Homeಅಂತರಾಷ್ಟ್ರೀಯಮಯನ್ಮಾರ್ ತುರ್ತುಪರಿಸ್ಥಿತಿ: ಮಿಲಿಟರಿ ಪಡೆಯ ಗುಂಡೇಟಿಗೆ 50 ಪ್ರತಿಭಟನಾಕಾರರು ಬಲಿ

ಮಯನ್ಮಾರ್ ತುರ್ತುಪರಿಸ್ಥಿತಿ: ಮಿಲಿಟರಿ ಪಡೆಯ ಗುಂಡೇಟಿಗೆ 50 ಪ್ರತಿಭಟನಾಕಾರರು ಬಲಿ

- Advertisement -
- Advertisement -

ಮಯನ್ಮಾರ್‌ನಲ್ಲಿ ಮಿಲಿಟರಿ ಪಡೆಗಳು ಕನಿಷ್ಠ 50 ಪ್ರತಿಭಟನಾಕಾರರನ್ನು ಗುಂಡಿಕ್ಕಿ ಕೊಂದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅಲ್ಲಿನ ಆಡಳಿತಾರೂಢ ಪಕ್ಷ ಒಂದು ವರ್ಷ ತುರ್ತುಪರಿಸ್ಥಿತಿ ಹೇರಿ, ಮಿಲಿಟರಿ ಆಡಳಿತಕ್ಕೆ ಅನುವು ಮಾಡಿಕೊಟ್ಟಿದ್ದರಿಂದ ಈ ಪ್ರತಿಭಟನೆ ಆರಂಭವಾಗಿದ್ದು, ಅಂದಿನಿಂದಲೂ ಪ್ರತಿಭಟನಾಕಾರರ ಮೇಲೆ ದಬ್ಬಾಳಿಕೆ, ದೌರ್ಜನ್ಯ ನಡೆಯುತ್ತಿದೆ.

“50 ಜನ ಪ್ರತಿಭಟನಾಕಾರರು ಮಿಲಿಟರಿ ಪಡೆಯ ಗುಂಡೇಟಿಗೆ ಬಲಿಯಾಗಿದ್ದಾರೆ. ಇದು ಸಶಸ್ತ್ರ ಪಡೆಗಳಿಗೆ ಅವಮಾನಕರವಾದ ದಿನ” ಎಂದು ಪದಚ್ಯುತ ಶಾಸಕರು ಸ್ಥಾಪಿಸಿದ ಜುಂಟಾ ವಿರೋಧಿ ಗುಂಪಿನ ಸಿಆರ್‌ಪಿಹೆಚ್‌ನ ವಕ್ತಾರ ಡಾ.ಸಾಸಾ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಶನಿವಾರ ಬೆಳಿಗ್ಗೆ ಯಾಂಗೊನ್‌ನ ದಲಾ ಉಪನಗರ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಜನಸಮೂಹದ ಮೇಲೆ ಭದ್ರತಾ ಪಡೆಗಳು ಗುಂಡು ಹಾರಿಸಿದಾಗ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ಮ್ಯಾನ್ಮಾರ್ ನೌ ವರದಿ ಮಾಡಿದೆ. ಕನಿಷ್ಠ 10 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ನಗರದ ಇನ್ಸೈನ್ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ 21 ವರ್ಷದೊಳಗಿನ ಫುಟ್ಬಾಲ್ ತಂಡದಲ್ಲಿ ಆಡುವ ಯುವಕ ಸೇರಿದಂತೆ ಮೂವರನ್ನು ಗುಂಡಿಕ್ಕಿ ಕೊಲ್ಲಲಾಯಿತು ಎಂದು ನೆರೆಹೊರೆಯವರು ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಯನ್ಮಾರ್‌‌ ಮೇಲೆ ಹಿಡಿತ ಸಾಧಿಸಿದ ಸೇನೆ; ಆಂಗ್ ಸಾನ್ ಸೂಕಿ ಬಂಧನ

ಮ್ಯಾಂಡಲೆನಲ್ಲಿ ನಡೆದ ವಿವಿಧ ಘಟನೆಗಳಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಎಂದು ಮ್ಯಾನ್ಮಾರ್ ನೌ ಹೇಳಿದೆ. ಮ್ಯಾಂಡಲೆ ಬಳಿಯ ಸಾಗಿಂಗ್ ಪ್ರದೇಶ, ಪೂರ್ವದ ಲಾಶಿಯೊ ಪಟ್ಟಣ, ಬಾಗೊ ಪ್ರದೇಶದಲ್ಲಿ, ಯಾಂಗೊನ್ ಬಳಿ ಮತ್ತು ಇತರೆಡೆಗಳಿಂದ ಸಾವುಗಳು ವರದಿಯಾಗಿವೆ ಎಂದು ಅದು ಹೇಳಿದೆ.

ಶನಿವಾರ ಒಟ್ಟು 50 ಜನರು ಸಾವನ್ನಪ್ಪಿದ್ದಾರೆ ಎಂದು ಮ್ಯಾನ್ಮಾರ್ ನೌ ಹೇಳಿದೆ. ಪ್ರತಿಭಟನಾಕಾರರ ಕೊಲೆಗಳನ್ನು ನಿಲ್ಲಿಸಿ ಎಂದು ವಿಶ್ವಸಂಸ್ಥೆ ಒತ್ತಾಯಿಸಿತ್ತು. ಆದರೆ ಅಲ್ಲಿನ ಮಿಲಿಟರಿ ಪಡೆಗಳು ಪ್ರತಿಭಟನೆಯನ್ನು ಹತ್ತಿಕ್ಕಲು ಈ ರೀತಿ ಪ್ರಯತ್ನಿಸುತ್ತಿದೆ.

ಮಯನ್ಮಾರ್‌‌ನಲ್ಲಿ ಆಡಳಿತವನ್ನು ಸೇನೆಯು ಕ್ಷಿಪ್ರಕ್ರಾಂತಿ ಮೂಲಕ ವಶಕ್ಕೆ ಪಡೆದುಕೊಂಡಿದ್ದು, ಇದನ್ನು ವಿರೋಧಿಸಿ ಸಾವಿರಾರು ಪ್ರತಿಭಟನಾಕಾರರು ಮಯನ್ಮಾರ್‌‌ನಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಮ್ಯಾನ್ಮಾರ್‌ನಲ್ಲಿನ ಫೆ.1ರಿಂದಲೂ ಸೇನಾದಂಗೆ ವಿರುದ್ಧ ಜನರು ತೀವ್ರವಾಗಿ ಪ್ರತಿಭಟಿಸುತ್ತಿದ್ದಾರೆ. ಇದನ್ನು ಹತ್ತಿಕ್ಕಲು ಸೇನಾಡಳಿತವು ಯತ್ನಿಸುತ್ತಿದೆ. ಈ ಗಲಭೆಯಲ್ಲಿ ಈವರೆಗೆ ಸುಮಾರು 380ಕ್ಕೂ ಹೆಚ್ಚು ಪ್ರತಿಭಟನಕಾರರು ಹತರಾಗಿದ್ದಾರೆ.


ಇದನ್ನೂ ಓದಿ: ಪ್ರತಿಭಟನಾಕಾರರ ಕೊಲೆಗಳನ್ನು ನಿಲ್ಲಿಸಿ: ಮ್ಯಾನ್ಮಾರ್ ಸೈನ್ಯಕ್ಕೆ ವಿಶ್ವಸಂಸ್ಥೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...