Homeಕರ್ನಾಟಕಮೈಸೂರು ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ: ಗೊತ್ತಿಲ್ಲದೇ ಪತ್ರಕೊಟ್ಟು ತಪ್ಪು ಮಾಡಿದ್ದೇನೆ ಎಂದು ಒಪ್ಪಿಕೊಂಡ ಬಿಜೆಪಿ ಶಾಸಕ!

ಮೈಸೂರು ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ: ಗೊತ್ತಿಲ್ಲದೇ ಪತ್ರಕೊಟ್ಟು ತಪ್ಪು ಮಾಡಿದ್ದೇನೆ ಎಂದು ಒಪ್ಪಿಕೊಂಡ ಬಿಜೆಪಿ ಶಾಸಕ!

ವಿಚಾರಣೆ ಮುಗಿಯುವವರೆಗೂ ಯಾವುದೇ ಕಾರಣಕ್ಕೂ ಆರೋಪಿಯ ಅಮಾನತನ್ನು ರದ್ದು ಮಾಡುವುದಿಲ್ಲ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಅನಿರುದ್ಧ್ ಶ್ರವಣ್‌ ಸ್ಪಷ್ಟಪಡಿಸಿದ್ದಾರೆ.

- Advertisement -
- Advertisement -

ಮಹಾರಾಣಿ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿಯೊರ್ವಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿ ಪರ ಗೊತ್ತಿಲ್ಲದೇ ಪತ್ರಕೊಟ್ಟು ತಪ್ಪು ಮಾಡಿದ್ದೇನೆ, ಮತ್ತೊಮ್ಮೆ ಹೀಗೆ ಮಾಡುವುದಿಲ್ಲ ಎಂದು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕರಾದ ಎಲ್‌.ನಾಗೇಂದ್ರರವರು ತಿಳಿಸಿದ್ದಾರೆ.

ಇನ್ನೊಂದೆಡೆ ಆರೋಪಿ ದ್ವಿತಿಯ ದರ್ಜೆ ಸಹಾಯಕ ಜಯರಾಮುನನ್ನು ಅಮಾನತು ಮಾಡಿರುವುದನ್ನು ತೆರವುಗೊಳಿಸುವುದಿಲ್ಲ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಅನಿರುದ್ಧ್ ಶ್ರವಣ್‌ ತಿಳಿಸಿದ್ದಾರೆ.

ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಅವರು ನಮಗೆ ಅಮಾನತು ಆದೇಶ ವಾಪಸ್‌ ತೆಗೆದುಕೊಳ್ಳಿ ಎಂದು ಯಾವುದೇ ಆದೇಶ ಬಂದಿಲ್ಲ. ಅಲ್ಲದೇ ವಿಚಾರಣೆ ಪ್ರಗತಿಯಲ್ಲಿದೆ. ಹಾಗಾಗಿ ಪೂರ್ಣ ವಿಚಾರಣೆ ಮುಗಿಯುವವರೆಗೂ ಯಾವುದೇ ಕಾರಣಕ್ಕೂ ನಾವು ಅಮಾನತನ್ನು ರದ್ದು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಕರಣದ ಆರೋಪಿಯಾಗಿ ಅಮಾನತು ಆಗಿರುವ ಕಾಲೇಜಿನ ದ್ವಿತಿಯ ದರ್ಜೆ ಸಹಾಯಕ ಜಯರಾಮುರವರು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕರಾದ ಎಲ್‌.ನಾಗೇಂದ್ರರವರಿಂದ ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್‌ರವರಿಗೆ ಅಮಾನತು ರದ್ದುಪಡಿಸುವಂತೆ ಪತ್ರ ಬರೆದಿದ್ದರು. ದಿನಾಂಕ 16-12-2019ರಂದು ಪತ್ರ ಬರೆದಿದ್ದ ಶಾಸಕರು ಕಾಲೇಜಿನಲ್ಲಿ ಜಯರಾಮುರವರಿಗೆ ಆಗದ ಪ್ರಾಧ್ಯಾಪಕರು ಅಮಾನತ್ತಿಗೆ ಕಾರಣರಾಗಿದ್ದಾರೆ. ಕೂಡಲೇ ಅಮಾನತ್ತು ರದ್ದುಪಡಿಸಿ ಅದೇ ಕಾಲೇಜಿಗೆ ಅವರನ್ನು ನಿಯುಕ್ತಿ ಮಾಡಬೇಕೆಂದು ಒತ್ತಾಯಿಸಿದ್ದರು.

ಇದನ್ನೂ ಓದಿ: ಮಹಾರಾಣಿ ಕಾಲೇಜು: ಲೈಂಗಿಕ ಕಿರುಕುಳ ನಡೆಸಿದ ಆರೋಪಿಯ ಪರ ಬಿಜೆಪಿ ಶಾಸಕ ನಾಗೇಂದ್ರ ವಕಾಲತ್ತು..

