪಿಕ್: 800 ಚಿತ್ರದ ನಿರ್ದೇಶಕರಿಗೆ ಜೀವ ಬೆದರಿಕೆ!

ಸೀನು ರಾಮಸಾಮಿ ಟ್ವೀಟ್ ಮಾಡಿ, "ನನ್ನ ಜೀವಕ್ಕೆ ಅಪಾಯವಿದೆ. ಹಾಗಾಗಿ ಮುಖ್ಯಮಂತ್ರಿಗಳು ದಯಮಾಡಿ ನನಗೆ ಸಹಾಯ ಮಾಡಿ. ಇದು ತುಂಬಾ ತುರ್ತು" ಎಂದು ಬರೆದುಕೊಂಡಿದ್ದಾರೆ.

- Advertisement -
- Advertisement -

ಮುತ್ತಯ್ಯ ಮುರುಳೀಧರನ್ ಜೀವನ ಚಿರಿತ್ರೆ ಆಧಾರಿತ “800” ತಮಿಳು ಚಲನಚಿತ್ರದ ನಿರ್ದೇಶಕ ಆರ್.ಸೀನು ರಾಮಸಾಮಿಗೆ ಜೀವ ಬೆದರಿಕೆ ಬಂದಿರುವುದಾಗಿ ಸ್ವತಃ ಅವರೇ ಟ್ವೀಟ್ ಮಾಡಿದ್ದಾರೆ.

ಸೀನು ರಾಮಸಾಮಿ ಟ್ವೀಟ್ ಮಾಡಿ, “ನನ್ನ ಜೀವಕ್ಕೆ ಅಪಾಯವಿದೆ. ಹಾಗಾಗಿ ಮುಖ್ಯಮಂತ್ರಿಗಳು ದಯಮಾಡಿ ನನಗೆ ಸಹಾಯ ಮಾಡಿ. ಇದು ತುಂಬಾ ತುರ್ತು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ಶ್ರೀಲಂಕಾದ ಖ್ಯಾತ  ಕ್ರಿಕೆಟ್ ಬೌಲರ್ ಮುತ್ತಯ್ಯ ಮುರುಳೀಧರನ್ ಬಯೋಪಿಕ್ ತಮಿಳಿನಲ್ಲಿ ನಿರ್ಮಾಣವಾಗುತ್ತಿತ್ತು. ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ನಟಿಸುತ್ತಿದ್ದರು.

ಇದರ ನಡುವೆಯೇ ಕೆಲವರು ಇದನ್ನು ವಿರೋಧಿಸಿ, ವಿಜಯ್ ಸೇತುಪತಿ ಈ ಸಿನಿಮಾವನ್ನು ಒಪ್ಪಿಕೊಂಡಿರುವುದಕ್ಕೆ, ಅವರನ್ನು ಮತ್ತು ಈ ಸಿನಿಮಾವನ್ನು ಬಹಿಷ್ಕರಿಸಬೇಕು ಎಂಬ ಅಭಿಯಾನವನ್ನು ಕೈಗೊಂಡಿದ್ದರು. ಹಾಗಾಗಿ ಈ ಚಿತ್ರಕ್ಕೆ ತಮಿಳುನಾಡಿನ ಹಲವೆಡೆ ವಿರೋಧ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಮುತ್ತಯ್ಯ ಮುರುಳೀಧರನ್ ಪತ್ರ ಬರೆದು ಈ ಚಿತ್ರವನ್ನು ಕೈಬಿಡುವಂತೆ ಕೇಳಿಕೊಂಡಿದ್ದರು.

ಸ್ವತಃ ಪತ್ರಬರೆದಿರುವ ಮಾಜಿ ಕ್ರಿಕೆಟಿಗ, “ನನ್ನ ಜೀವನ ಚರಿತ್ರೆಯಾಧಾರಿತ ಚಿತ್ರ ತಮಿಳಿನಲ್ಲಿ ಸಿದ್ಧವಾಗುತ್ತಿದ್ದು, ಇದಕ್ಕೆ ತಮಿಳುನಾಡಿನಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಜೊತೆಗೆ ಈ ಸಿನಿಮಾವನ್ನು ಕೈಬಿಡುವಂತೆ ವಿಜಯ್ ಸೇತುಪತಿಗೆ ತೀವ್ರ ಒತ್ತಡ ಬರುತ್ತಿರುವುದನ್ನು ಗಮನಿಸಿ ಈ ನಿರ್ಧಾರಕ್ಕೆ ಬಂದಿದ್ದೇನೆ. ಜೊತೆಗೆ ತಮಿಳು ಚಲನಚಿತ್ರದಲ್ಲಿ ಒಬ್ಬ ಉತ್ತಮ ಕಲಾವಿದನ ಭವಿಷ್ಯ ಇದರಿಂದ ಹಾಳಾಗುವುದು ಬೇಡ ಎಂಬ ಕಾರಣಕ್ಕೆ ಅವರನ್ನು ಈ ಚಿತ್ರದಿಂದ ಹೊರಗುಳಿಯುವಂತೆ ಕೇಳಿಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದರು.

“ಪ್ರತಿ ಬಾರಿಯೂ ಇಂತಹ ತಡೆಗಳನ್ನು ಎದುರಿಸಿಯೇ ಇಂದು ಈ ಮಟ್ಟಕ್ಕೆ ಬೆಳೆದಿದ್ದೇನೆ. ಭವಿಷ್ಯದ ಪೀಳಿಗೆಗೆ ಮತ್ತು ಕ್ರಿಕೆಟ್ ಆಡಬಯಸುವ ಯುವಕರಿಗೆ ಸ್ಪೂರ್ತಿಯಾಗಲೆಂದೇ ನನ್ನ ಜೀವನ ಚರಿತ್ರೆಯನ್ನು ಚಿತ್ರವಾಗಿಸಲು ಸಮ್ಮತಿಸಿದ್ದೆ. ಆದರೆ ಈಗ ಅದಕ್ಕೂ ತೊಡಕು ಉಂಟಾಗುತ್ತಿದೆ. ಆದರೆ ಈ ಸಿನಿಮಾವನ್ನು ಮುಂದಿನ ಜನಾಂಗಕ್ಕೆ ಸ್ಪೂರ್ತಿಯಾಗುವಂತೆ ತಲುಪಿಸುವುದಾಗಿ ನಿರ್ಮಾಪಕರು ದೃಢವಾದ ಆಶ್ವಾಸನೆಯನ್ನು ನೀಡಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಈ ವಿವಾದ ಏರ್ಪಟ್ಟಾಗಿನಿಂದ ನನಗೆ ಬೆಂಬಲ ನೀಡಿದ ಪತ್ರಿಕೋದ್ಯಮಕ್ಕೂ, ಗಣ್ಯರಿಗೂ, ಅಭಿಮಾನಿಗಳಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದು ಬರೆದಿದ್ದಾರೆ.

ಮುತ್ತಯ್ಯ ಮುರುಳೀಧರನ್ ಶ್ರೀಲಂಕಾದಲ್ಲಿನ ಮುಗ್ಧ ತಮಿಳರ ಸಾವನ್ನು ಸಮರ್ಥಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ ತಮಿಳುನಾಡಿನಲ್ಲಿ ಇವರ ಬಯೋಪಿಕ್‌ಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಮುತ್ತಯ್ಯ, “ಮುಗ್ಧರ ಹತ್ಯೆಯನ್ನು ನಾನು ಎಂದಿಗೂ ಸಮರ್ಥಿಸುವುದಿಲ್ಲ” ಎಂದಿದ್ದರು.

ಇದನ್ನೂ ಓದಿ: ಮುತ್ತಯ್ಯ ಮರುಳೀಧರನ್ ಬಯೋಪಿಕ್: ತನ್ನ ವಿವಾದಾತ್ಮಕ ಹೇಳಿಕೆಗೆ ಸ್ಪಷ್ಟನೆ ನೀಡಿದ ಮಾಜಿ ಕ್ರಿಕೆಟಿಗ

