Homeಮುಖಪುಟಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಮುಂದೂಡಿಕೆ

ಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಮುಂದೂಡಿಕೆ

ಈ ಕುರಿತು ಮಾಹಿತಿ ಕೇಳಿದ್ದಕ್ಕೆ ತಾನು RSS ಏನಿವಾಗ ಎಂದು ಅಸಾಂವಿಧಾನಿಕ ಭಾಷೆ ಬಳಸಿ ಅತ್ಯಂತ ಉಡಾಫೆಯಿಂದ, ಉದ್ಧಟತನದಿಂದ ನಡೆದುಕೊಂಡ ರಂಗಾಯಣ ನಿರ್ದೇಶಕರು!

- Advertisement -
- Advertisement -

ಮೈಸೂರಿನ ರಂಗಾಯಣವು ಡಿಸೆಂಬರ್ 10 ರಿಂದ 19 ರವರೆಗೆ ನಡೆಸಲು ಉದ್ದೇಶಿಸಿದ್ದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವನ್ನು ಸರ್ಕಾರದ ಕೋವಿಡ್-19 ಮಾರ್ಗಸೂಚಿಯ ಕಾರಣಕ್ಕಾಗಿ ಮುಂದೂಡಿದೆ.

ಕೋವಿಡ್-19ರ ಪ್ರಕರಣಗಳು ಹೆಚ್ಚಾಗುತ್ತಿರುವುದರ ಜೊತೆಗೆ ಓಮೈಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನಲೆಯಲ್ಲಿ ಸರ್ಕಾರವು ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿ 500ಕ್ಕಿಂತ ಹೆಚ್ಚು ಜನ ಸೇರದಂತೆ ನಿರ್ಬಂಧ ವಿಧಿಸಿದೆ. ಆದರೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಪ್ರತಿದಿನ ಸಾವಿರಾರು ರಂಗಾಸಕ್ತರು ಭಾಗವಹಿಸುತ್ತಾರೆ. ಪ್ರತಿದಿನ ಪ್ರದರ್ಶನ ನೀಡುವ ಕಲಾವಿದರೇ 500ಕ್ಕಿಂತ ಹೆಚ್ಚು ಜನ ಭಾಗವಹಿಸುತ್ತಾರೆ. ಇವರನ್ನು ನಿರ್ಬಂಧಿಸಿ ಕಾರ್ಯಕ್ರಮ ನಡೆಸುವುದರಲ್ಲಿ ಯಾವುದೇ ಅರ್ಥವಿರುವುದಿಲ್ಲ. ಆದುದರಿಂದ ಈಗ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವನ್ನು ಮುಂದೂಡಲಾಗಿದೆ. ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ಜನವರಿ ಮೊದಲ ವಾರದಲ್ಲಿ ಹೊಸ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ರಂಗಾಯಣ ಫೇಸ್‌ಬುಕ್ ಪುಟದಲ್ಲಿ ತಿಳಿಸಲಾಗಿದೆ.

ಈ ಕುರಿತು ಅಧಿಕೃತ ಮಾಹಿತಿ ಪಡೆಯಲು ನಾನುಗೌರಿ.ಕಾಂ ರಂಗಾಯಣದ ನಿರ್ದೇಶಕರಾದ ಅಡ್ಡಂಡ ಸಿ.ಕಾರ್ಯಪ್ಪರವರನ್ನು ಸಂಪರ್ಕಿಸಿದಾಗ ಅವರು ಮಾಹಿತಿ ನೀಡಲು ನಿರಾಕರಿಸಿದ್ದಲ್ಲದೆ ಅತ್ಯಂತ ಉಡಾಫೆಯಿಂದ, ಉದ್ಧಟತನದಿಂದ ನಡೆದುಕೊಂಡಿದ್ದು, ಅಸಾಂವಿಧಾನಿಕ ಪದಗಳನ್ನು ಬಳಸಿ ನಿರ್ದೇಶಕ ಹುದ್ದೆಗೆ ಅಗೌರವ ತರುವ ರೀತಿಯಲ್ಲಿ ನಡೆದುಕೊಂಡಿದ್ದಾರೆ.

ನಾನು ನಿಮಗೆ ಯಾವುದೇ ಮಾಹಿತಿ ಕೊಡುವುದಿಲ್ಲ. ನೀವು ಅನಾವಶ್ಯಕವಾಗಿ ನನ್ನ ಫೋಟೊವನ್ನು ಪ್ರಕಟಿಸಿ ಅವಮಾನ, ಚಾರಿತ್ರ್ಯವಧೆ ಮಾಡಿದ್ದೀರಿ, ನಿಮ್ಮ ಸಿದ್ಧಾಂತಗಳು ನಿಮಗಾದರೆ, ಹೌದ್ರಿ ನಾನು ಆರ್‌ಎಸ್‌ಎಸ್‌, ಪ್ರಧಾನ ಮಂತ್ರಿ ಆರ್‌ಎಸ್‌ಎಸ್‌, ಕನ್ನಡ ಸಂಸ್ಕೃತಿ ಇಲಾಖೆಯ ಮಂತ್ರಿ ಆರ್‌ಎಸ್‌ಎಸ್‌ ಏನ್ ಇವಾಗ? ಎಂದು ಅಸಾಂವಿಧಾನಿಕ ಪದಗಳನ್ನು ಬಳಸಿ ಹೀಗಳೆದಿದ್ದಾರೆ. ನಂತರ ಫೋನ್ ನಂಬರ್ ಅನ್ನು ಬ್ಲಾಕ್ ಲಿಸ್ಟ್‌ಗೆ ಹಾಕಿದ್ದಾರೆ.

ರಂಗಾಯಣದ ನಿರ್ದೇಶಕರೇಕೆ ಹೀಗೆ?

