ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಸಾಂಪ್ರದಾಯಕವಾಗಿ ಉದ್ಘಾಟಿಸಿದ್ದಾರೆ.
ಸಾಂಪ್ರದಾಯಿಕವಾಗಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಹಾಕಲಾಗಿದ್ದ ಬೃಹತ್ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುವಾರ್ ಅವರ ಸಮ್ಮುಖದಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಗಿದೆ.
ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕ ಜಿ.ಟಿ.ದೇವೇಗೌಡ, ಮೈಸೂರು ಮೇಯರ್ ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾಜ್೯, ಪಶುಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಆಹಾರ ನಾಗರಿಕ ಫೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ತನ್ವೀರ್ ಸೇಠ್, ಎ.ಆರ್.ಕೃಷ್ಣಮೂರ್ತಿ, ಟಿ.ಎಸ್.ಶ್ರೀವತ್ಸವ, ಮರಿತಿಬ್ಬೇಗೌಡ, ಉಪ ಮೇಯರ್ ಡಾ.ಜಿ.ರೂಪ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.
ಮೈಸೂರು ದಸರಾ ಹಿನ್ನೆಲೆ ಚಾಮುಂಡಿ ಬೆಟ್ಟ ಸೇರಿದಂತೆ ಮೈಸೂರು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಮೈಸೂರು ದಸರಾ ಬಗ್ಗೆ ಎಕ್ಸ್‌ನಲ್ಲಿ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ, ಅಖಂಡ ಕರ್ನಾಟಕವು ಸಂಭ್ರಮದಿಂದ ಪಾಲ್ಗೊಳ್ಳುವ ಈ ದಸರಾ ಉತ್ಸವ ನಿಜವಾದ ಅರ್ಥದಲ್ಲಿ ಜನೋತ್ಸವವಾಗಿದೆ. ಜಗದ್ವಿಖ್ಯಾತ ಮೈಸೂರು ದಸರಾದಲ್ಲಿ ನಾವು ನೀವೆಲ್ಲರೂ ಸಂಭ್ರಮದಿಂದ ಪಾಲ್ಗೊಂಡು, ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗೋಣ. ತಮ್ಮೆಲ್ಲರನ್ನು ಮೈಸೂರು ದಸರಾಗೆ ಆತ್ಮೀಯವಾಗಿ ಆಮಂತ್ರಿಸುತ್ತಿದ್ದೇನೆ. ನಾಡಬಂಧುಗಳಿಗೆ ದಸರಾ ಹಬ್ಬದ ಶುಭಾಶಯಗಳು ಎಂದು ಹೇಳಿದ್ದಾರೆ.


