Homeಕರ್ನಾಟಕಮೈಸೂರು ದೇವಾಲಯ ಧ್ವಂಸ - ತಹಶೀಲ್ದಾರ್‌ ತಲೆದಂಡ!

ಮೈಸೂರು ದೇವಾಲಯ ಧ್ವಂಸ – ತಹಶೀಲ್ದಾರ್‌ ತಲೆದಂಡ!

- Advertisement -
- Advertisement -

ಸುಪ್ರೀಂಕೋರ್ಟ್‌ ಮತ್ತು ಹೈಕೋರ್ಟ್ ಆದೇಶದಂತೆ, ಇತ್ತೀಚೆಗೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ದೇವಾಲಯವನ್ನು ಕೆಡವಲಾಗಿತ್ತು. ಈ ಹಿನ್ನಲೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ದ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ರಾಜ್ಯ ಸರ್ಕಾರ ನಂಜನಗೂಡು ತಹಶೀಲ್ದಾರ್‌ ಮೋಹನ ಕುಮಾರಿ ಅವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಮೋಹನ ಕುಮಾರಿ ಅವರ ವರ್ಗಾವಣೆ ಬಳಿಕ ತಹಶೀಲ್ದಾರ್‌ ಹುದ್ದೆಯನ್ನು ಸರ್ಕಾರ ಖಾಲಿ ಬಿಟ್ಟಿದೆ. ಆ ಸ್ಥಾನಕ್ಕೆ ಯಾರನ್ನೂ ಕೂಡಾ ಸರ್ಕಾರ ಹೊಸದಾಗಿ ನೇಮಕ ಮಾಡಿಲ್ಲ.

ಇದನ್ನೂ ಓದಿ: ನಿಯಂತ್ರಿಸಲು ಸಾಧ್ಯವಾಗದ ಎಲ್ಲವನ್ನೂ ಮೋದಿ ಸರ್ಕಾರ ಧ್ವಂಸ ಮಾಡುತ್ತಿದೆ

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಉಚ್ಚಗಣಿ ಮಹದೇವಮ್ಮ ದೇವಾಲಯವನ್ನು ರಾಜ್ಯ ಸರ್ಕಾರ ತೆರವು ಮಾಡಿತ್ತು. ಇದರ ವಿರುದ್ದ ಸ್ವತಃ ಬಿಜೆಪಿ ಬೆಂಬಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಜಿಹಾದಿ ಎಂದು ಶಿರಡಿ ಸಾಯಿಬಾಬಾ ಮೂರ್ತಿ ಧ್ವಂಸಗೈದ ಸಂಘಪರಿವಾರದ ಕಾರ್ಯಕರ್ತರು- ದೂರು ದಾಖಲು

ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಶ್ಮಿ ಎಂ. ಎಸ್. ಅವರು ಈ ಆದೇಶ ಹೊರಡಿಸಿದ್ದು, ಮೋಹನ ಕುಮಾರಿ ಅವರನ್ನು, ‘ಐಎಂಎ ವಂಚನೆ ಪ್ರಕರಣ ಮತ್ತು ಸಕ್ಷಮ ಪ್ರಾಧಿಕಾರ ಬೆಂಗಳೂರು ಇಲ್ಲಿನ ತಹಶೀಲ್ದಾರ್‌ ಗ್ರೇಡ್ – 1 ಹುದ್ದೆಗೆ’ ನೇಮಕ ಮಾಡಲಾಗಿದೆ.

ಸುಪ್ರೀಂಕೋರ್ಟ್ ಆದೇಶದ ಪ್ರಕಾರ ದೇವಾಲಯವನ್ನು ನೆಲಸಮಗೊಳಿಸಲಾಗಿದೆ ಎಂದು ಮೈಸೂರು ಜಿಲ್ಲಾಡಳಿತ ಹೇಳಿಕೆ ನೀಡಿತ್ತು.

ಈ ಪ್ರಕರಣ ನಡೆದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದರು. ಅಲ್ಲದೆ ಸುಪ್ರೀಂಕೋರ್ಟ್ ಆದೇಶವನ್ನು ತಪ್ಪಿಸಲು ರಾಜ್ಯ ವಿಧಾನಸಭೆಯಲ್ಲಿ, ‘ಧಾರ್ಮಿಕ ಕಟ್ಟಡಗಳ(ಸಂರಕ್ಷಣೆ) ಮಸೂದೆ-2021’ ಯನ್ನು ಸದನ ಅನುಮೋದಿಸಿದೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಮಸೂದೆ ಮಂಡಿಸಿ, ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸಿರುವ ಧಾರ್ಮಿಕೆ ಕಟ್ಟಡಗಳನ್ನು ಸಂರಕ್ಷಿಸಲು ಈ ಮಸೂದೆ ತಂದಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ಧ್ವಂಸಗೊಂಡ ದೇವಾಲಯವನ್ನು ಎರಡು ವಾರಗಳಲ್ಲಿ ಪುನಃಸ್ಥಾಪಿಸಿಯೆಂದ ಪಾಕಿಸ್ತಾನ ಸುಪ್ರೀಂ ಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...