Homeಮುಖಪುಟ"ನನ್ನ ಜನರಿಗೆ ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ; ನಾನು ಅಯೋಧ್ಯೆಗೆ ಹೋದರೆ ಸಹಿಸುವರೇ?": ಮಲ್ಲಿಕಾರ್ಜುನ ಖರ್ಗೆ

“ನನ್ನ ಜನರಿಗೆ ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ; ನಾನು ಅಯೋಧ್ಯೆಗೆ ಹೋದರೆ ಸಹಿಸುವರೇ?”: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ದೇಶದಾದ್ಯಂತ ಪರಿಶಿಷ್ಟ ಜಾತಿಗಳು (ಎಸ್‌ಸಿಗಳು) ಇನ್ನೂ ತಾರತಮ್ಯವನ್ನು ಎದುರಿಸುತ್ತಿವೆ ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ಸರ್ಕಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ‘ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾರಣ’ಕ್ಕೆ ಅವಮಾನಿಸಿದೆ ಎಂದು ಆರೋಪಿಸಿದ್ದಾರೆ.

ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನೆ ಮತ್ತು ಹೊಸ ಸಂಸತ್ ಭವನದ ಉದ್ಘಾಟನೆಗೆ ಮುರ್ಮು ಅವರನ್ನು ಆಹ್ವಾನಿಸಿಲ್ಲ. ಕೋವಿಂದ್ ಅವರಿಗೆ ಹೊಸ ಸಂಸತ್ ಭವನದ ಶಂಕುಸ್ಥಾಪನೆ ಮಾಡಲು ಅವಕಾಶ ನೀಡಿಲ್ಲ ಎಂದು ಖರ್ಗೆ ಹೇಳಿದ್ದಾರೆ.

ಇಂಡಿಯನ್ ಎಕ್ಸ್ ಪ್ರೆಸ್ ಆಯೋಜಿಸಿದ್ದ ‘ಐಡಿಯಾ ಎಕ್ಸ್ ಚೇಂಜ್’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಖರ್ಗೆ, ರಾಜಕೀಯ ಬಲವಂತದ ಕಾರಣದಿಂದ ಕಾಂಗ್ರೆಸ್ ರಾಮ ಮಂದಿರದ ಶಂಕುಸ್ಥಾಪನೆಯಿಂದ ದೂರ ಉಳಿದಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

“ನನ್ನ ಜನರಿಗೆ ಇನ್ನೂ ಅನೇಕ ದೇವಸ್ಥಾನಗಳಿಗೆ ಪ್ರವೇಶಿಸಲು ಅನುಮತಿಯಿಲ್ಲ. ಹೀಗಿರುವಾಗ ನಾನು ಆಯೋಧ್ಯೆಗೆ ಹೋದರೆ ಸಹಿಸಿಕೊಳ್ಳುವರೇ?” ಎಂದು ಪ್ರಶ್ನಿಸಿದ್ದಾರೆ.

ಎನ್‌ಡಿಎ 400 ಸೀಟ್ ಪಡೆಯಲಿದೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಖರ್ಗೆ, “ಜನರು ಬದಲಾವಣೆಗಾಗಿ ಹಾತೊರೆಯುತ್ತಿದ್ದಾರೆ. ಹಾಗಾಗಿ, ಮೂರನೇ ಬಾರಿಯ ಕನಸು ಈಡೇರುವುದಿಲ್ಲ” ಎಂದಿದ್ದಾರೆ. ಮತೊಮ್ಮೆ ಬಿಜೆಪಿ ಸರ್ಕಾರ ರಚಿಸುವ ಬಗ್ಗೆ ಎಚ್ಚರಿಕೆ ನೀಡಿದ ಖರ್ಗೆ, “ಅವರು ಈಗಲೇ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡುತ್ತಿದ್ದಾರೆ” ಎಂದಿದ್ದಾರೆ.

