Homeಕರ್ನಾಟಕಮೈಸೂರು: ಮಹಿಳೆ ನಾಪತ್ತೆ; ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಮೈಸೂರು: ಮಹಿಳೆ ನಾಪತ್ತೆ; ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

- Advertisement -
- Advertisement -

ಹಾಸನದ ಎಚ್‌ ಡಿ ರೇವಣ್ಣ ಮತ್ತು ಪುತ್ರ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ಪ್ರಕರಣ ದೇಶದಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಸಿಲುಕಿಕೊಂಡಿರುವ ರೇವಣ್ಣ ವಿರುದ್ಧ ಮೈಸೂರು ಜಿಲ್ಲೆಯ ಕೆಆರ್ ನಗರದಲ್ಲಿ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.

ನಾಪತ್ತೆಯಾಗಿರುವ ಮಹಿಳೆಯ ಪುತ್ರ ರಾಜು ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ಪ್ರಜ್ವಲ್‌ ಲೈಂಗಿಕ ದೌರ್ಜನ್ಯದ ವಿಡಿಯೋದಲ್ಲಿ ನನ್ನ ತಾಯಿಯ ವಿಡಿಯೋ ಕೂಡ ಇದೆ. ವಿಡಿಯೋಗಳು ಬಹಿರಂಗವಾದ ಬಳಿಕ ತಾಯಿ ದಿಢೀರ್ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹೆಚ್​ಡಿ ರೇವಣ್ಣ ವಿರುದ್ಧ ಸೆಕ್ಷನ್ 149/2024 ಕಲಂ, 364/A 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೇವಣ್ಣರನ್ನು ಆರೋಪಿ ಸಂಖ್ಯೆ 1 ಮತ್ತು ಸತೀಶ್ ಬಾಬು ಎಂಬವರನ್ನು ಆರೋಪಿ ಸಂಖ್ಯೆ 2 ಎಂದು ದೂರಿನಲ್ಲಿ ನಮೂದಿಸಲಾಗಿದೆ.

ರಾಜು ನೀಡಿದ ದೂರಿನಲ್ಲಿ ಏನಿದೆ?

