Homeಮುಖಪುಟ‘ಗುಜರಾತ್‌ ಚುನಾವಣೆಯಿಂದ ಹೊರಗಿಡಲು ನನ್ನ ಬಂಧನ’: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ

‘ಗುಜರಾತ್‌ ಚುನಾವಣೆಯಿಂದ ಹೊರಗಿಡಲು ನನ್ನ ಬಂಧನ’: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ

- Advertisement -
- Advertisement -

ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐನಿಂದ ವಿಚಾರಣೆಗೆ ಒಳಗಾಗಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು, “ಮುಂಬರುವ ಗುಜರಾತ್ ಚುನಾವಣೆಗೆ ಪ್ರಚಾರ ಮಾಡದಂತೆ ಬಿಜೆಪಿಯ ‘ಯೋಜನೆ’ ಭಾಗವಾಗಿ ಇಂದು ತನ್ನನ್ನು ಬಂಧಿಸಲಾಗುವುದು” ಎಂದು ಸೋಮವಾರ ಭವಿಷ್ಯ ನುಡಿದಿದ್ದಾರೆ.

ಭಾನುವಾರ ಅವರು ಸಿಬಿಐ ಕಚೇರಿಗೆ ಹೋಗುವ ದಾರಿಯಲ್ಲಿ ತೆರೆದ ಛಾವಣಿಯ SUV ನಲ್ಲಿ ರೋಡ್ ಶೋ ನಡೆಸಿದ್ದಾರೆ. ಜೊತೆಗೆ ಮಹಾತ್ಮ ಗಾಂಧಿಯವರ ಸ್ಮಾರಕ ರಾಜ್ ಘಾಟ್ ಸೇರಿದಂತೆ ಅನೇಕ ಕಡೆ ನಿಂತು ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಕ್ಷದ ಸಂಸದ ಸಂಜಯ್ ಸಿಂಗ್ ಮತ್ತು ಶಾಸಕರಾದ ಅತಿಶಿ, ಸೌರಭ್ ಭಾರದ್ವಾಜ್ ಅವರಂತಹ ಆಪ್ ನಾಯಕರೊಂದಿಗೆ ಸಿಸೋಡಿಯಾ ಅವರು “ತಿಲಕ” ಧರಿಸಿ ನಂತರ ಮನೆಯಿಂದ ಹೊರಬಂದಿದ್ದಾರೆ. ತನ್ನ ತಾಯಿ ಆಶೀರ್ವಾದ ಮಾಡುತ್ತಿರುವ ವಿಡಿಯೋವನ್ನು ಕೂಡ ಅವರು ಶೇರ್ ಮಾಡಿದ್ದಾರೆ.

ಇದನ್ನೂ ಓದಿ: ‘ಆಫರೇಷನ್‌ ಕಮಲ ವಿಫಲ’: ದೆಹಲಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಿರುವ ಸಿಎಂ ಕೇಜ್ರಿವಾಲ್‌

ಸಿಬಿಐ ಪ್ರಶ್ನೆಗಳ ಪಟ್ಟಿಯನ್ನು ಸಿದ್ಧಪಡಿಸಿದ್ದು, ಅವುಗಳನ್ನು “ಹಲವು ಹಂತಗಳಲ್ಲಿ” ಕೇಳಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಇಲ್ಲಿಯವರೆಗೆ ದೊರೆತಿರುವ ಸಾಕ್ಷ್ಯಗಳು ಮತ್ತು ಮದ್ಯದ ಹಗರಣದಲ್ಲಿ ಆರೋಪಿಗಳಾಗಿರುವ ಇತರರ ಹೇಳಿಕೆಗಳನ್ನು ಉಪಮುಖ್ಯಮಂತ್ರಿಯ ಮುಂದೆ ಇಡಲಾಗುವುದು ಎಂದು ಅವರು ಹೇಳಿದ್ದಾರೆ.

“ಅವರು ನನ್ನ ಮನೆಗೆ ದಾಳಿ ಮಾಡಿದರು, ಅದರಿಂದ ಏನೂ ಹೊರಬರಲಿಲ್ಲ. ಅವರು ನನ್ನ ವಿರುದ್ಧ ಏನಾದರೂ ಸಿಗುತ್ತದೆಯೆ ಎಂದು ಹುಡುಕಲು ನನ್ನ ಹಳ್ಳಿಗೆ ಹೋದರು, ಆದರೂ ಅವರಿಗೆ ಏನೂ ಸಿಕ್ಕಿಲ್ಲ. ಈಗ ಅವರು ನನ್ನನ್ನು ಗುಜರಾತ್‌ನಲ್ಲಿ ಪ್ರಚಾರ ಮಾಡದಂತೆ ತಡೆಯಲು ಅವರು ನನ್ನನ್ನು ಬಂಧಿಸಲು ಯೋಜಿಸಿದ್ದಾರೆ. ನಾನು ಸಿಬಿಐ, ಇಡಿಗೆ ಅಥವಾ ಜೈಲಿಗೆ ಹೋಗುವ ಬಗ್ಗೆ ಹೆದರುವುದಿಲ್ಲ” ಎಂದು ಅವರು ದಾರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಹೇಳಿದ್ದಾರೆ.