ಕಾಂಗ್ರೆಸ್ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿಬೇಕಿತ್ತು ಎಂದು ನಿಮಗೆ ಅನಿಸಿದೆಯಾ? ಎಂಬ ಪ್ರಶ್ನೆಗೆ ಉತ್ತರಿಸಿದ ಖರ್ಗೆ, ” ಅದು ವೈಯುಕ್ತಿಕ ನಂಬಿಕೆ. ಯಾರು, ಯಾವಾಗ ಬೇಕಾದರು ಅಲ್ಲಿಗೆ ಹೋಗಬಹುದು. ಮೋದಿ ಪೂಜಾರಿಯಲ್ಲ. ರಾಮ ವಿಗ್ರಹ ಪ್ರತಿಷ್ಠಾಪಿಸುವಲ್ಲಿ ಅವರೇಕೆ ಮುಂದಾಳತ್ವ ವಹಿಸಬೇಕು? ಅವರು ಅದನ್ನು ಕೇವಲ ರಾಜಕೀಯ ಉದ್ದೇಶಗಳಿಗಾಗಿ ಮಾಡಿದ್ದಾರೆ. ದೇವಾಲಯದ ಮೂರನೇ ಒಂದು ಭಾಗ ಇನ್ನೂ ಪೂರ್ಣಗೊಂಡಿಲ್ಲ. ಇದು ರಾಜಕೀಯ ಕಾರ್ಯವೇ ಅಥವಾ ಧಾರ್ಮಿಕ ಕಾರ್ಯವೇ? ರಾಜಕೀಯದೊಂದಿಗೆ ಧರ್ಮವನ್ನು ಏಕೆ ಬೆರೆಸುತ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

“ನನ್ನ ಜನರಿಗೆ ಇಂದಿಗೂ ಎಲ್ಲಾ ದೇವಾಲಯಗಳಲ್ಲಿ ಪ್ರವೇಶವಿಲ್ಲ. ರಾಮ ಮಂದಿರ ಬಿಡಿ, ನೀವು ಎಲ್ಲಿಗೆ ಹೋದರೂ, ಪ್ರವೇಶಕ್ಕಾಗಿ ಹೋರಾಟ ಮಾಡಬೇಕು. ಹಳ್ಳಿಯಲ್ಲಿ ಸಣ್ಣ ದೇವಾಲಯಗಳಿಗೂ ಅಲ್ಲಿನ ಪ್ರಬಲ ಜಾತಿಯವರು ಅನುಮತಿಸುವುದಿಲ್ಲ. ಕುಡಿಯುವ ನೀರಿಗೆ ಅವಕಾಶ ನೀಡುವುದಿಲ್ಲ. ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ನೀಡುವುದಿಲ್ಲ. ಕುದುರೆ ಮೇಲೆ ಮೆರವಣಿಗೆ ಹೋಗುವ ಮದು ಮಗನನ್ನು ಸಹ ನೀವು (ಬಿಜೆಪಿ-ಆರ್‌ಎಸ್‌ಎಸ್‌) ಸಹಿಸುವುದಿಲ್ಲ. ಜನರು ಅವರನ್ನು ಎಳೆದುಕೊಂಡು ಹೊಡೆಯುತ್ತಾರೆ. ದಲಿತರು ಮೀಸೆ ಬಿಟ್ಟರೆ ಸಹಿಸುವುದಿಲ್ಲ. ನಾನು ರಾಮ ಮಂದಿರಕ್ಕೆ ಹೋಗಿದ್ದರೆ, ಅವರು (ಮೋದಿ-ಬಿಜೆಪಿ) ಸಹಿಸಿಕೊಳ್ಳುತ್ತಿದ್ದರೇ? ಎಂದು ಖರ್ಗೆ ಕೇಳಿದ್ದಾರೆ.

ಇದನ್ನೂ ಓದಿ : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿದ ವಿದ್ಯಾರ್ಥಿಯನ್ನು ಅಮಾನತುಗೊಳಿಸಿದ ಟಿಐಎಸ್‌ಎಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...