Homeಕರ್ನಾಟಕಮೈಸೂರು: ಒಮ್ಮೆಲೇ ಐದು ಪಟ್ಟು ಹೆಚ್ಚಾದ ಸರ್ಕಾರಿ ಕಾಲೇಜು ಶುಲ್ಕ; ವ್ಯಾಸಂಗ ತೊರೆಯುವ ನಿರ್ಧಾರದಲ್ಲಿ ಬಡ,...

ಮೈಸೂರು: ಒಮ್ಮೆಲೇ ಐದು ಪಟ್ಟು ಹೆಚ್ಚಾದ ಸರ್ಕಾರಿ ಕಾಲೇಜು ಶುಲ್ಕ; ವ್ಯಾಸಂಗ ತೊರೆಯುವ ನಿರ್ಧಾರದಲ್ಲಿ ಬಡ, ದಲಿತ ವಿದ್ಯಾರ್ಥಿಗಳು!

‘ಮೀಸಲಾತಿ ಹೆಚ್ಚಳ: ಎಸ್‌ಸಿ, ಎಸ್‌ಟಿಗಳಿಗೆ ದೀಪಾವಳಿ ಗಿಫ್ಟ್‌’ ಎಂದೆಲ್ಲ ಕೆಲ ಮಾಧ್ಯಮಗಳು ಅತಿರಂಜಕವಾಗಿ ವರದಿ ಮಾಡುತ್ತಿವೆ. ವಾಸ್ತವದಲ್ಲಿ ದಲಿತ ವಿದ್ಯಾರ್ಥಿಗಳ ಬದುಕನ್ನು ಸರ್ಕಾರ ಕತ್ತಲೆಗೆ ತಳ್ಳುತ್ತಿದೆ!

- Advertisement -
- Advertisement -

“ಮೈಸೂರಿನ ಯುವರಾಜ ಕಾಲೇಜಿನ ವಿದ್ಯಾರ್ಥಿ ನಾನು. ಪರಿಶಿಷ್ಟ ಜಾತಿಗೆ ಸೇರಿದ್ದು ‘ಆಲ್‌ ಅದರ್‌ ಕಾಂಬಿನೇಷನ್‌’ನಲ್ಲಿ ‘ಬಿ’ ಸ್ಕೀಮ್‌ ಅಡಿಯಲ್ಲಿ ಪ್ರವೇಶಾತಿ ಪಡೆದಿದ್ದೆ. ನಮಗೆ ನೀಡಿದ್ದ ಶುಲ್ಕಪಟ್ಟಿಯಲ್ಲಿ ನಿಗದಿಪಡಿಸಿದಂತೆ ರೂ. 2,50,000ಕ್ಕಿಂತ ಕಡಿಮೆ ವಾರ್ಷಿಕ ಆದಾಯದ ಅನ್ವಯ ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರವೇಶಾತಿ ವೇಳೆ ತಲಾ ರೂ. 9,030 ಶುಲ್ಕವನ್ನು ಕಟ್ಟಿದ್ದೆ. ಆದರೆ ಮೂರನೇ ವರ್ಷದ ಪ್ರವೇಶಾತಿಗೆ ಕಾಲೇಜಿಗೆ ಹೋದಾಗ ರೂ. 60 ಸಾವಿರಕ್ಕಿಂತ ಹೆಚ್ಚಿನ ಶುಲ್ಕವನ್ನು ಪಾವತಿಸುವಂತೆ ಹೇಳುತ್ತಿದ್ದಾರೆ. ನನಗೆ ಇಷ್ಟು ದೊಡ್ಡ ಮಟ್ಟದ ಮೊತ್ತವನ್ನು ಪಾವತಿಸಲು ಆಗುತ್ತಿಲ್ಲ. ಹೀಗಾಗಿ ಕಾಲೇಜು ತೊರೆಯಲು ನಿರ್ಧರಿಸಿದ್ದೇನೆ” ಎನ್ನುತ್ತಾರೆ ಹೆಸರು ಹೇಳಲಿಚ್ಛಿಸದ ದಲಿತ ವಿದ್ಯಾರ್ಥಿ.

