Homeಮುಖಪುಟಮಹಾರಾಷ್ಟ್ರ | ಶಿವಾಜಿ ಪ್ರತಿಮೆ ಕುಸಿತ : ಪ್ರತಿಪಕ್ಷಗಳಿಂದ 'ಚಪ್ಪಲಿಯಲ್ಲಿ ಹೊಡೆಯಿರಿ' ಪ್ರತಿಭಟನೆ

ಮಹಾರಾಷ್ಟ್ರ | ಶಿವಾಜಿ ಪ್ರತಿಮೆ ಕುಸಿತ : ಪ್ರತಿಪಕ್ಷಗಳಿಂದ ‘ಚಪ್ಪಲಿಯಲ್ಲಿ ಹೊಡೆಯಿರಿ’ ಪ್ರತಿಭಟನೆ

- Advertisement -
- Advertisement -

ಮಹಾರಾಷ್ಟ್ರದ ಸಿಂಧುದುರ್ಗ ಬಳಿಯ ಮಾಲ್ವಾನ್‌ನಲ್ಲಿ ಛತ್ರಪತಿ ಶಿವಾಜಿಯ 35 ಅಡಿಯ ಪ್ರತಿಮೆ ಕುಸಿದು ಬಿದ್ದಿರುವುದು ‘ಮಹಾಯುತಿ’ (ಬಿಜೆಪಿ-ಶಿವಸೇನೆ-ಎನ್‌ಸಿಪಿ ಮೈತ್ರಿಕೂಟ) ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಭಾನುವಾರ ಪ್ರತಿಪಕ್ಷಗಳ ಒಕ್ಕೂಟ ‘ಮಹಾ ವಿಕಾಸ ಅಘಾಡಿ’ (ಕಾಂಗ್ರೆಸ್‌-ಶಿವಸೇನೆ ಯುಬಿಟಿ-ಎನ್‌ಸಿಪಿ ಎಸ್‌ಪಿ) ನೇತೃತ್ವದಲ್ಲಿ ಮುಂಬೈನಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ.

ನಗರದ ಹುತಾತ್ಮ ಚೌಕ್‌ನಿಂದ ಗೇಟ್‌ವೇ ಆಫ್‌ ಇಂಡಿಯಾದವರೆಗೆ ಭಾರೀ ಸಂಖ್ಯೆಯಲ್ಲಿ ಜನರು ಚಪ್ಪಲಿ ಹಿಡಿದು ‘ಜೋಡೆ ಮಾರೋ’ (ಚಪ್ಪಲಿಯಲ್ಲಿ ಹೊಡೆಯಿರಿ) ಘೋಷಣೆಯೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಕಾಂಗ್ರೆಸ್ ರಾಜ್ಯಾಧ್ಯಕ್ಷ ನಾನಾ ಪಟೋಲೆ, ಶಿವಸೇನೆ-ಯುಬಿಟಿ ನಾಯಕ ಉದ್ದವ್ ಠಾಕ್ರೆ ಮತ್ತು ಎನ್‌ಸಿಪಿ-ಎಸ್‌ಪಿ ನಾಯಕ ಶರದ್ ಪವಾರ್ ಸೇರಿದಂತೆ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

PC : educationpost.in

ಕಳೆದ 8 ತಿಂಗಳ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದ ಶಿವಾಜಿ ಪ್ರತಿಮೆ ಕುಸಿದು ಬಿದ್ದಿದೆ. ಕಳಪೆ ಕಾಮಗಾರಿ ಮತ್ತು ಭ್ರಷ್ಟಾಚಾರವೇ ಇದಕ್ಕೆ ಕಾರಣ ಎಂದು ಪ್ರತಿಪಕ್ಷಗಳ ಒಕ್ಕೂಟ ಆರೋಪಿಸಿದೆ.

ಪ್ರತಿಪಕ್ಷಗಳ ಪ್ರತಿಭಟನೆ ಹಿನ್ನೆಲೆ, ಗೇಟ್‌ವೇ ಆಫ್ ಇಂಡಿಯಾ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪ್ರವಾಸಿಗರ ಸ್ಮಾರಕ ಭೇಟಿಗೆ ನಿರ್ಬಂಧ ವಿಧಿಸಲಾಗಿತ್ತು.

ಶಿವಾಜಿ ಪ್ರತಿಮೆ ಕುಸಿದು ಬಿದ್ದಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದ ಜನತೆಯ ಕ್ಷಮೆಯಾಚಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಪ್ರತಿಪಕ್ಷ ನಾಯಕರು, “ಮಹಾರಾಷ್ಟ್ರದ ಹೆಮ್ಮೆ ಶಿವಾಜಿಯ ಪ್ರತಿಮೆ ಕುಸಿದು ಬಿದ್ದಿದೆ. ಆದ್ದರಿಂದ ಶಿವದ್ರೋಹಿ ಭ್ರಷ್ಟರಿಗೆ ಕ್ಷಮೆ ಇಲ್ಲ. ಕಳಪೆ ಕಾಮಗಾರಿಯ ಮೂಲಕ ಮಹಾಯುತಿ ಸರ್ಕಾರ ಶಿವಾಜಿಯನ್ನು ಅವಮಾನಿಸಿದೆ. ಇವರಿಗೆ ತಕ್ಕ ಪಾಠ ಕಲಿಸುವ ಉದ್ದೇಶದಿಂದ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ” ಎಂದು ಹೇಳಿದ್ದಾರೆ.

ಪ್ರತಿಮೆ ಕುಸಿದು ಬಿದ್ದ ಪ್ರಕರಣ ಸಂಬಂಧ ಪ್ರತಿಮೆ ನಿರ್ಮಾಣ ಯೋಜನೆಯ ರಚನಾತ್ಮಕ ಸಲಹೆಗಾರ ಮತ್ತು ಗುತ್ತಿಗೆದಾರನನ್ನು ಪೊಲೀಸರು ಬಂಧಿಸಿದ್ದಾರೆ. ಅವರ ವಿರುದ್ಧ ಕೊಲೆ ಯತ್ನ, ನರಹತ್ಯೆ ಹಾಗೂ ಜೀವ ಮತ್ತು ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಆರೋಪಗಳ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಇದನ್ನೂ ಓದಿ : ಎಎಪಿ ಕೌನ್ಸಿಲರ್ ರಾಮಚಂದ್ರ ಅವರನ್ನು ಬಿಜೆಪಿ ಅಪಹರಿಸಿದೆ: ಮನೀಶ್ ಸಿಸೋಡಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...