Homeಮುಖಪುಟವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾದ ಮೈಸೂರಿನ ಫ್ರಿ ಕಾಶ್ಮಿರ ಫಲಕ ವಿವಾದ..

ವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾದ ಮೈಸೂರಿನ ಫ್ರಿ ಕಾಶ್ಮಿರ ಫಲಕ ವಿವಾದ..

- Advertisement -
- Advertisement -

ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ‌‌ ಸೂಚಿಸಿ ನಡೆಸಲಾದ‌‌ ಪ್ರತಿಭಟನೆಯಲ್ಲಿ ನಳಿನಿ ಬಾಲಕುಮಾರ್ ಎಂಬ ವಿದ್ಯಾರ್ಥಿನಿ ‘ಫ್ರಿ ಕಾಶ್ಮಿರ’ ಎಂಬ ಭಿತ್ತಿ ಫಲಕ ಪ್ರದರ್ಶಿಸಿದರು ಎಂಬುವ ವಿಚಾರ ಈಗ ವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾಗಿದೆ.

ನಳಿನಿ ಬಾಲಕುಮಾರ್ ವಿರುದ್ದ ಮೈಸೂರಿನ ಜಯಲಕ್ಷ್ಮಿಪುರಂ ಠಾಣೆಯಲ್ಲಿ ರಾಜದ್ರೋಹದ ಪ್ರಕರಣ ದಾಖಲಾದ‌ ಕೂಡಲೇ ಪ್ರೀ ಕಾಶ್ಮಿರ ಫಲಕದ ಅರ್ಥ ಕಾಶ್ಮೀರವನ್ನು ಸ್ವತಂತ್ರಗೊಳಿಸುವುದು ಎಂದು ಅರ್ಥೈಸಿಕೊಂಡ ಬಲಪಂಥೀಯ, ಬಿಜೆಪಿ ಒಲವಿನ ವಕೀಲರು ಮೈಸೂರು ವಕೀಲರ ಸಂಘದ ಮೇಲೆ ಒತ್ತಡ ತಂದು ನಳಿನಿ ಬಾಲಕುಮಾರ್ ಅವರಿಗೆ ಪ್ರಕರಣದಲ್ಲಿ ವಕಾಲತ್ತು ವಹಿಸದಂತೆ ನಿರ್ಣಯ ಕೈಗೊಂಡಿತು. ಈ ನಡೆಯನ್ನು ರಾಜ್ಯದ ಹಲವರು ಪ್ರಜಾಪ್ರಭುತ್ವವಾದಿಗಳು ಟೀಕಿಸಿದ್ದರು.

ಈ ನಡುವೆ ಕಾಶ್ಮಿರದಲ್ಲಿ ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇಟ್ಟಿದ್ದು, ಇಂಟರ್ನೆಟ್ ಸ್ಥಗಿತ ಮಾಡಲಾಗಿದೆ ಇಂತಹ ಪರಿಸ್ಥಿತಿಯಲ್ಲಿ‌ ಕಾಶ್ಮೀರದ ಸಾಮಾನ್ಯ ಜನರಿಗೆ ಬಂಧನದಿಂದ ಸ್ವಾತಂತ್ರ್ಯ ನೀಡಿ ಎಂಬ ಅರ್ಥದಲ್ಲಿ ತಾನು ಫ್ರಿ ಕಾಶ್ಮೀರ ಫಲಕ ಹಿಡಿದುದ್ದಾಗಿ ವಿದ್ಯಾರ್ಥಿನಿ ಸ್ಪಷ್ಟಪಡಿಸಿದ್ದಾರೆ.

