Homeಕರ್ನಾಟಕಮೈಸೂರು ಅತ್ಯಾಚಾರ ಪ್ರಕರಣ: ಐವರು ಆರೋಪಿಗಳ ಬಂಧನ

ಮೈಸೂರು ಅತ್ಯಾಚಾರ ಪ್ರಕರಣ: ಐವರು ಆರೋಪಿಗಳ ಬಂಧನ

- Advertisement -
- Advertisement -

ಆಗಸ್ಟ್ 24 ರಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ಅಮಾನವೀಯ ಸಾಮೂಹಿಕ ಅತ್ಯಾಚಾರ ಪ್ರಕರಣದ ಐವರು ಆರೋಪಿಗಳನ್ನು ಇಂದು ಮುಂಜಾನೆ ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ.

ಆರೋಪಿಗಳ ಮೊಬೈಲ್ ಟವರ್ ಮತ್ತು ಕುಡಿದು ಬಿಸಾಡಿದ್ದ ಮದ್ಯ ಬಾಟಲಿಗಳ ಬಾರ್‌ಕೋಡ್ ಟ್ರ್ಯಾಕ್ ಆಧಾರದಲ್ಲಿ ಬಾರ್ ಒಂದರ ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಅವರಲ್ಲಿ ನಾಲ್ವರು ತಮಿಳುನಾಡು ಮೂಲಕ ಕಾರ್ಮಿಕರೆನ್ನಲಾಗಿದ್ದು ಈ ಕುರಿತು ಸಂಜೆಯೊಳಗೆ ವಿವರವಾದ ವರದಿ ಲಭ್ಯವಾಗಲಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಘಟನೆ ನಡೆದಾಗಿನಿಂದ ಮೈಸೂರಿನ ಆಲನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಸದ್ಯಕ್ಕೆ ಆರೋಪಿಗಳ ವಿಚಾರಣೆ ನಡೆಯುತ್ತಿದೆ ಎನ್ನಲಾಗಿದೆ.

ಇನ್ನು ಘಟನೆ ಕುರಿತು ಗೃಹ ಸಚಿವರು ನೀಡಿದ್ದ ವಿವಾದಾತ್ಮಕ ಹೇಳಿಕೆ ಮತ್ತು ಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದೆಂದು ಮೈಸೂರು ವಿವಿ ಹೊರಡಿಸಿದ್ದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.


ಇದನ್ನೂ ಓದಿ: ಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...