“ಪ್ರಥಮ ಹಾಗೂ ದ್ವಿತೀಯ ವರ್ಷದಲ್ಲಿ ಬಾಕಿ ಉಳಿದಿರುವ ಶುಲ್ಕವನ್ನು ಸೇರಿಸಿಕೊಡಬೇಕು. ನೀವು 9,000 ರೂ. ಕಟ್ಟಿದ್ದೀರಿ. ಒಟ್ಟು 26,000 ರೂ. ಶುಲ್ಕವನ್ನು ಕಾಲೇಜಿಗೆ ಪ್ರತಿವರ್ಷ ಪಾವತಿ ಮಾಡಬೇಕಿತ್ತು. ನಿಮ್ಮ ಖಾತೆಗೆ ವಿದ್ಯಾರ್ಥಿ ವೇತನದ ರೂಪದಲ್ಲಿ ಸರ್ಕಾರ ಹಣ ಸಂದಾಯ ಮಾಡಿರುತ್ತದೆ. ಅದನ್ನು ನಮಗೆ ತಂದುಕೊಡಬೇಕು ಎಂದು ಕಾಲೇಜಿನಿಂದ ಸಮರ್ಥನೆ ಬರುತ್ತಿದೆ. ಆದರೆ ನಾನು ಹಾಸ್ಟೆಲ್‌ಗೆ ಸೇರ್ಪಡೆಯಾಗಿದ್ದೆ. ನನ್ನ ವಿದ್ಯಾರ್ಥಿವೇತನವು ಹಾಸ್ಟೆಲ್‌ಗೆ ಹೋಗಿರುತ್ತದೆ. ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಸವಲತ್ತುಗಳಿರುತ್ತವೆ ಎಂಬುದಕ್ಕೆ ಯಾವುದೇ ಅರ್ಥವಿಲ್ಲ. ಸರ್ಕಾರ ನಮ್ಮನ್ನು ನಯವಾಗಿ ವಂಚಿಸಿದೆ. ಕಾಲೇಜಿಗೆ ಪೂರ್ಣ ಶುಲ್ಕ ಕಟ್ಟಬೇಕೆಂದೂ, ಸರ್ಕಾರ ಉಳಿದ ಶುಲ್ಕವನ್ನು ಪಾವತಿಸುವುದಿಲ್ಲವೆಂದೂ ನಾನು ಕಾಲೇಜು ಸೇರುವಾಗಲೇ ಹೇಳಿದ್ದರೆ ನಾನು ಬೇರೆ ದಾರಿ ನೋಡಿಕೊಳ್ಳುತ್ತಿದ್ದೆ. ಆದರೆ ಎರಡು ವರ್ಷ ಓದಿದ ಬಳಿಕ ಈಗ ಏಕಾಏಕಿ ಈ ಸೂಚನೆ ನೀಡುತ್ತಿದ್ದಾರೆ. ಪ್ರಥಮ ವರ್ಷದ ಸೇರ್ಪಡೆಯ ವೇಳೆ ತೋರಿಸಿದ್ದ ಶುಲ್ಕ ಪಟ್ಟಿಯಲ್ಲಿ ಇದ್ಯಾವುದರ ಉಲ್ಲೇಖವಿಲ್ಲ. ಕಾಲೇಜಿನಿಂದ ಯಾವುದೇ ಸೂಚನೆಯನ್ನೂ ನೀಡಿರಲಿಲ್ಲ. ಈಗ ಶುಲ್ಕ ಪಾವತಿಸದಿದ್ದರೆ ಮೂರನೇ ವರ್ಷಕ್ಕೆ ಪ್ರವೇಶಾತಿ ನೀಡುವುದಿಲ್ಲ ಎನ್ನುತ್ತಿದ್ದಾರೆ. ಅನಿವಾರ್ಯವಾಗಿ ನಾನು ಕಾಲೇಜು ತೊರೆಯುತ್ತಿದ್ದೇನೆ. ನನ್ನ ಅಮೂಲ್ಯವಾದ ಎರಡು ವರ್ಷಗಳು ವ್ಯರ್ಥವಾಗುತ್ತಿದೆ” ಎನ್ನುತ್ತಾ ಆ ವಿದ್ಯಾರ್ಥಿ ಕಣ್ಣೀರು ಹಾಕಿದನು.

