Homeರಾಷ್ಟ್ರೀಯನಾನು ಗಾಂಧಿ ಕುಟುಂಬದ ವಿರುದ್ಧ ಮಾತನಾಡಿದ್ದಕ್ಕೆ ನನ್ನ ಮಗಳು ಟಾರ್ಗೆಟ್: ಗೋವಾ ಬಾರ್ ವಿವಾದದ ಬಗ್ಗೆ...

ನಾನು ಗಾಂಧಿ ಕುಟುಂಬದ ವಿರುದ್ಧ ಮಾತನಾಡಿದ್ದಕ್ಕೆ ನನ್ನ ಮಗಳು ಟಾರ್ಗೆಟ್: ಗೋವಾ ಬಾರ್ ವಿವಾದದ ಬಗ್ಗೆ ಸ್ಮೃತಿ ಇರಾನಿ

- Advertisement -
- Advertisement -

ನಾನು ಗಾಂಧಿ ಕಟುಂಬದ ವಿರುದ್ಧ ಮಾತನಾಡುತ್ತೇನೆ ಎಂಬ ಕಾರಣಕ್ಕೆ ಕಾಂಗ್ರೆಸ್ ನನ್ನ ಮಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಒಕ್ಕೂಟ ಸರ್ಕಾರದ ಸಚಿವೆ ಸ್ಮೃತಿ ಇರಾನಿ ಶನಿವಾರ ಮಾಧ್ಯಮಗಳನ್ನು ಉದ್ದೇಶಿಸಿ ಹೇಳಿದ್ದಾರೆ. ತನ್ನ ಮಗಳ ಮೇಲೆ ಇರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಗೋವಾದಲ್ಲಿ ತನ್ನ ಮಗಳು ಅಕ್ರಮ ಬಾರ್ ನಡೆಸುತ್ತಿದ್ದಾರೆ ಎಂಬ ಆರೋಪಗಳನ್ನು ನಿರಾಕರಿಸಿದ್ದಾರೆ.

“18ರ ಹರೆಯದ ಬಾಲಕಿಯೊಬ್ಬಳ ಚಾರಿತ್ರ್ಯಹತ್ಯೆಗೆ ಇಬ್ಬರು ಮಧ್ಯವಯಸ್ಕ ಕಾಂಗ್ರೆಸ್ಸಿಗರೇ ಕಾರಣ. ಬಾಲಕಿಯ ತಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಬಗ್ಗೆ ಮಾತನಾಡಿದ್ದು ಮಾತ್ರ ಅವರು ಮಾಡಿರುವ ತಪ್ಪು” ಎಂದು ತನ್ನ ಮಗಳ ಮೇಲಿನ  ಕಾಂಗ್ರೆಸ್ ಆರೋಪವನ್ನು ತಳ್ಳಿಹಾಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಬ್ಲಿಕ್ ಫ್ಲಾಟ್‌ಫಾರ್ಮ್ ಅಲ್ಲಿರುವ ಮಾಹಿತಿಯ ಪ್ರಕಾರ ಸ್ಮೃತಿ ಇರಾನಿ ಅವರ ಮಗಳ ಹುಟ್ಟಿದ ದಿನ, ‘23 ಸೆಪ್ಟೆಂಬರ್‌ 2003’ ಎಂದಿದೆ. ಅದರಂತೆ ಅವರಿಗೆ 18 ವರ್ಷ ಕಳೆದಿದ್ದು ಸೆಪ್ಟೆಂಬರ್‌ 2022ಕ್ಕೆ ಅವರ ವಯಸ್ಸು 19 ಆಗಲಿದೆ. ಭಾರತದ ಪ್ರಜೆಯೊಬ್ಬರಿಗೆ 18 ವರ್ಷ ತುಂಬಿದ ನಂತರ ಅವರನ್ನು ವಯಸ್ಕ ಎಂದು ಗುರುತಿಸಲಾಗುತ್ತದೆ.

ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಮಾಡಿರುವ 5,000 ರೂಪಾಯಿ ಲೂಟಿಯ ಬಗ್ಗೆ ಬಾಲಕಿಯ ತಾಯಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದು ಬಾಲಕಿ ಮಾಡಿರುವ ತಪ್ಪು ಎಂದು ಸಚಿವೆ ಹೇಳಿದ್ದಾರೆ.

ಇದನ್ನೂ ಓದಿ: ಗೋವಾ: ನಿಧನ ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ಲೈಸನ್ಸ್‌ ಪಡೆದು ಅಕ್ರಮ ಬಾರ್‌ ನಡೆಸುತ್ತಿರುವ ಸಚಿವೆ ಸ್ಮೃತಿ ಇರಾನಿ ಪುತ್ರಿ

“ನನ್ನ ಮಗಳು ಕಾಲೇಜಿನಲ್ಲಿ ಓದುತ್ತಾಳೆ, ಅವಳು ಬಾರ್ ನಡೆಸುತ್ತಿಲ್ಲ, ದಯವಿಟ್ಟು ದಾಖಲೆಗಳನ್ನು ಪರಿಶೀಲಿಸಿ. ಅದರಲ್ಲಿ ನನ್ನ ಮಗಳ ಹೆಸರು ಎಲ್ಲಿದೆ? ಅವರು ಮಾಹಿತಿ ಹಕ್ಕು (ಆರ್‌ಟಿಐ) ಆಧಾರದ ಮೇಲೆ ನನ್ನ ಮಗಳ ಮೇಲೆ ಆರೋಪ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಇಬ್ಬರು ಗಾಂಧಿಗಳ ವಿರುದ್ಧ ಬಾಲಕಿಯ ಆಕೆಯ ತಾಯಿ ಪತ್ರಿಕಾಗೋಷ್ಠಿ ನಡೆಸಿದ್ದು ಬಾಲಕಿ ಮಾಡಿರುವ ತಪ್ಪು. ನನ್ನ ಮಗಳು ರಾಜಕಾರಣಿಯಲ್ಲ ಬದಲಾಗಿ ವಿದ್ಯಾರ್ಥಿಯಾಗಿ ಸಾಮಾನ್ಯ ಜೀವನವನ್ನು ನಡೆಸುತ್ತಿದ್ದಾರೆ” ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