ಜನರ ಪರವಾಗಿ ಧ್ವನಿ ಎತ್ತಿ ಸರ್ಕಾರವನ್ನು ಟೀಕಿಸುವುದು ಪ್ರಜೆಗಳಿಗೆ ಇರುವ ಸಂವಿಧಾನಿಕ ಸ್ವತಂತ್ರ ಅದನ್ನು ಯಾರು ರಾಜದ್ರೋಹದಂತಹ ಗಂಭೀರ ಪ್ರಕರಣವನ್ನು ವಿದ್ಯಾರ್ಥಿಗಳ ಮೇಲೆ ದಾಖಲಿಸಿರುವುದು ಸರಿಯಲ್ಲ ಎಂದು ವಾದಿಸಿರುವ ಹಲವಾರು ಜನಪರ ನಿಲುವಿರುವ, ಪ್ರಜಾಸತ್ತಾತ್ಮಕ ಅಲೋಚನೆಯ, ಜಾತ್ಯಾತೀತ ವಕೀಲರುಗಳು ನಳಿನಿ‌ ಬಾಲಕುಮಾರ್ ಪರವಾಗಿ ವಕಾಲತ್ತು ವಹಿಸಿದ್ದರು. ರಾಜ್ಯದ ಹಲವು ಭಾಗಗಳಿಂದ ಸುಮಾರು 50ಕ್ಕೂ ಹೆಚ್ಚು ವಕೀಲರು ಮೈಸೂರಿಗೆ ಆಗಮಿಸಿ ವಿದ್ಯಾರ್ಥಿನಿಗೆ ಧೈರ್‍ಯ ತುಂಬಿದ್ದರು. ಅವರಲ್ಲಿ ರವಿವರ್ಮ ಕುಮಾರ್, ಸಿ.ಎಸ್.ದ್ವಾರಕನಾಥ್, ಎಸ್.ಶಂಕರಪ್ಪ,‌ ಬಿ.ಟಿ.ವೆಂಕಟೇಶ್‌ ಪ್ರಮುಖರಾಗಿದ್ದಾರೆ.

ಆದರೆ ಮೈಸೂರು ವಕೀಲರ ಸಂಘ ಮತ್ತು ಬಲಪಂಥೀಯ ಅಲೋಚನೆಯ ವಕೀಲರು ಯಾವುದೇ ಬೆಲೆ ತೆತ್ತದಾರೂ ಸರಿ‌ ನಳಿನಿ‌ ಬಾಲಕುಮಾರ್ ಪರ ವಾದಿಸಲು ಸಿದ್ದವಿರುವ ವಕೀಲರನ್ನು ವಕಾಲತ್ತಿನಿಂದ ವಾಪಸ್ಸು ‌ತೆಗೆಸಲು‌ ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ನಳಿನಿ ಪರವಾಗಿ ವಾದ ಮಾಡಲು ಮುಂದಾದ ಪಿ.ಪಿ.ಬಾಬುರಾಜ್ ಎಂಬ‌‌ ಪ್ರಗತಿಪರ ವಕೀಲರನ್ನು ಮೈಸೂರು ವಕೀಲರ ಸಂಘದಿಂದ ಉಚ್ಚಾಟನೆ ಮಾಡಿದ್ದಾರೆ.

ಪಿ.ಪಿ.ಬಾಬುರಾಜ್

ಈಗಾಗಲೇ ಒಂದು ಸುತ್ತಿನ ನೀರಿಕ್ಷಿಣಾ ಜಾಮೀನು ಸಂಭವಿಸಿದ ವಾದ ಮಂಡನೆಯಾಗಿದ್ದು ದಿನಾಂಕ‌ 24/01/2020 ಕ್ಕೆ ಮತ್ತೊಂದು‌ ಸುತ್ತಿನ‌ ವಾದ ಮಂಡನೆ‌ ಮೈಸೂರಿನ‌ ನ್ಯಾಯಾಲಯದಲ್ಲಿ‌‌ ಮಂಡನೆ ಆಗಲಿದ್ದು ಇದಕ್ಕೆ ಎರಡು ಬಣಗಳು ಭಾರಿ‌ ಸಿದ್ದತೆ ನಡೆಸಿವೆ. ಶುಕ್ರವಾರದಂದು ಮೈಸೂರು ನ್ಯಾಯಾಲಯದ ಅವರಣ ಕೇವಲ ವಾದ, ವಿವಾದಕ್ಕಷ್ಟೆ ಅಲ್ಲದೆ ಘೋಷಣೆ, ಧಿಕ್ಕಾರ,‌ ಪ್ರತಿಧಿಕ್ಕಾರ,‌ ಹಲ್ಲೆ, ಪ್ರತಿ‌ಹಲ್ಲೆ, ಜಗಳಗಳಿಗೆ ಕಾರಣವಾದರು ಆಶ್ಚರ್ಯ‌ಪಡಬೇಕಿಲ್ಲ ಎಂದು ವಕೀಲರೊಬ್ಬರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...