“ಭಗತ್ ಸಿಂಗ್ ಕೂಡ ದೇಶಕ್ಕಾಗಿ ಜೈಲಿಗೆ ಹೋಗಬೇಕಾಯಿತು” ಎಂದು ಅವರು ಘೋಷಿಸಿದರು.

ಈ ನಡುವೆ ಬಿಜೆಪಿ ರೋಡ್‌ಶೋ ಅನ್ನು ಟೀಕಿಸಿದ್ದು, “ಆಮ್ ಆದ್ಮಿ ಪಕ್ಷವು ಭ್ರಷ್ಟಾಚಾರದ ವಿಶ್ವಕಪ್ ಅನ್ನು ಗೆದ್ದಿದೆ” ಎಂದು ತೋರುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: ಏರ್‌ಪೋರ್ಟ್ ವಿವಾದದಲ್ಲಿ ಬಿಜೆಪಿ ಸಂಸದ; ದಿಯೋಘರ್‌ ಡಿಸಿ ವಿರುದ್ಧ ದೆಹಲಿಯಲ್ಲಿ ದೇಶದ್ರೋಹ ಪ್ರಕರಣ ದಾಖಲು

ಇಂದು ಕೂಡಾ ಮನೀಷ್ ಸಿಸೋಡಿಯಾ ಅವರು ತಮ್ಮ ಬೆಂಬಲಿಗರೊಂದಿಗೆ ಬೀದಿಗಳಲ್ಲಿ ತೆರೆದ ಕಾರಿನಲ್ಲಿ ಘೋಷಣೆಗಳನ್ನು ಕೂಗುತ್ತಿರುವ ರೀತಿ ನೋಡಿದರೆ ಆಮ್ ಆದ್ಮಿ ಪಕ್ಷ ಭ್ರಷ್ಟಾಚಾರದ ವಿಶ್ವಕಪ್ ಗೆದ್ದಂತೆ ತೋರುತ್ತಿದೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಹೇಳಿದ್ದಾರೆ.

ತಮ್ಮ ಉಪಮುಖ್ಯಮಂತ್ರಿಯ ಬೆಂಬಲಕ್ಕೆ ನಿಂತಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಸಿಸೋಡಿಯಾ ಅವರ ವಿರುದ್ಧದ ಪ್ರಕರಣ ‘ಸಂಪೂರ್ಣವಾಗಿ ನಕಲಿ’ ಎಂದು ಆರೋಪಿಸಿದ್ದಾರೆ. ಸಿಸೋಡಿಯಾ ಅವರನ್ನು ನಾಯಕನ ಅವತಾರದಲ್ಲಿ ಚಿತ್ರಿಸುವ ಕಾರ್ಟೂನ್ ಅನ್ನು ಕೇಜ್ರಿವಾಲ್‌ ಟ್ವೀಟ್ ಮಾಡಿದ್ದಾರೆ.

“ಅವರು ಚುನಾವಣಾ ಪ್ರಚಾರಕ್ಕಾಗಿ ಗುಜರಾತ್‌ಗೆ ಹೋಗಬೇಕಿತ್ತು. ಅವರನ್ನು ತಡೆಯುವ ಪ್ರಯತ್ನದಲ್ಲಿ ಅವರನ್ನು ಬಂಧಿಸಲಾಗುವುದು. ಆದರೆ ಚುನಾವಣಾ ಪ್ರಚಾರ ನಿಲ್ಲುವುದಿಲ್ಲ. ಗುಜರಾತ್‌ನ ಪ್ರತಿಯೊಬ್ಬ ವ್ಯಕ್ತಿಯೂ ಇಂದು ಎಎಪಿಗೆ ಪ್ರಚಾರ ಮಾಡುತ್ತಿದ್ದಾರೆ” ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿ: 2023ರ ಜನವರಿ 1ರ ವರೆಗೆ ಪಟಾಕಿ ಉತ್ಪಾದನೆ, ಮಾರಾಟ ಮತ್ತು ಬಳಕೆ ನಿಷೇಧ

ಮನೀಶ್ ಸಿಸೋಡಿಯಾ ಅವರನ್ನು ಗುರಾಜಲ್ ಚುನಾವಣಾ ಫಲಿತಾಂಶ ಹೊರಬೀಳುವವರೆಗೂ ಜೈಲಿನಲ್ಲಿ ಇಡಲಾಗುವುದು ಎಂದು ಕೇಜ್ರಿವಾಲ್‌ ಹೇಳಿದ್ದಾರೆ. “ಡಿಸೆಂಬರ್ 8 ರಂದು ಗುಜರಾತ್ ಫಲಿತಾಂಶ ಹೊರಬೀಳಲಿದೆ. ಈ ಜನರು ಅಲ್ಲಿಯವರೆಗೆ ಮನೀಶ್ ಅವರನ್ನು ಜೈಲಿನಲ್ಲಿಡುತ್ತಾರೆ” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಗುಜರಾತ್ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು ಇಲ್ಲಿಯವರೆಗೆ ಘೋಷಿಸಿಲ್ಲ.