ನನ್ನ ತಂದೆಗೆ ಮೂವರು ಮಕ್ಕಳು, ನನ್ನ ತಾಯಿ ಹೊಳೇನರಸಿಪುರದ ಚೆನ್ನಾಂಬಿಕ ಥಿಯೇಟರ್ ಪಕ್ಕ ಇರುವ ಎಚ್‌ಡಿ ರೇವಣ್ಣ ಅವರ ಮನೆಯಲ್ಲಿ ಸುಮಾರು 6 ವರ್ಷ ಕೆಲಸ‌ ಮಾಡಿದ್ದರು. ನಂತರ ಕೆಲಸ ಬಿಟ್ಟು ಬಂದು ನಮ್ಮೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಈಗ ಲೋಕಸಭೆ ಚುನಾವಣೆ ವೇಳೆ ನಮಗೆ ಪರಿಚಯಸ್ಥರಾಗದ್ದ ಸತೀಶ್ ಎಂಬವರು ಭವಾನಿ ಅಕ್ಕರವರು ಕರೆಯುತ್ತಿದ್ದಾರೆ ಎಂದು ಹೇಳಿ ನನ್ನ ತಾಯಿಯನ್ನು ಕರೆದುಕೊಂಡು ಹೋಗಿದ್ದಾರೆ. ಚುನಾವಣೆಯ ದಿವಸ ಬೆಳಿಗ್ಗೆ ನನ್ನ ತಾಯಿಯನ್ನು ಸತೀಶ್ ವಾಪಸ್ಸು  ಕರೆದುಕೊಂಡು ಬಂದಿದ್ದಾರೆ. ನನ್ನ ತಂದೆ ಮತ್ತು ತಾಯಿಗೆ ಪೊಲೀಸ್ ಬಂದರೆ ಏನೂ ಹೇಳಬೇಡಿ, ಅವರಿಗೆ ಸಿಗಬೇಡಿ, ನಿಮ್ಮ ಮೇಲೆ ಕೇಸ್ ಆಗುತ್ತದೆ. ಬಂದರೆ ನನಗೆ ತಿಳಿಸಿ ನಾನು ಬಂದು ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಏಪ್ರಿಲ್ 29ರಂದು 9ಗಂಟೆಗೆ ಮತ್ತೆ ಬಂದ ಸತೀಶ್, ನಿಮ್ಮ ತಾಯಿ ಪೊಲೀಸ್‌ನವರಿಗೆ ಸಿಕ್ಕಿ ಹಾಕಿಕೊಂಡರೆ ಕೇಸು ಆಗುತ್ತದೆ ಮತ್ತೆ ನೀವು ಸಹ ಜೈಲಿಗೆ ಹೋಗಬೇಕಾಗುತ್ತದೆ. ರೇವಣ್ಣ ಸಾಹೇಬರು ಕರೆದುಕೊಂಡು ಬರಲು ಹೇಳಿದ್ದಾರೆ ಎಂದು ನನ್ನ ತಾಯಿಗೆ ಹೇಳಿ ನನ್ನ ತಾಯಿಯನ್ನು ಒತ್ತಾಯ ಮಾಡಿಕೊಂಡು ಸತೀಶ್ ಅವರು ಹೀರೋ ಹೊಂಡಾ ಸ್ಪ್ಲೆಂಡ‌ರ್ ಬೈಕಿನಲ್ಲಿ ಕರೆದುಕೊಂಡು ಹೋದರು. ನನ್ನ ತಾಯಿಯನ್ನು ಎಲ್ಲಿಗೆ ಕರೆದುಕೊಂಡು ಹೋದರು ಎಂಬುದು ನಮಗೆ ಗೊತ್ತಿಲ್ಲ. ಮೇ.1ರಂದು ನಮ್ಮ ತಾಯಿಯ ವಿಡಿಯೋ ಬಗ್ಗೆ ಸ್ನೇಹಿತರು ನನಗೆ ಮಾಹಿತಿ ನೀಡಿದ್ದಾರೆ. ನಿನ್ನ ಅಮ್ಮನ ಕಾಲು ಕಟ್ಟಿ ಪ್ರಜ್ವಲ್ ಬಲತ್ಕಾರ ಮಾಡಿದ್ದಾರೆ ಎಂದು ಹೇಳಿದರು. ಈ ಬಗ್ಗೆ ದೊಡ್ಡ ಕೇಸಾಗಿರುವುದಾಗಿ ನನಗೆ ತಿಳಿಸಿದರು. ನಂತರ ನಾನು ರಾತ್ರಿ ಫೋನ್ ಮಾಡಿ ನನ್ನ ತಾಯಿ ಬಗ್ಗೆ ವಿಚಾರಿಸಿದೆ. ನನ್ನ ತಾಯಿಯನ್ನು ವಾಪಾಸು ಕರೆದುಕೊಂಡು ಬರುವಂತೆ ಹೇಳಿದೆ, ಆದರೆ ಹಲ್ಲೆ ಪ್ರಕರಣವೊಂದರಲ್ಲಿ ನಿಮ್ಮ ತಾಯಿ ಆರೋಪಿ ಎಂದು ಸುಳ್ಳು ಹೇಳಿದ್ದಾರೆ. ನನ್ನ ತಾಯಿಯನ್ನು ಹೆದರಿಸಿ ಒತ್ತಾಯವಾಗಿ ಕರೆದುಕೊಂಡು ಹೋಗಿ ಕೂಡಿ ಹಾಕಿದ್ದಾರೆ, ನನ್ನ ತಾಯಿಯ ಜೀವಕ್ಕೆ ಅಪಾಯವಿದೆ, ಆದ್ದರಿಂದ ನನ್ನ ತಾಯಿಯನ್ನು ಪತ್ತೆ ಮಾಡಬೇಕಾಗಿ ಕೇಳಿಕೊಳ್ಳುತ್ತೇನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ: ರೋಹಿತ್ ವೇಮುಲಾ ‘ಪರಿಶಿಷ್ಟ ಜಾತಿ’ಗೆ ಸೇರಿದವರಲ್ಲ: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...