Homeಕರ್ನಾಟಕಮೈಸೂರು ಗ್ಯಾಂಗ್ ರೇಪ್‌: ಕುಮಾರಸ್ವಾಮಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ನಟ ಚೇತನ್

ಮೈಸೂರು ಗ್ಯಾಂಗ್ ರೇಪ್‌: ಕುಮಾರಸ್ವಾಮಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ನಟ ಚೇತನ್

ಎರೆಡೆರೆಡು ಬಾರಿ ಮುಖ್ಯಮಂತ್ರಿಯಾಗಿ ಬೇಜವಾಬ್ದಾರಿಯಾಗಿ ‘ಪ್ರಜಾಪ್ರಭುತ್ವ ವಿರೋಧಿ ಸಲಹೆ’ ನೀಡಿದ್ದಾರೆ ಎಂದು ನಟ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಮೈಸೂರಿನಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿನಿಯರ ಮೇಲಿನ ಅತ್ಯಾಚಾರದ ವಿರುದ್ದ ರಾಜಕಾರಣಿಗಳು ತಮಗೆ ಮನ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಈ ಬಗ್ಗೆ ಕನ್ನಡದ ಖ್ಯಾತ ಚಿತ್ರ ನಟ ಚೇತನ್ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಮ್ಮ ಸಮಾಜದಲ್ಲಿ ಇರುವ ಸ್ತ್ರೀ ವಿರೋಧಿ ತತ್ವ(Sexism)ಗಳನ್ನು ಹೋಗಲಾಡಿಸಿ ಲಿಂಗ ಸಮಾನತೆಯ ರಾಜ್ಯವನ್ನು ನಿರ್ಮಿಸಲು ಕಾಂಗ್ರೆಸ್-ಬಿಜೆಪಿ-ಜೆಡಿಎಸ್‌ನ ಪುರುಷರು ಮತ್ತು ಮಹಿಳೆಯರು ಅಸಮರ್ಥರಾಗಿದ್ದಾರೆ ಎಂದು ರಾಜ್ಯಕ್ಕೆ ಬಂದ 16 ವರ್ಷಗಳ ನಂತರ ನಾನು ಅರಿತುಕೊಂಡೆ” ಎಂದು ಅವರು ಚೇತನ್‌ ಬೇಸರ ವ್ಯಕ್ತಪಡಿಸಿದ್ದಾರೆ.

“ಅಧಿಕಾರದಲ್ಲಿರುವ ಅನೇಕರು ಮಹಿಳೆಯರ ಮೇಲಿನ ಶೋಷಣೆಯನ್ನು ನಿರಾಕರಿಸುತ್ತಾರೆ, ಆದರೆ ಹೆಚ್ಚಿನವರು ಇದಕ್ಕೆ ಪರಿಹಾರವಾಗಿ ರಕ್ತಪಾತವನ್ನೇ ಪ್ರತಿಪಾದಿಸುತ್ತಾರೆ. ನಮ್ಮ ಶಾಸಕರು ಕಲಿಯಬೇಕು ಮತ್ತು ಕಲಿಸಿಕೊಳ್ಳಬೇಕು” ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ 

ಇದಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಚೇತನ್‌ ಕುಮಾರ್‌, “ಕುಮಾರ ಸ್ವಾಮಿ ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಮಾರಸ್ವಾಮಿ ಅವರು ‘ಮೈಸೂರು ಪ್ರಕರಣ’ದ ಆರೋಪಿಗಳನ್ನು ಆಂಧ್ರ ಮಾದರಿಯಲ್ಲಿ ನಡೆಸಿಕೊಳ್ಳಬೇಕು ಎಂದು ಹೇಳಿಕೆ ನೀಡಿದ್ದರು.

2019 ರ ಹೈದರಾಬಾದ್ ಅತ್ಯಾಚಾರದ ಆರೋಪಿಗಳನ್ನು ಪೊಲೀಸರು ಎನ್‌ಕೌಂಟರ್‌ ಮಾಡಿ ಹತ್ಯೆ ಮಾಡಿದ್ದರು. “ಈ ಘಟನೆಯ ಮಾದರಿಯು ಇನ್ನಷ್ಟು ತಪ್ಪುಗಳಿಗೆ ಎಡೆ ಮಾಡಿಕೊಡುತ್ತದೆ. ಶಿಕ್ಷೆಯನ್ನು ನ್ಯಾಯಾಂಗ ನೀಡಬೇಕೆ ವಿನಃ ಪೊಲೀಸರು ಅಲ್ಲ. ಯಾವುದೆ ವಿಚಾರಣೆಯಿಲ್ಲದೆ ಆರೋಪಿಗಳನ್ನು ಸಾಯಿಸುವುದಾದರೆ ದೇಶದಲ್ಲಿ ಕೋರ್ಟ್‌ಗಳು ಯಾಕೆ? ಈ ಮಾದರಿಯನ್ನು ಬಳಸಿಕೊಂಡು ಅಮಾಯರನ್ನೂ ಕೊಲೆ ಮಾಡಬಹುದಲ್ಲವೆ” ಎಂದು ಹಲವಾರು ಜನರು ಹೇಳಿದ್ದರು. 2019 ರ ಹೈದರಾಬಾದ್ ಎನ್‌ಕೌಂಟರ್‌ ಅನ್ನು ಪ್ರಜಾಪ್ರಭುತ್ವ ವಿರೋಧಿ ಎಂದು ಬಣ್ಣಿಸಲಾಗಿತ್ತು.

