Homeಮುಖಪುಟ'ನನ್ನ ಹೆಸರು ಅರವಿಂದ್ ಕೇಜ್ರಿವಾಲ್; ನಾನು ಭಯೋತ್ಪಾದಕನಲ್ಲ..; ಸಂಜಯ್ ಸಿಂಗ್

‘ನನ್ನ ಹೆಸರು ಅರವಿಂದ್ ಕೇಜ್ರಿವಾಲ್; ನಾನು ಭಯೋತ್ಪಾದಕನಲ್ಲ..; ಸಂಜಯ್ ಸಿಂಗ್

- Advertisement -
- Advertisement -

‘ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಜನರ ಮಗ ಮತ್ತು ಸಹೋದರನಂತೆ ಕೆಲಸ ಮಾಡಿದ್ದಾರೆ’ ಎಂದು ಹೇಳಿದ ಎಎಪಿ ಸಂಸದ ಸಂಜಯ್ ಸಿಂಗ್ ಹೇಳಿದರು.

ತಿಹಾರ್ ಜೈಲಿನಲ್ಲಿರುವ ಅರವಿಂದ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ತೆರಳಿದ್ದ ಭಗವಂತ್ ಮಾನ್ ಅವರನ್ನು ರಕ್ಷಣಾತ್ಮಕ ಗಾಜಿನ ಮೂಲಕ ಮಾತನಾಡಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಅವರು, “ನನ್ನ ಹೆಸರು ಅರವಿಂದ್ ಕೇಜ್ರಿವಾಲ್; ನಾನು ಭಯೋತ್ಪಾದಕನಲ್ಲ” ಎಂದು ಸವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

“ಮೂರು ಬಾರಿ ಚುನಾಯಿತರಾಗಿರುವ ದೆಹಲಿ ಸಿಎಂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಗಾಜಿನ ಮುಖಾಂತರ ಭೇಟಿಯಾಗುವಂತೆ ಮಾಡಲಾಗಿದೆ. ಅರವಿಂದ್ ಕೇಜ್ರಿವಾಲ್ ವಿರುದ್ಧ ಪ್ರಧಾನಿಗೆ ದ್ವೇಷದ ಭಾವನೆ ಇದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ…” ಎಂದು ಅವರು ಆರೋಪಿಸಿದರು.

‘ಅರವಿಂದ್‌ ಕೇಜ್ರಿವಾಲ್‌ ಸ್ಥೈರ್ಯ ಕುಗ್ಗಿಸಲು 24 ಗಂಟೆಯೂ ಪ್ರಯತ್ನ ನಡೆಸಲಾಗುತ್ತಿದೆ’ ಎಂದು ಆರೋಪಿಸಿದ ಅವರು, “ಇವನು ಅರವಿಂದ್ ಕೇಜ್ರಿವಾಲ್, ಅವನು ಭಿನ್ನವಾದ ಮಣ್ಣಿನಿಂದ ಮಾಡಲ್ಪಟ್ಟಿದ್ದಾನೆ… ನೀವು ಅವನನ್ನು ಮುರಿಯಲು ಎಷ್ಟು ಪ್ರಯತ್ನಿಸುತ್ತೀರೋ ಅಷ್ಟು ಬಲಶಾಲಿಯಾಗಿ ಹಿಂತಿರುಗುತ್ತಾನೆ… ನಿನ್ನೆ ಸಿಎಂ ಭಗವಂತ್ ಮಾನ್ ಸಭೆಯಲ್ಲಿ ಭಾವುಕರಾದರು. ಇದು ನಮ್ಮೆಲ್ಲರಿಗೂ ಭಾವನಾತ್ಮಕ ವಿಷಯವಾಗಿದೆ. ಆದರೆ, ಇದು ಬಿಜೆಪಿ ಮತ್ತು ಪ್ರಧಾನಿ ಮೋದಿಗೆ ನಾಚಿಕೆಗೇಡಿನ ಸಂಗತಿಯಾಗಿದೆ” ಎಂದು ಹೇಳಿದರು.

ಇದನ್ನೂ ಓದಿ; ಬಿಜೆಪಿಗೆ ಮುಳುವಾದ ‘ಕೇರಳ ಸ್ಟೋರಿ’ ಸಿನಿಮಾ ಪ್ರದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...