Homeಮುಖಪುಟಮೈಸೂರು: ‘ಹಿಜಾಬ್‌‌’ ವಿವಾದದ ನಡುವೆ ಮುಚ್ಚಿಹೋದ ಶತಮಾನದ ಹೆಣ್ಣು ಮಕ್ಕಳ ಶಾಲೆ!

ಮೈಸೂರು: ‘ಹಿಜಾಬ್‌‌’ ವಿವಾದದ ನಡುವೆ ಮುಚ್ಚಿಹೋದ ಶತಮಾನದ ಹೆಣ್ಣು ಮಕ್ಕಳ ಶಾಲೆ!

ಶತಮಾನದ ಇತಿಹಾಸವಿರುವ ಮಹಾರಾಣಿಯವರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೀಗಮುದ್ರೆ ಬಿದ್ದಿದೆ. ರಾಮಕೃಷ್ಣ ಆಶ್ರಮ ಮೇಲುಗೈ ಸಾಧಿಸಿದೆ. ಇತ್ತ ಜನಪ್ರತಿನಿಧಿಗಳು ಧಾರ್ಮಿಕ ಸೂಕ್ಷ್ಮಗಳ ಸುತ್ತ ಗಿರಕಿ ಹೊಡೆಯುತ್ತಿದ್ದಾರೆ.

- Advertisement -
- Advertisement -

ಹಿಜಾಬ್‌ ವಿವಾದದ ಹಗ್ಗಜಗ್ಗಾಟದಲ್ಲಿ ಕರ್ನಾಟಕ ತೊಡಗಿರುವ ಹೊತ್ತಿನಲ್ಲೇ ಮೈಸೂರಿನ ಶತಮಾನದ ಕನ್ನಡ ಶಾಲೆಗೆ ಬೀಗ ಬಿದ್ದಿರುವುದು ಅಷ್ಟಾಗಿ ಚರ್ಚೆಯಾಗುತ್ತಿಲ್ಲ. ಮೈಸೂರಿನಲ್ಲಿ ನಡೆಯುತ್ತಿರುವ ಹೋರಾಟ ಮೈಸೂರಿನಾಚೆಗೆ ಪಸರಿಸಲಿಲ್ಲ.

ಮೈಸೂರು ನಗರದ ಮಹಾರಾಣಿಯವರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ (ಎನ್‌‌ಟಿಎಂಎಸ್‌‌) ಕಳೆದ ಗುರುವಾರ ಬೀಗ ಜಡಿಯಲಾಗಿದೆ. ಶತಮಾನದ ಕನ್ನಡ ಶಾಲೆ, ಹೆಣ್ಣು ಮಕ್ಕಳಿಗಾಗಿಯೇ ಆ ಕಾಲದಲ್ಲಿ ರಾಜ ವಂಶಸ್ಥರು ಆರಂಭಿಸಿದ ಶಾಲೆ ಮುಚ್ಚಿ ಹೋಗುತ್ತಿದೆ. ವಿವಾದದ ಕೇಂದ್ರ ಬಿಂದುವಾಗಿದ್ದ ರಾಮಕೃಷ್ಣ ಆಶ್ರಮ ಮೇಲುಗೈ ಸಾಧಿಸಿದೆ.

ಸ್ವಾಮಿ ವಿವೇಕನಂದರ ಹೆಸರಿನಲ್ಲಿ ಸ್ಮಾರಕ ನಿರ್ಮಾಣಕ್ಕಾಗಿ ರಾಮಕೃಷ್ಣ ಆಶ್ರಮಕ್ಕೆ ಈ ಶಾಲೆಯ ಕಟ್ಟಡ ಸೇರಿದಂತೆ ಜಾಗವನ್ನು ರಾಜ್ಯ ಸರ್ಕಾರ ನೀಡಿತ್ತು. ಇದರ ಸಂಬಂಧ ವಿವಾದ ಉಂಟಾಗಿತ್ತು. ಸ್ವಾಮಿ ವಿವೇಕಾನಂದರು ಭೇಟಿ ನೀಡಿದ ಜಾಗವೆಂದು ಆಶ್ರಮಕ್ಕೆ ಈ ಶಾಲೆಯ ಜಾಗವನ್ನು ನೀಡಲು ಮುಂದಾದ ದಿನದಿಂದಲೂ ಹೋರಾಟ ನಡೆಯುತ್ತಿತ್ತು. ಸುಮಾರು ಹತ್ತು ವರ್ಷಗಳಿಂದ ವಿವಾದ ಜೀವಂತವಾಗಿದೆ. ಕಳೆದ ಹಲವು ತಿಂಗಳಿಂದ ಹೋರಾಟ ತೀವ್ರವಾಗಿತ್ತು.

