Homeಕರ್ನಾಟಕಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

ಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

- Advertisement -
- Advertisement -

ಮೈಸೂರಿನ ಎನ್‌ಟಿಎಂ ಶಾಲೆ ದೇಶದ ಮೊದಲ ಹೆಣ್ಣುಮಕ್ಕಳ ಶಾಲೆ ಎಂಬ ಖ್ಯಾತಿಯನ್ನು ಪಡೆದಿದೆ. ಶತಮಾನದ ಇತಿಹಾಸವಿರುವ ಈ ಕನ್ನಡ ಶಾಲೆಯನ್ನು ಕೆಡವಿ ಸ್ವಾಮಿ ವಿವೇಕಾನಂದರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಮುಂದಾಗಿರುವುದು ಸಾರ್ವಜನಿಕರ ಮತ್ತು ಕನ್ನಡಪರ ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ವರ್ಷ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಸಾರ್ವಜನಿಕರ ಹೋರಾಟಕ್ಕೆ ಮಣಿದು ಶಾಲೆ ಕೆಡವಿ ಸ್ಮಾರಕ ನಿರ್ಮಿಸುವ ಯೋಜನೆಯನ್ನು ಕೈಬಿಡುವುದಾಗಿ ಹೇಳಿದ್ದರು. ಈಗ ಮತ್ತೆ ಸರ್ಕಾರ ಸದ್ದಿಲ್ಲದೇ ಶಾಲೆಯಿದ್ದ ಸ್ಥಳದಲ್ಲಿಯೇ ವಿವೇಕ ಸ್ಮಾರಕ ನಿರ್ಮಾಣಕ್ಕೆ ಮುಂದಾಗಿದೆ.

ಮಹಾರಾಣಿ ಎನ್‌ಟಿಎಮ್‌ ಹೆಣ್ಣುಮಕ್ಕಳ ಶಾಲೆ ಉಳಿವಿಗಾಗಿ ಮೈಸೂರಿನಲ್ಲಿ ಹೋರಾಟ ತೀವ್ರಗೊಂಡಿದ್ದು ಕನ್ನಡಪರ ಸಂಘಟನೆಗಳು, ರಂಗಭೂಮಿ ಕಲಾವಿದರು, ಅಧ್ಯಾಪಕರು, ಸಾಹಿತಿಗಳು ಇತಿಹಾಸಕರರು ಸೇರಿದಂತೆ ನೂರಾರು ಜನ ಸರ್ಕಾರದ ವಿರುದ್ಧ ಪ್ರತಿನಿತ್ಯ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಇಂದು ಎಸ್‌ಯುಸಿಐ, ಸಿಪಿಐ, ಸಿಪಿಐಎಂ, ಸಿಪಿಐಎಂಎಲ್‌ ಸೇರಿದಂತೆ ಹಲವು ಕಾರ್ಮಿಕ ಸಂಘಟನೆಗಳು NTM ಶಾಲೆ ಉಳಿವಿಗಾಗಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

NTM ಮಹಾರಾಣಿ ಶಾಲೆ ಉಳಿವಿಗಾಗಿ ಮೈಸೂರಿನಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆ

ಸ್ವಾಮಿ ವಿವೇಕಾನಂದರು ಹೆಣ್ಣುಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಿದ್ದರು. ಶಾಲೆ ಕೆಡವಿ ಸ್ಮಾರಕ ನಿರ್ಮಾಣ ಮಾಡಿ ಎಂದು ಅವರು ಎಲ್ಲಿಯೂ ಹೇಳಿಲ್ಲ. ಕರ್ನಾಟಕ ಸರ್ಕಾರ ವಿವೇಕಾನಂದರ ಹೆಸರಿನಲ್ಲಿ ಅವಿವೇಕದ ಕೆಲಸ ಮಾಡುತ್ತಿದೆ. ಶಾಲೆಯ ಸಮಾಧಿ ಮೇಲೆ ಸ್ಮಾರಕ ಕಟ್ಟಿದರೆ ವಿವೇಕಾನಂದರ ಆದರ್ಶದ ಕೊಲೆ ಅದು ಎಂದು ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ. ಮೈಸೂರಿನ ಹಲವೆಡೆ ಶಾಲೆ ಉಳಿಸಿ ಎಂಬ ಭಿತ್ತಿ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಜನರನ್ನು ಜಾಗೃತಿಗೊಳಿಸುವ ಪ್ರಯತ್ನವೂ ನಡೆಯುತ್ತಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ವಿವೇಕ ಸ್ಮಾರಕ ನಿರ್ಮಾಣ ಯಾರ ಉದ್ಧಾರಕ್ಕಾಗಿ? : ಡಾ.ಬಿ.ಪಿ ಮಹೇಶ ಚಂದ್ರ ಗುರು

