Homeಕರ್ನಾಟಕಮೈಸೂರು: ಪದವಿ ಫಲಿತಾಂಶ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ಮೈಸೂರು: ಪದವಿ ಫಲಿತಾಂಶ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

- Advertisement -
- Advertisement -

ಮೈಸೂರು: ಎನ್‌ಇಪಿ-2020 ಅಡಿ ವ್ಯಾಸಂಗ ಮಾಡಿರುವ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಆಲ್‌  ಇಂಡಿಯಾ ಡೆಮಾಕ್ರಟಿಕ್ ಸ್ಟುಡೆಂಟ್ ಆರ್ಗನೈಸೇ಼ಷನ್‌ (ಎಐಡಿಎಸ್‌ಒ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ವಿದ್ಯಾರ್ಥಿಗಳು, “ಕೂಡಲೇ ಫಲಿತಾಂಶ ಬಿಡುಗಡೆ ಮಾಡಬೇಕು, ವಿದ್ಯಾರ್ಥಿ ವೇತನವನ್ನು ಸಂಪೂರ್ಣವಾಗಿ ವಿತರಿಸಬೇಕು, ಬೇಡಿಕೆ ಇರುವಷ್ಟು ಹಾಸ್ಟೆಲ್‌ಗಳ ಸಂಖ್ಯೆ ಹಾಗೂ ದಾಖಲಾತಿಯನ್ನು ಹೆಚ್ಚಿಸಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್‌ಒ ಜಿಲ್ಲಾಧ್ಯಕ್ಷರಾದ ಸುಭಾಷ್, “ಈಗಾಗಲೇ ರಾಜ್ಯದಲ್ಲಿ ಎನ್‌ಇಪಿ ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತಲುಪಿದ್ದಾರೆ. ಆದರೂ ಅವರ ಮೊದಲ ವರ್ಷದ ಫಲಿತಾಂಶ ಬಿಡುಗಡೆಯಾಗಿಲ್ಲ. ಈ ಕೂಡಲೇ ಎನ್‌ಇಪಿ ಬ್ಯಾಚ್ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

“ವಿದ್ಯಾರ್ಥಿವೇತನ ವಿತರಣೆ ಆಗದಿರುವುದು ವಿದ್ಯಾರ್ಥಿಗಳಲ್ಲಿ ಬಹಳ ಆತಂಕ ಮೂಡಿಸಿದೆ. ನೂರಾರು ಬಡ ಕುಟುಂಬದ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣದ ಪೂರೈಕೆಗಾಗಿ ವಿದ್ಯಾರ್ಥಿ ವೇತನದ ಮೇಲೆ ಅವಲಂಬಿತರಾಗಿದ್ದಾರೆ. ವಿದ್ಯಾರ್ಥಿವೇತನ ಸಿಗದಿದ್ದರೆ, ಅವರಲ್ಲಿ ಬಹುಪಾಲು ಜನ ಶಿಕ್ಷಣವನ್ನು ಪೂರೈಸುವುದೇ ಕಷ್ಟಕರವಾಗುತ್ತದೆ. ಈ ಕೂಡಲೇ ಪದವಿ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ವಿದ್ಯಾರ್ಥಿವೇತನ ಬಿಡುಗಡೆ ಮಾಡಬೇಕು” ಎಂದರು.

ಸಂಘಟನೆಯ ಸೆಕ್ರೆಟರಿಯಟ್ ಸದಸ್ಯರಾದ ಸ್ವಾತಿ ಮಾತನಾಡಿ, “ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಮೂಲಭೂತ ಅವಶ್ಯಕತೆಯಾಗಿದೆ. ಆದರೆ ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ವ್ಯವಸ್ಥೆ ಇಲ್ಲ. ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಸಂಖ್ಯೆಗಳನ್ನು ಹಾಗೂ ದಾಖಲಾತಿಯನ್ನು ಹೆಚ್ಚಿಸಬೇಕು” ಎಂದು ತಿಳಿಸಿದರು.

ಪ್ರತಿಭಟನೆಯ ನಂತರ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಸಲ್ಲಿಸಲಾಯಿತು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸಂಘಟನೆಯ ಜಿಲ್ಲಾ ಸಮಿತಿಯ ಕಾರ್ಯದರ್ಶಿ ನಿತಿನ್, ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ, ಸಮಿತಿಯ ಸದಸ್ಯರಾದ ಚಂದ್ರಿಕಾ, ಬಿ.ಆರ್.ಚಂದನಾ, ಹೇಮಲತಾ, ವಿದ್ಯಾರ್ಥಿಗಳಾದ ಜೀವನ್, ಪ್ರಜ್ವಲ್, ತೇಜು, ಮೇಘನಾ, ಶಿವು, ಪ್ರಶಾಂತಿ, ಕೋಮಲ, ಶ್ರೇಯಸ್ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...