ಮೈಸೂರಿನ ಬನ್ನೂರು ಬಳಿಯ ಫಾರಂ ಹೌಸ್ ಒಂದರಲ್ಲಿ ಲಿಂಗ ಭ್ರೂಣ ಪತ್ತೆ ಕಾರ್ಯ ನಡೆಸುತ್ತಿದ್ದ ತಂಡವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರವ ಅವರು, “ಬನ್ನೂರು ಹೈವೇ ಬಳಿಯ ಹುಣಗನಹಳ್ಳಿ ಫಾರಂ ಹೌಸ್ ನಲ್ಲಿ ಲಿಂಗ ಭ್ರೂಣ ಪತ್ತೆ ಕಾರ್ಯ ನಡೆಯುತ್ತಿರುವುದನ್ನ ಪತ್ತೆ ಹಚ್ಚಲಾಗಿದೆ. ರಹಸ್ಯ ಕಾರ್ಯಾಚರಣೆ ಮೂಲಕ ನಮ್ಮಆರೋಗ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಭ್ರೂಣ ಹಂತಕರನ್ನು ಸೆರೆಹಿಡಿದಿದ್ದಾರೆ. ಗರ್ಭಿಣಿ ಮಹಿಳೆಯ ಸಹಾಯ ಪಡೆದು ಲಿಂಗ ಭ್ರೂಣ ಪತ್ತೆ ಕಾರ್ಯಚಟುವಟಿಕೆ ನಡೆಸುತ್ತಿರುವುದನ್ನು ಪತ್ತೆ ಮಾಡಲಾಗಿದೆ” ಎಂದು ವಿವರಿಸಿದ್ದಾರೆ.
ಬನ್ನೂರು ಹೈವೇ ಬಳಿಯ ಹುಣಗನಹಳ್ಳಿ ಫಾರಂ ಹೌಸ್ ನಲ್ಲಿ ಲಿಂಗ ಭ್ರೂಣ ಪತ್ತೆ ಕಾರ್ಯ ನಡೆಯುತ್ತಿರುವುದನ್ನ ಪತ್ತೆ ಹಚ್ಚಲಾಗಿದೆ. ರಹಸ್ಯ ಕಾರ್ಯಾಚರಣೆ ಮೂಲಕ ನಮ್ಮಆರೋಗ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಭ್ರೂಣ ಹಂತಕರನ್ನು ಸೆರೆಹಿಡಿದಿದ್ದಾರೆ. ಗರ್ಭಿಣಿ ಮಹಿಳೆಯ ಸಹಾಯ ಪಡೆದು ಲಿಂಗ ಭ್ರೂಣ ಪತ್ತೆ ಕಾರ್ಯಚಟುವಟಿಕೆ ನಡೆಸುತ್ತಿರುವುದನ್ನು… pic.twitter.com/5gW9sdA5hz
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) October 23, 2025
“ಕಾರ್ಯಾಚರಣೆ ವೇಳೆ ನಾಲ್ಕು ಗರ್ಭಿಣಿ ಸ್ತ್ರೀಯರು ಲಿಂಗ ಭ್ರೂಣ ಪತ್ತೆ ಮಾಡಿಸಿಕೊಳ್ಳಲು ಹಾಜರಿರುವುದು ಹಾಗೂ ಸ್ಕ್ಯಾನಿಂಗ್ ಬಳಕೆ ಮಾಡುವ ಉಪಕರಣವು ಕಂಡು ಬಂದಿದೆ. ಹೆರಿಗೆ ಪೂರ್ವ ಭ್ರೂಣ ಲಿಂಗಪತ್ತೆ (ಪಿ.ಸಿ.ಪಿ.ಎನ್.ಡಿ.ಟಿ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಹೆಣ್ಣು ಭ್ರೂಣ ಹತ್ಯೆ ವಿರುದ್ಧ ಆರೋಗ್ಯ ಇಲಾಖೆ ನಿರಂತರ ಹೋರಾಟ ನಡೆಸುತ್ತಿದೆ” ಎಂದು ಹೇಳಿದ್ದಾರೆ.
“ಹೆಣ್ಣು ಭ್ರೂಣ ಹತ್ಯೆ ಒಂದು ಸಮಾಜಿಕ ಪಿಡುಗು.. ಸಮಾಜ ಈ ಬಗ್ಗೆ ಜಾಗೃತರಾಗಿ ಭ್ರೂಣ ಹತ್ಯೆಯ ವಿರುದ್ಧ ಸಮರ ಸಾರಲು ಮುಂದಾಗಬೇಕು. ಆರೋಗ್ಯ ಇಲಾಖೆ ಸದಾ ಭ್ರೂಣ ಹಂತಕರ ವಿರುದ್ಧ ಸಹಕರಿಸುವವರ ಜೊತೆಯಿದೆ. ಯಾರು ಎಷ್ಟೇ ದೊಡ್ಡವರಿದ್ದರು, ಹೆಣ್ಣು ಭ್ರೂಣ ಹಂತಕರನ್ನು ಮಟ್ಟಹಾಕಲು ನಮ್ಮ ಸರ್ಕಾರ ಕಠಿಬದ್ಧವಾಗಿದೆ” ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆಳಂದ ಮತಗಳ್ಳತನ ಪ್ರಕರಣ | ತನಿಖೆ ಚುರುಕುಗೊಳಿಸಿದ ಎಸ್‌ಐಟಿ; ಮಹತ್ವದ ಮಾಹಿತಿ ಬಹಿರಂಗ