ಮಹಾರಾಣಿ ಕೆಂಪನಂಜಮಣ್ಣಿಯವರು ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ತೆರೆದ ಈ ಶಾಲೆಗೆ ಐತಿಹಾಸಿಕ ಮಹತ್ವವಿದೆ. ಇದನ್ನು ಮುಚ್ಚಬಾರದು ಎಂದು ಹಲವಾರು ತಿಂಗಳಿಂದ ಹೋರಾಟ ನಡೆಯುತ್ತಿತ್ತು.  ಕಳೆದ ಹತ್ತು ವರ್ಷಗಳಿಂದಲೂ ಈ ಜಾಗ ವಿವಾದ ಕೇಂದ್ರವಾಗಿತ್ತು. ಸ್ವಾಮಿ ವಿವೇಕಾನಂದರ ಆಶಯದಂತೆ ಶಿಕ್ಷಣಕ್ಕೆ ಒತ್ತು ನೀಡಬೇಕು. ಆ ಮೂಲಕ ಸ್ವಾಮೀಜಿಯವರ ಆಶಯ ಈಡೇರಿಸಬೇಕು. ಆಶ್ರಮ ಪಟ್ಟು ಬಿಡಬೇಕು ಎಂದು ಒತ್ತಾಯಿಸಲಾಗಿತ್ತು. ಶಾಲೆಯನ್ನು ಉಳಿಸಿಕೊಂಡೇ ಸ್ಮಾರಕ ನಿರ್ಮಿಸುವ ಚರ್ಚೆಗಳಾಗುತ್ತಿದ್ದವು.

ಆದರೆ ಏಕಾಏಕಿ ಶಾಲೆಯ ಪಿಠೋಪಕರಣಗಳನ್ನು ಕಳೆದ ಗುರುವಾರ ಸಂಜೆ ಬೇರೆಡೆಗೆ ಸಾಗಿಸಲಾಗಿದೆ. “ಪೀಠೋಪಕರಣಗಳನ್ನು ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡುವುದಕ್ಕೆ ಬಿಡುವುದಿಲ್ಲ” ಎಂದು ಎನ್‌ಟಿಎಂಎಸ್ ಉಳಿಸಿ ಹೋರಾಟ ಸಮಿತಿಯ ಸದಸ್ಯರು ತಡೆಯಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಹೋರಾಟಗಾರರನ್ನು ಬಂಧಿಸಿ, ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಬೀಗ ಹಾಕಿಸಿದ್ದಾರೆ.

ಸಂಧಾನ ಕುರಿತು ಅಂತಿಮ ತೀರ್ಮಾನವಾಗುವ ಮುನ್ನವೇ ಶಾಲೆಯನ್ನು ಹಸ್ತಾಂತರಿಸುವ ಪ್ರಕ್ರಿಯೆ ಆರಂಭವಾದ ಬೆನ್ನಲ್ಲೇ ಹಿರಿಯ ರಾಜಕಾರಣಿ, ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರನ್ನು ಭೇಟಿಯಾಗಿ ಶಾಲೆ ಉಳಿಸಿ ಹೋರಾಟ ಸಮಿತಿ ಮಾತುಕತೆ ನಡೆಸಿದೆ.

ಹಿರಿಯ ಸಾಹಿತಿ ದೇವನೂರ ಮಹಾದೇವ, ಹೋರಾಟ ಸಮಿತಿ ಅಧ್ಯಕ್ಷ ಪ.ಮಲ್ಲೇಶ್‌, ರೈತ ಸಂಘದ ಅಧ್ಯಕ್ಷ  ಬಡಗಲಪುರ ನಾಗೇಂದ್ರ ಅವರ ನೇತೃತ್ವದಲ್ಲಿ ಹೋರಾಟಗಾರರು ಶ್ರೀನಿವಾಸಪ್ರಸಾದ್ ಅವರನ್ನು ಭೇಟಿಯಾಗಿ ಸಮಸ್ಯೆಯನ್ನು ಬಿಚ್ಚಿಟ್ಟಿದ್ದಾರೆ.

