Homeಮುಖಪುಟಭಾರತಕ್ಕೆ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗುವ ಸಮಯ ದೂರವಿಲ್ಲ: ಜಸ್ಟಿಸ್ ಆರ್‌‌.ಎ‌ಫ್‌. ನಾರಿಮನ್

ಭಾರತಕ್ಕೆ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗುವ ಸಮಯ ದೂರವಿಲ್ಲ: ಜಸ್ಟಿಸ್ ಆರ್‌‌.ಎ‌ಫ್‌. ನಾರಿಮನ್

- Advertisement -
- Advertisement -

ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ರೋಹಿಂಟನ್ ಫಾಲಿ ನಾರಿಮನ್ ಅವರು “ಭಾರತಕ್ಕೆ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗುವ ಸಮಯ ತುಂಬಾ ದೂರ ಇಲ್ಲ” ಎಂದು ಶುಕ್ರವಾರ ಹೇಳಿದ್ದಾರೆ. ‘ಇತಿಹಾಸದ ಶ್ರೇಷ್ಠ ಮಹಿಳೆಯರು’ ಎಂಬ ವಿಷಯದ ಕುರಿತು 26 ನೇ ನ್ಯಾಯಮೂರ್ತಿ ಸುನಂದಾ ಭಂಡಾರೆ ಸ್ಮಾರಕ ಉಪನ್ಯಾಸ ನೀಡುವಾಗ ಅವರು ಈ ವಿಷಯ ತಿಳಿಸಿದ್ದಾರೆ.

20 ನೇ ಶತಮಾನದಲ್ಲಿ ಮಹಿಳಾ ನಾಯಕತ್ವದ ಕುರಿತು ಮಾತನಾಡಿದ ಅವರು, “1960 ರ ದಶಕವು ಹಲವು ಮಹಿಳಾ ಪ್ರಧಾನ ಮಂತ್ರಿಗಳು ಆಯ್ಕೆಯಾಗಿದ್ದರು. ಸಿಲೋನ್‌ನಲ್ಲಿ ಮೊದಲ ಬಾರಿಗೆ ಸಿರಿಮಾವೊ ಬಂಡರನಾಯ್ಕ, ಭಾರತದಲ್ಲಿ ಇಂದಿರಾ ಗಾಂಧಿ, ಇಸ್ರೇಲ್‌ನಲ್ಲಿ ಗೋಲ್ಡಾ ಮೀರ್, ಅಂದಿನಿಂದ 125 ಮಹಿಳೆಯರು ರಾಷ್ಟ್ರಗಳ ಅಧ್ಯಕ್ಷರಾಗಲಿ ಅಥವಾ ಪ್ರಧಾನ ಮಂತ್ರಿಯಾಗಲಿ ಆಗಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದು: ಕುಂಭಮೇಳ ಸಾಂಕೇತಿಕವಾಗಿಸಬೇಕು, ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ಬಲ ತರುತ್ತದೆ: ಪ್ರಧಾನಿ ಮೋದಿ

“ಭಾರತದಲ್ಲಿ, ನಾವು ನಾವು ಮಹಿಳಾ ಅಧ್ಯಕ್ಷರನ್ನು ಹೊಂದಿದ್ದೇವೆ, ನಾವು ಮಹಿಳಾ ಪ್ರಧಾನ ಮಂತ್ರಿಯನ್ನು ಹೊಂದಿದ್ದೇವೆ. ಆದರೆ ದುರದೃಷ್ಟವಶಾತ್, ನಾವು ಎಂದಿಗೂ ಮಹಿಳಾ ಮುಖ್ಯ ನ್ಯಾಯಮೂರ್ತಿಗಳನ್ನು ಹೊಂದಿಲ್ಲ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ದಿವಂಗತ ನ್ಯಾಯಮೂರ್ತಿ ಭಂಡಾರೆ ಬಹುಶಃ ಭಾರತದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗುವ ಅಭ್ಯರ್ಥಿಯಾಗಿದ್ದರು. ದುರದೃಷ್ಟವಶಾತ್, ಅವರ ಜೀವನವು ಅವರೊಂದಿಗೆ ಕ್ರೂರವಾಗಿ ವರ್ತಿಸಿ ವೃತ್ತಿಜೀವನವನ್ನು ಮೊಟಕುಗೊಳಿಸಿತು. ಆದರೆ ಭಾರತಕ್ಕೆ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗುವ ಸಮಯ ತುಂಬಾ ದೂರ ಇಲ್ಲ” ಎಂದು ಅವರು ಹೇಳಿದ್ದಾರೆ.

ಇತ್ತಿಚೆಗೆ ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಅವರು ಅವರುಯ ಕೂಡಾ “ಮಹಿಳಾ ಮುಖ್ಯ ನ್ಯಾಯಮೂರ್ತಿಯ ಸಮಯ ಬಂದಿದೆ” ಎಂದು ಹೇಳಿದ್ದರು.

ಹೈಕೋರ್ಟ್‌ಗಳಲ್ಲಿ ನ್ಯಾಯಾಧೀಶರಾಗಿ ನೇಮಕಗೊಳ್ಳಲು ಹೆಚ್ಚಿನ ಮಹಿಳೆಯರನ್ನು ಪರಿಗಣಿಸಲು ನ್ಯಾಯಾಲಯದ ಹಸ್ತಕ್ಷೇಪ ಕೋರಿ ಸುಪ್ರೀಂ ಕೋರ್ಟ್ ಮಹಿಳಾ ವಕೀಲರ ಸಂಘ ಸಲ್ಲಿಸಿದ್ದ ಮನವಿಯನ್ನು ಅವರ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿತ್ತು.

ಇದನ್ನೂ ಓದು: ಮಸ್ಕಿ: ಬಿಜೆಪಿ ಪರ ಹಣ ಹಂಚಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಹಾಸನದ ಯುವಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...