ಆಮ್ ಆದ್ಮಿ ಪಕ್ಷ, ದಲಿತ ಸಂಘರ್ಷ ಸಮಿತಿ, ಕರ್ನಾಟಕ ಹಿತರಕ್ಷಣಾ ವೇದಿಕೆ, ಬಹುಜನ ವಿದ್ಯಾರ್ಥಿ ಸಂಘ ಹೀಗೆ ವಾರದಿಂದ ಸತತವಾಗಿ ಹೋರಾಟ, ಪ್ರತಿಭಟನೆಗಳು ನಡೆಯುತ್ತಿದ್ದೂ ಜನರ ಕೂಗು ಸರ್ಕಾರಕ್ಕೆ ಕೇಳುತ್ತಿಲ್ಲ. ಸಂಸದ ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿ ನಾಯಕರು ಶಾಲೆಯ ಸ್ಥಳದಲ್ಲಿಯೇ ಸ್ಮಾರಕ ನಿರ್ಮಾಣವಾಗಬೇಕೆಂದು ಪಟ್ಟು ಹಿಡಿದಿದ್ದಾರೆ. ವಿವೇಕಾನಂದರು NTM ಶಾಲೆ ಸೇರಿದಂತೆ ಪಕ್ಕದ ಸದ್ವಿದ್ಯಾ ಸಂಸ್ಥೆ ಮತ್ತು ಮೈಸೂರಿನ ಇನ್ನಿತರ ಭಾಗಗಳಿಗೂ ಭೇಟಿ ನೀಡಿದ್ದಾರೆ. ಸರ್ಕಾರ ಮಾತ್ರ ಕನ್ನಡ ಶಾಲೆಯ ಕಟ್ಟಡವನ್ನೇ ಆಯ್ದುಕೊಂಡಿರುವುದು ಜನರ ಸಿಟ್ಟಿಗೆ ಕಾರಣವಾಗಿದೆ.

ಹಿರಿಯ ರಂಗಕರ್ಮಿ ಸಿ ಬಸವಲಿಂಗಯ್ಯನವರು ಮಾತನಾಡಿ, “ಕನ್ನಡ ಶಾಲೆಯನ್ನು ಕೆಡವಿ ವಿವೇಕ ಸ್ಮಾರಕ ನಿರ್ಮಾಣ ಮಾಡುವುದು ಅವಿವೇಕದ ಕೆಲಸ. ವಿವೇಕಾನಂದರ ಆದರ್ಶಕ್ಕೆ ವಿರುದ್ಧವಾದದ್ದು. ಮೈಸೂರಿನ ಬೇರೆ ಎಲ್ಲಿಯಾದರೂ ಸ್ಮಾರಕ ನಿರ್ಮಾಣವಾಗಲಿ. ಶಾಲೆಯ ಸ್ಥಳದಲ್ಲಿ ಬೇಡ” ಎಂದು NTM ಮಹಾರಾಣಿ ಶಾಲೆಯ ಉಳಿವಿಗಾಗಿ ಧ್ವನಿ ಎತ್ತಿದ್ದಾರೆ.

