Homeಅಂತರಾಷ್ಟ್ರೀಯಮ್ಯಾನ್ಮಾರ್, ಥೈಲ್ಯಾಂಡ್ ಭೂಕಂಪ: 1000 ದಾಟಿದ ಮೃತರ ಸಂಖ್ಯೆ

ಮ್ಯಾನ್ಮಾರ್, ಥೈಲ್ಯಾಂಡ್ ಭೂಕಂಪ: 1000 ದಾಟಿದ ಮೃತರ ಸಂಖ್ಯೆ

- Advertisement -
- Advertisement -

ಮ್ಯಾನ್ಮಾರ್‌ನಲ್ಲಿ ಶುಕ್ರವಾರ (ಮಾ.28) ಸಂಭವಿಸಿದ 7.7 ತೀವ್ರತೆಯ ಪ್ರಬಲ ಭೂಕಂಪದಿಂದ ಸಾವಿಗೀಡದವರ ಸಂಖ್ಯೆ 1,000 ದಾಟಿದೆ ಎಂದು ಅಲ್ಲಿನ ಸೇನೆಯನ್ನು ಉಲ್ಲೇಖಿಸಿ ಬಿಬಿಸಿ ವರದಿ ತಿಳಿಸಿದೆ.

ನ್ಯೂಯಾರ್ಕ್ ಟೈಮ್ಸ್ ವರದಿ ಪ್ರಕಾರ, ಭೂಕಂಪದಲ್ಲಿ ಗಾಯಗೊಂಡವರ ಸಂಖ್ಯೆ 2,300ಕ್ಕೆ ಏರಿಕೆಯಾಗಿದೆ. ಹೆಚ್ಚಿನ ಸಾವು-ನೋವುಗಳು ಮ್ಯಾನ್ಮಾರ್‌ನ ಎರಡನೇ ಅತಿದೊಡ್ಡ ನಗರ ಮತ್ತು ಭೂಕಂಪದ ಕೇಂದ್ರಬಿಂದುವಿಗೆ ಹತ್ತಿರವಿರುವ ಮಂಡಲೆ ಪ್ರದೇಶದಲ್ಲಿ ಸಂಭವಿಸಿವೆ.

ಭೂಕಂಪ ಸಂಭವಿಸಿದ ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ನಲ್ಲಿ ಬದುಕುಳಿದವರನ್ನು ಹುಡುಕಲು ರಕ್ಷಣಾ ತಂಡಗಳು ಕಾರ್ಯಾಚರಣೆ ಮುಂದುವರೆಸಿವೆ. ಭೂಕಂಪದಿಂದ ಮ್ಯಾನ್ಮಾರ್‌ನ ವಿವಿಧ ಪ್ರದೇಶಗಳಲ್ಲಿ ಕಟ್ಟಡಗಳು ಕುಸಿದಿವೆ. ಸೇತುವೆ, ರಸ್ತೆಗಳಿಗೆ ಹಾನಿಯಾಗಿದೆ.

ಥಾಯ್ ರಾಜಧಾನಿ ಬ್ಯಾಂಕಾಕ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಗಗನಚುಂಬಿ ಕಟ್ಟಡ ಕುಸಿದು ಬಿದ್ದು, ಅವಶೇಷಗಳಡಿ ಸಿಲುಕಿರುವ ಕಾರ್ಮಿಕರಿ ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ. ಥೈಲ್ಯಾಂಡ್‌ ಮತ್ತು ಮ್ಯಾನ್ಮಾರ್ ಎರಡೂ ಕಡೆಯೂ ರಕ್ಷಣಾ ತಂಡಗಳು ಜನರನ್ನು ಅವಶೇಷಗಳ ಅಡಿಯಿಂದ ತೆಗೆಯಲು ಹರಸಾಹಸಪಡುತ್ತಿವೆ ಎಂದು ವರದಿಯಾಗಿದೆ.

