ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಮೈಸೂರು ಪೊಲೀಸರು ಸೋಮವಾರ (ಫೆ.11) ಬಂಧಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಮೈಸೂರು ಪೊಲೀಸ್ ಆಯುಕ್ತರು “ಸಮಾಜದಲ್ಲಿ ಅಶಾಂತಿ ಮೂಡಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಸುರೇಶ್ ಎಂಬುವವನ ವಿರುದ್ದ ಉದಯಗಿರಿ ಪೊಲೀಸ್ ಠಾಣೆಯ ಠಾಣಾಧಿಕಾರಿರವರು ಪ್ರಕರಣ ದಾಖಲಿಸಿ ದಸ್ತಗಿರಿ ಮಾಡಿರುತ್ತಾರೆ” ಎಂದು ತಿಳಿಸಿದ್ದಾರೆ.
ಸಮಾಜದಲ್ಲಿ ಅಶಾಂತಿ ಮೂಡಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಸುರೇಶ್ ಎಂಬುವವನ ವಿರುದ್ದ ಉದಯಗಿರಿ ಪೊಲೀಸ್ ಠಾಣೆಯ ಠಾಣಾಧಿಕಾರಿರವರು ಪ್ರಕರಣ ದಾಖಲಿಸಿ ದಸ್ತಗಿರಿ ಮಾಡಿರುತ್ತಾರೆ. pic.twitter.com/r78anaBqgY
— Commissioner of Police Mysuru (@CPMysuru) February 10, 2025
ಬಂಧಿತ ಸುರೇಶ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದು, ಅದರಲ್ಲಿ ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಹಾಗೂ ಅರವಿಂದ್ ಕೇಜ್ರಿವಾಲ್ ಅವರನ್ನು ಅರೆನಗ್ನ ರೀತಿಯಲ್ಲಿ ಚಿತ್ರಿಸಿ, ಅವರ ತೊಡೆ ಮೇಲೆ ವ್ಯಕ್ತಿಯೊಬ್ಬ ನಮಾಝ್ ಮಾಡುತ್ತಿರುವಂತೆ ತೋರಿಸಲಾಗಿತ್ತು. ಜೊತೆಗೆ ಪ್ರವಾದಿ ಮುಹಮ್ಮದ್ ಅವರ ಕುರಿತು ಅವಹೇಳನಕಾರಿ ಸಾಲುಗಳನ್ನು ಬರೆಯಲಾಗಿತ್ತು ಎಂದು ವರದಿಯಾಗಿದೆ.
ಸುರೇಶ್ ಹಾಕಿದ್ದ ಪೋಸ್ಟರ್ ವೈರಲ್ ಆದ ಬಳಿಕ ಸೋಮವಾರ ರಾತ್ರಿ ಮುಸ್ಲಿಂ ಸಮುದಾಯದ ಮುಖಂಡರು ಉದಯಗಿರಿ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದರು. ಆರೋಪಿ ಸುರೇಶ್ ಬಂಧನಕ್ಕೆ ಒತ್ತಾಯಿಸಿದ್ದರು.
ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಯತ್ನಿಸಿದಾಗ ಕಲ್ಲು ತೂರಾಟ ನಡೆದಿದೆ. ಬಳಿಕ, ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಿದ್ದಾರೆ. ಆರೋಪಿಯನ್ನು ಬಂಧಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈ ಬಿಡಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.
ಲಾಠಿ ಚಾರ್ಜ್ ವೇಳೆ ಹಲವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುನ್ನೆಚ್ಚರಿಕ ಕ್ರಮವಾಗಿ ಉದಯಗಿರಿ ಪೊಲೀಸ್ ಠಾಣೆಯ ಸುತ್ತ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.
ಪಕ್ಷ ವಿರೋಧಿ ಹೇಳಿಕೆ ನೀಡಿದ ಆರೋಪ; ಶಾಸಕ ಯತ್ನಾಳ್‌ಗೆ ಬಿಜೆಪಿಯಿಂದ ಎರಡನೇ ಶೋಕಾಸ್ ನೋಟಿಸ್


