Homeಮುಖಪುಟನಾನು ದಲಿತ ಎಂಬ ಕಾರಣಕ್ಕೆ ಸಂಸತ್ತಿನಲ್ಲಿ ಮಾತನಾಡಲು ಬಿಡುತ್ತಿಲ್ಲ ಎಂದು ಹೇಳಬೇಕೆ?: ಖರ್ಗೆ

ನಾನು ದಲಿತ ಎಂಬ ಕಾರಣಕ್ಕೆ ಸಂಸತ್ತಿನಲ್ಲಿ ಮಾತನಾಡಲು ಬಿಡುತ್ತಿಲ್ಲ ಎಂದು ಹೇಳಬೇಕೆ?: ಖರ್ಗೆ

- Advertisement -
- Advertisement -

ಪ್ರತಿ ವಿಷಯದಲ್ಲೂ ಜಾತಿಯನ್ನು ಎಳೆದು ತರಬಾರದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಹೇಳಿದ್ದು, ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಸಾಂವಿಧಾನಿಕ ಪೀಠದಲ್ಲಿ ಕುಳಿತುಕೊಂಡು ತನ್ನ ಜಾತಿ ಬಗ್ಗೆ ಉಲ್ಲೇಖಿಸಿ ಕೊಟ್ಟ ಹೇಳಿಕೆಗೆ ಖರ್ಗೆ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರ ಅನುಕರಣೆ ಕುರಿತು ಗದ್ದಲದ ಬೆನ್ನಲ್ಲೇ ರಾಜ್ಯಸಭೆಯಲ್ಲಿ ತನಗೆ ಮಾತನಾಡಲು ಅವಕಾಶ ನಿರಾಕರಿಸಿದಾಗ ಪ್ರತಿ ಬಾರಿಯೂ ತಾನು ದಲಿತನೆಂದು ಮಾತನಾಡಲು ಅವಕಾಶ ನೀಡಿಲ್ಲ ಎಂದು ಹೇಳಬೇಕೆ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ರಾಜ್ಯಸಭೆಯ ಸ್ಪೀಕರ್‌ ಆಗಿರುವ ಉಪರಾಷ್ಟ್ರಪತಿ ಜಗದೀಪ ಧನ್ಕರ್ ಅವರನ್ನು ಟಿಎಂಸಿ ಸಂಸದ ಕಲ್ಯಾಣ ಬ್ಯಾನರ್ಜಿಯವರು ಅನುಕರಣೆಯನ್ನು ಮಾಡಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಧನ್ಕರ್, ಇದು ರೈತನಾಗಿ ಮತ್ತು ಜಾಟ್ ಆಗಿ ತನ್ನ ಹಿನ್ನೆಲೆಗೆ ಮಾಡಲಾಗಿರುವ ಅವಮಾನವಾಗಿದೆ ಎಂದು ಹೇಳಿದ್ದರು. ಬಿಜೆಪಿ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿತ್ತು.

