Homeಮುಖಪುಟನಾಗಾಲ್ಯಾಂಡ್: ದಂಗೆಕೋರರ ವಿರುದ್ಧದ ಕಾರ್ಯಚರಣೆಯಲ್ಲಿ 13 ಮಂದಿ ಗ್ರಾಮಸ್ಥರನ್ನು ಹತ್ಯೆಗೈದ ಸೇನೆ

ನಾಗಾಲ್ಯಾಂಡ್: ದಂಗೆಕೋರರ ವಿರುದ್ಧದ ಕಾರ್ಯಚರಣೆಯಲ್ಲಿ 13 ಮಂದಿ ಗ್ರಾಮಸ್ಥರನ್ನು ಹತ್ಯೆಗೈದ ಸೇನೆ

- Advertisement -
- Advertisement -

ನಾಗಾಲ್ಯಾಂಡ್‌ನ ಮಯನ್ಮಾರ್‌ ಗಡಿಯ ಬಳಿ ದಂಗೆಕೋರರ ವಿರುದ್ಧದ ಕಾರ್ಯಾಚರಣೆಯ ವೇಳೆ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ 13 ಮಂದಿ ಗ್ರಾಮಸ್ಥರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ನಡೆದ ನಾಗರಿಕರ ಹತ್ಯೆಗಳ ಹೊಣೆಗಾರಿಕೆಯನ್ನು ಸೇನೆ ಹೊರುತ್ತಿದೆ ಎಂದು ದಿಮಾಪುರ್ ಮೂಲದ 3 ಕಾರ್ಪ್ಸ್ ಡಿಸೆಂಬರ್ 5 ರ ಹೇಳಿಕೆಯಲ್ಲಿ ತಿಳಿಸಿದೆ.

ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದಿಂದ ನೇಮಿಸಲ್ಪಟ್ಟ ವಿಶೇಷ ತನಿಖಾ ತಂಡ ಈ ಬಗ್ಗೆ ತನಿಖೆ ನಡೆಸಲಿದೆ ಎಂದು ಹೇಳಿದ್ದಾರೆ.

ಮ್ಯಾನ್ಮಾರ್ ಗಡಿಯಲ್ಲಿರುವ ಮೋನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ದಂಗೆಕೋರರ ವಿರುದ್ಧದ ಕಾರ್ಯಾಚರಣೆಗೆ ಸಜ್ಜಾಗಿದ್ದವು. ದಂಗೆಕೋರರ ಚಲನವಲನದ ಬಗ್ಗೆ ವಿಶ್ವಾಸಾರ್ಹ ಗುಪ್ತಚರ ಆಧಾರದ ಮೇಲೆ ಓಟಿಂಗ್ ಗ್ರಾಮದ ಬಳಿ ದಾಳಿ ನಡೆಸಿದ್ದರು. ಆದರೆ ತಿರು-ಓಟಿಂಗ್ ರಸ್ತೆಯಲ್ಲಿ ಗ್ರಾಮಸ್ಥರನ್ನು ಹೊತ್ತೊಯ್ಯುತ್ತಿದ್ದ ವಾಹನದ ಮೇಲೆ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗುಂಡಿನ ದಾಳಿಯಿಂದ ಆಕ್ರೋಶಗೊಂಡ ಸ್ಥಳೀಯರು ಭದ್ರತಾ ಪಡೆಗಳನ್ನು ಸುತ್ತುವರೆದರು. ಹೀಗಾಗಿ ಆತ್ಮ ರಕ್ಷಣೆಗಾಗಿ ಗುಂಪಿನ ಮೇಲೆ ಭದ್ರತಾ ಪೆಗಳು ಗುಂಡು ಹಾರಿಸಿದ್ದರು ಇದರಿಂದ ಕನಿಷ್ಠ ಏಳು ಗ್ರಾಮಸ್ಥರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಭದ್ರತಾ ಪಡೆಗಳ ಮೂರು ವಾಹನಗಳಿಗೂ ಬೆಂಕಿ ಹಚ್ಚಲಾಗಿದೆ.

ಇದನ್ನೂ ಓದಿ: MLC ಚುನಾವಣೆ: ಪರೇಶ್ ಮೇಸ್ತ ತಂದೆಗೇಕೆ ಬಿಜೆಪಿ ಟಿಕೆಟ್ ಕೊಟ್ಟಿಲ್ಲ? ಮಾಜಿ ಶಾಸಕ ಸತೀಶ್ ಸೈಲ್ ಪ್ರಶ್ನೆ

“ಬಂಡುಕೋರರ ಚಲನವಲನದ ಬಗ್ಗೆ ವಿಶ್ವಾಸಾರ್ಹ ಗುಪ್ತಚರ ಆಧಾರದ ಮೇಲೆ, ತಿರು, ಸೋಮ ಜಿಲ್ಲೆ, ನಾಗಾಲ್ಯಾಂಡ್ ಪ್ರದೇಶದಲ್ಲಿ ನಿರ್ದಿಷ್ಟ ಕಾರ್ಯಾಚರಣೆಯನ್ನು ನಡೆಸಲು ಯೋಜಿಸಲಾಗಿತ್ತು. ಆದರೆ, ಅದರ ನಂತರ ನಡೆದ ಘಟನೆ ಬಗ್ಗೆ ತೀವ್ರವಾಗಿ ವಿಷಾದಿಸುತ್ತವೆ. ಈ ದುರದೃಷ್ಟಕರ ಪ್ರಾಣಹಾನಿಯ ಕುರಿತು ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುತ್ತಿದೆ. ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ನಾಗಾಲ್ಯಾಂಡ್‌ನ ದಿಮಾಪುರ್ ಮೂಲದ 3 ಕಾರ್ಪ್ಸ್ ಹೇಳಿಕೆಯಲ್ಲಿ ತಿಳಿಸಿದೆ.

ಘಟನೆ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, “ನಾಗಾಲ್ಯಾಂಡ್‌ನ ಓಟಿಂಗ್‌ನಲ್ಲಿ ನಡೆದ ದುರದೃಷ್ಟಕರ ಘಟನೆಯಿಂದ ದುಃಖವಾಗಿದೆ. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ರಾಜ್ಯ ಸರ್ಕಾರವು ರಚಿಸಿರುವ ಉನ್ನತ ಮಟ್ಟದ ಎಸ್‌ಐಟಿ ಈ ಘಟನೆಯನ್ನು ಕೂಲಂಕಷವಾಗಿ ತನಿಖೆ ನಡೆಸಿ ನ್ಯಾಯ ಒದಗಿಸುತ್ತದೆ” ಎಂದಿದ್ದಾರೆ.


ಇದನ್ನೂ ಓದಿ: ಒಮೈಕ್ರಾನ್‌ಗೆ ಬೂಸ್ಟರ್ ಡೋಸ್ ಶಿಫಾರಸು; ಕರ್ನಾಟಕದಲ್ಲಿ ದ.ಆಫ್ರಿಕಾದ 10 ಜನರು ನಾಪತ್ತೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...