Homeಕರ್ನಾಟಕ'ನಾ ಖಾನೇ ದೂಂಗಾವಾಲ ಮೋದಿ ಅವ್ರೇ, ಶಾಸಕರ ಕಮಿಷನ್ ಹಣದಲ್ಲಿ ನಿಮ್ಮ ಪಾಲೆಷ್ಟು?': ಬಿಕೆ ಹರಿಪ್ರಸಾದ್...

‘ನಾ ಖಾನೇ ದೂಂಗಾವಾಲ ಮೋದಿ ಅವ್ರೇ, ಶಾಸಕರ ಕಮಿಷನ್ ಹಣದಲ್ಲಿ ನಿಮ್ಮ ಪಾಲೆಷ್ಟು?’: ಬಿಕೆ ಹರಿಪ್ರಸಾದ್ ಪ್ರಶ್ನೆ

- Advertisement -
- Advertisement -

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮನೆಯಲ್ಲಿ ಏಳು ಕೋಟಿ ಹಣ ಪತ್ತೆಯಾದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ದ ಮುಗಿಬಿದ್ದಿದ್ದಾರೆ. ಈ ಹಿಂದೆ ಕಾಂಗ್ರೆಸ್, ರಾಜ್ಯ ಸರ್ಕಾರದ ವಿರುದ್ಧ ಪೇಸಿಎಂ ಅಭಿಯಾನ ಮಾಡಿತ್ತು. ಈಗ ಕೈ ನಾಯಕರು ಅದನ್ನು ನೆನಪಿಸಿದ್ದು ಈ ಕಮೀಷನ್ ಹಣದಲ್ಲಿ ನಿಮ್ಮ ಪಾಲು ಎಷ್ಟು? ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಹರಿಪ್ರಸಾದ್, ಬಿಜೆಪಿಗೆ ಸುಳ್ಳು ಮನೆ ದೇವರಾದರೆ, ಭ್ರಷ್ಟಾಚಾರ ಪಕ್ಷದ ಅಧಿಕೃತ ಕಾರ್ಯಕ್ರಮ. ದಾಖಲೆ ಸಮೇತ ಕಂತು ಕಂತಿನ ನೋಟುಗಳು ಮಂಚದ ಮೇಲೆ ಸಿಕ್ಕ ಮೇಲೂ ಬಿಜೆಪಿ ಶಾಸಕರ ಮೇಲೆ ಕ್ರಮ ಯಾಕಿಲ್ಲ ಬಸವರಾಜ ಬೊಮ್ಮಾಯಿ ಅವ್ರೇ? ಎಂದು ಪ್ರಶ್ನಿಸಿದ್ದಾರೆ.

ನಾ ಖಾನೇ ದೂಂಗಾವಾಲ ನರೇಂದ್ರ ಮೋದಿ ಅವ್ರೇ, ಶಾಸಕರ ಕಮಿಷನ್ ವ್ಯವಹಾರದಲ್ಲಿ ನಿಮ್ಮ ಮೌನದ ಪಾಲೆಷ್ಟು? ಎಂದು ಪ್ರಶ್ನಿಸಿದ್ದಾರೆ.

40% ಭ್ರಷ್ಟಾಚಾರದ ಸಾಕ್ಷಿ ಸಿಕ್ಕರೂ ತಾಕತ್ತು,ಧಮ್ಮು, ಹಮ್ಮು, ಬಿಮ್ಮುಗಳು ಯಾವ ಬಿಲದಲ್ಲಿ ಅಡಗಿ ಕುಳಿತಿವೆ? ಎಂದು ಪ್ರಶ್ನಿಸಿದ್ದಾರೆ. ರಾಜ್ಯವನ್ನ ಗುಡಿಸಿ ಗುಂಡಾಂತರ ಮಾಡಿರುವ ಭ್ರಷ್ಟ ಬಿಜೆಪಿ ಸರ್ಕಾರ, ದೇಶದ ಎದುರು ರಾಜ್ಯದ ಮಾನ ಹರಾಜಿಗಿಟ್ಟಿದೆ ಎಂದು ಕಿಡಿಕಾರಿದ್ದಾರೆ.

ವಾರಕ್ಕೆ ಎರಡು ಬಾರಿ ಚುನಾವಣಾ ಪ್ರವಾಸಿಗರಾದ ಮೋದಿ ಮತ್ತು ಶಾ ಜೋಡಿ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ವಸೂಲಾಗಿರುವ #payCm ಹಣದ ಪಾಲಿಗಾಗಿಯೇ? ರಾಜ್ಯದ ತೆರಿಗೆಯ ಬೊಕ್ಕಸವನ್ನು ಲೂಟಿ ಮಾಡಿ, ದೆಹಲಿ ಬಿಜೆಪಿಯ ಖಜಾನೆ ಭರ್ತಿ ಮಾಡಿದ ಪಾಪದ ಕೊಡ ತುಂಬಿದೆ ಟೀಕಿಸಿದ್ದಾರೆ.

ನಾಚಿಕೆ,ಮಾನ,ಮಾರ್ಯಾದೆ ಸ್ವಾಭಿಮಾನ ಎನ್ನುವ ಪದಗಳಿಗೆ ಕಿಂಚಿತ್ತಾದರೂ ಗೌರವ ಇದ್ದರೆ, ರಾಜ್ಯದ ಜನರಿಗೆ ಕ್ಷಮೆ ಕೇಳಿ, ಪಾಪದ ಪ್ರಾಯಶ್ಚಿತ್ತಕ್ಕೆ ರಾಜೀನಾಮೆ ಕೊಟ್ಟು ತೊಲಗಿ. ಘನತೆಯುತ ರಾಜ್ಯಕ್ಕೆ ಕಮಿಷನ್ ರಾಜ್ಯದ ಮಸಿ ಬಳಿದ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸುವುದು ನಿಶ್ಚಿತವಾಗಿದೆ ಎಂದು .ಕೆ ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ 40% ಕಮಿಷನ್ ಆರೋಪ ಮಾಡಿದಾಗಲೆಲ್ಲಾ ಬಿಜೆಪಿ ನಾಯಕರು ಸಾಕ್ಷಿಗಳನ್ನು ಕೇಳುತ್ತಿದ್ದರು. ನಿಮ್ಮ ಬಳಿ ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ನೀಡಿ ಎಂದು ಬಿಜೆಪಿ ನಾಯಕರು ಸವಾಲು ಹಾಕಿದ್ದರು. ಆದರೆ ಇದೀಗ ಲೋಕಾಯುಕ್ತ ದಾಳಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಕಚೇರಿ ಹಾಗೂ ನಿವಾಸಕ್ಕೆ ಲೋಕಾಯುಕ್ತ ದಾಳಿ ನಡೆಸಿದ ಪ್ರಕರಣ ಆಡಳಿತ ಪಕ್ಷ ಬಿಜೆಪಿಗೆ ತೀವ್ರ ಮುಜುಗರ ಸೃಷ್ಟಿಸಿದೆ. ಚುನಾವಣಾ ಹೊಸ್ತಿಲಲ್ಲಿ ರಾಷ್ಟ್ರ ನಾಯಕರ ಸರಣಿ ರಾಜ್ಯ ಪ್ರವಾಸದ ಸಂದರ್ಭದಲ್ಲೇ ನಡೆದ ಈ ಪ್ರಸಂಗ ಬಿಜೆಪಿಗೆ ತಲೆನೋವು ಉಂಟು ಮಾಡಿದೆ. ಆದರೆ ಈ ಪ್ರಕರಣ ಕಾಂಗ್ರೆಸ್ ಪಾಲಿಗೆ ಇದೊಂದು ಪ್ರಬಲ ರಾಜಕೀಯ ಅಸ್ತ್ರವಾಗಿ ಸಿಕ್ಕಂತಾಗಿದೆ. ಇದೀಗ ಕಾಂಗ್ರೆಸ್ ನಾಯಕರು ರಾಜ್ಯ ಬಿಜೆಪಿ ನಾಯಕರ ಮೇಲೆ ಮುಗಿಬಿದ್ದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...