Homeಮುಖಪುಟರೈತರ ನೂರಾರು ಸಾಮಾಜಿಕ ಮಾದ್ಯಮ ಖಾತೆಗಳಿಗೆ ನಿರ್ಬಂಧ: ದೆಹಲಿ ಚಲೋ ಪ್ರತಿಭಟನೆಗೆ ಬೆದರಿದ ಕೇಂದ್ರ?

ರೈತರ ನೂರಾರು ಸಾಮಾಜಿಕ ಮಾದ್ಯಮ ಖಾತೆಗಳಿಗೆ ನಿರ್ಬಂಧ: ದೆಹಲಿ ಚಲೋ ಪ್ರತಿಭಟನೆಗೆ ಬೆದರಿದ ಕೇಂದ್ರ?

- Advertisement -
- Advertisement -

ದೆಹಲಿ ಚಲೋ ಪ್ರತಿಭಟನೆ ಮತ್ತೆ ಪ್ರಾರಂಭವಾಗಿದ್ದು, ಇದಕ್ಕೂ ಮೊದಲೇ ರೈತರು ಮತ್ತು ರೈತ ಮುಖಂಡರಿಗೆ ಸೇರಿದ ನೂರಾರು ಸಾಮಾಜಿಕ ಮಾದ್ಯಮ ಖಾತೆಗಳಿಗೆ ಕೇಂದ್ರ ಸರಕಾರ ನಿರ್ಬಂಧ ವಿಧಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ರೈತ ಮುಖಂಡರು ಕೇಂದ್ರ ಸರಕಾರ ನಮ್ಮ ಪ್ರತಿಭಟನೆಗೆ ಬೆದರಿ ಈ ರೀತಿ ಮಾಡಿದೆ ಎಂದು ಹೇಳಿಕೊಂಡಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ (ಕೆಎಂಎಂ) ‘ದೆಹಲಿ ಚಲೋ’ ಕರೆಗೆ ಒಂದು ದಿನ ಮೊದಲು, ಕೇಂದ್ರ ಸರ್ಕಾರ ರೈತ ಸಂಘದ ಮುಖಂಡರಿಗೆ ಮತ್ತು ರೈತರ ಪರವಾಗಿ ಪ್ರಚಾರಕ್ಕೆ ಸಂಬಂಧಿಸಿದ 100ಕ್ಕೂ ಅಧಿಕ ಎಕ್ಸ್ ಖಾತೆಗಳನ್ನು ತಡೆಹಿಡಿಯಲಾಗಿದೆ.

MSP ಜಾರಿ, ಲಖಿಂಪುರ ಖೇರಿ ಪ್ರಕರಣದಲ್ಲಿ ನ್ಯಾಯ, ರೈತರ ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ದೆಹಲಿ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದರು. ಆದರೆ ರೈತರನ್ನು ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು, ಖಾನೌರಿ ಮತ್ತು ದಬ್ವಾಲಿ ಗಡಿಯಲ್ಲಿ ಪೊಲೀಸರು ತಡೆ ಹಿಡಿದಿದ್ದರು. ಫೆಬ್ರವರಿ 13ರಂದು ದೆಹಲಿ ಚಲೋ ಪ್ರತಿಭಟನೆ ಪ್ರಾರಂಭವಾದಾಗಿನಿಂದ ಕೇಂದ್ರ ಸರ್ಕಾರವು ಸಾಮಾಜಿಕ ಮಾಧ್ಯಮ ಖಾತೆಗಳಿಗೆ ನಿರ್ಬಂಧ ವಿಧಿಸಿರುವುದು ಇದು ಮೂರನೇ ಬಾರಿಯಾಗಿದೆ.

ಇದಕ್ಕೂ ಮೊದಲು, ಫೆಬ್ರವರಿ 12ರ ರಾತ್ರಿ ದೆಹಲಿ ಚಲೋ ಕರೆಗೆ ಒಂದು ದಿನ ಮುಂಚಿತವಾಗಿ ಸರ್ಕಾರವು ರೈತ ಸಂಘದ ಮುಖಂಡರಿಗೆ ಸೇರಿದ ಹನ್ನೆರಡು ಸಾಮಾಜಿಕ ಮಾಧ್ಯಮ ಖಾತೆಗಳು ಮತ್ತು ರೈತ ಸಂಘಗಳು ಮತ್ತು ಅವರ ಬೆಂಬಲಿಗರ ಅಧಿಕೃತ ಪೇಜ್‌ಗಳನ್ನು ತಡೆ ಹಿಡಿದಿತ್ತು. ಆ ಬಳಿಕ ಫೆಬ್ರವರಿ 21ರಂದು ದೆಹಲಿ ಚಲೋ ಕರೆ ಹಿನ್ನೆಲೆಯಲ್ಲಿ ಅನೇಕ ಸಾಮಾಜಿಕ ಮಾಧ್ಯಮ ಖಾತೆಗಳು, ವಿಶೇಷವಾಗಿ ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿರುವ ಖಾತೆಗಳನ್ನು ಮತ್ತೆ ತಡೆ ಹಿಡಿಯಲಾಗಿತ್ತು.