ಪೂರ್ವದಲ್ಲಿ ಹೆಣ್ಣುಮಕ್ಕಳಿಗೆ ಶಿಕ್ಷಣದ ಅವಕಾಶವೇ ಇಲ್ಲದ ಸಂದರ್ಭದಲ್ಲಿ ಮೈಸೂರು ಸಂಸ್ಥಾನದ ರಾಣಿಯವರು ಐತಿಹಾಸಿಕ NTM ಮಹಾರಾಣಿ ಶಾಲೆಯನ್ನು ಕಟ್ಟಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ. ಕರ್ನಾಟಕ ಮಾತ್ರವಲ್ಲ ಭಾರತದ ಇತಿಹಾಸದಲ್ಲಿ ಇದೊಂದು ಚಾರಿತ್ರಿಕ ಘಟನೆ. ಇದುವರೆಗೆ ಸಾವಿರಾರು ಹೆಣ್ಣುಮಕ್ಕಳು ಇಲ್ಲಿ ಕಲಿತು ಹಲವು ಸಾಧನೆ ಮಾಡಿದ್ದಾರೆ. ಮಹಿಳಾ ಶಿಕ್ಷಣ, ಸಬಲೀಕರಣದ ಮಾತನಾಡುವ ಸರ್ಕಾರ ಅದಕ್ಕೆ ಸ್ಪೂರ್ತಿಯಾದ ಐತಿಹಾಸಿಕ ಕಟ್ಟಡವನ್ನು ಕೆಡವಲು ಮುಂದಾಗಿರುವುದು ಅತ್ಯಂತ ದುರದೃಷ್ಟದ ಸಂಗತಿ. ಶಾಲೆ ಕೆಡವಿ ಸ್ಮಾರಕ ನಿರ್ಮಿಸುವ ಯೋಜನೆಯನ್ನು ಕೈಬಿಟ್ಟು ಚಾರಿತ್ರಿಕ ಕಟ್ಟಡದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಬೇಕು. ಅಪಾಯದ ಅಂಚಿನಲ್ಲಿರುವ NTM ಶಾಲೆಯನ್ನು ಉಳಿಸುವಂತೆ ನಾಗರಿಕ ಸಮಾಜ ಕೂಡ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಬೇಕಿದೆ ಎಂದು ಅವರು ಮನವಿ ಮಾಡಿದ್ದಾರೆ.

ಎಸ್‌ಯುಸಿಐ ಕಮ್ಯೂನಿಸ್ಟ್‌ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯರಾದ ಎಂ.ಉಮಾದೇವಿ, ಚಂದ್ರಶೇಖರ ಮೇಟಿ, ಹರೀಶ್ ಎಸ್.ಎಚ್‌, ಸಿಪಿಐ(ಎಂ)ನ ಜಿಲ್ಲಾ ಕಾರ್ಯದರ್ಶಿ ಕೆ.ಬಸವರಾಜ್, ಜಗನ್ನಾಥ್, ಜಗದೀಶ್ ಸೂರ್ಯ, ಸಿಪಿಐನ ಜಗನ್ನಾಥ್, ಸಿಪಿಐ ಎಂಎಲ್ ನ ಚೌಡಹಳ್ಳಿ ಜವರಯ್ಯ, ನಾ.ದಿವಾಕರ ಪಿಯುಸಿಎಲ್ ನ ಲಕ್ಷ್ಮೀನಾರಾಯಣ, ರತಿರಾವ್, ಸ್ವರಾಜ್ ಇಂಡಿಯಾದ ಉಗ್ರನರಸಿಂಹೇಗೌಡ ಐಎನ್‌ಟಿಯುಸಿಯ ಅನಿಲ್ ಕುಮಾರ್ ಸೇರಿದಂತೆ ವಿವಿಧ ಕಾರ್ಮಿಕ ಮುಖಂಡರು, ರೈತ ಹೋರಾಟಗಾರು, ಸಾಮಾಜಿಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ರಾಜೇಶ್ ಹೆಬ್ಬಾರ್


ಇದನ್ನೂ ಓದಿ: ಪಟ್ಟಭದ್ರರ ವಿರುದ್ಧ ದಿಟ್ಟ ಹೋರಾಟಕ್ಕೆ ಉಳಿದ ಮೈಸೂರಿನ ಸರ್ಕಾರಿ ಶಾಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...