Homeಮುಖಪುಟ'ನನ್ನ ಬಂಧನ ಸಂಘಟಿತ ಪಿತೂರಿಯ ಭಾಗ..'; ರಾಂಚಿ ವಿಶೇಷ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ ಸೊರೇನ್

‘ನನ್ನ ಬಂಧನ ಸಂಘಟಿತ ಪಿತೂರಿಯ ಭಾಗ..’; ರಾಂಚಿ ವಿಶೇಷ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ ಸೊರೇನ್

- Advertisement -
- Advertisement -

ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೇನ್ ಮಂಗಳವಾರ ರಾಂಚಿಯ ವಿಶೇಷ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದು, ‘ನನ್ನ ಬಂಧನವು ರಾಜಕೀಯ ಪ್ರೇರಿತವಾಗಿದೆ; ಬಿಜೆಪಿಗೆ ಸೇರುವಂತೆ ಒತ್ತಾಯಿಸುವ ಸುಸಂಘಟಿತ ಪಿತೂರಿಯ ಭಾಗವಾಗಿದೆ’ ಎಂದು ಆರೋಪಿಸಿದರು.

ಇದಕ್ಕೆ ಉತ್ತರವನ್ನು ಸಲ್ಲಿಸಲು ಜಾರಿ ನಿರ್ದೇಶನಾಲಯ ಸಮಯ ಕೋರಿದ ನಂತರ ವಿಶೇಷ ಪಿಎಂಎಲ್‌ಎ (ಹಣ ಲಾಂಡರಿಂಗ್ ತಡೆ ಕಾಯ್ದೆ) ನ್ಯಾಯಾಲಯವು ಏಪ್ರಿಲ್ 23 ರಂದು ಮುಂದಿನ ವಿಚಾರಣೆಯ ದಿನಾಂಕವನ್ನು ನಿಗದಿಪಡಿಸಿದೆ.

ಸೊರೆನ್ ಪರ ವಕೀಲ ಅರುಣಾಭ್ ಚೌಧರಿ ಅವರು ಅರ್ಜಿ ಸಲ್ಲಿಸಿದ್ದು, “ಅರ್ಜಿದಾರರ ಸಂಪೂರ್ಣ ಕಾನೂನು ಕ್ರಮ ಮತ್ತು ಬಂಧನವು ರಾಜಕೀಯವಾಗಿ ಬಾಹ್ಯ ಪರಿಗಣನೆಗಳಿಂದ ಪ್ರೇರಿತವಾಗಿದೆ. ಪ್ರಮುಖ ವಿರೋಧ ಪಕ್ಷದ ನಾಯಕರನ್ನು ಬೆದರಿಸುವಮತ್ತು ಅವಮಾನಿಸುವ ಕೇಂದ್ರ ಸರ್ಕಾರದ ಸುಸಂಘಟಿತ ಪಿತೂರಿಯ ಭಾಗವಾಗಿದೆ. ಭಾರತೀಯ ಜನತಾ ಪಕ್ಷಕ್ಕೆ ಸೇರಲು ಅಥವಾ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಭಾಗವಾಗುವಂತೆ ಒತ್ತಾಯಿಸಲಾಗಿದೆ” ಎಂದು ಆರೋಪ ಮಾಡಿದ್ದಾರೆ.

“ಸೋರೆನ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ತಕ್ಷಣ ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 31 ರಂದು ಅವರನ್ನು ಇಡಿ ಬಂಧಿಸಿತ್ತು. ಸದ್ಯ ಅವರನ್ನು ರಾಂಚಿಯ ಬಿರ್ಸಾ ಮುಂಡಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ಇದನ್ನೂ ಓದಿ; ಟಿಎಂಸಿಯನ್ನು ಭಷ್ಟ ಎನ್ನುವ ಮೋದಿ ಕನ್ನಡಿ ನೋಡಿಕೊಳ್ಳಬೇಕು; ಅವರ ಪಕ್ಷ ಡಕಾಯಿತರಿಂದ ತುಂಬಿದೆ: ಮಮತಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚರ್ಚ್‌ಗಳಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

0
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕೇರಳದ ಕೆಲ ಚರ್ಚ್‌ಗಳಲ್ಲಿ ವಿವಾದಿತ 'ದಿ ಕೇರಳ ಸ್ಟೋರಿ' ಸಿನಿಮಾ ಪ್ರದರ್ಶನ ಮಾಡಲಾಗಿತ್ತು. ಮುಸ್ಲಿಮರ ಬಗ್ಗೆ ಸುಳ್ಳು ಪ್ರತಿಪಾದಿತ ಈ ಸಿನಿಮಾ ಪ್ರದರ್ಶನದ ಮೂಲಕ ಮುಸ್ಲಿಮರ ಬಗ್ಗೆ ಕ್ರಿಶ್ಚಿಯನ್ನರಲ್ಲಿ...