“ಯುವರಾಜ ಕಾಲೇಜಿಗೆ ‘ಎ’ ಸ್ಕೀಮ್‌ನಲ್ಲಿ ಪ್ರಥಮ ವರ್ಷದ ಬಿ.ಎಸ್‌ಸಿ, ಬಿಬಿಎ, ಬಿಸಿಎ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯುವ, 2,50,000 ರೂ.ಗಿಂತ ಕಡಿವೆ ವಾರ್ಷಿಕ ಆದಾಯವಿರುವ ಎಸ್‌.ಸಿ., ಎಸ್.ಟಿ. ವಿದ್ಯಾರ್ಥಿಗಳಿಗೆ ಕೇವಲ 270 ರೂ. ಶುಲ್ಕವಿತ್ತು. ಆದರೆ ಈ ಶುಲ್ಕವನ್ನು ಈಗ ಏಕಾಏಕಿ ಏಳು ಸಾವಿರ ರೂ.ಗಳಿಗೆ ಹೆಚ್ಚಿಸಲಾಗಿದೆ. ಸಾಮಾನ್ಯ ವಿದ್ಯಾರ್ಥಿಗಳ ಶುಲ್ಕಕ್ಕೂ ಇತರೆ ವಿದ್ಯಾರ್ಥಿಗಳ ಶುಲ್ಕಕ್ಕೂ ಯಾವುದೇ ವ್ಯತ್ಯಾಸವಿಲ್ಲದಂತೆ ಆಗಿದೆ. ದಲಿತರಿಗೆ ಸಾಕಷ್ಟು ಸೌಕರ್ಯಗಳಿರುತ್ತವೆ ಎಂಬುದು ಭ್ರಮೆಯಷ್ಟೇ” ಎಂದು ವಿದ್ಯಾರ್ಥಿಗಳು ಹೇಳುತ್ತಿದ್ದಾರೆ.

ಇದು ಕೇವಲ ಯುವರಾಜ ಕಾಲೇಜಿನ ಸಮಸ್ಯೆಯಲ್ಲ. ಮೈಸೂರು ವಿವಿಯ ಎಲ್ಲ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲೂ ಬಡ ವಿದ್ಯಾರ್ಥಿಗಳು ಈ ಶೋಷಣೆಗೆ ಈಡಾಗಿದ್ದಾರೆ. ಕೆಲವು ವಿದ್ಯಾರ್ಥಿಗಳು, “ಸರ್ಕಾರ ನಮಗೆ ಯಾವುದೇ ವಿದ್ಯಾರ್ಥಿ ವೇತನವನ್ನು ಪಾವತಿ ಮಾಡಿಲ್ಲ. ನಮಗೆ ಇನ್ನೂ ಸ್ಕಾಲರ್‌ಶಿಪ್ ಬಂದಿಲ್ಲ. ಹಣ ಕಟ್ಟದೆ ಕಾಲೇಜಿಗೂ ಸೇರಿಸಿಕೊಳ್ಳುತ್ತಿಲ್ಲ. ಖಾಸಗಿ ಕಾಲೇಜುಗಳಿಗೂ ಸರ್ಕಾರಿ ಕಾಲೇಜುಗಳಿಗೂ ಯಾವ ವ್ಯತ್ಯಾಸವೂ ಇಲ್ಲವಾಗಿದೆ” ಎನ್ನುತ್ತಿದ್ದಾರೆ.

“ಶುಲ್ಕ ಪಾವತಿ ಮಾಡಲು ಶಕ್ತರಾಗದ ಅನೇಕ ಬಡ ವಿದ್ಯಾರ್ಥಿಗಳು ಕಾಲೇಜು ತೊರೆಯಲು ನಿರ್ಧರಿಸಿದ್ದಾರೆ” ಎಂಬ ಆತಂಕವನ್ನು ಹೆಸರು ಹೇಳಲಿಚ್ಛಿಸದ ಮೈಸೂರು ವಿವಿ ಪ್ರಾಧ್ಯಾಪಕರೊಬ್ಬರು ‘ನಾನುಗೌರಿ.ಕಾಂ’ಗೆ ವಿವರಿಸಿದರು. “ಒಬ್ಬ ವಿದ್ಯಾರ್ಥಿ ಕಾಲೇಜು ತೊರೆದು ಹೋಗುತ್ತಿದ್ದ. ವಿಚಾರಿಸಿದಾಗ, ಇಷ್ಟು ಖರ್ಚು ಮಾಡಿ ಓದಿದರೂ ಉದ್ಯೋಗ ಸಿಗುತ್ತದೆ ಎಂಬ ಖಾತ್ರಿ ಇಲ್ಲ. ಸ್ವಿಗ್ಗಿಯಲ್ಲೋ, ಜೊಮೊಟೊದಲ್ಲೋ ಬದುಕು ಕಂಡುಕೊಳ್ಳುತ್ತೇನೆ ಎಂದು ತಿಳಿಸಿದ” ಎಂದು ಆ ಪ್ರಾಧ್ಯಾಪಕರು ಆಘಾತ ವ್ಯಕ್ತಪಡಿಸಿದರು.

