Homeಕರ್ನಾಟಕಕೂಲಿ ಕಾರ್ಮಿಕ ಸೈಯದ್ ಇಸಾಕ್‌ರ ಗ್ರಂಥಾಲಯಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು: 11 ಸಾವಿರ ಪುಸ್ತಕಗಳು ಭಸ್ಮ

ಕೂಲಿ ಕಾರ್ಮಿಕ ಸೈಯದ್ ಇಸಾಕ್‌ರ ಗ್ರಂಥಾಲಯಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು: 11 ಸಾವಿರ ಪುಸ್ತಕಗಳು ಭಸ್ಮ

ಈ ಅಕ್ಷರವಿರೋಧಿ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಲು ಕ್ರಮ ಕೈಗೊಳ್ಳುವದರ ಜೊತೆಗೆ ಸೈಯದ್ ಅವರಿಗೆ ಸೂಕ್ತ ಪರಿಹಾರವನ್ನೂ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

- Advertisement -
- Advertisement -

ಕಳೆದ 10 ವರ್ಷಗಳಿಂದ ಕನ್ನಡಕ್ಕಾಗಿ ಸೇವೆ ಸಲ್ಲಿಸುತ್ತಿದ್ದ, ಕನ್ನಡಕ್ಕಾಗಿ ಗ್ರಂಥಾಲಯವನ್ನು ಕಟ್ಟಿದ್ದ ಮೈಸೂರಿನ ರಾಜೀವ್‌ ನಗರದ ಸೈಯದ್ ಇಸಾಕ್ ಎಂಬುವವರ ಗ್ರಂಥಾಲಯಕ್ಕೆ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದಾರೆ. ಕೂಲಿ ಕಾರ್ಮಿಕರಾಗಿದ್ದ ಸೈಯದ್ ಇಸಾಕ್ ಅವರ ಗ್ರಂಥಾಲಯದಲ್ಲಿ 11 ಸಾವಿರ ಪುಸ್ತಕಗಳಿದ್ದು, ಎಲ್ಲವೂ ಬೆಂಕಿಗಾಹುತಿಯಾಗಿವೆ.

ಕನ್ನಡದ ಮೇಲಿನ ಪ್ರೀತಿಯಿಂದಾಗಿ ಕಳೆದ 10 ವರ್ಷಗಳಿಂದ ಪುಸ್ತಕಗಳನ್ನು ಸಂಗ್ರಹಿಸಿ ಕನ್ನಡ ಸಾರ್ವಜನಿಕ ಗ್ರಂಥಾಲಯ ಆರಂಭಿಸಿದ್ದರು. ಇದರಿಂದ ರಾಜೀವ್ ನಗರ ಮತ್ತು ಶಾಂತಿ ನಗರದ ನಿವಾಸಿಗಳಲ್ಲಿ ಜನಪ್ರಿಯ ಮುಖವಾಗಿದ್ದರು. ಇದನ್ನು ಸಹಿಸದ ಕೆಲವರು ಅನೇಕ ಬಾರಿ ಗಲಾಟೆ ಮಾಡಿದ್ದರು. ಈಗ ಶುಕ್ರವಾರ ಬೆಳಗಿನ ಜಾವದಲ್ಲಿ ಗ್ರಂಥಾಲಯಕ್ಕೆ ಬೆಂಕಿ ಹಚ್ಚಿದ್ದಾರೆ.

ಸೈಯದ್ ಇಸಾಕ್ ಅವರ ಸಾರ್ವಜನಿಕ ಗ್ರಂಥಾಲಯದಲ್ಲಿ 3 ಸಾವಿರ ಕನ್ನಡ ಪುಸ್ತಕಗಳು, ಭಗವದ್ ಗೀತೆಯ 3 ಸಾವಿರ ಪ್ರತಿಗಳು, 3 ಸಾವಿರ ಕುರಾನ್ ಪ್ರತಿಗಳು, 1 ಸಾವಿರ ಉರ್ದು ಪುಸ್ತಕಗಳು ಹಾಗೂ ಬೈಬಲ್‌ನ 1 ಸಾವಿರ ಕನ್ನಡ ಪ್ರತಿಗಳು ಇದ್ದವು. ಇವುಗಳಲ್ಲಿ ಬಹಳಷ್ಟು ದಾನಿಗಳಿಂದ ಸಂಗ್ರಹಿಸಿದ್ದು ಎಂದು ಸೈಯದ್ ಇಸಾಕ್ ಹೇಳಿದ್ದಾರೆ.

