Homeಕರ್ನಾಟಕಮೈಸೂರು: ಜಿಲ್ಲಾಡಳಿತದ ಅನುಮತಿ ನಿರಾಕರಣೆಯ ನಡುವೆಯು ಮಹಿಷಾ ದಸರ ಆಚರಣೆ

ಮೈಸೂರು: ಜಿಲ್ಲಾಡಳಿತದ ಅನುಮತಿ ನಿರಾಕರಣೆಯ ನಡುವೆಯು ಮಹಿಷಾ ದಸರ ಆಚರಣೆ

ಚಾಮುಂಡಿ ಬೆಟ್ಟದಲ್ಲಿ ಇರುವ ಮಹಿಷಾ ಪ್ರತಿಮೆಗೆ ಬಟ್ಟೆಗಳಿಂದ ಸಂಪೂರ್ಣವಾಗಿ ಮುಚ್ಚಲಾಗಿದ್ದು, ಮೂರ್ತಿಯ ಸುತ್ತ ಬ್ಯಾರಿಕೇಟ್ ಇಟ್ಟು ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ

- Advertisement -
- Advertisement -

ಚಾಮುಂಡಿ ಬೆಟ್ಟದಲ್ಲಿ ಕಳೆದ ಎಂಟು ವರ್ಷದಿಂದ ಆಚರಿಸಿಕೊಂಡು ಬರುತ್ತಿರುವ ಮಹಿಷಾ ದಸರಾಗೆ ಜಿಲ್ಲಾಡಳಿತ ಅನುಮತಿ ನಿಕರಿಸಿದ ಹಿನ್ನಲೆ, ಮೈಸೂರಿನ ಅಶೋಕಪುರಂನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ ಮಹಿಷಾಸುರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಭಾನುವಾರ ಸಾಂಕೀತಿಕ ಮಹಿಷ ದಸರಾವನ್ನು ಆಚರಿಸಲಾಗಿದೆ.

ಜಿಲ್ಲಾಡಳಿತವು ಮಹಿಷಾ ದಸರಾಗೆ ಅನುಮತಿ ನಿರಾಕರಿಸಿರುವುದರಿಂದ ಚಾಮುಂಡಿ ಬೆಟ್ಟದಲ್ಲಿ ಇರುವ ಮಹಿಷಾ ಪ್ರತಿಮೆಗೆ ಬಟ್ಟೆಗಳಿಂದ ಸಂಪೂರ್ಣವಾಗಿ ಮುಚ್ಚಲಾಗಿದ್ದು, ಮೂರ್ತಿಯ ಸುತ್ತ ಬ್ಯಾರಿಕೇಟ್ ಇಟ್ಟು ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ. ಇದರ ಚಿತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹಿಷಾ ದಸರಾ ಆಯೋಜನಾ ಸಮಿತಿಯು ಕಳೆದ ಎಂಟು ವರ್ಷದಿಂದ ಮಹಿಷಾ ದಸರಾವನ್ನು ಆಚರಿಸುತ್ತಿದೆ. ಪೌರಾಣಿಕ ಕಥೆಗಳ ಪ್ರಕಾರ ರಾಕ್ಷಸನೆಂದು ಪರಿಗಣಿಸಲ್ಪಟ್ಟ ಮಹಿಷಾಸುರನನ್ನು ಚಾಮುಂಡೇಶ್ವರಿ ದೇವಿಯು ವಧೆ ಮಾಡುತ್ತಾಳೆ. ಆದರೆ ಮಹಿಷಾ ದಸರಾ ಆಯೋಜನಾ ಸಮಿತಿಯು ಮಹಿಷಾಸುರ ರಾಕ್ಷಸನಲ್ಲ, ಆತ ರಕ್ಷಕನಾಗಿದ್ದು, ಮಹಿಷಾ ಮಂಡಲದ ಶ್ರೇಷ್ಠ ದೊರೆ ಎಂದು ಪ್ರತಿಪಾದಿಸುತ್ತದೆ. ಹತ್ತು ದಿನಗಳ ಕಾಲ ನಡೆಯುವ ವಾರ್ಷಿಕ ದಸರಾ ಉತ್ಸವ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಮಹಿಷ ದಸರಾವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ಮಹಿಷಾಸುರ ಯಾರು? ಕೋಣನ ಬಲಿಯ ಮೇಲೆ ಮಹಿಷ ಮರ್ಧನ ಪುರಾಣದ ಹೇರಿಕೆಯೇ?

ಮಹಿಷ ದಸರಾ ಆಯೋಜನಾ ಸಮಿತಿಯ ಮುಖ್ಯಸ್ಥರಾದ ಮಾಜಿ ಮೇಯರ್ ಪುರುಷೋತ್ತಮ್, ಉರಿಳಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, ಖ್ಯಾತ ಸಾಹಿತಿ ಕೆ.ಎಸ್. ಭಗವಾನ್, ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಪಿ.ವಿ. ನಂಜರಾಜ್ ಅರಸ್ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಸದಸ್ಯರು ಮಹಿಷಾಸುರನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಮಹಿಷ ದಸರಾವನ್ನು ಆಚರಿಸಲಾಗಿದೆ.

“ಮಹಿಷಾಸುರ ದಯಾಪರ ಆಡಳಿತಗಾರನಾಗಿದ್ದು, ಮಾನವತಾವಾದಿಯಾಗಿದ್ದನು” ಎಂದು ಮೈಸೂರಿನ ಮಾಜಿ ಮೇಯರ್ ಪುರುಷೋತ್ತಮ್‌ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನಮ್ಮ ಇಚ್ಛೆಯ ದೇವರನ್ನು ಪೂಜಿಸುವ ಸಾಂವಿಧಾನಿಕ ಹಕ್ಕಿನಿಂದ ನಾವು ವಂಚಿತರಾಗಿದ್ದೇವೆ ಎಂದು ಅವರು ವಿಷಾದಿಸಿದ್ದಾರೆ.

