Homeಕರ್ನಾಟಕಕನ್ನಡದ ಹಿರಿಯ ಸಾಹಿತಿ, ನಾಡೋಜ ಡಾ. ಚೆನ್ನವೀರ ಕಣವಿ ನಿಧನ

ಕನ್ನಡದ ಹಿರಿಯ ಸಾಹಿತಿ, ನಾಡೋಜ ಡಾ. ಚೆನ್ನವೀರ ಕಣವಿ ನಿಧನ

- Advertisement -
- Advertisement -

ಕನ್ನಡದ ಹಿರಿಯ ಸಾಹಿತಿ, ನಾಡೋಜ ಡಾ. ಚೆನ್ನವೀರ ಕಣವಿ ಅವರು ಬುಧವಾರದಂದು ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಕೊರೊನಾ ಸೋಂಕಿಗೆ ಒಳಗಾದ ಬಳಿಕ ಜನವರಿ 14ರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.

ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ್ ಎಂದು ಪ್ರಸಿದ್ಧಿರಾಗಿದ್ದ ಅವರು ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಲ್ಲಿ ಒಬ್ಬರಾಗಿದ್ದಾರೆ. ಸಕ್ಕರೆಪ್ಪ ಮತ್ತು ಪಾರ್ವತವ್ವ ಅವರ ಮಗನಾಗಿ ಗದಗ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ 1928ರ ಜೂನ್ 28ರಂದು ಜನಿಸಿದರು. ತಂದೆ ಸಕ್ಕರೆಪ್ಪ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಕಣವಿಯವರು ಧಾರವಾಡದಲ್ಲಿಯೆ ಮಾಧ್ಯಮಿಕ ಹಾಗು ಕಾಲೇಜು ಶಿಕ್ಷಣ ಪೂರೈಸಿ 1952ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಪಡೆದು ಆಗ ತಾನೆ ಆರಂಭವಾಗಿದ್ದ ವಿಶ್ವವಿದ್ಯಾಲಯದ ಪ್ರಸಾರಾಂಗ ವಿಭಾಗದ ಕಾರ್ಯದರ್ಶಿಯಾಗಿದ್ದರು.

ಕನ್ನಡದ ಹಿರಿಯ ಕವಿಯಯ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ,

ಇದನ್ನೂ ಓದಿ: ನಮಿಸುವ ಹೃದಯದ ನಂದೂರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ 2024: ರಾಹುಲ್ ಗಾಂಧಿ ಸ್ಪರ್ಧೆಗೆ ಒತ್ತಾಯಿಸಿ ಅಮೇಠಿ ಕಾಂಗ್ರೆಸ್ ಕಾರ್ಯಕರ್ತರಿಂದ ಧರಣಿ

0
ಅಮೇಠಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಘೋಷಣೆಯಲ್ಲಿ ಅನಗತ್ಯ ವಿಳಂಬ ಮಾಡುತ್ತಿರುವುದನ್ನು ಪ್ರತಿಭಟಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಇಲ್ಲಿನ ಪಕ್ಷದ ಜಿಲ್ಲಾ ಸಮಿತಿ ಕಚೇರಿ ಎದುರು ಧರಣಿ ನಡೆಸಿ, ರಾಹುಲ್ ಗಾಂಧಿ ಅವರನ್ನು ಕಣಕ್ಕಿಳಿಸಬೇಕು...