ಶುಲ್ಕ ಹೆಚ್ಚಳ ವಿರೋಧಿಸಿ ಇತ್ತೀಚೆಗೆ ಸಣ್ಣಮಟ್ಟದಲ್ಲಿ ಎಐಡಿಎಸ್‌ಒ (ಆಲ್‌ ಇಂಡಿಯಾ ಡೆಮೊಕ್ರಟಿಕ್‌ ಸ್ಟೂಟೆಂಡ್ ಆರ್ಗನೈಸೇಷನ್‌) ಮೈಸೂರಿನಲ್ಲಿ ಪ್ರತಿಭಟನೆ ನಡೆಸಿತ್ತು. “ಕಾಲೇಜುಗಳಲ್ಲಿ ಏಕಾಏಕಿ, ಎಲ್ಲಾ ವಿದ್ಯಾರ್ಥಿಗಳಿಗೂ ಮೊದಲನೇ ವರ್ಷದ, ಎರಡನೇ ವರ್ಷದ ಹಾಗೂ ಮೂರನೇ ವರ್ಷದ ಪ್ರವೇಶ ಶುಲ್ಕವನ್ನು ಒಟ್ಟಿಗೆ ಕಟ್ಟಬೇಕೆಂದು ಆದೇಶ ಹೊರಡಿಸಿದ್ದಾರೆ. ಮಹಾರಾಣಿ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿಗೆ ರೂ.16,000, ಮಹಾರಾಜ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿಗೆ ರೂ. 30,000 ಹಾಗೂ ಯುವರಾಜ ಕಾಲೇಜಿನಲ್ಲಿ 30 ರಿಂದ 60 ಸಾವಿರದವರೆಗೆ ಶುಲ್ಕವನ್ನು ಕಟ್ಟಬೇಕೆಂದು ಆದೇಶ ಹೊರಡಿಸಲಾಗಿದೆ” ಎಂದು ಸಂಘಟನೆ ಆಕ್ಷೇಪ ವ್ಯಕ್ತಪಡಿಸಿತ್ತು.

2021-22ನೇ ಸಾಲಿನ ಎಸ್‌.ಸಿ., ಎಸ್‌.ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಕಾಲೇಜಿಗೆ ಮಂಜೂರಾಗದ ಕಾರಣ ವಿಶ್ವವಿದ್ಯಾನಿಲಯಕ್ಕೆ ಪ್ರವೇಶ ಮತ್ತು ಪರೀಕ್ಷಾ ಶುಲ್ಕವನ್ನು ಪಾವತಿಸಬೇಕಾಗಿದೆ. ಅಕ್ಟೋಬರ್‌‌ 29ರೊಳಗೆ ಶುಲ್ಕವನ್ನು ನೀಡಬೇಕೆಂದು ‘ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ’ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸೂಚನೆ ನೀಡಿರುವುದು.

“ಸರ್ಕಾರಿ ಶಾಲಾ ಕಾಲೇಜಿನಲ್ಲಿ ಓದುತ್ತಿರುವುದು ಬಹುತೇಕ ವಿದ್ಯಾರ್ಥಿಗಳು ಬಡವರು, ರೈತರು, ಕೂಲಿ ಕಾರ್ಮಿಕರ ಮಕ್ಕಳಾಗಿದ್ದಾರೆ. ಇವರಿಗೆ ಏಕಾಏಕಿ ಸಾವಿರಾರು ರೂಪಾಯಿ ಶುಲ್ಕ ಕಟ್ಟಿ ಎಂದು ಹೇಳಿದರೆ ಹೇಗೆ ಕಟ್ಟುವುದು?” ಎಂದು ಸಂಘಟನೆ ಪ್ರಶ್ನಿಸಿತ್ತು.

