Homeಮುಖಪುಟ‘ನನ್ನ ತಂದೆ ಮತ್ತು ಲಾಲು ಯಾದವ್‌ ಸ್ನೇಹಿತರು; ತೇಜಸ್ವಿ ನನ್ನ ಸಹೋದರ’ - ಚಿರಾಗ್‌ ಪಾಸ್ವಾನ್‌

‘ನನ್ನ ತಂದೆ ಮತ್ತು ಲಾಲು ಯಾದವ್‌ ಸ್ನೇಹಿತರು; ತೇಜಸ್ವಿ ನನ್ನ ಸಹೋದರ’ – ಚಿರಾಗ್‌ ಪಾಸ್ವಾನ್‌

ಹೊಸ ತಿರುವಿನತ್ತ ಬಿಹಾರದ ರಾಜ್ಯ ರಾಜಕೀಯ

- Advertisement -
- Advertisement -

ಬಿಹಾರದಲ್ಲಿ ಹೊಸ ರಾಜಕೀಯ ಅಲೆ ಬೀಸುತ್ತಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಯಾದವ್ ಅವರ ಮಗ ತೇಜಸ್ವಿ ಯಾದವ್ ರಾಜ್ಯದ ಹೊಸ ಶಕ್ತಿಯಾಗಿ ಬೆಳೆಯುತ್ತಿದ್ದಾರೆ. ಒಕ್ಕೂಟ ಸರ್ಕಾರದ ಮಾಜಿ ಮಂತ್ರಿ ದಿವಂಗತ ರಾಮ ವಿಲಾಸ್ ಪಾಸ್ವಾನ್ ಅವರ ಪಕ್ಷ ಎಲ್‌ಜೆಪಿ ಒಡೆದು ಹೋಗಿದೆ. ಈ ನಡುವೆ ಅವರ ಮಗ ಚಿರಾಗ್‌ ಪಾಸ್ವಾನ್ ಅವರನ್ನು ತೇಜಸ್ವಿ ಯಾದವ್ ಅವರು ಮೈತ್ರಿಕೂಟಕ್ಕೆ ಸೇರಲು ಇತ್ತಿಚೆಗಷ್ಟೆ ಆಹ್ವಾನಿಸಿದ್ದರು. ಇದಾಗಿ ದಿನಗಳ ಅಂತದರಲ್ಲಿ, “ತೇಜಸ್ವಿ ಯಾದವ್‌‌ ನನ್ನ ಕಿರಿಯ ಸಹೋದರ ಇದ್ದಂತೆ, ರಾಜ್ಯದಲ್ಲಿ ಚುನಾವಣೆ ನಡೆಯುವ ಸಂದರ್ಭ ಮೈತ್ರಿಯ ಬಗ್ಗೆ ಪಕ್ಷವು ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದು ಚಿರಾಗ್‌ ಪಾಸ್ವಾನ್ ಹೇಳಿದ್ದಾರೆ.

ಶನಿವಾರ ಮಾಧ್ಯಮದ ಜೊತೆಗೆ ಮಾತನಾಡಿದ ಎಲ್‌ಜೆಪಿ ನಾಯಕ ಚಿರಾಗ್‌ ಪಾಸ್ವಾನ್‌‌, “ನನ್ನ ತಂದೆ ರಾಮ ವಿಲಾಸ್ ಪಾಸ್ವಾನ್‌ ಮತ್ತು ತೇಜಸ್ವಿ ಯಾದವ್‌ ಅವರ ತಂದೆ ಲಾಲು ಪ್ರಸಾದ್ ಯಾದವ್‌‌‌ ಯಾವಾಗಲೂ ಆಪ್ತ ಸ್ನೇಹಿತರಾಗಿದ್ದರು. ತೇಜಸ್ವಿ ಮತ್ತು ನಾನು ಬಾಲ್ಯದಿಂದಲೂ ಒಬ್ಬರಿಗೊಬ್ಬರು ತಿಳಿದಿದ್ದು, ನಮ್ಮಿಬ್ಬರ ನಡುವೆ ನಾವು ನಿಕಟ ಸ್ನೇಹವಿದೆ. ಅವರು ನನ್ನ ಕಿರಿಯ ಸಹೋದರ ಇದ್ದಂತೆ. ಬಿಹಾರದಲ್ಲಿ ಚುನಾವಣಾ ಸಮಯ ಬಂದಾಗ ಪಕ್ಷವು ಮೈತ್ರಿಕೂಟದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಆರೆಸ್ಸೆಸ್ ಅಥವಾ ಸಂವಿಧಾನ’ – ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

