Homeಮುಖಪುಟಏರ್‌ಸ್ಟ್ರೈಕ್‌‌ ಮೂಲಕ ಭಾರತದ ಭೂಪ್ರದೇಶಕ್ಕೆ ಬಾಂಬ್ ದಾಳಿ ಮಾಡಿದ ಮಯನ್ಮಾರ್‌ ಸೇನೆ

ಏರ್‌ಸ್ಟ್ರೈಕ್‌‌ ಮೂಲಕ ಭಾರತದ ಭೂಪ್ರದೇಶಕ್ಕೆ ಬಾಂಬ್ ದಾಳಿ ಮಾಡಿದ ಮಯನ್ಮಾರ್‌ ಸೇನೆ

- Advertisement -
- Advertisement -

ಮಿಜೋರಾಂನ ಚಂಫೈ ಜಿಲ್ಲೆಯ ಸಮೀಪವಿರುವ ಪ್ರಮುಖ ಬಂಡುಕೋರರ ತರಬೇತಿ ಶಿಬಿರವನ್ನು ಗುರಿಯಾಗಿಸಿಕೊಂಡು ನಡೆಸಿದ ವೈಮಾನಿಕ ದಾಳಿಯ ಸಂದರ್ಭದಲ್ಲಿ ಮಯನ್ಮಾರ್ ಸೈನ್ಯವೂ ಕಳೆದ ಮಂಗಳವಾರ ಭಾರತೀಯ ಭೂಪ್ರದೇಶದೊಳಗೆ ಬಾಂಬ್ ಅನ್ನು ಬೀಳಿಸಿದೆ ಎಂದು ಅಧಿಕಾರಿ ಮತ್ತು ಸ್ಥಳೀಯ ನಿವಾಸಿಯೊಬ್ಬರು ಹೇಳಿದ್ದಾರೆ ಎಂದು Scroll.in ವರದಿ ಮಾಡಿದೆ.

ಮಯನ್ಮಾರ್ ಸೇನೆಯು ಬಂಡುಕೋರರಾದ ಚಿನ್ ರಾಷ್ಟ್ರೀಯ ಸೇನೆಯ ಪ್ರಧಾನ ಕಛೇರಿಯಾದ ವಿಕ್ಟೋರಿಯಾ ಕ್ಯಾಂಪ್ ಮೇಲೆ ವೈಮಾನಿಕ ದಾಳಿಯನ್ನು ನಡೆಸಿದೆ. ಚಿನ್ ರಾಷ್ಟ್ರೀಯ ಸೇನೆಯು ಮಯನ್ಮಾರ್ ಸೈನ್ಯದೊಂದಿಗೆ ಸಂಘರ್ಷ ನಡೆಸುತ್ತಿದ್ದು, ಇದು ಅಲ್ಲಿನ ಜನಾಂಗೀಯ ಸಶಸ್ತ್ರ ಗುಂಪುಗಳಲ್ಲಿ ಒಂದಾಗಿದೆ. ವಿಕ್ಟೋರಿಯಾ ಕ್ಯಾಂಪ್‌ ಭಾರತ-ಮಯನ್ಮಾರ್ ಗಡಿಯ ಟಿಯು ನದಿಯ ಉದ್ದಕ್ಕೂ ಇದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ಮಧ್ಯಾಹ್ನ 3.30 ಕ್ಕೆ ಮಯನ್ಮಾರ್ ಸೈನ್ಯದ ಜೆಟ್‌ಗಳಿಂದ ಬಾಂಬ್ ಸ್ಫೋಟ ಸಂಭವಿಸಿದ್ದು, ಕ್ಯಾಂಪ್‌‌ ಸಮೀಪದಲ್ಲಿರುವ ವಫೈನಲ್ಲಿರುವ ಹಳ್ಳಿಯಿಂದ ಸ್ಫೋಟಗಳು ಕೇಳಿಬರುತ್ತಿವೆ ಎಂದು ಸ್ಥಳೀಯ ನಿವಾಸಿ ಮಾಯೆಂಗಾ Scroll.in ಗೆ ತಿಳಿಸಿದ್ದಾರೆ ಎಂದು ವರದಿ ಹೇಳಿದೆ.

“ಒಂದು ಬಾಂಬ್ ಮಿಜೋರಾಂ ಭಾಗದಲ್ಲಿ ಬಿದ್ದಿದ್ದು… ಕ್ಷಿಪಣಿಯು ಭಾರತದ ಬದಿಯಲ್ಲಿರುವ ಟಿಯು ನದಿಯಿಂದ 30 ಮೀಟರ್ ದೂರದಲ್ಲಿ ಇಳಿಯಿತು” ಎಂದು ಅವರು ಹೇಳಿದ್ದಾರೆ.

ಜಿಲ್ಲೆಯ ಫರ್ಕವಾನ್ ಗ್ರಾಮದ ನಿವಾಸಿಗಳು ಮತ್ತು ನದಿಯ ಆಚೆಯ ಪ್ರದೇಶಗಳು ಕೂಡಾ ಬಾಂಬ್ ಸ್ಫೋಟದ ಶಬ್ದವನ್ನು ಕೇಳಿರಬಹುದೆಂದು ಚಂಫೈನಲ್ಲಿನ ಹಿರಿಯ ಅಧಿಕಾರಿಯೊಬ್ಬರು ಘಟನೆಯನ್ನು ಖಚಿತಪಡಿಸಿದ್ದಾರೆ.