ಶುಲ್ಕ ಹೆಚ್ಚಳ ವಿರೋಧಿಸಿ ಇತ್ತೀಚೆಗೆ ಎಐಡಿಎಸ್‌ಒ ವತಿಯಿಂದ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಗಿತ್ತು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ಮೈಸೂರು ಜಿಲ್ಲಾಧ್ಯಕ್ಷರಾದ ಸುಭಾಷ್, “ಬಡ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿಸುವ ಉದ್ದೇಶವಿಲ್ಲಿದೆ. ವಿದ್ಯಾರ್ಥಿಗಳ ಸ್ಕಾಲರ್‌ಶಿಪ್‌ ಶುಲ್ಕ ರೂಪದಲ್ಲಿ ಕಾಲೇಜಿಗೆ ಹಾಗೂ ಹಾಸ್ಟೆಲ್‌ ಸೇರುತ್ತಿತ್ತು. ಉಳಿಕೆ ಹಣವನ್ನು ವಿದ್ಯಾರ್ಥಿಗಳಿಗೆ ಕೊಡಲಾಗುತ್ತಿತ್ತು. ಈಗ ನೇರ ವಿದ್ಯಾರ್ಥಿಗಳ ಖಾತೆಗೆ ಹಣ ಹಾಕಿರುತ್ತಾರೆ ಎನ್ನಲಾಗುತ್ತಿದೆ. ಸರ್ಕಾರ ಮತ್ತು ಕಾಲೇಜಿನ ನಡುವೆ ವ್ಯವಹಾರ ನಡೆದಾಗ ಸರ್ಕಾರ ಕಡ್ಡಾಯವಾಗಿ ಹಣವನ್ನು ಪಾವತಿಸಲೇಬೇಕಿರುತ್ತದೆ. ಆ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿರುವ ಸರ್ಕಾರ, ವಿದ್ಯಾರ್ಥಿಗಳ ಖಾತೆಗೆ ಹಣ ಹಾಕುವುದಾಗಿ ನಂಬಿಸಿರುವ ಸಾಧ್ಯತೆ ಇದೆ. ಕೆಲವು ವಿದ್ಯಾರ್ಥಿಗಳು ಸ್ಕಾಲರ್‌ಶಿಪ್‌ ಬಂದಿದೆ ಎನ್ನುತ್ತಾರೆ, ಕೆಲವು ವಿದ್ಯಾರ್ಥಿಗಳು ಬಂದಿಲ್ಲ ಎನ್ನತ್ತಿದ್ದಾರೆ. ಇದರ ವಿರುದ್ಧ ವಿದ್ಯಾರ್ಥಿಗಳು ಒಂದಾಗಿ ಧ್ವನಿ ಎತ್ತಬೇಕಿದೆ” ‌ಎಂದು ಆಶಿಸಿದರು.

‘ನಾನುಗೌರಿ.ಕಾಂ’ಗೆ ಯುವರಾಜ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ಎನ್.ಯಶೋಧಾ ಅವರು ಪ್ರತಿಕ್ರಿಯಿಸಿ, “ನಮ್ಮದು ಸ್ವಾಯತ್ತ ಕಾಲೇಜು. ಎಸ್‌.ಸಿ., ಎಸ್‌.ಟಿ. ವಿದ್ಯಾರ್ಥಿಗಳು ಶುಲ್ಕವನ್ನು ಪಾವತಿಸಬೇಕಾಗಿದೆ. ವಿದ್ಯಾರ್ಥಿ ವೇತನ ಬಂದಿದೆಯೋ ಇಲ್ಲವೋ ಎಂದು ವಿದ್ಯಾರ್ಥಿಗಳು ಗಮನ ಹರಿಸುತ್ತಿಲ್ಲ. ಸಮಾಜ ಇಲಾಖೆ ಇಲಾಖೆಯಲ್ಲಿ ಒತ್ತಡ ತರಬೇಕು. ನೇರವಾಗಿ ಕಾಲೇಜಿಗೆ ಹಣ ಪಾವತಿಸಿ ಎಂದು ತಿಳಿಸಬೇಕು. ಅಥವಾ ತಮ್ಮ ಖಾತೆಗೆ ಹಣ ಬಂದಿದ್ದರೆ ಸೂಚನೆಗಳನ್ನು ನೀಡುವಂತೆ ಆಗ್ರಹಿಸಬೇಕು” ಎಂದು ತಿಳಿಸಿದರು.

“ಎರಡು ಕಂತುಗಳಲ್ಲೇ ಶುಲ್ಕ ಪಾವತಿ ಮಾಡಲು ಅವಕಾಶ ನೀಡಿದ್ದೇವೆ. ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಿಲ್ಲ” ಎಂದರು.