“ನಗರದಾದ್ಯಂತ ಸುಮಾರು 10 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ ಹೆಚ್ಚಿನವರು ಗಗನಚುಂಬಿ ಕಟ್ಟಡ ಕುಸಿತದಲ್ಲಿ ಬಲಿಯಾಗಿದ್ದಾರೆ. ಪ್ರವಾಸಿಗರನ್ನು ಆಕರ್ಷಿಸುವ ಚತುಚಕ್ ವಾರಾಂತ್ಯದ ಮಾರುಕಟ್ಟೆಯ ಬಳಿ ಈ ಬೃಹತ್ ಕಟ್ಟಡ ಕುಸಿತವಾಗಿದ್ದು, ಇತ್ತೀಚಿನ ಮಾಹಿತಿ ಪ್ರಕಾರ 100ಕ್ಕೂ ಹೆಚ್ಚು ಕಾರ್ಮಿಕರ ಸುಳಿವು ಇನ್ನೂ ಸಿಕ್ಕಿಲ್ಲ” ಎಂದು ಬ್ಯಾಂಕಾಕ್ ಗವರ್ನರ್ ಚಾಡ್‌ಚಾರ್ಟ್ ಸಿಟ್ಟಿಪುಂಟ್ ಸುದ್ದಿ ಸಂಸ್ಥೆ ಎಎಫ್‌ಪಿಗೆ ತಿಳಿಸಿದ್ದಾರೆ.

ಭಾರತ ಶೋಧ ಮತ್ತು ರಕ್ಷಣಾ ತಂಡ, ವೈದ್ಯಕೀಯ ತಂಡ ಹಾಗೂ ಅಗತ್ಯ ಸಾಮಗ್ರಿಗಳನ್ನು ಮ್ಯಾನ್ಮಾರ್‌ಗೆ ಕಳುಹಿಸಿದೆ. ಭೂಕಂಪದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳನ್ನು ಗುರುತಿಸಲು ಮತ್ತು ಸಹಾಯ ಮಾಡಲು ಭಾನುವಾರ 50 ಜನರ ತಂಡವನ್ನು ಕಳುಹಿಸುವುದಾಗಿ ಮಲೇಷ್ಯಾ ತಿಳಿಸಿದೆ.
ಪರಿಹಾರ ಕಾರ್ಯಗಳನ್ನು ಪ್ರಾರಂಭಿಸಲು ವಿಶ್ವಸಂಸ್ಥೆಯು 5 ಮಿಲಿಯನ್ ಡಾಲರ್‌ಗಳ ನೆರವು ನಿಗದಿಪಡಿಸಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಸಹಾಯ ಮಾಡುವುದಾಗಿ ಹೇಳಿದ್ದಾರೆ. ರಷ್ಯಾದ ರಾಜ್ಯ ಸುದ್ದಿ ಸಂಸ್ಥೆ ಟಾಸ್‌ನ ವರದಿಯ ಪ್ರಕಾರ, ರಷ್ಯಾದ ತುರ್ತು ಸಚಿವಾಲಯವು 120 ರಕ್ಷಣಾ ಕಾರ್ಯಕರ್ತರು ಮತ್ತು ಅಗತ್ಯ ಸಾಮಾಗ್ರಿಗಳನ್ನು ಹೊತ್ತ ಎರಡು ವಿಮಾನಗಳನ್ನು ಕಳುಹಿಸಿದೆ. ಚೀನಾ ಕೂಡ ಬದುಕುಳಿದವರಿಗೆ ಕಂಬಳಿ ಮತ್ತು ಆಹಾರವನ್ನು ಕಳುಹಿಸಿದೆ. ಜೊತೆಗೆ ಡ್ರೋನ್‌ಗಳು ಮತ್ತು ಇತರ ಉಪಕರಣಗಳೊಂದಿಗೆ ರಕ್ಷಣಾ ತಂಡಗಳನ್ನು ಕಳುಹಿಸಿಕೊಟ್ಟಿದೆ ಎಂದು ಎನ್‌ವೈಟಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪ್ಯಾಲೆಸ್ತೀನ್ ಬೆಂಬಲಿಸಿದ ನೂರಾರು ವಿದ್ಯಾರ್ಥಿಗಳಿಗೆ ಸ್ವಯಂ ಗಡಿಪಾರು ಸೂಚನೆ ನೀಡಿದ ಟ್ರಂಪ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...