“ಒಂದು ಕ್ಷಿಪಣಿ ಭಾರತದ ಕಡೆ ಬಿದ್ದಿದೆ ಎಂದು ನಾವು ಕೇಳಿದ್ದೇವೆ. ನಾವು ವಾಸ್ತವಾಂಶಗಳನ್ನು ಖಚಿತಪಡಿಸಿಕೊಳ್ಳಲು ಸ್ಥಳ ಪರಿಶೀಲನೆಯನ್ನು ಮಾಡುತ್ತಿದ್ದು, ವರದಿಗಳಿಗಾಗಿ ಕಾಯುತ್ತಿದ್ದೇವೆ. ಟಿಯು ನದಿಯಿಂದ ಮರಳು ಸಂಗ್ರಹಿಸಲು ಹೋದ ಭಾರತೀಯ ಟ್ರಕ್‌ನ ವಿಂಡ್‌ಶೀಲ್ಡ್ ಹಾನಿಗೊಳಗಾಗಿರುವುದು ಕಂಡುಬಂದಿದ್ದು, ಖಚಿತವಾಗಿದೆ” ಎಂದು ಅಧಿಕಾರಿ ಹೇಳಿದ್ದಾರೆ.

ಘಟನೆಯಿಂದಾಗಿ ಗಡಿ ಗ್ರಾಮಗಳಲ್ಲಿ ಆತಂಕ ಮನೆ ಮಾಡಿದೆ. ಪ್ರಭಾವಿ ಸಮುದಾಯ ಸಂಘಟನೆಯಾದ ಯಂಗ್ ಮಿಜೋ ಅಸೋಸಿಯೇಷನ್‌ನ ಸದಸ್ಯರೂ ಆಗಿರುವ ಮಾಯೆಂಗಾ ಅವರು, ಬುಧವಾರ ಮಯನ್ಮಾರ್ ಮಿಲಿಟರಿ ಮತ್ತೆ ಎರಡು ಬಾರಿ ಬಾಂಬ್‌ಗಳನ್ನು ಬೀಳಿಸಿದೆ ಎಂದು ಹೇಳಿದ್ದಾರೆ.

“ನಾವು ಈಗ ಭಯಭೀತರಾಗಿದ್ದೇವೆ. ಅನೇಕ ರೈತರು ಮತ್ತು ಕಾರ್ಮಿಕರು ಭಯದಿಂದ ತಮ್ಮ ಕೆಲಸವನ್ನು ನಿಲ್ಲಿಸಿದ್ದಾರೆ … ಮಯನ್ಮಾರ್ ಮಿಲಿಟರಿ ಜೆಟ್ ಫೈಟರ್‌ಗಳು ಭಾರತದ ನೆಲದ ಮೇಲೆ ಬಾಂಬ್ ದಾಳಿ ಮಾಡುವುದನ್ನು ಮತ್ತು ಭಾರತೀಯ ವಾಯುಪ್ರದೇಶದ ಮೇಲೆ ಅಸಾಧ್ಯ ವೇಗದಿಂದ ಹಾರುವುದನ್ನು ತಡೆಯಲು ಭಾರತವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಾವು ತೀವ್ರವಾಗಿ ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಮಂಗಳವಾರ ನಡೆದ ವೈಮಾನಿಕ ಬಾಂಬ್ ದಾಳಿಯಲ್ಲಿ ಚಿನ್ ನ್ಯಾಷನಲ್ ಆರ್ಮಿಯ ಐವರು ಯೋಧರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

ಭಾರತದ ಕಡೆ ಬಾಂಬ್‌ಗಳನ್ನು ಬೀಳಿಸಲಾಗಿದೆಯೇ ಎಂಬುದನ್ನು ಭಾರತ ಸರ್ಕಾರ ಇನ್ನೂ ಅಧೀಕೃತವಾಗಿ ಖಚಿತಪಡಿಸಿಲ್ಲ.

ನೊಬೆಲ್ ಪ್ರಶಸ್ತಿ ವಿಜೇತ ಆಂಗ್ ಸಾಂಗ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರದಿಂದ ಫೆಬ್ರವರಿ 1, 2021 ರಂದು ಸೇನೆಯು ಅಧಿಕಾರವನ್ನು ವಶಪಡಿಸಿಕೊಂಡಾಗಿನಿಂದ ಮಯನ್ಮಾರ್ ಗೊಂದಲದಲ್ಲಿದೆ. ಅಧಿಕಾರಿಗಳು ಪ್ರಜಾಪ್ರಭುತ್ವದ ಪರವಾದ ಪ್ರತಿಭಟನೆಗಳಿಗೆ ಕ್ರೂರವಾಗಿ ವರ್ತಿಸುತ್ತಿದ್ದು, ಲಕ್ಷಾಂತರ ಜನರನ್ನು ಸ್ಥಳಾಂತರಿಸಿದ್ದಾರೆ. ಮಯನ್ಮಾರ್‌ನಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲು ಚಿನ್ ರಾಷ್ಟ್ರೀಯ ಸೇನೆಯು ಇತರ ಬಂಡಾಯ ಗುಂಪುಗಳೊಂದಿಗೆ ಹೋರಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...