ಈ ಕುರಿತು ನಾನುಗೌರಿ.ಕಾಂ ಶಾಸಕ ನಾಗೇಂದ್ರರವರನ್ನು ಸಂಪರ್ಕಿಸಿತು. ದಿನನಿತ್ಯ ನೂರಾರು ಜನರು ನನ್ನ ಕಛೇರಿ ಬಂದು ಪತ್ರ ಕೇಳುತ್ತಾರೆ. ಹಾಗಾಗಿ ಆತನಿಗೆ ಪತ್ರ ಕೊಟ್ಟಿದ್ದೇನೆ, ಹುಡುಗಿಯೇ ವಾಪಸ್‌ ಕೇಸು ಪಡೆದಿದ್ದಾಳೆ. ಕೇಸು ಮುಗಿದಿದೆಯಲ್ಲವೇ ಎಂದು ಜಾರಿಕೊಳ್ಳಲು ಪ್ರಯತ್ನಿಸಿದರು. ನೀವು ಒಬ್ಬ ಶಾಸಕ ಸ್ಥಾನದಲ್ಲಿದ್ದುಕೊಂಡು ಅನ್ಯಾಯಕ್ಕೆ ಒಳಗಾದವರಿಗೆ ಬೆಂಬಲಿಸಬೇಕೆ ಅಥವಾ ಆರೋಪಿಗೋ? ಹೆಣ್ಣು ಮಕ್ಕಳ ವಿಷಯದಲ್ಲಿ ಸೂಕ್ಷ್ಮವಾಗಿ ವರ್ತಿಸಬೇಕಲ್ಲವೇ? ಶಾಸಕರೇ ಹೀಗೆ ಮಾತನಾಡಿದರೆ  ಹೇಗೆ, ಆ ಆಡಿಯೋ ಪೂರ್ಣವಾಗಿ ಕೇಳಿದ್ದೀರಾ ಎಂದು ಅವರನ್ನು ಪ್ರಶ್ನಿಸಲಾಯಿತು.

ಶಾಸಕರಾದ ಎಲ್‌.ನಾಗೇಂದ್ರ

ಆಗ ಎಚ್ಚೆತ್ತುಕೊಂಡ ಅವರು ನನಗೆ ಈ ವಿಚಾರದ ಬಗ್ಗೆ ಪೂರ್ಣ ಅರಿವಿಲ್ಲದೇ ಪತ್ರ ಕೊಟ್ಟು ತಪ್ಪು ಮಾಡಿದ್ದೇನೆ. ಆನಂತರ ಆತ ತಪ್ಪು ಮಾಡಿದ್ದಾನೆಂದು ಗೊತ್ತಾಗಿದೆ. ಹಾಗಾಗಿ ಆತನಿಗೆ ಶಿಕ್ಷೆಯಾಗಬೇಕೆಂದು ಮತ್ತೊಂದು ಪತ್ರ ಬೇಕಾದರೆ ಕೊಡುತ್ತೇನೆ. ಆತ ನಮ್ಮೂರಿನವನೇ ಆಗಿದ್ದು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಇನ್ನು ಮುಂದೆ ಈ ರೀತಿ ಮಾಡುವುದಿಲ್ಲ, ಎಚ್ಚರಿಕೆ ವಹಿಸುತ್ತೇನೆ ಎಂದು ತಿಳಿಸಿದ್ದಾರೆ.

ತನಗಾದ ಅನ್ಯಾಯದ ವಿರುದ್ಧ ವಿದ್ಯಾರ್ಥಿನಿಯು ಪ್ರಾಂಶುಪಾಲರಿಗೆ ದೂರು ನೀಡಿದ್ದರು. ತದನಂತರ ಕಾಲೇಜಿನ ಮಹಿಳಾ ದೌರ್ಜನ್ಯ ತಡೆ ಸಮಿತಿಯು ಈ ಕುರಿತು ವಿಚಾರಣೆ ನಡೆಸಿ ಆರೋಪ ಸಾಬೀತಾಗಿದ್ದು ಆರೋಪಿಯ ಮೇಲೆ ಕ್ರಮ ಜರುಗಿಸುವಂತೆ ವರದಿ ನೀಡಿತ್ತು. ಅದರ ಆಧಾರದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಅನಿರುದ್ಧ್ ಶ್ರವಣ್‌‌ರವರು ಸಂಪೂರ್ಣ ವಿಚಾರಣೆಗೆ ಆದೇಶಿಸಿ 12-12-2019 ರಂದು ಆರೋಪಿ ಜಯರಾಮುನನ್ನು ಅಮಾನತ್ತುಗೊಳಿಸಿದ್ದರು.