ಬುಧವಾರ ಈ ಬಗ್ಗೆ ಮಾದ್ಯಮದ ಜೊತೆ ಮಾತನಾಡಿದ ಖರ್ಗೆ, ಇತರ ಸದಸ್ಯರಿಗೆ ರಕ್ಷಣೆ ನೀಡುವುದು ಸಭಾಪತಿಗಳ ಕೆಲಸವಾಗಿದೆ. ಆದರೆ ಅವರು ಸ್ವಯಂ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಹಲವು ಬಾರಿ ರಾಜ್ಯಸಭೆಯಲ್ಲಿ ಮಾತನಾಡಲು ನನಗೆ ಅವಕಾಶ ನೀಡಿಲ್ಲ. ನಾನು ದಲಿತನಾಗಿರುವುದು ಇದಕ್ಕೆ ಕಾರಣ ಎಂದು ನಾನು ಹೇಳಬೇಕೇ? ಅವರು ಸಂಸತ್ತಿನೊಳಗೆ ಜಾತಿಯ ಕುರಿತು ಮಾತನಾಡಿ ಅದರ ಹೆಸರಿನಲ್ಲಿ ಹೊರಗಿರುವ ಜನರನ್ನು ಪ್ರಚೋದಿಸಬಾರದು ಎಂದು ಖರ್ಗೆ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್‌ ಚೌಧರಿ, ಸಾಂವಿಧಾನಿಕ ಹುದ್ದೆಯಲ್ಲಿರುವವರು ತಮ್ಮ ಜಾತಿಗಳ ಕುರಿತು ಮಾತನಾಡಿದಾಗ ಅದು ದೇಶಕ್ಕೆ ಅತ್ಯಂತ ದುಃಖದ ದಿನವಾಗುತ್ತದೆ. ಸರಕಾರವು ಇಂತಹ ವಿಷಯಗಳನ್ನು ಚರ್ಚೆಗೆ ತಂದು ಸಂಸತ್‌ನ ಭದ್ರತಾ ಲೋಪದ ವಿಷಯವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಲೋಕಸಭೆ ಮತ್ತು ರಾಜ್ಯಸಭೆಯಿಂದ ಸಂಸದರ ಅಮಾನತಿನ ವಿರುದ್ಧ ಸಂಸತ್ತಿನ ಮೆಟ್ಟಿಲುಗಳ ಮೇಲೆ ಪ್ರತಿಪಕ್ಷಗಳ ಪ್ರತಿಭಟನೆಯ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕ ಕಲ್ಯಾಣ್ ಬ್ಯಾನರ್ಜಿ ಅವರು ಧನ್ಕರ್ ಅವರನ್ನು ಅನುಕರಣೆ ಮಾಡಿದ್ದರು. ಆ ಬಳಿಕ ಸಂಸದರ ಅಮಾನತು ವಿಚಾರಕ್ಕಿಂತಲೂ ಜಾಸ್ತಿಯಾಗಿ  ಈ ವಿಚಾರ ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ.

ಇದಕ್ಕೂ ಮೊದಲು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ, ಸಂಸತ್ತಿನಲ್ಲಿ ಉಂಟಾದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್‌ ಶಾ ಅವರು ಹೇಳಿಕೆ ನೀಡಬೇಕೆಂದು ಒತ್ತಾಯಿಸಿದ್ದರಿಂದ 141 ಸಂಸದರನ್ನು ಅಮಾನತು ಮಾಡಲಾಗಿದೆ. ಆದರೆ ಆರೋಪಿಗೆ ಪಾಸ್‌ ನೀಡಿದ್ದ ತಮ್ಮದೇ ಪಕ್ಷದ ಸಂಸದರ ಬಗ್ಗೆ ಬಿಜೆಪಿಯವರು ಪ್ರಶ್ನಿಸುತ್ತಿಲ್ಲ. ಕೃತ್ಯಕ್ಕೆ ತಿಂಗಳುಗಳಿಂದ ಯೋಜನೆ ರೂಪಿಸುತ್ತಿದ್ದ ಆರೋಪಿಗಳ ಬಗ್ಗೆ ಅಧಿಕಾರಿಗಳು ಯಾಕೆ ಗಮನಹರಿಸಿಲ್ಲ? ಇದು ಗುಪ್ತಚರ ಇಲಾಖೆಯ ಬಹು ದೊಡ್ಡ ವೈಫಲ್ಯ. ಭದ್ರತಾ ಲೋಪಕ್ಕೆ ಹಿರಿಯ ಅಧಿಕಾರಿಗಳನ್ನು ಹೊಣೆಯನ್ನಾಗಿ ಯಾಕೆ ಮಾಡಲಿಲ್ಲ ಎಂದು ಪ್ರಶ್ನಿಸಿದ್ದರು.

ಇದನ್ನು ಓದಿ: ಅಸ್ಸಾಂನ ಬಂಧನ ಕೇಂದ್ರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

0
ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತರಿಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಹಾಯವಾಣಿ ತೆರೆದಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ ಸಿಂಗ್, "ಹಾಸನ ಜಿಲ್ಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ...