Homeಮುಖಪುಟ‘ನನ್ನ ಫೋನ್ ಟ್ಯಾಪ್ ಮಾಡಲಾಗಿದೆ’: ಕೇಂದ್ರದ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

‘ನನ್ನ ಫೋನ್ ಟ್ಯಾಪ್ ಮಾಡಲಾಗಿದೆ’: ಕೇಂದ್ರದ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಾಟ್ಸಾಪ್ ಸ್ನೂಪಿಂಗ್ ವಿವಾದದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ ಮತ್ತು ಭದ್ರತಾ ಉಲ್ಲಂಘನೆಯ ಬಗ್ಗೆ ಕೇಂದ್ರ ಸರ್ಕಾರಕ್ಕೆ “ಸಂಪೂರ್ಣವಾಗಿ ತಿಳಿದಿದೆ” ಎಂದು ಆರೋಪಿಸಿದ್ದಾರೆ.

“ನನ್ನ ಫೋನ್ ಅನ್ನು ಟ್ಯಾಪ್ ಮಾಡಲಾಗಿದೆ, ಅದರ ಬಗ್ಗೆ ನನಗೆ ಮಾಹಿತಿ ಸಿಕ್ಕಿದೆ ಮತ್ತು ನನ್ನ ಬಳಿ ಪುರಾವೆಗಳಿವೆ. ಕೇಂದ್ರ ಸರ್ಕಾರ ಮತ್ತು ಎರಡು ಮೂರು ರಾಜ್ಯ ಸರ್ಕಾರಗಳ ಆದೇಶದ ಮೇರೆಗೆ ಇದು ನಡೆಯುತ್ತಿದೆ. ನಾನು ರಾಜ್ಯಗಳ ಹೆಸರನ್ನು ಹೇಳಲು ಇಚ್ಚಿಸುವುದಿಲ್ಲ ಆದರೆ ಅಲ್ಲಿ ಬಿಜೆಪಿ ಆಡಳಿತದಲ್ಲಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: WhatsApp ಮೂಲಕ ಗೂಢಚರ್ಯೆ: ದಂಗುಬಡಿಸುವ ಅಪಾಯಕಾರಿ ವಿದ್ಯಮಾನ ಬಯಲು!

ವಿಶ್ವದಾದ್ಯಂತ ಸುಮಾರು 1,400 ಜನರ ಮೇಲೆ ಬೇಹುಗಾರಿಕೆ ನಡೆಸಲು ಇಸ್ರೇಲಿ ಸಂಸ್ಥೆಯು ತನ್ನ ವೇದಿಕೆಯನ್ನು ದುರುಪಯೋಗಪಡಿಸಿಕೊಂಡಿದೆ ಎಂದು ವಾಟ್ಸಾಪ್ ಆರೋಪಿಸಿದೆ. ಭಾರತದಲ್ಲಿ, ಮಾನವ ಹಕ್ಕುಗಳ ಕಾರ್ಯಕರ್ತರು, ವಕೀಲರು ಮತ್ತು ಪತ್ರಕರ್ತರ ವಾಟ್ಸಾಪ್‌ ಸಂದೇಶಗಳನ್ನು ಟ್ಯಾಪ್‌ ಮಾಡಲಾಗಿದೆ ಎಂದು ತಿಳಿದುಬಂದ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ.

ಮಾಜಿ ಕೇಂದ್ರ ಸಚಿವ ಪ್ರಫುಲ್ ಪಟೇಲ್ ಮತ್ತು ಮಾಜಿ ಸಂಸತ್ ಸದಸ್ಯ ಸಂತೋಷ್ ಭಾರತೀಯ ಕೂಡ ಈ ವಾಟ್ಸಾಪ್‌ ಬೇಹುಗಾರಿಕೆಗೆ ಒಳಗಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ದೇಶಾದ್ಯಂತ ಗೂಢಚರ್ಯೆ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಬ್ಯಾನರ್ಜಿ, ವಾಟ್ಸಾಪ್ ವಿಷಯದ ಬಗ್ಗೆ ತನಿಖೆ ನಡೆಸುವಂತೆ ಪ್ರಧಾನಿಯನ್ನು ಒತ್ತಾಯಿಸುವುದಾಗಿ ಹೇಳಿದ್ದಾರೆ.