ಇದನ್ನೂ ಓದಿ: ರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

ಶಿಕ್ಷಣದಿಂದ ವಂಚಿತರಾಗಿದ್ದ ಸೈಯದ್ ಇಸಾಕ್, ಅಂಡರ್ ಗ್ರೌಂಡ್ ಡ್ರೈನೇಜ್ (ಯುಜಿಡಿ) ಕ್ಲೀನರ್ ಆಗಿ ಕೆಲಸ ಮಾಡುತ್ತಾರೆ. ಜನರಲ್ಲಿ ಓದುವ ಹವ್ಯಾಸವನ್ನು ಬೆಳೆಸಲು ಮತ್ತು ಕನ್ನಡ ಕಲಿಯಲು ಪ್ರೋತ್ಸಾಹಿಸುವ ಉದ್ದೇಶದಿಂದ, ಈ ಸಾರ್ವಜನಿಕ ಗ್ರಂಥಾಲಯವನ್ನು ಆರಂಭಿಸಿದ್ದರು.

ಅಮ್ಮರ್ ಮಸೀದಿ ಬಳಿಯ ರಾಜೀವ್ ನಗರದ ಎರಡನೇ ಹಂತದ ಕಾರ್ಪೊರೇಷನ್ ಪಾರ್ಕ್ ಒಳಗೆ ಶೆಡ್ ಹಾಕಿ ಸ್ಥಾಪಿಸಿದ್ದರು. ಪ್ರತಿದಿನ, 100-150 ಕ್ಕೂ ಹೆಚ್ಚು ಜನರು ಅವರ ಗ್ರಂಥಾಲಯಕ್ಕೆ ಭೇಟಿ ನೀಡುತ್ತಿದ್ದರು. ಕನ್ನಡ, ಇಂಗ್ಲಿಷ್, ಉರ್ದು ಮತ್ತು ತಮಿಳು ಸೇರಿದಂತೆ 17 ಕ್ಕೂ ಹೆಚ್ಚು ಪತ್ರಿಕೆಗಳನ್ನು ಇಸಾಕ್ ಖರೀದಿಸುತ್ತಿದ್ದರು.

“ಬೆಳಿಗ್ಗೆ 4 ಗಂಟೆಗೆ, ಗ್ರಂಥಾಲಯದ ಪಕ್ಕದಲ್ಲಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರು ಒಳಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ನನಗೆ ಮಾಹಿತಿ ನೀಡಿದರು. ನಾನು ಗ್ರಂಥಾಲಯಕ್ಕೆ ಧಾವಿಸಿ, ಬೆಂಕಿ ಆರಿಸಲು ಪ್ರಯತ್ನಿಸಿದರು ಸಾಧ್ಯವಾಗಲಿಲ್ಲ. ಪುಸ್ತಕಗಳು ಬೂದಿಯಾಗುವುದನ್ನು ನೋಡಿದೆ. ”ಎಂದು ಅಳಲು ತೋಡಿಕೊಂಡಿದ್ದಾರೆ.

ಈ ಘಟನೆಯ ನಂತರ, ಸೈಯದ್ ಇಸಾಕ್ ಉದಯಗಿರಿ ಪೊಲೀಸ್ ಠಾಣೆಯಲ್ಲಿ, ದುಷ್ಕರ್ಮಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ಐಪಿಸಿ ಸೆಕ್ಷನ್ 436 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದು, ಅಪರಾಧಿಗಳನ್ನು ಬಂಧಿಸಲು ತನಿಖೆ ಆರಂಭಿಸಿದ್ದಾರೆ.

ಘಟನೆಯಿಂದ ನೊಂದಿದ್ದರು ಕೂಡ ಮತ್ತೆ ಗ್ರಂಥಾಲಯವನ್ನು ಕಟ್ಟುತ್ತೇನೆ ಎಂದಿದ್ದಾರೆ. ಇಸಾಕ್ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಬೆಂಬಲ ವ್ಯಕ್ತವಾಗುತ್ತಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, “ಮೈಸೂರಿನ ಅಕ್ಷರ ಪ್ರೇಮಿ ಸೈಯದ್ ಇಸಾಕ್ ಅವರು ಕಷ್ಟಪಟ್ಟು ಕಟ್ಟಿ ನಡೆಸುತ್ತಿದ್ದ ಸಾರ್ವಜನಿಕ ಗ್ರಂಥಾಲಯವನ್ನು ಸುಟ್ಟುಹಾಕಿರುವುದು ಹೇಯಕೃತ್ಯ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಅಕ್ಷರವಿರೋಧಿ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಲು ಕ್ರಮ ಕೈಗೊಳ್ಳುವದರ ಜೊತೆಗೆ ಸೈಯದ್ ಅವರಿಗೆ ಸೂಕ್ತ ಪರಿಹಾರವನ್ನೂ ನೀಡಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...