ಮಹಿಷನ ಪ್ರತಿಮೆಗೆ ಬ್ಯಾರಿಕೇಡ್ ಹಾಕಲಾಗಿದ್ದು, ಸಂಪೂರ್ಣವಾಗಿ ಬಟ್ಟೆಯಿಂದ ಮುಚ್ಚಲಾಗಿದೆ. ಜೊತೆಗೆ ಚಾಮುಂಡಿ ಬೆಟ್ಟಕ್ಕೆ ಬರುವ ಪ್ರವಾಸಿಗರನ್ನು ಒಳಗೆ ಬಿಡುವ ಮುನ್ನ ತಪಾಸಣೆ ನಡೆಸಲಾಗುತ್ತಿದೆ (ಚಿತ್ರಕೃಪೆ: ಸಿಟಿ ಟುಡೆ)

ಮಹಿಷಾ ದಸರಾ ಸಮಾರಂಭದಲ್ಲಿ ಮಾತನಾಡಿದ ಪ್ರೊ.ನಂಜರಾಜ್ ಅರಸ್, “ಮಹಿಷ ದಸರಾಗೆ ಬಿಜೆಪಿ ಸರ್ಕಾರ ಅನುಮತಿ ನಿರಾಕರಿಸಿದೆ. ಗಣೇಶ ಪೆಂಡಾಲ್‌‌ಗಳಲ್ಲಿ ಪೂಜಿಸಲ್ಪಟ್ಟ ಸಾವರ್ಕರ್ ಮತ್ತು ನಾಥೂರಾಂ ಗೋಡ್ಸೆಯವರ ಭಾವಚಿತ್ರಗಳನ್ನು ಮೆರವಣಿಗೆ ಮಾಡಲಾಗಿದೆ. ಅವರಿಗಿಂತ ಮಹಿಷ ಕೆಟ್ಟವನಾ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮಹಿಷಾಸುರ ತೋಡಾ ಬುಡಕಟ್ಟಿನವನೇ? ನಾಗ ಕುಲದವನೇ? ಬೌದ್ಧ ಅರಸನೇ?

ಮಹಿಷನಿಂದ ಮೈಸೂರಿಗೆ ಹೆಸರು ಬಂದಿದೆ ಎಂದು ವಾದಿಸಿದ ಪ್ರೊ. ಅರಸ್‌, “ಜಯಚಾಮಜೇಂದ್ರ ಒಡೆಯರ್ ಸೇರಿದಂತೆ ಮೈಸೂರಿನ ಹಿಂದಿನ ದೊರೆಗಳ ಲೆಟರ್‌ಹೆಡ್‌ಗಳ ಪ್ರತಿಗಳು ತಮ್ಮ ಬಳಿ ಇವೆ. ಮುಂದಿನ ವರ್ಷ ನೂತನ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಮಹಿಷ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸುವಂತಾಗಲಿ. ಯಾರೂ ಅಧಿಕಾರಕ್ಕೆ ಬರಲಿ. ಬಿಜೆಪಿ ಅಧಿಕಾರಕ್ಕೆ ಬರಬಾರದು” ಎಂದು ಅವರು ಹೇಳಿದ್ದಾರೆ.

ಮಹಿಷಾಸುರನ ಬಗ್ಗೆ ಮತ್ತಷ್ಟು ಓದಿಗೆ:

ಮಹಿಷಾಸುರ ಐತಿಹಾಸಿಕ ವ್ಯಕ್ತಿಯೇ ಹೊರತು ಪುರಾಣವಲ್ಲ: ಡಾ.ಚಮರಂ
‘ಮಹಿಷಾ ದಸರಾ,’ ಮರೆತ ಇತಿಹಾಸದ ಮರುಶೋಧ: ಡಾ.ಎಚ್.ಡಿ ಉಮಾಶಂಕರ್‌
ವರ್ತಮಾನದಲ್ಲಿ ಪುರಾಣಗಳನ್ನು ಶೋಧಿಸಿ ಮರುಕಟ್ಟುವ ಅಗತ್ಯ
ಬಲಿಯ ಆದರ್ಶ ರಾಜ್ಯ ಮತ್ತು ಅದನ್ನು ಕಸಿದುಕೊಂಡು ಕಟ್ಟಿದ ಪುರಾಣದ ಬಗ್ಗೆ ಜ್ಯೋತಿಬಾ ಫುಲೆ ಬರಹ

ಮೂಲನಿವಾಸಿಗಳ ’ಮಹಿಷ ದಸರಾ’ದ ಇತಿಹಾಸ- ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು ಹೇಳಿದ ಪೌರಾಣಿಕ ಪಾತ್ರಗಳು ಮಾತ್ರ ದೇವರು. ಇಲ್ಲೂ ವಂಚನೆ ಇವರು ಹೇಳಿದ ದೇವರಿಗೆ ಮಾತ್ರ ಪೂಜೆ ಸಲ್ಲಿಸಬೇಕು! ಅಂಬೇಡ್ಕರ್ ವಾದಿ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಚಿಂತಿಸಿ ರಾಜ್ಯದಾದ್ಯಂತ ಮಹಿಶ ದಸರಾ ನಡೆಯುವಂತೆ ಯೋಜನೆಯನ್ನು ರೂಪಿಸಿ ಕಾರ್ಯರೂಪಕ್ಕೆ ತರಬೇಕು.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...