“ನಾನು ಕಾನೂನಿನ ನ್ಯಾಯಾಲಯದಲ್ಲಿ ಮತ್ತು ಜನರ ನ್ಯಾಯಾಲಯದಲ್ಲಿ ಉತ್ತರವನ್ನು ಕಂಡುಕೊಳ್ಳುತ್ತೇನೆ. ಈ ದಾಖಲೆಗಳಲ್ಲಿ ನನ್ನ ಮಗಳ ಹೆಸರು ಎಲ್ಲಿದೆ ಎಂದು ನಾನು ಕೇಳಲು ಬಯಸುತ್ತೇನೆ. 2024 ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯನ್ನು ಮತ್ತೊಮ್ಮೆ ಅಮೇಥಿಗೆ ಕಳುಹಿಸಿ. ನಾವು ಮತ್ತೊಮ್ಮೆ ರಾಹುಲ್ ಗಾಂಧಿಯನ್ನು ಸೋಲಿಸುತ್ತೇವೆ” ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

ಇಂದು ಸಂಜೆಯೊಳಗೆ ಹಿರಿಯ ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ ಮತ್ತು ಪವನ್ ಖೇರಾ ಅವರಿಗೆ ತಮ್ಮ ತಂಡ ಲೀಗಲ್ ನೋಟಿಸ್ ಕಳುಹಿಸಲಿದೆ ಎಂದು ಸಚಿವೆ ತಿಳಿಸಿದ್ದಾರೆ.

ಇದನ್ನೂ ಓದಿ: ಜನರು ಏನು ತೊಡುತ್ತಾರೆ ಎಂಬುದರಲ್ಲಿ ರಾಜಕಾರಣಿಗಳು ಮೂಗು ತೂರಿಸಬೇಕಿಲ್ಲ: ಸ್ಮೃತಿ ಇರಾನಿ

ಒಂದು ದಿನದ ಹಿಂದೆಯಷ್ಟೆ ಸ್ಮೃತಿ ಇರಾನಿ ಅವರ ಪುತ್ರಿ ಜೊಯಿಶ್ ಇರಾನಿ ಗೋವಾದಲ್ಲಿ ರೆಸ್ಟೋರೆಂಟ್ ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಾರ್‌ ಅನ್ನು ‘ನಕಲಿ ಪರವಾನಗಿ’ ಪಡೆದು ನಡೆಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಎಲ್ಲಾ ಹಿನ್ನಲೆಯಲ್ಲಿ ನರೇಂದ್ರ ಮೋದಿ ಸರ್ಕಾರವು ಸಚಿವೆ ಸ್ಮೃತಿ ಇರಾನಿ ಅವರನ್ನು ವಜಾಗೊಳಿಸಬೇಕು ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಆಗ್ರಹಿಸಿದ್ದಾರೆ.

ಸ್ಮೃತಿ ಇರಾನಿ ಅವರ ವಕೀಲರ ಸಮಸ್ಯಾತ್ಮಕ ಹೇಳಿಕೆ

ಜೋಯಿಶ್ ಇರಾನಿ ಅವರ ವಕೀಲ ಕಿರಾತ್ ನಾಗ್ರಾ ಅವರು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಅವರ ಕಕ್ಷಿದಾರರ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ.

ಸ್ಮೃತಿ ಇರಾನಿ ಅವರ ರಾಜಕೀಯ ವಿರೋಧಿಗಳು ರಾಜಕೀಯ ನಾಯಕರ ಮಗಳು ಎಂಬ ಕಾರಣಕ್ಕಾಗಿ ಅವರನ್ನು ಮಾನಹಾನಿ ಮಾಡುವ ಪೂರ್ವನಿರ್ಧರಿತ ಉದ್ದೇಶದಿಂದ ಅವರ ವಿರುದ್ಧ ಹಲವಾರು ‘ಸೃಷ್ಟಿಸಲಾದ’ ಆರೋಪಗಳನ್ನು ಮಾಡಿದ್ದಾರೆ ಎಂದು ಅವರ ವಕೀಲರು ಹೇಳಿದ್ದಾರೆ. ಅಷ್ಟೆ ಅಲ್ಲದೆ, ಜೊಯಿಶ್ ಅವರ ವಕೀಲರು, ಆಕೆಗೆ ಯಾವುದೇ ಪ್ರಾಧಿಕಾರದಿಂದ ಯಾವುದೇ ಶೋಕಾಸ್ ನೋಟಿಸ್ ಬಂದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇತಿಹಾಸದಲ್ಲೇ ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ಹಿಂಸೆಗೆ ಕರೆ ನೀಡಿದ್ದಾರೆ: ಸ್ಮೃತಿ ಇರಾನಿ

ದೆಹಲಿಯ ಬಿಜೆಪಿ ನಾಯಕ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರು ಆರೋಪವನ್ನು ನಿರಾಕರಿಸಿದ್ದು, ಸ್ಮೃತಿ ಇರಾನಿ ಅವರ ಮಗಳು ಅಮೆರಿಕಾದಲ್ಲಿ ಓದುತ್ತಿದ್ದಾರೆ. ಜೊಯಿಶ್‌ ಅವರಿಗೂ ಬಾರ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...