“ಇದುವರೆಗೂ ಯುದ್ಧದಲ್ಲಿ ಎರಡೂ ಕಡೆ ಸಂಭವಿಸಿದ್ದ ಪ್ರಾಣಹಾನಿಗಳು 2009 ರಲ್ಲಿ ಯುದ್ಧ ಕೊನೆಗೊಳ್ಳುವುದರ ಮೂಲಕ ನಿಂತಿದ್ದರಿಂದ ಈ ದಿನವನ್ನು ನನ್ನ ಜೀವನದಲ್ಲಿ ಅತ್ಯಂತ ಸಂತೋಷದಾಯಕ ದಿನ ಎಂದು ಹೇಳಿದ್ದೆ. ಆದರೆ ಈಗ ಈ ಹೇಳಿಕೆಯನ್ನು ತಿರುಚಿ, ತಮಿಳರನ್ನು ಕೊಂದ ದಿನ ನನ್ನ ಜೀವನದಲ್ಲಿ ಸಂತೋಷದಾಯಕ ದಿನ ಎಂದು ಬಿಂಬಿಸಲಾಗುತ್ತಿದೆ. ಮುಗ್ಧರನ್ನು ಕೊಲ್ಲುವುದನ್ನು ನಾನು ಎಂದಿಗೂ ಬೆಂಬಲಿಸುವುದಿಲ್ಲ. ಯುದ್ಧದ ನೋವು ನನಗೆ ತಿಳಿದಿದೆ. ನಾನು 30 ವರ್ಷಗಳಿಗೂ ಹೆಚ್ಚು ಕಾಲ ಯುದ್ಧದ ನಡುವೆಯೇ ಶ್ರೀಲಂಕಾದಲ್ಲಿ ಬೆಳೆದಿದ್ದೇನೆ. ನಾನು ಏಳು ವರ್ಷದವನಿದ್ದಾಗ ನನ್ನ ತಂದೆಯನ್ನು ಹತ್ಯೆ ಮಾಡಲಾಯಿತು. ಅನೇಕ ಬಾರಿ ನಾವು ಬೀದಿಯಲ್ಲಿರಬೇಕಾಯಿತು” ಎಂದು ನಿನ್ನೆ ಹೇಳಿದ್ದರು.

ಹಿರಿಯ ನಿರ್ದೇಶಕ ಭಾರತಿರಾಜ, “ಲಂಕಾ ತಮಿಳರು ಸಾಯುತ್ತಿರುವಾಗ ಮುತ್ತಯ್ಯ ಪಿಟೀಲು ನುಡಿಸುತ್ತಿದ್ದರು. ತಮ್ಮ ಜನರು ಸಾಯುವಾಗ ನಗುತ್ತಿರುವ ಅವರು ಕ್ರೀಡಾಪಟುವಾಗಿ ಸಾಧಿಸಿದರೆ ಏನು ಪ್ರಯೋಜನ? ಮುತ್ತಯ್ಯ ನಮ್ಮ ನಂಬಿಕೆಗೆ ದ್ರೋಹ ಬಗೆದಿದ್ದಾರೆ” ಎಂದು ತೀವ್ರವಾಗಿ ಪ್ರತಿಕ್ರಿಯಿಸಿದ್ದರು.

ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ ಪಿಎಂಕೆ ಮುಖ್ಯಸ್ಥ ಡಾ.ಪಿ.ರಾಮದಾಸ್, “ವಿಜಯ್ ಸೇತುಪತಿ ಈ ಚಿತ್ರವನ್ನು ತಿರಸ್ಕರಿಸಿದರೆ, ಅವರು ತಮಿಳರ ಹೆಮ್ಮೆಯ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ; ಬದಲಿಗೆ ಅವರು ಅದನ್ನು ಮಾಡಿದರೆ, ನಮ್ಮ ವಿರೋಧವನ್ನು ಧಿಕ್ಕರಿಸಿದರೆ, ದ್ರೋಹಿಗಳ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ” ಎಂದು ಹೇಳಿದ್ದರು.

ಈ ಎಲ್ಲಾ ಕಾರಣಗಳಿಂದ ಈ ಚಿತ್ರದಿಂದ ಹಿಂದೆ ಸರಿಯುವಂತೆ ಮುತ್ತಯ್ಯ ಪತ್ರ ಬರೆದಿರುವುದು, ವಿಜಯ್ ಸೇತುಪತಿ ಮತ್ತು ಮುತ್ತಯ್ಯ ಮುರುಳೀಧರನ್ ಅಭಿಮಾನಿಗಳಲ್ಲಿ ನಿರಾಸೆಯನ್ನುಂಟುಮಾಡಿತ್ತು.


ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...