Homeಕರ್ನಾಟಕಮೈಸೂರು: ಸರೋದ್ ವಾದಕ ಪಂಡಿತ್ ರಾಜೀವ್‌ ತಾರಾನಾಥ್ ನಿಧನ

ಮೈಸೂರು: ಸರೋದ್ ವಾದಕ ಪಂಡಿತ್ ರಾಜೀವ್‌ ತಾರಾನಾಥ್ ನಿಧನ

- Advertisement -
- Advertisement -

ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ (93) ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು (ಜೂನ್ 11) ನಿಧನರಾಗಿದ್ದಾರೆ.

ಕುವೆಂ‍ಪು ನಗರದ ಪಂಚಮಂತ್ರ ರಸ್ತೆಯಲ್ಲಿರುವ ನಿವಾಸದಲ್ಲಿ, ತಿಂಗಳ ಹಿಂದೆ ಕುಸಿದು ಬಿದ್ದು ಅವರ
ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಳ್ಳುತ್ತಿದ್ದರು. ಈ ನಡುವೆ
ಇಂದು ರಾತ್ರಿ 7.05ರ ವೇಳೆಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ರಾಜೀವ್ ತಾರಾನಾಥ್ ಅವರು ಬೆಂಗಳೂರಿನಲ್ಲಿ 17 ಅಕ್ಟೋಬರ್ 1932 ರಂದು ಜನಿಸಿದರು. ಅವರು ತಮ್ಮ ತಂದೆ ಪಂಡಿತ್ ತಾರಾನಾಥ್ ಅವರಿಂದ ಗಾಯನ ಸಂಗೀತದಲ್ಲಿ ಆರಂಭಿಕ ತರಬೇತಿಯನ್ನು ಪಡೆದರು. ಒಂಬತ್ತು ವರ್ಷದವರಾಗಿದ್ದಾಗ ತಮ್ಮ ಮೊದಲ ಸಾರ್ವಜನಿಕ ಗಾಯನ ಪ್ರದರ್ಶನವನ್ನು ನೀಡಿದ್ದರು. ರಾಜೀವ್ ಅವರು ತಮ್ಮ ಇಪ್ಪತ್ತು ವಯಸ್ಸಿಗಿಂತ ಮೊದಲು ಆಕಾಶವಾಣಿಗೆ ಹಾಡುತ್ತಿದ್ದರು.

ಸಾಹಿತ್ಯದಲ್ಲಿ ಪಿಹೆಚ್‌ಡಿ ಪದವಿ ಪಡೆದಿದ್ದ ರಾಜೀವ್ ತಾರಾನಾಥ್ ಅವರು, ತಿರುಚಿರಾಪಳ್ಳಿಯ ಪ್ರಾದೇಶಿಕ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಗ್ಲಿಷ್ ಸಾಹಿತ್ಯದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು. ಸಂಗೀತದ ಮೇಲಿನ ಪ್ರೀತಿಯಿಂದಾಗಿ ತಮ್ಮ ವೃತ್ತಿಯನ್ನು ತ್ಯಜಿಸಿ ಕೊಲ್ಕತ್ತಾಗೆ ತೆರಳಿ, ಅಲ್ಲಿ ಅಲೀ ಅಕ್ಬರ್ ಖಾನ್ ಅವರ ಮಾರ್ಗದರ್ಶನದಲ್ಲಿ ಸಂಗೀತ ತರಬೇತಿ ಪಡೆದಿದ್ದರು.

ರಾಜೀವ್ ತಾರನಾಥ್ ಅವರ ಸಂಗೀತ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಸಂಗೀತ ರತ್ನ ಮೈಸೂರು ಟಿ. ಚೌಡಯ್ಯ ಸ್ಮಾರಕ ಪ್ರಶಸ್ತಿ-1998, ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿ-1993, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ-1996, ಕೆಂಪೇಗೌಡ ಪ್ರಶಸ್ತಿ- 2006, ಗಾಯನ ಸಮಾಜದಿಂದ ಸಂಗೀತ ಕಲಾರತ್ನ ಜ್ಯೋತಿ ಸುಬ್ರಮಣ್ಯ ಪ್ರಶಸ್ತಿ, ಭ್ರಮರಾಂಬಾ ಎನ್ ನಾಗರಾಜ್ ಬಂಗಾರದ ಪದಕ, ವಿ. ಟಿ. ಶ್ರೀನಿವಾಸನ್ ಸ್ಮಾರಕ ಪ್ರಶಸ್ತಿ, ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ‘ನಾಡೋಜ’ ಪ್ರಶಸ್ತಿ, ಪ್ರತಿಷ್ಠಿತ ‘ಪದ್ಮಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕುವೆಂಪು ನಗರದ ನಿವಾಸದಲ್ಲಿ ಬುಧವಾರ (ಜೂನ್ 12) ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.

ರಾಜೀವ್ ತಾರಾನಾಥ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

 

ಇದನ್ನೂ ಓದಿ : ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಸೇರಿ 13 ಆರೋಪಿಗಳು ಪೊಲೀಸ್ ಕಸ್ಟಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...