ಈ ಮೊದಲು ಡಿಸೆಂಬರ್ 10 ರಿಂದ 19 ರವರೆಗೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವನ್ನು ನಡೆಸಲು ನಿರ್ಧರಿಸಿ ಸಮಾರೋಪ ಸಮಾರಂಭಕ್ಕೆ ವಿವಾದಾತ್ಮಕ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಯವರಿಗೆ ಆಹ್ವಾನ ನೀಡಿದ್ದು ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು. ಈ ಕುರಿತು ಅಡ್ಡಂಡ ಕಾರ್ಯಪ್ಪ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದಾಗ “ಚಕ್ರವರ್ತಿ ಸೂಲಿಬೆಲೆ ಅವರು ಹೇಳುವುದು ನಿಮಗೆ ಸುಳ್ಳಾಗಿರಬಹುದು, ಆದರೆ ನಮಗಲ್ಲ. ಅವರನ್ನು ಕಂಡರೆ ನಿಮಗೆ ಆಗಲ್ಲ, ನಮಗೆ ಅವರನ್ನು ಕಂಡರೆ ಆಗುತ್ತದೆ” ಎಂದು ಉತ್ತರಿಸಿದ್ದರು.

“ಬಹುರೂಪಿಯು ಬಹುತ್ವವನ್ನು ಪ್ರತಿನಿಧಿಸುವ ಒಂದು ಕಾರ್ಯಕ್ರಮ. ಬಹುತ್ವದ ಬಗ್ಗೆ ನಂಬಿಕೆ ಇರದವರನ್ನು ವೇದಿಕೆಗೆ ಕರೆಸುವುದು ಎಷ್ಟು ಸರಿ?” ಎಂದು ಕೇಳಿದ್ದಕ್ಕೆ, “ಈ ಸಿದ್ಧಾಂತವನ್ನೆಲ್ಲ ನಿಮಗೆ ಇಟ್ಟುಕೊಳ್ಳಿ. ನಮಗಲ್ಲ. ಇನ್ನೊಬ್ಬರನ್ನು ಓಲೈಸಲು ಆಗಲ್ಲ. ಸೂಲಿಬೆಲೆ ನಿಮಗೆ ಸುಳ್ಳುಗಾರರಾಗಿರಬಹುದು. ನಮಗೆ ಸುಳ್ಳುಗಾರನಲ್ಲ. ಒಂದು ವರ್ಷ ಅಧಿಕಾರದಲ್ಲಿರುತ್ತೇನೆ, ಏನು ಬರೆದುಕೊಳ್ಳುತ್ತೀರೋ ಬರೆದುಕೊಳ್ಳಿ. ಯಾವುದಕ್ಕೂ ಧೃತಿಗೆಡುವುದಿಲ್ಲ ಎಂದು ಉಡಾಫೆಯಿಂದ ಉತ್ತರಿಸಿದ್ದರು. ಇದನ್ನು ನಾನುಗೌರಿ ಯಥಾವತ್ ಪ್ರಕಟಸಿತ್ತು. ಆ ಸಿಟ್ಟಿನಲ್ಲಿ ಅವರು ತಮ್ಮ ಹುದ್ದೆಯ ಘನತೆಯನ್ನು ಮರೆತು ಬೇಕಾಬಿಟ್ಟಿ ಮಾತಾನಾಡುತ್ತಿದ್ದಾರೆ.

ಮೈಸೂರು ರಂಗಾಯಣದ ಪ್ರತಿಷ್ಟಿತ ಕಾರ್ಯಕ್ರಮವಾದ ‘ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ’ಕ್ಕೆ ಬಿಜೆಪಿ ಬೆಂಬಲಿತ ವಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆ ಹಾಗೂ ಮಾಳವಿಕ ಅವಿನಾಶ್ ಅವರನ್ನು ಕರೆಸಬಾರದು ಎಂದು ‘ಪರ್ವ’ ನಾಟಕದ ಕಿರಿಯ ಕಲಾವಿದರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗೆ ಇಂದು ಪತ್ರ ಬರೆದಿದ್ದಾರೆ.

ಆದರೆ ಇಂದು ರಂಗಾಯಣ ಬಿಡುಗಡೆ ಮಾಡಿರುವ ಪತ್ರಿಕಾಹೇಳಿಕೆಯಲ್ಲಿ “ಈಗ ತೀರ್ಮಾನಿಸಿರುವಂತೆ ಭಾಗವಹಿಸುವ ಎಲ್ಲಾ ನಾಟಕ ತಂಡಗಳು, ಜಾನಪದ ತಂಡಗಳು, ವಿಚಾರ ಸಂಕಿರಣದ ಸಂಪನ್ಮೂಲ ವ್ಯಕ್ತಿಗಳು, ಈ ಮೊದಲು ನಿಶ್ಚಿತವಾದ ಸಮಾರಂಭದ ಎಲ್ಲಾ ಅತಿಥಿಗಳು ಅವರೇ ಇರುತ್ತಾರೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಕಾರ್ಯಕ್ರಮ ಮುಂದೂಡಿರುವುದರಿಂದ ಆಗಿರುವ ತೊಂದರೆಗಳಿಗೆ ವಿಷಾದಿಸುತ್ತೇವೆ” ಎಂದು ತಿಳಿಸಿದೆ.


ಇದನ್ನೂ ಓದಿ; ಬಹುರೂಪಿಗೆ ಸೂಲಿಬೆಲೆ, ಮಾಳವಿಕಾಗೆ ಆಹ್ವಾನ ವಿರೋಧಿಸಿ ‘ಪರ್ವ’ ಕಿರಿಯ ಕಲಾವಿದರಿಂದ ರಂಗಾಯಣಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...