“ನಮ್ಮ ವಾಕ್ ಸ್ವಾತಂತ್ರ್ಯ ಎಲ್ಲಿದೆ? ಇದು ಯಾವ ರೀತಿಯ ಸ್ವಾತಂತ್ರ್ಯ? ನಾವು ಫೋನ್‌ನಲ್ಲಿ ಮುಕ್ತವಾಗಿ ಮಾತನಾಡಲು ಸಾಧ್ಯವಿಲ್ಲ” ಎಂದು ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನರು ವಾಟ್ಸಾಪ್ ನಲ್ಲಿ ಸೋರಿಯಾಗಲು ಸಾಧ್ಯವಿಲ್ಲ ಎಂದು ಭಾವಿಸಿದ್ದರು. ಆದರೆ ಅದು ಈಗ ಸಾಧ್ಯವಾಗಿದೆ. ಜೊತೆಗೆ “ಲ್ಯಾಂಡ್‌ಲೈನ್ ಫೋನ್‌ಗಳು ಮತ್ತು ಮೊಬೈಲ್ ಫೋನ್‌ಗಳು” ಸಹ ಸುರಕ್ಷಿತವಾಗಿಲ್ಲ ಎಂದು ಅವರು ಹೇಳಿದ್ದಾರೆ.

ಇನ್ನು ಬಿಜೆಪಿ ಮುಖಂಡ ಕೈಲಾಶ್‌ ವಿಜಯವರ್ಗಿಯಾರವರ ಮಮತಾ ಬ್ಯಾನರ್ಜಿಯವರು ಆರೋಪವನ್ನು ತಳ್ಳಿ ಹಾಕಿದ್ದಾರೆ. “ಇತರರ ಮೇಲೆ ಕಣ್ಣಿಡಲು ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಅಭ್ಯಾಸವಾಗಿದೆ. ರಾಜೀವ್ ಕುಮಾರ್ (ಮಾಜಿ ಕೋಲ್ಕತಾ ಪೊಲೀಸ್ ಆಯುಕ್ತರು) ಇಂತಹ ಸ್ನೂಪಿಂಗ್‌ಗೆ ವ್ಯವಸ್ಥೆ ಮಾಡಿದ್ದರು ”ಎಂದು ವಿಜಯವರ್ಗಿಯಾ ಹೇಳಿದ್ದಾರೆ.

ವಿವಾದದ ಕೇಂದ್ರದಲ್ಲಿರುವ ಇಸ್ರೇಲಿ ಸಾಫ್ಟ್‌ವೇರ್ ಅನ್ನು ಎನ್‌ಎಸ್‌ಒ ಗ್ರೂಪ್ ಅಭಿವೃದ್ಧಿಪಡಿಸಿದೆ ಮತ್ತು ಇದನ್ನು ಹೆಚ್ಚಾಗಿ ಪೆಗಾಸಸ್ ಎಂದು ಕರೆಯಲಾಗುತ್ತದೆ. ತಾಂತ್ರಿಕವಾಗಿ ಮಾಲ್ವೇರ್, ಪೆಗಾಸಸ್ ಗುರಿಯ ಫೋನ್‌ನ ಸಂಪೂರ್ಣ ನಿಯಂತ್ರಣವನ್ನು ಅನುಮತಿಸುತ್ತದೆ, ಫೈಲ್‌ಗಳು, ಸಂವಹನ ಮತ್ತು ಮೈಕ್ರೊಫೋನ್ ಮತ್ತು ಕ್ಯಾಮರಾಗಳಿಗೆ ಪ್ರವೇಶವನ್ನು ಅದು ಸಕ್ರಿಯಗೊಳಿಸುತ್ತದೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...