ಗೌರವಕ್ಕಾಗಿ ಹೋರಾಡುತ್ತಿರುವ ರೈತರು ಮತ್ತು ಕಾರ್ಮಿಕರ ಜೊತೆಗೆ ನನ್ನ ಹೃದಯವಿದೆ-ರಾಹುಲ್ ಗಾಂಧಿ
PC: Scroll.in

ಹೊಸ ವರ್ಷದಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ದೇಶದ ಜನರಿಗೆ ಶುಭಾಶಯ ಕೋರಿದ್ದಾರೆ. ಕೊರೊನಾ ಪರಿಸ್ಥಿತಿಯಿಂದ ಉಂಟಾಗುವ ಸವಾಲುಗಳನ್ನು ಒಗ್ಗಟ್ಟಿನಿಂದ ಎದುರಿಸೋಣ ಎಂದು ರಾಷ್ಟ್ರಪತಿ ಶುಭಕೋರಿದ್ದಾರೆ. ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿ ನಿಮ್ಮದಾಗಲಿ ಎಂದು ಪ್ರಧಾನಿ ಹೇಳಿದ್ದಾರೆ.

ಹೊಸವರ್ಷದಂದು ನಾವು ಕಳೆದುಕೊಂಡವರನ್ನು, ನಮ್ಮನ್ನು ರಕ್ಷಿಸಿದವರು ಮತ್ತು ನಮಗಾಗಿ ತ್ಯಾಗ ಮಾಡಿದವರನ್ನು ರಾಹುಲ್ ಗಾಂಧಿ ನೆನಪಿಸಿಕೊಂಡಿದ್ದಾರೆ. ಅನ್ಯಾಯದ ವಿರುದ್ಧ ಘನತೆ ಮತ್ತು ಗೌರವದಿಂದ ಹೋರಾಡುತ್ತಿರುವ ರೈತರು ಮತ್ತು ಕಾರ್ಮಿಕರ ಜೊತೆಗೆ ನನ್ನ ಹೃದಯವಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕೈ ಮುಗಿದು, ತಲೆಬಾಗಿ ರೈತರೊಡನೆ ಚರ್ಚಿಸಲು ಸಿದ್ದನಿದ್ದೇನೆ: ನರೇಂದ್ರ ಮೋದಿ

ಕಳೆದ ತಿಂಗಳಿನಿಂದಲೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ತಮ್ಮ ಬೆಂಬಲವನ್ನು ಮತ್ತೆ ದೃಢಪಡಿಸಿದ್ದಾರೆ. ರೈತರ ಹೋರಾಟಕ್ಕೆ ಮೊದಲಿನಿಂದಲೂ ಸಾಥ್ ನೀಡಿರುವ ರಾಹುಲ್ ಗಾಂಧಿ ಮುಂದೆಯೂ ತಾವು ರೈತರ ಜೊತೆಗಿರುವುದಾಗಿ ತಿಳಿಸಿದ್ದಾರೆ.

ಇತ್ತ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಶುಭಾಶಯ ತಿಳಿಸಿದ್ದು, ಈ ವರ್ಷ ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಭರವಸೆ ಮತ್ತು ಸ್ವಾಸ್ಥ್ಯದ ಮನೋಭಾವ ಮೇಲುಗೈ ಸಾಧಿಸಲಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹೋರಾಟನಿರತ ರೈತರನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ: ನರೇಂದ್ರ ಮೋದಿ

ರಾಷ್ಟ್ರಪತಿ ರಾಮನಾಥ್ ಕೋವಿಂದ್, 2020 ರ ಕೊರೊನಾ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು, ಹೊಸ ಆರಂಭಕ್ಕೆ ಹೊಸ ಅವಕಾಶ ಎಂದಿದ್ದಾರೆ.