ಇದನ್ನೂ ಓದಿರಿ: ದಲಿತ ಶಾಸಕನಿಗೆ ಅಶ್ಲೀಲವಾಗಿ ನಿಂದಿಸಿ, ದಲಿತ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿದ ಬಿಜೆಪಿ ಶಾಸಕ

ಬಡ ಎಸ್‌ಸಿ, ಎಸ್‌ಟಿ, ಒಬಿಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಆತಂಕದ ಕುರಿತು ಮೈಸೂರು ವಿವಿ ಕುಲಪತಿ ಜಿ.ಹೇಮಂತ್‌ಕುಮಾರ್‌, ಮಹಾರಾಜ ಕಾಲೇಜು ಪ್ರಾಂಶುಪಾಲರಾದ ಪ್ರೊ.ಅನಿಟ ವಿಮ್ಲಾ ಬ್ರಾಗ್ಸ್ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಲು ಯತ್ನಿಸಿತು. ಆದರೆ ಕರೆಯನ್ನು ಸ್ವೀಕರಿಸಲಿಲ್ಲ.

ಒಂದೆಡೆ ಎಸ್‌.ಟಿ., ಎಸ್‌.ಟಿ.ಗಳ ಮೀಸಲಾತಿಯನ್ನು ಹೆಚ್ಚಿಸುತ್ತಿದ್ದೇವೆ ಎಂದು ಹೇಳಿಕೊಳ್ಳುವ ಸರ್ಕಾರ, ಅದೇ ಎಸ್‌.ಸಿ., ಎಸ್.ಟಿ. ವಿದ್ಯಾರ್ಥಿಗಳ ಶುಲ್ಕವನ್ನು ಹೆಚ್ಚಿಸಿ ಅಥವಾ ವಿದ್ಯಾರ್ಥಿ ವೇತನವನ್ನು ಸಮರ್ಪಕವಾಗಿ ಬಿಡುಗಡೆಯೂ ಮಾಡದೆ ವಂಚನೆಗೈಯುತ್ತಿದೆ. ಸಾರ್ವಜನಿಕವಾಗಿ ಬಿಡುಗಡೆಯಾಗದ, ಸದನದಲ್ಲಿ ಚರ್ಚೆಯೂ ಆಗದ ಜಸ್ಟೀಸ್ ಎಚ್‌.ಎನ್‌.ನಾಗಮೋಹನ ದಾಸ್ ಸಮಿತಿಯ ವರದಿಯನ್ನು ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿದೆ. ‘ಎಸ್‌ಸಿ, ಎಸ್‌ಟಿಗಳಿಗೆ ದೀಪಾವಳಿ ಗಿಫ್ಟ್‌’ ಎಂದೆಲ್ಲ ಕೆಲ ಮಾಧ್ಯಮಗಳು ಅತಿರಂಜಕವಾಗಿ ವರದಿ ಮಾಡುತ್ತಿವೆ. ವಾಸ್ತವದಲ್ಲಿ ದಲಿತ ವಿದ್ಯಾರ್ಥಿಗಳ ಬದುಕನ್ನು ಸರ್ಕಾರ ಕತ್ತಲೆಗೆ ತಳ್ಳುತ್ತಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಅಹಿಂದ ವರ್ಗದವರು ವಿದ್ಯಾವಂತರಾಗಬಾರದು ಎಂಬ ಮನುವಾದಿಗಳ ಹಿಡನ್ ಅಜೆಂಡಾ, ಅತ್ಯಂತ ಯಶಸ್ವಿಯಾಗಿ ಜಾರಿಯಾಗುತ್ತಿದೆ.

  2. ಕೇವಲ ಬಾಯಿಮಾತಿನಲ್ಲಿ ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ದಲಿತ ವಿದ್ಯಾರ್ಥಿ ಸಮೂಹದ ಬಗ್ಗೆ ಕಾಳಜಿ ತೋರುವುದಲ್ಲ, ಶೈಕ್ಷಣಿಕ ವಾಗಿ ಮುಂದೆ ಬರುವುದಕ್ಕೆ ಪ್ರೋತ್ಸಾಹ ನೀಡುವಂತ ಕ್ರಮ ಸರ್ಕಾರದ್ದಾಗಿರಬೇಕು, ಆದರೆ ಸನಾತನವಾದಿಗಳು, ಮನುವಾದಿಗಳಿಂದ ಇದನ್ನು ನೀರೀಕ್ಷಿಸಲಾಗದು, ಇದಕ್ಕೆ ಸಂಘಟಿತ ಹೋರಾಟದಿಂದ ಮಾತ್ರ ತಮ್ಮ ಹಕ್ಕುಗಳನ್ನು ಪಡೆಯಬಹುದು.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...