Homeಕರ್ನಾಟಕಮೈಸೂರು: ದಶಕದ ಬಳಿಕ ದಲಿತರ ದೇವಸ್ಥಾನ ಪ್ರವೇಶ

ಮೈಸೂರು: ದಶಕದ ಬಳಿಕ ದಲಿತರ ದೇವಸ್ಥಾನ ಪ್ರವೇಶ

- Advertisement -
- Advertisement -

ಜಯಪುರ: ದಲಿತರಿಗೆ ಪ್ರವೇಶವನ್ನು ನಿರಾಕರಿಸಿ, ಕಳೆದ 11 ವರ್ಷಗಳಿಂದ ಬೀಗ ಹಾಕಿದ್ದ, ಮೈಸೂರು ತಾಲ್ಲೂಕಿನ ಮಾರ್ಬಳ್ಳಿಯಲ್ಲಿ ಶುಕ್ರವಾರ ಮತ್ತೆ ಮಾರಮ್ಮ ದೇವಾಲಯದ ಬಾಗಿಲನ್ನು ಅಧಿಕಾರಿಗಳ ಮಧ್ಯೆಪ್ರವೇಶದಿಂದ ಬಾಗಿಲನ್ನು ತೆರೆಯಲಾಗಿದೆ.

ಊರಿನ ದಲಿತರು ದೇವಾಲಯವನ್ನು ಪ್ರವೇಶ ಮಾಡಿದರೆಂದು, ಮಾರ್ಬಳ್ಳಿಯ ವಾಲ್ಮೀಕಿ ನಾಯಕ ಜನಾಂಗದವರು ವಿರೋಧ ವ್ಯಕ್ತಪಡಿಸಿ, ದೇಗುಲಕ್ಕೆ ಬೀಗ ಹಾಕಲಾಗಿತ್ತು. ‌ಈ ಸಂಬಂಧ ಸರಕಾರಿ ಅಧಿಕಾರಿಗಳು ಎರಡು ಸಮುದಾಯದವರ ಮಧ್ಯೆ ಮಾತುಕತೆ ನಡೆಸಿದ ನಂತರ ಈ ದೇಗುಲದ ಬಾಗಿಲನ್ನು ತೆರೆಯಲಾಗಿದೆ.

ಈಚೆಗೆ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಎನ್‌.ವಿಷ್ಣುವರ್ಧನ್‌, ಸಮಾಜ ಕಲ್ಯಾಣ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಗ್ರಾಮದ ಮುಖಂಡರ ಸಭೆ ನಡೆಸಲಾಗಿತ್ತು. ಇದು ಈಗ ಯಶಸ್ಸು ಕಂಡಿದೆ.

‘ಭಾರತೀಯ ಪ್ರಜೆಯಾದ ಯಾರಿಗೂ ಯಾವುದೇ ದೇವಾಲಯವನ್ನು ಪ್ರವೇಶಿಸುವ ಹಕ್ಕು ಇದೆ. ಎಲ್ಲರೂ  ಗ್ರಾಮದಲ್ಲಿ ಅನ್ಯೋನ್ಯತೆಯಿಂದ ಶಾಂತಿಯಿಂದ ಇರಬೇಕು. ಎಲ್ಲಾ ಜಾತಿ ಜನಾಂಗದವರಿಗೂ ದೇಗುಲಕ್ಕೆ ಮುಕ್ತ ಪ್ರವೇಶ ಮಾಡಿಕೊಡಬೇಕೆಂದು ಈ ಸಭೆಯಲ್ಲಿ ಸೂಚಿಸಲಾಗಿತ್ತು. ಇದಕ್ಕೆ ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಸಹಮತ ವ್ಯಕ್ತಪಡಿಸಿದ್ದರು.

ಗ್ರಾಮ ಪಂಚಾಯಿತಿಯಲ್ಲಿ ತಹಶೀಲ್ದಾರ್ ಕೆ.ಎಂ. ಮಹೇಶ್ ಕುಮಾರ್ ನೇತೃತ್ವದಲ್ಲಿ ಶುಕ್ರವಾರ ಶಾಂತಿ ಸಭೆ ನಡೆಸಲಾಗಿತ್ತು. ಇದಾದ ನಂತರ ದೇಗುಲದ ಬೀಗ ತೆಗೆದು ಎರಡು ಸಮುದಾಯಗಳ ಜನರಿಗೆ  ಪ್ರವೇಶಕ್ಕೆ ಅನುವು ಮಾಡಿಕೊಡಲಾಯಿತು. ದೀರ್ಘ ಕಾಲದ ನಂತರ ಮಾರಮ್ಮ ದೇವಿಗೆ ಪೂಜೆ ಸಲ್ಲಿಸಲಾಯಿತು.

ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಎ.ಎನ್.ಜನಾರ್ಧನ್, ಜಯಪುರ ನಾಡ ಕಚೇರಿ ಉಪತಹಶೀಲ್ದಾರ್ ಕೆ.ಎಸ್ ಕುಬೇರ್, ಕಂದಾಯ ಅಧಿಕಾರಿ ಸಿ.ವಿ.ಲೋಹಿತ್, ಗ್ರಾಮ ಲೆಕ್ಕಿಗ ಭಾಸ್ಕರ್, ಪಿಎಸ್ಐ ಹೇಮಲತಾ, ದಲಿತ ಮುಖಂಡರಾದ ಪರಮೇಶ್, ಕುಮಾರ್ ಹಾಗೂ ವಾಲ್ಮೀಕಿ ನಾಯಕ ಸಮುದಾಯ ಮುಖಂಡರಾದ ಶಿವಣ್ಣ ನಾಯಕ, ರಾಜಶೇಖರ ಮೂರ್ತಿ, ರಾಜ ನಾಯಕ, ರಾಜಣ್ಣ ಪಾಲ್ಗೊಂಡಿದ್ದರು.

ಇದನ್ನೂ ಓದಿ….ಕಲಬುರಗಿ | ಸಿಗರೇಟ್ ಬಾಕ್ಸ್ ಕದ್ದ ಆರೋಪ : ದಲಿತ ಯುವಕನ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...