Homeಕರ್ನಾಟಕಮೈಸೂರು: ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಣೆ

ಮೈಸೂರು: ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಣೆ

- Advertisement -
- Advertisement -

ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಿಸಿ ಮೈಸೂರು ಪೊಲೀಸ್ ಆಯುಕ್ತ ಬಿ.ರಮೇಶ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಅನುಮತಿ ನಿರಾಕರಣೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಅ. 13ರಂದು ಮಹಿಷ ದಸರಾ ಆಚರಣೆಗೆ ಮಹಿಷ ದಸರಾ ಆಚರಣಾ ಸಮಿತಿ ಅನುಮತಿ ಕೋರಿತ್ತು. ಮತ್ತೊಂದು ಕಡೆ ಚಲೋ-ಚಾಮುಂಡಿ ಬೆಟ್ಟ ಕಾರ್ಯಕ್ರಮಕ್ಕೆ ಬಿಜೆಪಿ ನಗರ ಸಮಿತಿ ಅನುಮತಿ ಕೋರಿತ್ತು.

ʼʼಮೇಲ್ಕಂಡ ಎರಡೂ ಕಾರ್ಯಕ್ರಮಗಳಗೆ ಅನುಮತಿ ನೀಡಿದಲ್ಲಿ ಮೈಸೂರು ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಇರುವುದರಿಂದ ಎರಡು ಕಾರ್ಯಕ್ರಮಗಳಿಗೆ ಪೊಲೀಸ್ ಅನುಮತಿಯನ್ನು ನಿರಾಕರಣೆ ಮಾಡಲಾಗಿದೆʼʼ ಎಂದು ಮೈಸೂರು ನಗರ ಪೊಲೀಸ್ ಅಯುಕ್ತ ಬಿ.ರಮೇಶ್‌ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ರಾಜಕೀಯ ವಾಕ್ಸಮರಕ್ಕೆ ವೇದಿಕೆಯಾಗಿದ್ದ ಮಹಿಷ ದಸರಾ ಹಾಗೂ ಇದನ್ನು ವಿರೋಧಿಸಿ ಸಂಸದ ಪ್ರತಾಪ್‌ ಸಿಂಹ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮಗಳಿಗೆ ಅನುಮತಿಯನ್ನು ಕೇಳಲಾಗಿತ್ತು. ಆದರೆ, ಇವರೆಡೂ ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಕುಂದು ತರಬಹುದೆಂಬ ಲೆಕ್ಕಾಚಾರದಿಂದ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಎರಡೂ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನಿರಾಕರಣೆ ಮಾಡಿದ್ದಾರೆ.

ಈ ಮೂಲಕ ಮಹಿಷ ದಸರಾ ಆಚರಣಾ ಸಮಿತಿಗೆ ಹಾಗೂ ಚಾಮುಂಡಿ ಚಲೋಗೂ ಅನುಮತಿ ಇಲ್ಲ. ಅ.13 ರಂದು ಮಹಿಷ ದಸರಾ ಆಚರಣೆ ಹಿನ್ನೆಲೆಯಲ್ಲಿ ಬೆಳಗ್ಗೆ 9-30 ಗಂಟೆಗೆ ಮಹಿಷನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲು ತೀರ್ಮಾನ ಮಾಡಲಾಗಿದೆ. ಚಾಮುಂಡಿ ಬೆಟ್ಟದ ತಪ್ಪಲಿನ ಮುಖ್ಯದ್ವಾರ ತಾವರೆಕಟ್ಟೆ ಬಳಿಯಿಂದ ಜಾಥ ಹೊರಡಲಾಗುತ್ತದೆ. ಮೃಗಾಲಯ ರಸ್ತೆ ಮೂಲಕ ಮೆರವಣಿಗೆ ಪುರಭವನದ ಅಂಬೇಡ್ಕರ್ ಮತ್ಥಳಿಗೆ ಮಾಲಾರ್ಪಣೆ ಮಾಡಲು ತೀರ್ಮಾನಿಸಲಾಗಿತ್ತು.ಅದೇ ಆವರಣದಲ್ಲಿ ವೇದಿಕೆಯ ಕಾರ್ಯಕ್ರಮ ನಡೆಸಲು ಚಿಂತನೆ ಮಾಡಲಾಗಿತ್ತು. ಈ ಸಂಬಂಧ ಪೊಲೀಸ್ ಅನುಮತಿ ನೀಡುವಂತೆ ಮಹಿಷ ದಸರಾ ಸಮಿತಿ ಮನವಿ ಮಾಡಿತ್ತು.

ಮತ್ತೊಂದೆಡೆ ಬಿಜೆಪಿ ಮಹಿಷ ದಸರಾ ಆಚರಣೆ ವಿರೋಧಿಸಿತ್ತು. ಅ.13 ರಂದು ಬೆಳಗ್ಗೆ 8 ಗಂಟೆಗೆ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಿತ್ತು. ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕ ಹತ್ತುವುದು. ವಾಹನಗಳಲ್ಲಿ ರಸ್ತೆಯ ಮುಖಾಂತರ ಚಾಮುಂಡಿ ಬೆಟ್ಟಕ್ಕೆ ತೆರಳುವುದು. ಚಾಮುಂಡಿ ಬೆಟ್ಟದಲ್ಲಿ ಚಲೋ‌ ನಡೆಸಲು ತೀರ್ಮಾನಿಸಿತ್ತು. ಇಲ್ಲಿ ಗಲಭೆಗಳಾಗುವ ಮುನ್ಸೂಚನೆಯಿಂದ ಎರಡು ಕಾರ್ಯಕ್ರಮಗಳಿಗೆ ಅನುಮತಿ ನಿರಾಕರಣೆ ಮಾಡಲಾಗಿದೆ. ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಅನುಮತಿ ನಿರಾಕರಣೆ. ಮೈಸೂರು ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಮಹಿಷ ದಸರಾ- ಚಾಮುಂಡಿಚಲೋಗೆ ಬ್ರೇಕ್ ಹಾಕಲಾಗಿದೆ.

ಇದನ್ನೂ ಓದಿ: ಮಹಿಷ ದಸರಾ: ಸಂಘರ್ಷ, ಹೊಡೆದಾಟಕ್ಕೆ ಕರೆ ಕೊಟ್ಟ ಪ್ರತಾಪ್ ಸಿಂಹ್‌ನನ್ನು ಬಂಧಿಸಿ- ಎಂ.ಲಕ್ಷ್ಮಣ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ; ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ; ಮೂವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ರಾಜಭವನದ ಸಿಬ್ಬಂದಿಯನ್ನು ಅಕ್ರಮವಾಗಿ ತಡೆದ ಆರೋಪದ ಮೇಲೆ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು...