Homeಮುಖಪುಟವಿಕಲಾಂಗಚೇತನರ ಕಲ್ಯಾಣಕ್ಕಾಗಿ ತಮಿಳುನಾಡಿಗೆ ರಾಷ್ಟ್ರೀಯ ಪ್ರಶಸ್ತಿ

ವಿಕಲಾಂಗಚೇತನರ ಕಲ್ಯಾಣಕ್ಕಾಗಿ ತಮಿಳುನಾಡಿಗೆ ರಾಷ್ಟ್ರೀಯ ಪ್ರಶಸ್ತಿ

- Advertisement -
- Advertisement -

‘ವಿಕಲಾಂಗಚೇತನರ ಸಬಲೀಕರಣವನ್ನು ಉತ್ತೇಜಿಸುವಲ್ಲಿ ಅತ್ಯುತ್ತಮ ರಾಜ್ಯ’ ಎಂದು ತಮಿಳುನಾಡು ಗುರುತಿಸಲ್ಪಟ್ಟಿದೆ. ಸಾಮಾಜಿಕ ನ್ಯಾಯ ಮತ್ತು ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಸಚಿವಾಲಯವು ದೆಹಲಿಯಲ್ಲಿ ಹಮ್ಮಿಕೊಂಡಿದ್ದ ಅಂಗವಿಕಲರ ಅಂತರಾಷ್ಟ್ರೀಯ ದಿನದಂದು (ಶುಕ್ರವಾರ) ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ತಮಿಳುನಾಡಿನ ಆರು ವಿಕಲಾಂಗ ನಾಗರಿಕರ ಗಣನೀಯ ಸೇವೆಯನ್ನು ಪರಿಗಣಿಸಿ ರಾಷ್ಟ್ರಪತಿಯವರು ಪ್ರಶಸ್ತಿಗಳನ್ನು ನೀಡಿದ್ದಾರೆ.

ತಮಿಳುನಾಡು ಸರ್ಕಾರವು ವಿಕಲಾಂಗಚೇತನರ ಜೀವನ ಮಟ್ಟವನ್ನು ಸುಧಾರಿಸಲು ವಿಕಲಚೇತನರ ಶಿಕ್ಷಣ ಮತ್ತು ಉದ್ಯೋಗದ ಮೇಲೆ ಹೆಚ್ಚುವರಿ ಗಮನವನ್ನು ಹರಿಸಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ ವಿಕಲಚೇತನರ ಕಲ್ಯಾಣಕ್ಕಾಗಿ ರಾಜ್ಯ ಕಮಿಷನರೇಟ್ ಶ್ರಮಿಸಿದೆ. ವಿಕಲಾಂಗಚೇತನ ವ್ಯಕ್ತಿಗಳು ಕೋವಿಡ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಸಹಕಾರ ನೀಡಲಾಗಿದೆ.

“ಲಾಕ್‌ಡೌನ್ ಸಮಯದಲ್ಲಿ ಅಂಗವಿಕಲರಿಗೆ ಅಗತ್ಯ ವಸ್ತುಗಳನ್ನು ತಲುಪಿಸುವುದನ್ನು ಖಚಿತಪಡಿಸಿಕೊಳ್ಳಲು ನಾವು ಮನೆ-ಮನೆಗೆ ಪ್ರಚಾರವನ್ನು ಪ್ರಾರಂಭಿಸಿದೆವು. ಇಲಾಖೆಯಿಂದ ಈಗಾಗಲೇ ಗುರುತಿಸಲ್ಪಟ್ಟವರಲ್ಲದೆ, ಅಧಿಕಾರಿಗಳು ಮತ್ತು ಸ್ವಯಂಸೇವಕರ ಸ್ಥಳೀಯ ಸಂಪರ್ಕಗಳ ಮೂಲಕ ನಮ್ಮ ದಾಖಲೆಗಳಲ್ಲಿಲ್ಲದ ಜನರನ್ನೂ ನಾವು ತಲುಪಿದ್ದೇವೆ ” ಎಂದು ರಾಜ್ಯ ವಿಕಲಚೇತನರ ಕಲ್ಯಾಣ ಆಯುಕ್ತ ಜಾನಿ ಟಾಮ್ ವರ್ಗೀಸ್ ಹೇಳಿದ್ದಾರೆ.

ನಗದು ನೆರವು ಮತ್ತು ಔಷಧಿಗಳನ್ನು ಒದಗಿಸುವುದು, ವೈದ್ಯಕೀಯ ಉಪಕರಣಗಳನ್ನು ದೊರಕಿಸುವುದು, ಆನ್‌ಲೈನ್ ಫಿಸಿಯೋಥೆರಪಿ ಸೆಷನ್‌ಗಳನ್ನು ನೀಡುವುದು ಇಷ್ಟೇ ಅಲ್ಲದೇ, ವಿಕಲಾಂಗಚೇತನರಿಗೆ ಮತ್ತು ವೃದ್ಧರಿಗೆ ಲಸಿಕೆ ಹಾಕಿಸಲು ಮನೆಮನೆಗೆ ಭೇಟಿ ನೀಡಲಾಗಿದೆ. ಶೇ. 70ಕ್ಕಿಂತ ಹೆಚ್ಚು ವಯಸ್ಕ ವಿಕಲಾಂಗ ಚೇತನರಿಗೆ ಈ ಕಾರ್ಯಕ್ರಮ ತಲುಪಿದೆ ಎನ್ನುತ್ತಾರೆ ಅಧಿಕಾರಿಗಳು.

ವಿಕಲಚೇತನರ ಉದ್ಯೋಗ ಮತ್ತು ಜೀವನೋಪಾಯ ಕೇಂದ್ರವನ್ನು (DELC) ಸ್ಥಾಪಿಸಲಾಗಿದೆ. ಇದು ವಿಕಲಾಂಗ ವ್ಯಕ್ತಿಗಳ ಕೌಶಲ್ಯ, ಸಾಮಾಜಿಕ-ಆರ್ಥಿಕ ಸ್ಥಿತಿ ಮತ್ತು ಜೀವನೋಪಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಆಯುಕ್ತರು ಹೇಳಿದ್ದಾರೆ.

ಡಿಇಎಲ್‌ಸಿ ಕೇಂದ್ರವು ವಿಕಲಾಂಗ ಚೇತನರಿಗೆ ಉದ್ಯೋಗ ದೊರಕಿಸುವ ವೇದಿಕೆಯಾಗಿ ಕಾರ್ಯನಿರ್ವಹಿತ್ತಿದೆ. ಕಾರ್ಯಕ್ರಮಗಳನ್ನು ನಡೆಸಲು ಕೌಶಲ್ಯ ಅಭಿವೃದ್ಧಿ ಮಿಷನ್‌ನೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ ಎಂದು ವರ್ಗೀಸ್‌‌ ತಿಳಿಸಿದ್ದಾರೆ.

ಸೇಲಂ ಜಿಲ್ಲೆಯು ಪುನರ್ವಸತಿ ಸೇವೆಗಳನ್ನು ಒದಗಿಸುವ ಅತ್ಯುತ್ತಮ ಜಿಲ್ಲೆ ಎಂಬ ಪ್ರಶಸ್ತಿಗೆ ಭಾಜನವಾಗಿದೆ. ಈ ಪ್ರಶಸ್ತಿ ಪಡೆದ ದೇಶದ ಎರಡು ಜಿಲ್ಲೆಗಳಲ್ಲಿ ಸೇಲಂ ಕೂಡ ಒಂದಾಗಿದೆ.


ಇದನ್ನೂ ಓದಿರಿ: ಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...