Homeಕರ್ನಾಟಕಮೈಸೂರು: ಭೀಕರ ಅಪಘಾತದಲ್ಲಿ ಹತ್ತು ಮಂದಿ ದಾರುಣ ಸಾವು

ಮೈಸೂರು: ಭೀಕರ ಅಪಘಾತದಲ್ಲಿ ಹತ್ತು ಮಂದಿ ದಾರುಣ ಸಾವು

- Advertisement -
- Advertisement -

ಕೊಳ್ಳೇಗಾಲ ಮತ್ತು ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿನ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿ ಹತ್ತು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿದೆ. ಸೋಮವಾರ ಮಧ್ಯಾಹ್ನ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಬಳಿಕ ಇನೋವಾ ಕಾರು ಖಾಸಗಿ ಬಸ್‌ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ.

ಅಪಘಾತದ ಭೀಕರತೆಗೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದವರು ಕೂಡ ಆಸ್ಪತ್ರೆ ಮಾರ್ಗ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ. ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಹತ್ತುಮಂದಿ ಸಾವನ್ನಪ್ಪಿದ್ದಾರೆ.

ಸೋಮವಾರ ಮಧ್ಯಾಹ್ನ ಮೈಸೂರು ಜಿಲ್ಲೆಯ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಬಳಿಕ ಇನೋವಾ ಕಾರು ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಕರೆತರಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ. ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಹತ್ತುಮಂದಿ ಸಾವನ್ನಪ್ಪಿದ್ದಾರೆ.

ಮೃತ ಹತ್ತು ಜನರು ಬಳ್ಳಾರಿ ಮೂಲದವರೆಂದು ತಿಳಿದು ಬಂದಿದೆ. ಟಿ.ನರಸೀಪುರ ಮುಖ್ಯ ರಸ್ತೆಯ ಮಾರ್ಗವಾಗಿ ತೆರಳುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ಆಗಮಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಬಂಧ ಟಿ.ನರಸೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿನಲ್ಲಿ ಇಬ್ಬರು ಮಕ್ಕಳು ಹಾಗೂ ಮಹಿಳೆಯರು ಸೇರಿ 13 ಮಂದಿ ಇದ್ದರು ಎನ್ನಲಾಗಿದೆ. ಖಾಸಗಿ ಬಸ್‌ ಕೊಳ್ಳೇಗಾಲದ ಕಡೆಗೆ ಹೋಗುತ್ತಿತ್ತು. ಮೃತರ ವಿವರ ಲಭ್ಯವಾಗಿಲ್ಲ. ಸ್ಥಳೀಯರ ನೆರವಿನಲ್ಲಿ ಶವಗಳನ್ನು ಹೊರ ತೆಗೆಯಲಾಗುತ್ತಿದೆ.

ನಿನ್ನೆ ಕೊಪ್ಪಳದಲ್ಲಿ ಅಪಘಾತ; ಆರು ಮಂದಿ ಸಾವು

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಕಲಕೇರಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ಆರು ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ ಮೃತರ ಕುಟುಂಬಕ್ಕೆ ತಲಾ ₹ 2 ಲಕ್ಷ ಪರಿಹಾರ ಘೋಷಿಸಿದ್ದರು.

ಸೊಲ್ಲಾಪುರದ ಜಯಶ್ರೀ ಕಾಂಬಳೆ (25), ಚಾಲಕ ರಾಘವೇಂದ್ರ ಕಾಂಬಳೆ (28), ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ನಂದ್ರಾಳ ಗ್ರಾಮದ ಖಾಜಪ್ಪ ಬನಸೋಡೆ (36), ಶಿರನಾಳದ ಅಕ್ಷಯ ಶಿವಶರಣ (22), ರಾಕಿ (4) ಮತ್ತು ರಶ್ಮಿಕಾ (2) ಮೃತಪಟ್ಟವರು.

ಜಯಶ್ರೀ ಗೃಹಿಣಿಯಾಗಿದ್ದರು. ರಾಘವೇಂದ್ರ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದರು. ಖಾಜಪ್ಪ ಮತ್ತು ಅಕ್ಷಯ ಕೂಲಿ ಕೆಲಸ ಮಾಡುತ್ತಿದ್ದರು. ತಮಿಳುನಾಡಿನ ಲಾರಿ ಗುಜರಾತ್ ಕಡೆಗೆ ತೆರಳುತ್ತಿತ್ತು. ಕಾರು ವಿಜಯಪುರದಿಂದ ಬೆಂಗಳೂರು ಕಡೆಗೆ ತೆರಳುವಾಗ ಅಪಘಾತ ಸಂಭವಿಸಿತ್ತು.

‘ವೇಗವಾಗಿ ಬರುತ್ತಿದ್ದ ಕಾರಿನ ಟಯರ್‌ ಸಿಡಿದು ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...