ಸಿಸೋಡಿಯಾ ಅವರು ಮಾಡಿರುವ ಸರಣಿ ಟ್ವೀಟ್‌ಗಳಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಗುಜರಾತ್ ಸೋಲುವುದು ಗೊತ್ತಿದ್ದೇ ಬಿಜೆಪಿಗೆ ಭಯವಾಗಿದೆ… ನಾನು ಗುಜರಾತ್ ಗೆ ಹೋಗದಂತೆ ತಡೆಯುವುದು ಅವರ ಉದ್ದೇಶ’’ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿ ಬೀದಿಯಲ್ಲಿ ಮಹಿಳೆಯ ಕೂದಲು ಹಿಡಿದು ಹೊಟ್ಟೆಗೆ ಒದ್ದ ದುಷ್ಕರ್ಮಿ: FIR ದಾಖಲಿಸುವಂತೆ ಒತ್ತಾಯಿಸಿದ ಮಹಿಳಾ ಆಯೋಗದ ಅಧ್ಯಕ್ಷೆ

ಎಎಪಿ ಕಾರ್ಯಕರ್ತರು ಅಲ್ಲಿ ಸೇರುವುದನ್ನು ತಡೆಯಲು ಅವರ ಮನೆಯ ಸುತ್ತಲೂ ದೊಡ್ಡ ಸಭೆಗಳನ್ನು ನಿಷೇಧಿಸಲಾಗಿದೆ ಮತ್ತು ಸ್ಥಳದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಕಂಡುಬಂದಿದೆ.

ಕೇಜ್ರಿವಾಲ್, ಸಿಸೋಡಿಯಾ ಮತ್ತು ಅವರ ಪಕ್ಷದ ಇತರರು ಗುಜರಾತ್‌ನಲ್ಲಿ ತಮ್ಮ ಪ್ರಚಾರದ ಕಾರಣದಿಂದ ಬಿಜೆಪಿ ತಮ್ಮನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.

ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರದಂತಹ ಆರೋಪಗಳನ್ನು ಪಟ್ಟಿಮಾಡಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಿಸೋಡಿಯಾ ಮತ್ತು ಇತರ 14 ಜನರ ವಿರುದ್ಧ ಸಿಬಿಐ ಆಗಸ್ಟ್‌ನಲ್ಲಿ ದೆಹಲಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು. ಎಎಪಿ ಸರ್ಕಾರದ ಮದ್ಯ ನೀತಿಯು ಮದ್ಯದ ಕಾರ್ಟೆಲ್‌ಗಳಿಗೆ ಸಹಾಯ ಮಾಡಿದ್ದರೆ ಸಿಬಿಐ ತನಿಖೆ ನಡೆಸುತ್ತಿದೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಶಿಫಾರಸು ಮಾಡಿದ ಸಿಬಿಐ ತನಿಖೆಯ ನಂತರ ಕಳೆದ ವರ್ಷ ನವೆಂಬರ್ 17 ರಿಂದ ಜಾರಿಗೆ ಬಂದ ಮದ್ಯ ನೀತಿಯನ್ನು ಅರವಿಂದ್ ಕೇಜ್ರಿವಾಲ್ ಸರ್ಕಾರ ಜುಲೈನಲ್ಲಿ ರದ್ದುಗೊಳಿಸಿತು.

ಇದನ್ನೂ ಓದಿ: ಲೆಫ್ಟಿನೆಂಟ್ ಗವರ್ನರ್‌‌‌ ಸಾಹೇಬ್‌‌ ನಿಮ್ಮ ‘ಸೂಪರ್‌ ಬಾಸ್‌’‌ಗೆ ಸ್ವಲ್ಪ ಚಿಲ್ ಮಾಡಲು ಹೇಳಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಮದ್ಯ ಮಾರಾಟವನ್ನು ಖಾಸಗಿಯವರಿಗೆ ಹಸ್ತಾಂತರಿಸುವ ನೀತಿಯನ್ನು ಜಾರಿಗೆ ತರುವ ಮೂಲಕ ಎಎಪಿ ಸರ್ಕಾರವು ನಿಯಮಗಳನ್ನು ಉಲ್ಲಂಘಿಸಿದ್ದು, ಸರ್ಕಾರಿ ಮಳಿಗೆಗಳನ್ನು ಮುಚ್ಚಿದೆ ಎಂದು ಒಕ್ಕೂಟ ಸರ್ಕಾರ ಆರೋಪಿಸಿದೆ. ಆದರೆ ಈ ಆರೋಪಿ ಅಲ್ಲಗೆಳೆದಿರುವ ಉಪ ಮುಖ್ಯಮಂತ್ರಿ ಸಿಸೋಡಿಯಾ, ಈ ನೀತಿಯು ಭ್ರಷ್ಟಾಚಾರವನ್ನು ನಿಭಾಯಿಸಲು ಮತ್ತು ಪ್ರಬಲ ಮದ್ಯ ಮಾಫಿಯಾ ವಿರುದ್ಧ ಹೋರಾಡಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...