ರೈತ ಸಂಘದ ಮುಖಂಡರು ಮೋದಿ ಸರ್ಕಾರದ ಈ ನಡೆಯನ್ನು ಟೀಕಿಸಿದ್ದು, ರೈತರು ದೆಹಲಿ ಚಲೋ ತೆರಳಲು ಕರೆ ನೀಡಿದಾಗಲೆಲ್ಲಾ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಮತ್ತೆ ಮತ್ತೆ ನಿರ್ಬಂಧಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ರೈತ ಸಂಘದ ಮುಖಂಡ ಗುರುಪ್ರೀತ್ ಸಂಘ ಅವರು ಮಾತನಾಡಿ, ಮಾರ್ಚ್ 6ರಂದು ದೆಹಲಿ ಚಲೋ ಕರೆ ನೀಡುವುದಕ್ಕಿಂತ ಎರಡು ದಿನಗಳ ಮೊದಲು ಮಾರ್ಚ್ 4ರಂದು ರೈತರು, ರೈತ ಸಂಘದ ಮುಖಂಡರು ಮತ್ತು ಪ್ರತಿಭಟನೆಯನ್ನು ಬೆಂಬಲಿಸುವ ಜನರಿಗೆ ಸೇರಿದ ಸುಮಾರು 100 ಸಾಮಾಜಿಕ ಮಾಧ್ಯಮ ಖಾತೆಗಳನ್ನು ಭಾರತದಲ್ಲಿ ತಡೆಹಿಡಿಯಲಾಗಿದೆ ಎಂದು ಹೇಳಿದ್ದಾರೆ.

ಇಲ್ಲಿಯವರೆಗೆ, ಸರ್ಕಾರವು ನನ್ನ ಮೂರು ಎಕ್ಸ್‌ ಖಾತೆಗಳನ್ನು ತಡೆಹಿಡಿದಿದೆ, ಒಂದು ಖಾತೆಯನ್ನು ನಿರ್ಬಂಧಿಸಿದ ನಂತರ ಮತ್ತೊಂದು ಖಾತೆಯನ್ನು ನಾನು ತೆರೆದಿದ್ದೆ. ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದೇವೆ. ನಮ್ಮ ಕಾನೂನು ತಂಡವು ಈ ಬಗ್ಗೆ ಕಾರ್ಯ ಪ್ರವೃತ್ತವಾಗಿದೆ ಎಂದು ಹೇಳಿದ್ದಾರೆ. ನಮ್ಮ ಧ್ವನಿಯು ಜನರಿಗೆ ತಲುಪಬಾರದು ಎಂಬುವುದು ಸರಕಾರದ ಗುರಿಯಾಗಿದೆ. ರೈತರನ್ನು ಮಾತನಾಡಲು ಬಿಡುವುದಿಲ್ಲ, ಸರ್ಕಾರವು ರೈತರ ಪ್ರತಿಭಟನೆಗೆ ಹೆದರುತ್ತಿದೆ, ಅದಕ್ಕಾಗಿ ಅವರು ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿಷೇಧಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ‘ದೆಹಲಿ ಚಲೋ’ ಹಮ್ಮಿಕೊಂಡಿರುವ ರೈತರು, ಇಂದು ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಲಿದ್ದಾರೆ. ಈ ಹಿನ್ನೆಲೆ ಪಂಜಾಬ್-ಹರಿಯಾಣ ಗಡಿಯಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ರೈತರ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಟಿಕ್ರಿ, ಸಿಂಘು ಮತ್ತು ಘಾಜಿಪುರ ಗಡಿಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ದೆಹಲಿ ಪೊಲೀಸ್‌ ಮುಖ್ಯಸ್ಥರು ತಮ್ಮ ಸಿಬ್ಬಂದಿಗೆ ಸೂಚಿಸಿದ್ದಾರೆ. ರೈಲ್ವೆ ಮತ್ತು ಬಸ್‌ ನಿಲ್ದಾಣಗಳಲ್ಲಿ ಹೆಚ್ಚುವರಿ ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ಸಹ ನಿಯೋಜಿಸಲಾಗಿದೆ. ವಿವಿಧೆಡೆ ತಪಾಸಣೆ ತೀವ್ರಗೊಳಿಸಲಾಗಿದ್ದು, ರಾಜಧಾನಿಯಲ್ಲಿ ಸಂಚಾರ ದಟ್ಟಣೆ ಉಂಟಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ: ‘ರಾಯಬರೇಲಿ ಕರೆಯುತ್ತಿದೆ…’; ಕಾಂಗ್ರೆಸ್ ಭದ್ರಕೋಟೆ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿಯನ್ನು ಬೆಂಬಲಿಸಿ ಪೋಸ್ಟರ್‌ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...