ಶಾಲೆಯೂ ಉಳಿಯಬೇಕು, ಸ್ಮಾರಕ ನಿರ್ಮಿಸಬೇಕು ಎನ್ನುವ ಕುರಿತು ಸಂಧಾನ ಕಳೆದ ವರ್ಷವೇ ನಡೆದಿತ್ತು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಸಮ್ಮುಖದಲ್ಲೂ ಒಂದು ಸಭೆ ನಡೆದರೆ, ಆಶ್ರಮದ ಪರವಾಗಿ ವಿಧಾನಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡ ಅವರು ಸಂಧಾನ ಸೂತ್ರದಂತೆ ಚರ್ಚೆ ನಡೆಸುವುದಾಗಿ ಹೇಳಿದ್ದರು. ಈಗ ಅದು ಬಿಟ್ಟು ಶಾಲೆ ಸ್ಥಳಾಂತರ ಮಾಡಲಾಗಿದೆ. ಏಕಾಏಕಿ ಶಾಲೆಯನ್ನು ಸ್ಥಳಾಂತರಿಸಲಾಗಿದೆ. ಈ ಕುರಿತು ಮಧ್ಯೆ ಪ್ರವೇಶಿಸಿ ಮಾತುಕತೆ ನಡೆಸುವಂತೆ ಪ್ರಸಾದ್ ಅವರಲ್ಲಿ ಹಿರಿಯ ಹೋರಾಟಗಾರರು ಕೋರಿದ್ದಾರೆ. ಪ್ರಸಾದ್ ಅವರು ಹೋರಾಟಗಾರರ ಒತ್ತಾಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಶಾಲೆಯನ್ನು ಸ್ಥಳಾಂತರಕ್ಕೆ ಸರ್ಕಾರ ಆದೇಶ ಮಾಡಿರುವ ಸಂಬಂಧ ವರದಿಗಳಾಗಿವೆ. ಇತ್ತ ಶಾಲೆಯ ಬಳಿ ಪೊಲೀಸ್ ಬಗಿ ಬಂದೋಬಸ್ತ್‌ ಮಾಡಲಾಗಿದೆ. ಹೋರಾಟಗಾರರು ದನಿ ಎತ್ತಿದ್ದಾರೆ. ಪ್ರಕರಣ ಇತ್ಯರ್ಥವಾಗದೆ ಇರುವಾಗ ಏಕಾಏಕಿ ಶಾಲೆಯನ್ನು ಹಸ್ತಾಂತರಿಸಿರುವ ಕ್ರಮವನ್ನು ಖಂಡಿಸಿದ್ದಾರೆ.

ಶಾಲೆ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷರಾದ ಪ.ಮಲ್ಲೇಶ್‌ ಅವರು, “ಐತಿಹಾಸಿಕ ಹಿನ್ನೆಲೆ ಇರುವ ಶಾಲೆಯನ್ನು ಉಳಿಸುವ ಹೋರಾಟ ನಿರಂತವಾಗಿ ನಡೆಯಲಿದೆ” ಎಂದು ಎಚ್ಚರಿಸಿದ್ದಾರೆ.

ಎನ್‌ಟಿಎಂ ಶಾಲೆಯಲ್ಲಿ 70 ಬಾಲಕಿಯರು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಯನ್ನು ಸ್ಥಳಾಂತರ ಮಾಡಿದ 51 ಹೆಣ್ಣು ಮಕ್ಕಳು ಹಾಜರಿದ್ದರು.  ಶಾಲೆಯ ಎದುರಿಗೆ ಇರುವ ಸರ್ಕಾರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ತರಗತಿಗಳನ್ನು ಸ್ಥಳಾಂತರಿಸಲಾಗಿದೆ.

ಧಾರ್ಮಿಕ ವಿಷಯವನ್ನಿಟ್ಟುಕೊಂಡು ರಾಜ್ಯದಲ್ಲಿ ದೊಡ್ಡಮಟ್ಟದ ವಿವಾದ ಸೃಷ್ಟಿಸಲಾಗಿದೆ. ಹಿಜಾಬ್‌ ಸಂಬಂಧ ತರಹೇವಾರಿ ಹೇಳಿಕೆಗಳನ್ನು ಶಾಸಕರು, ಸಚಿವರು ನೀಡುತ್ತಿದ್ದಾರೆ. ಆದರೆ ಇದೆಲ್ಲದರ ನಡುವೆ ಮೈಸೂರಿನ ಶತಮಾನದ ಶಾಲೆ, ಹೆಣ್ಣು ಮಕ್ಕಳ ಶಾಲೆಗೆ ಬೀಗ ಜಡಿದಿರುವುದು, ಮೈಸೂರಿನಾಚೆಗೆ ಗಂಭೀರ ಚರ್ಚೆಗೆ ಒಳಪಟ್ಟಿಲ್ಲದಿರುವುದು ದುರಂತವೇ ಸರಿ.