“ಹೊಸ ವರ್ಷವು ಹೊಸ ಆರಂಭವನ್ನು ನೀಡಲು ಮತ್ತು ವೈಯಕ್ತಿಕ ಮತ್ತು ಸಾಮೂಹಿಕ ಅಭಿವೃದ್ಧಿಗೆ ಪರಿಹಾರವನ್ನು ಒದಗಿಸುತ್ತದೆ. ಕೊರೊನಾ ಪರಿಸ್ಥಿತಿಯಿಂದ ಉಂಟಾಗುವ ಸವಾಲುಗಳು ಒಗ್ಗಟ್ಟಿನಿಂದ ಎದುರಿಸುವ ನಮ್ಮ ದೃಢ ನಿರ್ಧಾರವನ್ನು ಬಲಪಡಿಸುತ್ತವೆ” ಎಂದು ರಾಷ್ಟ್ರಪತಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ರಾಜಸ್ಥಾನ-ಹರಿಯಾಣ ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗ್ಗಿದ ರೈತರು

ಪ್ರೀತಿ ಮತ್ತು ಸಹಾನುಭೂತಿಯ ಮನೋಭಾವದಿಂದ ಕೂಡಿದ ಸಮಾಜವನ್ನು ಸೃಷ್ಟಿಸಲು ನಾವು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸೋಣ ಎಂದು ದೇಶದ ಜನರಿಗೆ ಕರೆ ನೀಡಿದ್ದಾರೆ.

ದೇಶದಲ್ಲಿ ಹೆಚ್ಚು ಚರ್ಚೆಗೆ ಒಳಗಾಗುತ್ತಿರುವ ರೈತ ಪ್ರತಿಭಟನೆಯಲ್ಲಿ, ಹೆಚ್ಚಾಗಿ ಪಂಜಾಬ್, ಹರಿಯಾಣ ಮತ್ತು ಇತರ ರಾಜ್ಯಗಳ ರೈತರು ದೆಹಲಿಯ ಗಡಿಯಲ್ಲಿ ಬೀಡುಬಿಟ್ಟಿದ್ದಾರೆ. ವಿವಾದಿತ ಕೃಷಿ ಕಾನೂನುಗಳು ಕನಿಷ್ಟ ಬೆಂಬಲ ಬೆಲೆ ವ್ಯವಸ್ಥೆಯನ್ನು ಹಾಳುಗೆಡವುತ್ತವೆ ಮತ್ತು ದೊಡ್ಡ ಕಾರ್ಪೊರೇಟ್ ಸಂಸ್ಥೆಗಳ ಪರವಾಗಿವೆ ಎಂದು  ಲಕ್ಷಾಂತರ ಮಂದಿ ರೈತರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ.

ರೈತ ನಾಯಕರು ಮತ್ತು ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದು ವಿಫಲಗೊಂಡಿವೆ. ಪ್ರಧಾನಿ ಮೋದಿ ಅವರ ಅನೇಕ ಆಶ್ವಾಸನೆಗಳು ರೈತರ ಪ್ರತಿಭಟನೆಯನ್ನು ತಡೆಯುವಲ್ಲಿ ವಿಫಲವಾಗಿವೆ.

ಈ ಹಿನ್ನೆಲೆ ದೇಶದ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ರೈತರ ಬಗ್ಗೆ ಹೊಸ ವರ್ಷದಂದು ಯಾವುದಾದರೂ ಸಿಹಿ ಸುದ್ದಿ ನೀಡಬಹುದು ಎಂಬ ನಿರೀಕ್ಷೆಯನ್ನು ರಾಷ್ಟ್ರಪತಿ ಮತ್ತು ಪ್ರಧಾನಿ ನರೇಂದ್ರ ಮೋದಿ ಹುಸಿ ಮಾಡಿದ್ದಾರೆ. ರೈತ ಹೋರಾಟ ಆರಂಭದಿಂದಲೂ ರೈತರಿಗೆ ಬೆಂಬಲ ನೀಡಿರುವ ರಾಹುಲ್ ಗಾಂಧಿ ತಮ್ಮ ಬೆಂಬಲ ಮುಂದುವರಿಸುವುದಾಗಿ ಮತ್ತೆ ತಿಳಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ-6 ನೇ ಸುತ್ತಿನ ಮಾತುಕತೆಯು ವಿಫಲ; ಹೋರಾಟ ಮುಂದುವರೆಯಲಿದೆ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here