“ಎರಡು ಬಾರಿ ಮುಖ್ಯಮಂತ್ರಿ ಆಗಿರುವ ಕುಮಾರಸ್ವಾಮಿಯವರು ಎಂದಿನಂತೆ ಮತ್ತೊಮ್ಮೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಮೈಸೂರು ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕೆಯವರು 2019 ರ ಹೈದರಾಬಾದ್ ಅತ್ಯಾಚಾರದ ಆರೋಪಿತರ ಮೇಲೆ ನಡೆದಂತೆ ಪೋಲಿಸ್ ದೌರ್ಜನ್ಯದಂತ ಪ್ರಜಾಪ್ರಭುತ್ವ ವಿರೋಧಿ ಸಲಹೆಯನ್ನ ನೀಡಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ನಂತೆಯೆ ಜೆಡಿಎಸ್ ಕೂಡ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಲು, ಲಿಂಗಸಮಾನತೆಯ ನ್ಯಾಯ ಒದಗಿಸಲು ನಾಲಾಯಕ್ಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆಯನ್ನೂ ಚೇತನ್ ವಿರೋಧಿಸಿದ್ದು, “ಯುವತಿದ್ದೇ ತಪ್ಪೆನ್ನುವ ಹಾಗೆ ಮಾತನಾಡಿರುವುದು ಕೇವಲ ಬಿಜೆಪಿಯೊಂದರ ಸಮಸ್ಯೆಯಲ್ಲ. 2015 ರಲ್ಲಿ, ಕಾಂಗ್ರೆಸ್‌‌ನ ಗೃಹ ಮಂತ್ರಿಯಾಗಿದ್ದ ಪರಮೇಶ್ವರ ಅವರು ಕೂಡ ಅತ್ಯಾಚಾರಕ್ಕೆ ಒಳಗಾದ ಯುವತಿಯು ರಾತ್ರಿ 9.30ರ ಹೊತ್ತಲ್ಲಿ ಆಕೆ ಬೆಂಗಳೂರಿನಲ್ಲಿ ಆಚೆ ಯಾಕಿದ್ದಳು ಎಂದು ಪ್ರಶ್ನೆ ಮಾಡಿದ್ದರು. ಅಧಿಕಾರದಲ್ಲಿರುವ ಅನೇಕ ಮಹಿಳೆಯರು ಕೂಡ ಇದೇ ರೀತಿಯ ಸ್ತ್ರೀ ಶೋಷಣೆಯನ್ನು ಪ್ರದರ್ಶಿಸುತ್ತಾರೆ. ಅಂತರ್ನಿರ್ಮಿತ ಸ್ತ್ರೀ ವಿರೋಧಿ ತತ್ವ(Sexism)ಗಳನ್ನು ಹೋಗಲಾಡಿಸಲು ಲಿಂಗ ಜಾಗೃತಿ ಅಭಿಯಾನಗಳು ಅತ್ಯಗತ್ಯ” ಎಂದು ಹೇಳಿದ್ದಾರೆ.

ಈ ಮಧ್ಯೆ ಮೈಸೂರು ವಿಶ್ವವಿದ್ಯಾಲಯ ಕೂಡಾ ಅತ್ಯಾಚಾರಕ್ಕೆ ಮಹಿಳೆಯರೇ ಕಾರಣ ಎಂಬಂತಹ ನಿಲುವನ್ನು ತೆಳೆದಿದ್ದು, ಸಂಜೆಯ ನಂತರ ವಿದ್ಯಾರ್ಥಿನಿಯರು ಏಕಾಂಗಿಯಾಗಿ ಇರಬಾರದು ಎಂಬಂತಹ ಸುತ್ತೋಲೆಯನ್ನು ಹೊರಡಿಸಿ ವಿವಾಕ್ಕೆ ಈಡಾಗಿದೆ.

“ಇತ್ತೀಚೆಗಿನ ಅತ್ಯಾಚಾರ ಘಟನೆಯ ಹಿನ್ನಲೆಯಲ್ಲಿ, ಇನ್ನು ಮುಂದೆ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ 6:30ರ ನಂತರ ಹೆಣ್ಣು ಮಕ್ಕಳು ಏಕಾಂಗಿಯಾಗಿ ತಿರುಗಾಡುವುದನ್ನು, ಕೂರುವುದನ್ನು ನಿಷೇಧಿಸಲಾಗಿದೆ” ಎಂದು ವಿಶ್ವವಿದ್ಯಾಲಯದ ಸುತ್ತೋಲೆ ಹೇಳಿದೆ. ಇದರ ವಿರುದ್ದ ಕೂಡಾ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...