ಇದನ್ನೂ ಓದಿರಿ: ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೆಲೆ ಏರಿಕೆ ಹಾಗೂ ಸಾರ್ವಜನಿಕ ಸೇವೆಗಳ ಕಡಿತ ವಿರೋಧಿಸಿ ಬೃಹತ್ ಪ್ರತಿಭಟನೆ; ಹಿಂಸಾಚಾರದಲ್ಲಿ 1,800ಕ್ಕೂ ಅಧಿಕ ಮಂದಿ ವಶ!

ಜೀವನ ವೆಚ್ಚದ ಭಾರಿ ಏರಿಕೆ, ಕುಸಿದುಬೀಳುತ್ತಿರುವ ಶಾಲಾ-ಕಾಲೇಜುಗಳ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೇವೆಗಳ ಕಡಿತವನ್ನು ಖಂಡಿಸಿ ಫ್ರಾನ್ಸ್‌ನಾದ್ಯಂತ ಶನಿವಾರ ಲಕ್ಷಾಂತರ ಜನರು ರಸ್ತೆಗಿಳಿದು ನಡೆಸಿದ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿದ್ಯಾರ್ಥಿ...

ಪ.ಬಂಗಾಳ : ದುರ್ಗಾ ಪೂಜೆಗಳಲ್ಲಿ ಎಡಪಕ್ಷಗಳ ಪುಸ್ತಕ ಮಳಿಗೆಗಳ ಮೇಲೆ ದಾಳಿ

ಶನಿವಾರ (ಅಕ್ಟೋಬರ್ 17) ಸಂಜೆ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ (ಕೆಎಂಸಿ) ತಂಡವೊಂದು ನಾಲ್ಕು ದಿನಗಳ ಹಿಂದೆ ಜಾದವ್‌ಪುರದಲ್ಲಿ ಸ್ಥಾಪಿಸಲಾಗಿದ್ದ ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಲು ಆಗಮಿಸಿದಾಗ, ಕೇಂದ್ರ ಸಶಸ್ತ್ರ ಪಡೆಗಳು ಮತ್ತು ಪೊಲೀಸರು ಆ...

ಎಸ್‌ಐಆರ್ ಗೊಂದಲ: ರದ್ದಾಗಿರುವ ಮತದಾರರನ್ನು ಮರಳಿ ಸೇರಿಸಲು ‘ಫಾರ್ಮ್ 6’ ತಿದ್ದುಪಡಿಗೆ ಮಹಾರಾಷ್ಟ್ರ ಪ್ರಸ್ತಾಪ; ಜೈಲು ಶಿಕ್ಷೆಯ ಭೀತಿಯಲ್ಲಿ ಜನರು!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಹೆಸರು ರದ್ದಾಗಿರುವ ಹಳೆಯ ಮತದಾರರನ್ನು ಮರಳಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಭಾರಿ ಆಡಳಿತಾತ್ಮಕ ಮತ್ತು ಕಾನೂನು ತೊಡಕು ಎದುರಾಗಿದೆ. ಎಸ್‌ಐಆರ್ ಪರಿಷ್ಕರಣೆಯಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಬೆಂಗಳೂರಿನ ಟೌನ್‌ಹಾಲ್ ಬಳಿ ಪ್ರತಿಭಟಿಸಿದವರ ಬಂಧನ, ಬಿಡುಗಡೆ

ಶನಿವಾರ (ಅಕ್ಟೋಬರ್ 17) ಬೆಂಗಳೂರಿನ ಟೌನ್ ಹಾಲ್ ಬಳಿ ಮತದಾರರ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಆಂಧ್ರದಲ್ಲಿ ಮುಂದುವರಿದ ಟಿಡಿಪಿ-ವೈಎಸ್‌ಆರ್‌ಸಿಪಿ ಸಂಘರ್ಷ : ಪರಿಸ್ಥಿತಿ ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದ ಕಡಪಾ ಪೊಲೀಸರು

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ (ಅಕ್ಟೋಬರ್ 17) ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಘರ್ಷಗಳು ಮುಂದುವರಿದಿವೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಭದ್ರಕೋಟೆಯಾಗಿರುವ ವೈಎಸ್ಆರ್ ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ...

ಮಧ್ಯಪ್ರದೇಶ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ; 14 ಸಾವು, ಹಲವರಿಗೆ ಗಂಭೀರ ಗಾಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶೀತಲಾ ಮಾತಾ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಅತಿವೇಗವಾಗಿ ಬಂದ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಠ 14 ಜನರು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ...

ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...