Homeಮುಖಪುಟಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿರುವ ಮಾಜಿ ಶಾಸಕ ಕೋನರೆಡ್ಡಿ

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿರುವ ಮಾಜಿ ಶಾಸಕ ಕೋನರೆಡ್ಡಿ

- Advertisement -
- Advertisement -

ನವಲಗುಂದದ ಮಾಜಿ ಶಾಸಕರಾದ ಎನ್ ಎಚ್ ಕೋನರೆಡ್ಡಿಯವರು ಡಿಸೆಂಬರ್ 14 ರಂದು ಜೆಡಿಎಸ್‌ ತೊರೆದು ಕಾಂಗ್ರೆಸ್ ಪಕ್ಷ ಸೇರುವುದಾಗಿ ಘೋಷಿಸಿದ್ದಾರೆ. ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಹಿರಂಗವಾಗಿಯೇ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಪರ ಪ್ರಚಾರ ನಡೆಸಿದ್ದ ಅವರು ಈಗ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಭಾಗವಾಗಲು ಮುಂದಾಗಿದ್ದಾರೆ.

ಕೋನರೆಡ್ಡಿಯವರು ಬೆಳಗಾವಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ದೇವೇಗೌಡರ ಮೇಲೆ ಗೌರವ ಅಭಿಮಾನ ಇದೆ, ಆದರೆ ಬದಲಾದ ಕಾಲಘಟ್ಟದಲ್ಲಿ ಜೆಡಿಎಸ್ ತ್ಯಜಿಸುವುದು ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ.

2013ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಅವರು 2018ರಲ್ಲಿ ಪರಾಭವಗೊಂಡಿದ್ದರು. ನಂತರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು.

2023ರ ರಾಜ್ಯ ವಿಧಾನಸಭಾ ಚುನಾವಣೆಗೆ ತಯಾರಿ ಭಾಗವಾಗಿ ಅವರು ಕಾಂಗ್ರೆಸ್ ಸೇರಿದ್ದಾರೆ ಎಂಬ ಚರ್ಚೆಗಳು ಆರಂಭವಾಗಿವೆ. ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರನ್ನು ಮಣಿಸಬೇಕಾದರೆ ಕಾಂಗ್ರೆಸ್ ಸೇರುವುದು ಅನಿವಾರ್ಯ ಎನ್ನಲಾಗಿದೆ. ಈ ಭಾಗದ ಪ್ರಬಲ ಜೆಡಿಎಸ್ ಮುಖಂಡರಾಗಿದ್ದ ಅವರು ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷ ಗಮನಾರ್ಹವಾಗಿ ಸಾಧನೆ ಮಾಡಲು ಕಾರಣಕರ್ತರಾಗಿದ್ದರು.

ಇತ್ತೀಚೆಗೆ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ನತ್ತ ವಾಲುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ ದೇವೇಗೌಡ, ಕೋಲಾರದ ಶ್ರೀನಿವಾಸಗೌಡ, ಮೂಡಿಗೆರೆ ಕ್ಷೇತ್ರದ ಶಾಸಕ ಎಂಪಿ ಕುಮಾರಸ್ವಾಮಿ, ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್ ಶ್ರೀನಿವಾಸ್ ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ. ಆ ಸಾಲಿಗೆ ಕೋನರೆಡ್ಡಿ ಸಹ ಸೇರಿದ್ದಾರೆ.


ಇದನ್ನೂ ಓದಿ: ಪ್ರಶ್ನಿಸುವ ಪರಂಪರೆ ಕಟ್ಟಿದ ಪ್ರಖರ ಸುದ್ದಿಗಾರನ ನಿರ್ಗಮನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕರ್ನಾಟಕದಲ್ಲಿ ಮುಸ್ಲಿಮರು ರಸ್ತೆ ಮಧ್ಯೆ ಗೋಹತ್ಯೆ ಮಾಡಿದ್ದಾರೆ ಎಂಬುವುದು ಸುಳ್ಳು

0
"ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದವರು ರಸ್ತೆ ಮಧ್ಯೆಯೇ ಬಹಿರಂಗವಾಗಿ ಗೋಹತ್ಯೆ ಮಾಡಿದ್ದಾರೆ" ಎಂದು ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಜೀಪ್‌ ಒಂದರ ಮುಂಭಾಗದಲ್ಲಿ ಹಸುವಿನ ಕಳೇಬರ ಕಟ್ಟಿದಂತೆ ಕಾಣುತ್ತಿದೆ. ಫ್ಯಾಕ್ಟ್‌ಚೆಕ್ : ವಿಡಿಯೋದ ಸತ್ಯಾಸತ್ಯತೆಯನ್ನು ನಾವು...