“ಸಿಎಎ, ಎನ್‌ಆರ್‌ಸಿಯ ವಿಷಯಗಳು ಸೇರಿದಂತೆ ನಾನು ಪ್ರತಿ ಹಂತದಲ್ಲೂ ಬಿಜೆಪಿಯೊಂದಿಗೆ ನಿಂತಿದ್ದೇನೆ. ಆದರೆ, ನಿತೀಶ್‌ ಕುಮಾರ್‌‌ ಇದನ್ನು ಒಪ್ಪಲಿಲ್ಲ. ಮುಂದಿನ ದಿನಗಳಲ್ಲಿ ನನ್ನನ್ನು ಬೆಂಬಲಿಸುತ್ತಾರೆಯೆ ಅಥವಾ ನಿತೀಶ್ ಕುಮಾರ್ ಅವರನ್ನು ಬೆಂಬಲಿಸುತ್ತಾರೆಯೇ ಎಂದು ಬಿಜೆಪಿಯೆ ನಿರ್ಧರಿಸಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ಚಿರಾಗ್‌ ಪಾಸ್ವಾನ್‌‌ ತನ್ನ ತಂದೆಯ ಜನ್ಮ ದಿನವಾದ ಜುಲೈ 5 ರಿಂದ ಹಾಜಿಪುರದಿಂದ ಬಿಹಾರ ಯಾತ್ರೆ ಪ್ರಾರಂಭಿಸುವ ಮೂಲಕ ಕಳೆದು ಹೋದ ರಾಜಕೀಯ ನೆಲೆಯನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಹಾಜಿಪುರ ಲೋಕಸಭಾ ಕ್ಷೇತ್ರವನ್ನು ಚಿರಾಗ್‌ ಪಾಸ್ವಾನ್ ಅವರ ಚಿಕ್ಕಪ್ಪ ಪಶುಪತಿ ಕುಮಾರ್‌ ಪರಾಸ್‌ ಅವರು ಈಗ ಪ್ರತಿನಿಧಿಸುತ್ತಿದ್ದಾರೆ. ಅವರು ಚಿರಾಗ್‌ ವಿರುದ್ಧ ಬಂಡಾಯವೆದ್ದು ಪಕ್ಷದೊಳಗೆ ಬೇರೆಯೆ ಬಣವನ್ನು ಕಟ್ಟಿದ್ದಾರೆ. ಇದು ಬಿಹಾರ ರಾಜಕೀಯ ವಲಯದಲ್ಲಿ ಹೊಸ ಅಲೆಯನ್ನು ಎಬ್ಬಿಸಿದೆ.

ಎಲ್‌ಜೆಪಿಯ ನಡುವಿನಲ್ಲಿ ಉಂಟಾದ ಒಡಕಿನ ಹಿನ್ನಲೆಯಲ್ಲಿ ಚಿರಾಗ್‌ ಪಾಸ್ವಾನ್‌ಗೆ ತಮ್ಮ ಮೈತ್ರಿಕೂಟವನ್ನು ಸೇರಲು ತೇಜಸ್ವಿ ಯಾದವ್‌ ಆಹ್ವಾನಿಸಿದ್ದರು. ಜೊತೆಗೆ ರಾಮ್ ವಿಲಾಸ್ ಪಾಸ್ವಾನ್ ಅವರು ಲೋಕಸಭಾ ಚುನಾವಣೆಯಲ್ಲಿ ಸೋತಾಗ, ಅವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಲು ತಮ್ಮ ತಂದೆ ಲಾಲು ಪ್ರಸಾದ್ ಯಾದವ್‌ ಸಹಾಯ ಮಾಡಿದ್ದರು ಎಂದು ನೆನಪಿಸಿದ್ದರು.

ಇದನ್ನೂ ಓದಿ: ‘ಸರ್ಕಾರಕ್ಕೆ ಯಾವುದೇ ಜವಾಬ್ದಾರಿಯ ಪ್ರಜ್ಞೆ ಇಲ್ಲ’ – ತೇಜಸ್ವಿ ಯಾದವ್‌ ಆಕ್ರೋಶ

“ಚಿರಾಗ್‌‌ ಮುಂದೆ ಎರಡು ಆಯ್ಕೆಗಳಿವೆ ಒಂದು ಆರೆಸ್ಸೆಸ್‌ ಮುಖಂಡ ಎಂ.ಎಸ್. ಗೋಲ್ವಾಲ್ಕರ್ ಬರೆದ ಬಂಚ್‌ ಆಫ್‌ ಥಾಟ್‌, ಇನ್ನೊಂದು ಬಾಬಾಸಾಹೇಬ್‌ ಅಂಬೇಡ್ಕರ್‌ ಅವರು ಬರೆದ ಸಂವಿಧಾನ. ಇದರಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ಅವರು ನಿರ್ಧರಿಸಬೇಕು” ಎಂದು ತೇಜಸ್ವಿ ಯಾದವ್ ಹೇಳಿದ್ದರು.

