Homeಅಂತರಾಷ್ಟ್ರೀಯಪರಸ್ಪರ ಗೌರವ, ಬೆಂಬಲ ಮುಖ್ಯ: ಪ್ರಧಾನಿಯ ಸ್ವಾತಂತ್ರ್ಯ ದಿನದ ಭಾಷಣದ ಬಗ್ಗೆ ಚೀನಾ ಹೇಳಿಕೆ

ಪರಸ್ಪರ ಗೌರವ, ಬೆಂಬಲ ಮುಖ್ಯ: ಪ್ರಧಾನಿಯ ಸ್ವಾತಂತ್ರ್ಯ ದಿನದ ಭಾಷಣದ ಬಗ್ಗೆ ಚೀನಾ ಹೇಳಿಕೆ

ಇದು ನಮ್ಮ ದೀರ್ಘಕಾಲೀನ ಹಿತಾಸಕ್ತಿಗಳಿಗೆ ನೆರವಾಗುವುದರಿಂದ ಪರಸ್ಪರ ಗೌರವ ನೀಡಿ ಮತ್ತು ಬೆಂಬಲಿಸುವುದು ಎರಡೂ ಕಡೆಯಿಂದ ಸರಿಯಾದ ಮಾರ್ಗವಾಗಿದೆ” ಎಂದು ಝಾವೋ ಸೋಮವಾರ ಸಚಿವಾಲಯದ ಸಮಾವೇಶದಲ್ಲಿ ಹೇಳಿದರು.

- Advertisement -
- Advertisement -

ಪರಸ್ಪರ ಗೌರವ ಇಟ್ಟುಕೊಂಡು ಮತ್ತು ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳುವ ಸಲುವಾಗಿ ಚೀನಾ ಭಾರತದೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಸೋಮವಾರ ಹೇಳಿದೆ. ಉಭಯ ದೇಶಗಳಿಗೆ ಮುಂದಿನ ಸರಿಯಾದ ಮಾರ್ಗ ‘ಪರಸ್ಪರ ಗೌರವಿಸುವುದು’ ಎಂದು ಅದು ಹೇಳಿದೆ.

“ಎಲ್‌ಒಸಿ (ಲೈನ್ ಆಫ್ ಕಂಟ್ರೋಲ್) ನಿಂದ ಎಲ್ಎಸಿ (ಲೈನ್ ಆಫ್ ಆಕ್ಚುವಲ್ ಕಂಟ್ರೋಲ್) ವರೆಗೆ, ದೇಶದ ಸಾರ್ವಭೌಮತ್ವದ ಮೇಲೆ ಕಣ್ಣಿಟ್ಟರೆ, ಸಶಸ್ತ್ರ ಪಡೆಗಳು ಅವರ ಭಾಷೆಯಲ್ಲಿಯೇ ಪ್ರತಿಕ್ರಿಯಿಸಿವೆ” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದರು. ಚೀನಾ ಎಂದು ಹೆಸರಿಸದೆ ಪೂರ್ವ ಲಡಾಕ್‌ನಲ್ಲಿ ನಡೆದ ಗಡಿ ಸಂಘರ್ಷವನ್ನೂ ಮೋದಿ ಉಲ್ಲೇಖಿಸಿದ್ದರು.

“ಭಾರತದ ಸಮಗ್ರತೆಯು ನಮಗೆ ಸರ್ವೋಚ್ಚವಾಗಿದೆ. ನಾವು ಏನು ಮಾಡಬಹುದು, ನಮ್ಮ ಸೈನಿಕರು ಏನು ಮಾಡಬಹುದು ಎಂಬುದನ್ನು ಎಲ್ಲರೂ ನೋಡಿದ್ದಾರೆ” ಎಂದು ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರ ಗಡಿ ಘರ್ಷಣೆಯನ್ನು ಉಲ್ಲೇಖಿಸಿ ಮೋದಿ ಹೇಳಿದರು.

ಘರ್ಷಣೆಯಲ್ಲಿ ಕನಿಷ್ಠ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ಚೀನಾ ಸಹ ಸಾವುನೋವುಗಳನ್ನು ಅನುಭವಿಸಿದೆ ಎಂದು ಒಪ್ಪಿಕೊಂಡಿದೆ. ಆದರೆ ನಿಖರವಾದ ಸಾವಿನ ಸಂಖ್ಯೆಯನ್ನು ಉಲ್ಲೇಖಿಸಿಲ್ಲ.

ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೋ ಲಿಜಿಯಾನ್ ಗೆ ಮೋದಿಯವರ ಭಾಷಣದ ಬಗ್ಗೆ ಪ್ರತಿಕ್ರಿಯಿಸಲು ಕೇಳಿದಾಗ, “ನಾವು ನಿಕಟವರ್ತಿ ನೆರೆಹೊರೆಯವರು, ನಮ್ಮದು ಒಂದು ಶತಕೋಟಿಗೂ ಹೆಚ್ಚು ಜನರಿರುವ ಉದಯೋನ್ಮುಖ ರಾಷ್ಟ್ರಗಳು” ಎಂದು ಹೇಳಿದ್ದಾರೆ.

ಆದ್ದರಿಂದ ದ್ವಿಪಕ್ಷೀಯ ಸಂಬಂಧಗಳ ಉತ್ತಮ ಅಭಿವೃದ್ಧಿಯು ಎರಡು ರಾಷ್ಟ್ರಗಳ ಹಿತಾಸಕ್ತಿಗೆ ಮಾತ್ರವಲ್ಲದೆ, ಸ್ಥಿರತೆ, ಶಾಂತಿ, ಪ್ರದೇಶದ ಸಮೃದ್ಧಿ ಮತ್ತು ಇಡೀ ಪ್ರಪಂಚವನ್ನು ಸಹ ಪೊರೆಯುತ್ತದೆ.

ಇದು ನಮ್ಮ ದೀರ್ಘಕಾಲೀನ ಹಿತಾಸಕ್ತಿಗಳಿಗೆ ನೆರವಾಗುವುದರಿಂದ ಪರಸ್ಪರ ಗೌರವ ನೀಡಿ ಮತ್ತು ಬೆಂಬಲಿಸುವುದು ಎರಡೂ ಕಡೆಯಿಂದ ಸರಿಯಾದ ಮಾರ್ಗವಾಗಿದೆ” ಎಂದು ಝಾವೋ ಸೋಮವಾರ ಸಚಿವಾಲಯದ ಸಮಾವೇಶದಲ್ಲಿ ಹೇಳಿದರು.

“ಆದ್ದರಿಂದ, ನಮ್ಮ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳಲು ಹಂತ ಹಂತದ ಪ್ರಾಯೋಗಿಕ ಸಹಕಾರವನ್ನು ಮತ್ತು ದ್ವಿಪಕ್ಷೀಯ ಸಂಬಂಧಗಳ ದೀರ್ಘಕಾಲೀನ ಬೆಳವಣಿಗೆಯನ್ನು ಕಾಪಾಡಲು ಚೀನಾ ಭಾರತದೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ” ಎಂದು ಅವರು ಹೇಳಿದರು.

ಆಗಸ್ಟ್ 8 ರಂದು ಬೀಜಿಂಗ್ ಮತ್ತು ನವದೆಹಲಿ ನಡುವೆ ಇತ್ತೀಚಿನ ದೊಡ್ಡ ಮಟ್ಟದ ಮಾತುಕತೆಯ ನಂತರ, ಭಾರತ ತನ್ನ ನಿಲುವನ್ನು ಬದಲಾಯಿಸುವ ಯಾವುದೇ ಲಕ್ಷಣವನ್ನು ತೋರಿಸಿಲ್ಲ.

ಮೋದಿಯವರ ಭಾಷಣವನ್ನು ಉಲ್ಲೇಖಿಸಿ ಝಾವೋ ಇದನ್ನು ಎರಡು ದೃಷ್ಟಿಕೋನಗಳಿಂದ ವಿವರಿಸಬಹುದು ಎಂದು ಹೇಳಿದರು.

ಒಂದು, ಮೋದಿಯವರು ಯುದ್ಧದ ಮನೋಭಾವವನ್ನು ಹೊಂದಿದ್ದಾರೆ. ಇನ್ನೊಂದು, ಚೀನಾ ಬಗ್ಗೆ ತನ್ನ ಮನೋಭಾವವನ್ನು ಪ್ರದರ್ಶಿಸುವ ಮೂಲಕ ಸಾಕಷ್ಟು ಮಾಡಿದೆ ಎಂದು ಭಾರತ ಸರ್ಕಾರ ಭಾವಿಸಿದೆ ಎಂಬ ಅರ್ಥದಲ್ಲಿ ಗ್ರಹಿಸಬಹುದು. ಆದ್ದರಿಂದ, ಮೋದಿ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಹೇಳಿದ್ದು ಮುಖ್ಯವಲ್ಲ. ಆದರೆ ಮುಂದೆ ಅವರು ಏನು ಮಾಡುತ್ತಾರೆ ಎಂಬುದು ಮುಖ್ಯ ಎಂದರು.


ಇದನ್ನೂ ಓದಿ: ಆತ್ಮನಿರ್ಭರ ಭಾರತಕ್ಕೆ 130 ಕೋಟಿ ಪರಿಹಾರಗಳಿವೆ: ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...