ನಾನುಗೌರಿ.ಕಾಂ ಈ ಕುರಿತು ಮಹಿಳಾ ಆಯೋಗದ ಮಾಜಿ ಅಧ್ಯಕ್ಷರು ಮತ್ತು ವಕೀಲರಾದ ಮಂಜುಳ ಮಾನಸರವನ್ನು ಮಾತನಾಡಿಸಲಾಯಿತು. “ಯಾರೇ ತಪ್ಪು ಮಾಡಿದರೂ ಅದು ತಪ್ಪೆ. ತಪ್ಪೆಂದು ಗೊತ್ತಿದ್ದು ಅದನ್ನು ಬೆಂಬಲಿಸುವುದು ಅದು ದೊಡ್ಡ ತಪ್ಪು. ಆ ರೀತಿಯಲ್ಲಿ ನೋಡಿದರೆ ಶಾಸಕರಾದ ನಾಗೇಂದ್ರರವರ ಈ ನಡೆ ತೀವ್ರ ಖಂಡನೀಯ. ಬಿಜೆಪಿಯ ಶಾಸಕರು ಒಬ್ಬ ಹೆಣ್ಣು ಮಗಳಿಗೆ ಅನ್ಯಾಯವಾಗಿದೆ ಎಂದು ಗೊತ್ತಿದ್ದರೂ ಕೂಡ ಆರೋಪಿಯ ಪರ ಪತ್ರ ಬರೆಯುವುದು ಎಷ್ಟು ಸರಿ?” ಎಂದು ಪ್ರಶ್ನಿಸಿದ್ದಾರೆ.

ಮಂಜುಳ ಮಾನಸ

ಅಮಾನತ್ತನ್ನು ತಕ್ಷಣವೇ ತೆರವುಗೊಳಿಸಿ ಎನ್ನುವುದರ ಮೂಲಕ ಶಾಸಕರು ಯಾವ ಸಂದೇಶ ಕೊಡುತ್ತಿದ್ದಾರೆ? ಒಬ್ಬ ಶಾಸಕರಾಗಿ ನನಗೆ ಗೊತ್ತಿಲ್ಲದೇ ಹೀಗೆ ಮಾಡಿದ್ದೇನೆ ಎಂದು ತಪ್ಪಿಸಿಕೊಳ್ಳಬಾರದು. ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಇದನ್ನು ತಡೆಯಬೇಕಾದ ಜವಾಬ್ದಾರಿ ಇಡೀ ಸಮಾಜದ್ದು. ಅಂತದ್ದರಲ್ಲಿ ಶಾಸಕ ಸ್ಥಾನದಲ್ಲಿರುವವರು ಆರೋಪಿಗೆ ಬೆಂಬಲ ನೀಡುವುದನ್ನು ಯಾವ ಸಮಾಜವೂ ಒಪ್ಪುವುದಿಲ್ಲ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಅಮಾನತ್ತು ಯಾವ ಕಾರಣಕ್ಕೂ ರದ್ದಾಗಬಾರದು. ಸಮಗ್ರ ತನಿಖೆ ನಡೆಯಬೇಕು, ಆ ವಿದ್ಯಾರ್ಥಿನಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕಾಲೇಜಿನ ಮಹಿಳಾ ದೌರ್ಜನ್ಯ ವಿರೋಧಿ ಸಮಿತಿಯ ಸದಸ್ಯರು ಆಗಿದ್ದ, ವಕೀಲರಾದ ಸುಮನರವರು ಪ್ರತಿಕ್ರಿಯಿಸಿದ್ದು, ಈ ಪ್ರಕರಣದಲ್ಲಿ ಆರೋಪಿ ಜಯರಾಮು ಮಾತ್ರವಲ್ಲ. ಅವರ ಪರ ನಿಂತ ಶಾಸಕ ಎಲ್.ನಾಗೇಂದ್ರ, ನಮ್ಮ ಸಮಿತಿಯನ್ನು ಯಾರಿಗೆ ತಿಳಿಸದೇ ಮುಚ್ಚಿರುವ ಪ್ರಾಂಶುಪಾಲರು ಸಹ ಆರೋಪಿಯಾಗಿದ್ದಾರೆ. ಇನ್ನು ವಿಚಾರಣೆ ಜಾರಿಯಲ್ಲಿರುವಾಗಲೇ ಪ್ರಾಶುಪಾಲರು ಸಮಿತಿಯನ್ನು ವಿಸರ್ಜಿಸಿ ಆರೋಪಿ ಪರ ವಹಿಸಿರುವುದು ದುರದೃಷ್ಠಕರ, ಹಾಗೆಯೇ ಶಾಸಕರು ಆರೋಪಿ ಪರ ಪತ್ರ ನೀಡಿರುವುದು ನಾಚಿಕೇಕೇಡು ಎಂದು ಕಿಡಿಕಾರಿದ್ದಾರೆ. ನಿಷ್ಪಕ್ಷಪಾತ ತನಿಖೆ ನಡೆದು ಆರೋಪಿಗಳೆಲ್ಲರ ಮೇಲೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...