ಕಳೆದ ಬಿಹಾರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿಶ್‌ ಕುಮಾರ್‌ ವಿರುದ್ದ ದಂಗೆ ಎದ್ದಿದ್ದ ಚಿರಾಗ್‌ ಪಾಸ್ವಾನ್‌ ಅವರ ಎಲ್‌ಜೆಪಿ ಪಕ್ಷವು ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಿಂದ ಹೊರ ನಡೆದಿತ್ತು. ನಂತರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಎಲ್‌ಜೆಪಿ, ನಿತೀಶ್‌ ಕುಮಾರ್ ನೇತೃತ್ವದ ಜೆಡಿಯುಗೆ ತೀವ್ರ ಹೊಡೆತ ನೀಡಿತ್ತು.

ಇದನ್ನೂ ಓದಿ: ‘ನಾಝಿ ಆಡಳಿತ ಬೇಟೆಯಾಡುತ್ತಿದೆ’ – ಕೇಂದ್ರದ ವಿರುದ್ದ ತೇಜಸ್ವಿ ಯಾದವ್‌ ತೀವ್ರ ವಾಗ್ದಾಳಿ

ಆದರೆ ಇತ್ತೀಚೆಗೆ ಎಲ್‌ಜೆಪಿ ಒಳಗಿನ ಆಂತರಿಕ ದಂಗೆಯಿಂದ ಪಕ್ಷ ಒಡೆದು ವಿಭಜನೆಯಾಗಿದೆ. ಇದಕ್ಕೆ ನಿತೀಶ್‌ ಕುಮಾರ್‌ ಕಾರಣವಾಗಿದ್ದು, ಅವರು ವಿಧಾನಸಭಾ ಚುನಾವಣೆಯ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ಚಿರಾಗ್‌ ಪಾಸ್ವಾನ್ ಅವರ ಆಪ್ತರು ಆರೋಪಿಸಿದ್ದರು.

ಅಲ್ಲದೆ, ಎಲ್‌ಜೆಪಿಯಲ್ಲಾಗಿರುವ ಎಲ್ಲಾ ಬೆಳವಣಿಗೆಗಳಿಗೆ, ಮುಖ್ಯವಾಗಿ ಎಲ್‌ಜೆಪಿ ವಿಭಜನೆಯ ಹಿಂದೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಮಾಸ್ಟರ್ ಮೈಂಡ್‌ ಕೆಲಸ ಮಾಡಿದೆ. ಈ ಹಿಂದೆ 2005 ಮತ್ತು 2010 ರಲ್ಲಿ ಎಲ್‌ಜೆಪಿ ಇದೇ ರೀತಿ ವಿಭಜನೆಯಾಗಲು ನಿತೀಶ್ ಕುಮಾರ್ ಅವರ ಜೆಡಿಯು ಅನುಕೂಲ ಮಾಡಿಕೊಟ್ಟಿತ್ತು ಎಂಬುದನ್ನು ಚಿರಾಗ್‌ ಪಾಸ್ವಾನ್‌ ಅವರಿಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ನೆನಪಿಸಿದ್ದರು.

ಈ ನಡುವೆ, ಚಿರಾಗ್ ಪಾಸ್ವಾನ್ ಅವರ ತಂದೆ, ಮಾಜಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಜನ್ಮದಿನವಾದ ಜುಲೈ 5 ರಂದು ಗೌರವ ಸಲ್ಲಿಸಲು ತೇಜಸ್ವಿ ಯಾದವ್ ಯೋಜಿಸುತ್ತಿದ್ದಾರೆ. ಅದೇ ದಿನ ತೇಜಸ್ವಿ ಯಾದವ್ ಅವರ ಪಕ್ಷವಾದ ಆರ್‌ಜೆಡಿಯ ಸಂಸ್ಥಾಪನಾ ದಿನವೂ ಆಗಿದ್ದು, ಅಂದಿನ ಕಾರ್ಯಕ್ರಮದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಿಧನರಾದ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ: ‘ನಾನು ತೇಜಸ್ವಿ ಯಾದವ್ ಮಾತಾಡುತ್ತಿದ್ದೇನೆ’: ಡಿಸಿಯೊಂದಿಗಿನ ಖಡಕ್ ಸಂಭಾಷಣೆ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...